Skip to content
The Believer's Library

Biblica® Open Kannada Contemporary Version 2022

Lamentations 1 OKCV

Show OKCV only
Verse × ×
1 How lonely sits the city that once was full of people! She has become like a widow, she who was great among the nations. She who was a princess among the provinces has become a forced laborer. ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!
2 Bitterly she weeps in the night, tears on her cheeks. Among all her lovers she has no one to comfort her; all her friends have betrayed her, they have become her enemies. ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.
3 Judah has gone into exile under affliction and harsh servitude; she lives among the nations but finds no resting place. All her pursuers have overtaken her in the midst of her distress. ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.
4 The roads to Zion mourn, for no one comes to the appointed feasts. All her gates are desolate, her priests groan, her young women grieve, and she herself is in bitter anguish. ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.
5 Her foes have become her masters, her enemies are at ease, for our Father has afflicted her because of her many rebellions. Her children have gone away, led captive before the enemy. ಆಕೆಯ ವೈರಿಗಳು ಆಕೆಯ ಯಜಮಾನರಾಗಿದ್ದಾರೆ. ಆಕೆಯ ಶತ್ರುಗಳು ನೆಮ್ಮದಿಯಿಂದ ಇದ್ದಾರೆ. ಏಕೆಂದರೆ ಆಕೆಯ ಅನೇಕ ಪಾಪಗಳ ನಿಮಿತ್ತ ಯೆಹೋವ ದೇವರು ಆಕೆಯನ್ನು ಸಂಕಟಪಡಿಸಿದ್ದಾರೆ. ಆಕೆಯ ಮಕ್ಕಳು ಶತ್ರುವಿನ ಮುಂದೆ ಸೆರೆಗೆ ಹೋಗಿದ್ದಾರೆ.
6 All her majesty has departed from the daughter of Zion. Her princes have become like deer that find no pasture; they flee without strength before their pursuers. ಚೀಯೋನ್ ಪುತ್ರಿಯ ಎಲ್ಲಾ ವೈಭವವು ಅವಳನ್ನು ಬಿಟ್ಟುಹೋಯಿತು. ಅವಳ ಪ್ರಧಾನರು ಹುಲ್ಲುಗಾವಲು ಕಾಣದ ಜಿಂಕೆಗಳ ಹಾಗಾದರು, ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಓಡಿಹೋದರು.
7 In the days of her affliction and wandering, Jerusalem remembers all the precious things that were hers from days of old. When her people fell into the hands of the enemy, with no one to help her, the enemies looked on and mocked her downfall. ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು.
8 Jerusalem has sinned grievously; therefore she has become an object of scorn. All who honored her despise her, for they have seen her nakedness; she herself groans and turns away. ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.
9 Her uncleanness clung to her skirts; she gave no thought to her future. Her fall is astounding, with no one to comfort her. "Look, my Father, on my affliction, for the enemy has triumphed!" ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”
10 The enemy has stretched out his hand over all her precious things; she has watched the nations enter her sanctuary—those you had forbidden to enter your assembly. ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ.
11 All her people groan as they search for bread; they trade their treasures for food just to stay alive. "Look, my Father, and see, for I have become despised. ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”
12 Is it nothing to you, all you who pass by? Look and see if there is any sorrow like my sorrow, which was brought upon me, which our Father inflicted on the day of his fierce anger. ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.
13 From on high he sent fire into my bones, and it overcame them. He spread a net for my feet and turned me back; he has left me desolate, faint all the day long. ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
14 My rebellions were bound into a yoke; knit together by his hand, they were laid upon my neck, and he sapped my strength. The Sovereign Father handed me over to those I cannot withstand. ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ.
15 The Sovereign Father has rejected all the mighty men in my midst; he summoned an assembly against me to crush my young men. The Sovereign Father has trampled the virgin daughter of Judah as in a winepress. ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.
16 For these things I weep; my eyes, my eyes flow with tears, for a comforter who could revive my spirit is far from me. My children are desolate, for the enemy has prevailed." ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.
17 Zion stretches out her hands, but there is no one to comfort her. Our Father has decreed that Jacob's neighbors would become his enemies; Jerusalem has become a filthy thing among them. ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ.
18 Our Father is righteous, for I have rebelled against his word. Hear, all you peoples, and look on my suffering; my young women and my young men have gone into captivity. ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
19 I called to my lovers, but they deceived me. My priests and my elders perished in the city while they searched for food just to stay alive. ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
20 Look, my Father, for I am in distress; my stomach churns, my heart is overturned within me, for I have been very rebellious. In the street the sword cuts people down; in the house it is like death. ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.
21 They have heard how I groan, with no one to comfort me. All my enemies have heard of my trouble; they are glad that you have done it. Bring on the day you have declared, that they may become like me. ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.
22 Let all their evil come before you, and deal with them as you have dealt with me for all my rebellions; for my groans are many, and my heart is faint. ಅವರ ಎಲ್ಲಾ ಕೆಟ್ಟತನವು ನಿನ್ನ ಮುಂದೆ ಇರಲಿ. ನನ್ನ ಎಲ್ಲಾ ದ್ರೋಹಗಳ ನಿಮಿತ್ತ, ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು. ಏಕೆಂದರೆ ನನ್ನ ನರಳಾಟವು ಅನೇಕವಾಗಿವೆ. ನನ್ನ ಹೃದಯವು ಮೂರ್ಛೆಗೊಂಡಿದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]