Skip to content
The Believer's Library

Biblica® Open Kannada Contemporary Version 2022

Jonah 3 OKCV

Show OKCV only
Verse × ×
1 Then the word of our Father came to Jonah a second time: ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು.
2 "Get up, go to Nineveh, that great city, and proclaim the message I give you." “ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.
3 So Jonah got up and went to Nineveh, as our Father had said. Nineveh was a huge city—three days to cross. ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.
4 Jonah walked one day into the city and cried out, "Forty more days and Nineveh is overturned!" ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.
5 The people of Nineveh believed God. They called a fast and put on sackcloth, from the greatest to the least. ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.
6 When the news reached Nineveh's king, he rose from his throne, removed his robe, covered himself with sackcloth, and sat in ashes. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.
7 He had this proclaimed in Nineveh, by decree of the king and his nobles: No person or animal, herd or flock, may taste anything; they must not graze or drink water. ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.
8 Let people and animals be covered with sackcloth, and everyone cry out to God with all their strength. Let each turn from his evil way and the violence in his hands. ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.
9 Who knows? God may turn and change his mind, turn from his fierce anger, so we're not destroyed. ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”
10 When God saw their deeds—that they turned from their evil way—God changed his mind about the disaster he had threatened to bring on them, and did not do it. ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]