Skip to content
The Believer's Library

Biblica® Open Kannada Contemporary Version 2022

Jude 1 OKCV

Show OKCV only
Verse × ×
1 Jude, servant of Jesus Christ and brother of James, to those called, loved in our Father and kept for Jesus Christ: ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:
2 May mercy, peace, and love be multiplied to you. ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
3 Beloved, though eager to write about our shared salvation, I had to write urging you to fight for the faith once for all given to the holy ones. ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
4 For some have slipped in unnoticed, long ago marked out for this judgment—godless people who twist our Father's grace into a license for lust, and deny our only Master and Lord, Jesus Christ. ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.
5 Now I want to remind you, though you already know all this, that Jesus, having saved a people out of the land of Egypt, afterward destroyed those who did not believe. ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.
6 The angels who didn't keep their own position but left their proper home, he has kept in eternal chains, under deep darkness, for judgment on the great day. ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.
7 Likewise Sodom, Gomorrah, and the nearby towns, given to sexual sin and pursuit of unnatural flesh, stand as an example, suffering the punishment of eternal fire. ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.
8 Yet these dreamers likewise pollute their flesh, reject authority, and insult glorious ones. ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.
9 But Michael the archangel, contending with the devil, argued about Moses' body, not daring to bring an insulting judgment against him, but said, "May our Father rebuke you." ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.
10 But these people insult whatever they don't understand; what they do understand by instinct, like unreasoning animals, destroys them. ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ. ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
11 Woe to them! They took Cain's path, rushed for pay into Balaam's error, and died in Korah's revolt. ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!
12 These are hidden reefs at your love feasts, feasting with you without fear, feeding only themselves—dry clouds blown by wind, fruitless autumn trees, twice dead, uprooted. ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ
13 Wild waves of the sea, foaming up their own shame; wandering stars, for whom deepest darkness is kept forever. ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.
14 Enoch, the seventh from Adam, prophesied about these also: "Look, our Lord Jesus came with ten thousands of his holy ones, ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು
15 to execute judgment on all and to convict every person of all the ungodly deeds they have committed in such an ungodly way, and of all the harsh things that ungodly sinners have spoken against him." ಎಲ್ಲರಿಗೆ ನ್ಯಾಯತೀರಿಸುವುದಕ್ಕೆ ಬರುವರು. ಮಾತ್ರವಲ್ಲದೆ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರೋಧವಾಗಿ ಆಡಿದ ಎಲ್ಲಾ ದೂಷಣೆಗಳ ವಿಷಯವಾಗಿ ಅವರನ್ನು ಖಂಡಿಸಲು ಬರುವರು,” ಎಂಬುದಾಗಿ ಪ್ರವಾದಿಸಿದನು.
16 These grumble and complain, chasing their own desires; their mouths boast, and they flatter people for gain. ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
17 But you, beloved, remember what our Lord Jesus Christ's apostles said beforehand. ಪ್ರಿಯ ಸ್ನೇಹಿತರೇ, ನೀವಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
18 How they told you: "In the last time there will be mockers, following their own godless desires." “ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅಪೊಸ್ತಲರು ನಿಮಗೆ ಹೇಳಿದರು.
19 These are the ones who cause divisions, worldly people, devoid of the Spirit. ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.
20 But you, beloved, building yourselves up in your most holy faith and praying in the Holy Spirit. ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.
21 Keep yourselves in the love of our Father, waiting for the mercy of our Lord Jesus Christ, leading to eternal life. ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
22 And have mercy on those who doubt; ಸಂಶಯಪಡುವ ಕೆಲವರಿಗೆ ಕನಿಕರವನ್ನು ತೋರಿಸಿರಿ.
23 save some by seizing them from the fire; show others mercy in fear, hating even the garment stained by their sin. ಬೇರೆಯವರನ್ನು ಬೆಂಕಿಯಿಂದ ಎಳೆದು ರಕ್ಷಿಸಿರಿ. ಭಯದಿಂದ ಕರುಣೆ ತೋರಿಸಿರಿ. ಪಾಪ ಕೃತ್ಯಗಳಿಂದ ಮೈಲಿಗೆಯಾದ ಅವರ ಜೀವನವನ್ನು ಸಹ ಹಗೆ ಮಾಡಿರಿ.
24 Now to him able to keep you from stumbling and set you blameless before his glory with great joy, ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ
25 to our Father alone, our Savior, through Jesus Christ our Lord, be glory, majesty, dominion, and authority, before all time and now and forever. Amen. ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]