Skip to content
The Believer's Library

Biblica® Open Kannada Contemporary Version 2022

Jonah 4 OKCV

Show OKCV only
Verse × ×
1 But this upset Jonah deeply, and he burned with anger. ಆದರೆ ಯೋನನು ತುಂಬಾ ಬೇಸರಗೊಂಡನು. ಅವನಿಗೆ ಬಹು ಕೋಪ ಬಂತು.
2 He prayed to our Father, "Please, O Father, isn't this what I said while still in my own land? That's why I fled toward Tarshish first—I knew you are a gracious, compassionate Father, slow to anger, overflowing with covenant love, one who relents from sending disaster. ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.
3 Now, our Father, please take my life from me—death is better for me than life." ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.
4 And our Father said, "Is it right for you to be so angry?" ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.
5 Jonah left the city and sat east of it, made himself a shelter there, and sat under it in the shade, waiting to see what would happen to the city. ಆಗ ಯೋನನು ಪಟ್ಟಣವನ್ನು ಬಿಟ್ಟು, ಪಟ್ಟಣದ ಪೂರ್ವದಿಕ್ಕಿನ ಕಡೆಯಲ್ಲಿ ಕುಳಿತುಕೊಂಡು, ಗುಡಿಸಲನ್ನು ಕಟ್ಟಿಕೊಂಡು, ಪಟ್ಟಣದಲ್ಲಿ ಏನಾಗುವುದೆಂದು ನೋಡುವವರೆಗೆ ಗುಡಿಸಲಿನ ನೆರಳಿನಲ್ಲಿ ಕುಳಿತುಕೊಂಡನು.
6 And our Father appointed a plant and made it grow up over Jonah, to shade his head and ease his discomfort. So Jonah was overjoyed because of the plant. ದೇವರಾದ ಯೆಹೋವ ದೇವರು ಒಂದು ಸೋರೆ ಬಳ್ಳಿಯನ್ನು ಹಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು, ಅವನ ತಲೆಗೆ ನೆರಳು ಕೊಟ್ಟು, ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದರು. ಯೋನನು ಆ ಸೋರೆ ಬಳ್ಳಿಯ ವಿಷಯವಾಗಿ ಬಹಳ ಸಂತೋಷಪಟ್ಟನು.
7 At dawn the next day, our Father appointed a worm that attacked the plant, and it withered. ಮಾರನೆಯ ದಿವಸ ಉದಯವಾದಾಗ, ದೇವರು ಒಂದು ಹುಳುವನ್ನು ಸಿದ್ಧಮಾಡಿದರು. ಅದು ಸೋರೆ ಬಳ್ಳಿಯನ್ನು ಒಣಗುವ ಹಾಗೆ ಹೊಡೆಯಿತು.
8 When the sun rose, our Father sent a scorching east wind; the sun beat on Jonah's head until he grew faint. He begged to die: "Better for me to die than to live." ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.
9 But our Father asked Jonah, "Is it right for you to be angry about the plant?" He said, "It is right—angry enough to die." ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.
10 And our Father said, "You pitied the plant you did not work for or grow, which sprouted in a night and died in a night. ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ,
11 And should I not pity Nineveh, that great city, in which there are more than 120,000 people who cannot tell their right hand from their left, and many animals as well?" ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]