Skip to content
The Believer's Library

Biblica® Open Kannada Contemporary Version 2022

Jonah 2 OKCV

Show OKCV only
Verse × ×
1 Then Jonah prayed to our Father from inside the fish: ಆಗ ಯೋನನು ಮೀನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.
2 In my distress I called to my Father, and he answered me; from the grave's belly I cried for help, and you heard my voice. ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ.
3 You hurled me into the deep, into the heart of the seas, and the currents swirled around me; all your breakers and your waves swept over me. ನನ್ನನ್ನು ನೀವು ಅಗಾಧದಲ್ಲಿಯೂ, ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿರಿ. ಪ್ರವಾಹಗಳು ನನ್ನನ್ನು ಸುತ್ತಿಕೊಂಡವು. ನಿಮ್ಮ ಎಲ್ಲಾ ಅಲೆಗಳೂ ನಿಮ್ಮ ತೆರೆಗಳೂ ನನ್ನ ಮೇಲೆ ದಾಟಿಹೋದವು.
4 Then I said, 'I have been driven away from your sight; yet I will look again toward your holy temple.' ಆಗ ನಾನು ಹೇಳಿದ್ದು, ‘ನಿಮ್ಮ ಕಣ್ಣುಗಳ ಎದುರಿನಿಂದ ಬಹಿಷ್ಕೃತನಾಗಿದ್ದೇನೆ. ಆದರೂ ನಾನು ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಪುನಃ ನೋಡುವೆನು.’
5 The waters closed in over me to the point of death; the deep surrounded me; seaweed was wrapped around my head. ನನ್ನನ್ನು ಸುತ್ತುತ್ತಿದ್ದ ನೀರು, ನನ್ನನ್ನು ಭಯಪಡಿಸಿತು. ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು. ಜಂಬು ಹುಲ್ಲು ನನ್ನ ತಲೆಗೆ ಸುತ್ತಲಾಗಿತ್ತು.
6 I sank down to the roots of the mountains; the earth shut its gates behind me forever. But you brought my life up from the pit, my Father. ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು. ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು. ಆದರೂ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ.
7 As my life was ebbing away, I remembered my Father, and my prayer rose to you, to your holy temple. “ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.
8 Those who cling to worthless idols walk away from the love that could be theirs. “ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.
9 But I will sacrifice to you with grateful praise; I will keep every vow I have made. Salvation belongs to our Father! ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.”
10 Then our Father spoke to the fish, and it vomited Jonah out onto the dry land. ಆಗ ಯೆಹೋವ ದೇವರು ಮೀನಿಗೆ ಹೇಳಿದ್ದರಿಂದ, ಅದು ಯೋನನನ್ನು ಒಣಭೂಮಿಯ ಮೇಲೆ ಕಾರಿಬಿಟ್ಟಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]