Skip to content
The Believer's Library

Biblica® Open Kannada Contemporary Version 2022

Lamentations 3 OKCV

Show OKCV only
Verse × ×
1 I am the man who has seen affliction under the rod of his wrath. ಯೆಹೋವ ದೇವರ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.
2 He has driven me away and made me walk in darkness without any light. ಅವರು ನನ್ನನ್ನು ಕರೆತಂದು ನಡೆಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ.
3 Surely against me he turns his hand again and again, all day long. ನಿಶ್ಚಯವಾಗಿ ಅವರು ನನಗೆ ವಿರೋಧವಾಗಿ ತಿರುಗಿದ್ದಾರೆ. ಅವರು ದಿನವೆಲ್ಲಾ ತಮ್ಮ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾರೆ.
4 He has worn away my flesh and my skin; he has broken my bones. ನನ್ನ ಮಾಂಸ, ಚರ್ಮವನ್ನು ಆತನು ಹಳೆಯದನ್ನಾಗಿ ಮಾಡಿದ್ದಾರೆ. ಅವರು ನನ್ನ ಎಲುಬುಗಳನ್ನು ಮುರಿದಿದ್ದಾರೆ.
5 He has besieged me and surrounded me with bitterness and hardship. ಅವರು ನನಗೆ ವಿರೋಧವಾಗಿ ಕಟ್ಟಿದ್ದಾರೆ ಮತ್ತು ನನ್ನನ್ನು ವಿಷದಿಂದಲೂ, ಸಂಕಟದಿಂದಲೂ ಸುತ್ತಿಕೊಂಡಿದ್ದಾರೆ.
6 He has made me dwell in darkness like those long dead. ಅವರು ನನ್ನನ್ನು ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾರೆ.
7 He has walled me in so I cannot escape; he has weighed down my chains. ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ. ಅವರು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾರೆ.
8 Even when I call out and cry for help, he shuts out my prayer. ನಾನು ಕರೆದು ಕೂಗಿದರೂ ಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ.
9 He has blocked my ways with cut stones; he has made my paths crooked. ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ, ಆ ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.
10 He is a bear lying in wait for me, a lion in hiding. ಅವರು ನನಗೆ ಹೊಂಚು ಹಾಕುವ ಕರಡಿಯ ಹಾಗೆಯೂ, ಗುಪ್ತ ಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾರೆ.
11 He drove me off my path and tore me to pieces; he has made me desolate. ಅವರು ನನ್ನ ಮಾರ್ಗಗಳನ್ನು ತಪ್ಪಿಸಿ, ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ, ನನ್ನನ್ನು ಹಾಳು ಮಾಡಿದ್ದಾರೆ.
12 He bent his bow and set me as the target for his arrow. ಅವರು ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ, ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾರೆ.
13 He drove the arrows of his quiver into my vitals. ಅವರು ತನ್ನ ಬತ್ತಳಿಕೆಯಲ್ಲಿನ ಬಾಣಗಳನ್ನು ನನ್ನ ಅಂತರಂಗಗಳಲ್ಲಿ ತೂರಿ ಹೋಗುವಹಾಗೆ ಮಾಡಿದ್ದಾರೆ.
14 I have become the laughingstock of all my people, their mocking song all day long. ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ, ದಿನವೆಲ್ಲವೂ ಅವರ ಗೇಲಿಯ ಹಾಡಾಗಿಯೂ ಇದ್ದೇನೆ.
15 He has filled me with bitterness; he has sated me with bitterness. ಅವರು ನನ್ನನ್ನು ಕಹಿಯಿಂದ ತುಂಬಿಸಿ, ವಿಷ ಸಸ್ಯಗಳಿಂದ ನನ್ನನ್ನು ತಣಿಸಿದ್ದಾರೆ.
16 He has made my teeth grind on gravel, and made me cower in the dust. ಅವರು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು, ಅವರು ನನ್ನನ್ನು ಧೂಳಿನಲ್ಲಿ ತುಳಿದಿದ್ದಾರೆ.
17 My soul has lost all peace; I have forgotten what happiness is. ನನ್ನ ಪ್ರಾಣವನ್ನು ಸಮಾಧಾನದಿಂದ ದೂರ ಮಾಡಿದ್ದಾರೆ, ನಾನು ಸಮೃದ್ಧಿಯನ್ನು ಮರೆತುಬಿಟ್ಟೆನು.
18 So I say, "My endurance has perished, and so has my hope from our Father." “ಅಯ್ಯೋ, ನನ್ನ ಬಲವು ಮತ್ತು ನನ್ನ ನಿರೀಕ್ಷೆಯು ಯೆಹೋವ ದೇವರಿಂದ ನಾಶವಾದವು,” ಎಂದು ನಾನು ಹೇಳಿದೆನು.
19 Remember my affliction and my wandering, the bitterness and the gall! ನನ್ನ ಸಂಕಟವನ್ನು, ನನ್ನ ಅಲೆದಾಡುವಿಕೆಯನ್ನು, ನನ್ನ ಕಹಿಯನ್ನು, ನನ್ನ ವಿಷತನವನ್ನು ನಾನು ಜ್ಞಾಪಕಮಾಡಿಕೊಂಡಿದ್ದೇನೆ.
20 My soul continually remembers it and is bowed down within me. ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
21 But this I call to mind, and therefore I have hope: ಇದನ್ನು ನಾನು ನನ್ನ ಮನಸ್ಸಿಗೆ ತಂದುಕೊಳ್ಳುತ್ತೇನೆ. ಆದ್ದರಿಂದ ನನಗೆ ನಿರೀಕ್ಷೆ ಇದೆ.
22 The covenant love of our Father never ceases; his mercies never come to an end; ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.
23 they are new every morning; great is your faithfulness. ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು. ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
24 "Our Father is all I need," says my soul, "therefore I will hope in him." “ಯೆಹೋವ ದೇವರೇ ನನ್ನ ಪಾಲು, ಆದ್ದರಿಂದ ನಾನು ಅವರಿಗಾಗಿ ಕಾದಿರುತ್ತೇನೆ,” ಎಂದು ನಾನು ನನ್ನೊಳಗೆ ಎಂದುಕೊಳ್ಳುವೆನು.
25 Our Father is good to those who wait for him, to the soul who seeks him. ಆತನನ್ನು ನಿರೀಕ್ಷಿಸುವವರಿಗೂ, ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ.
26 It is good to wait quietly for the salvation of our Father. ಮನುಷ್ಯನು ಮೌನವಾಗಿ ಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು.
27 It is good for a man to bear the yoke in his youth. ತನ್ನ ಯೌವನದಲ್ಲಿ ನೊಗವನ್ನು ಹೊಂದಿರುವುದು ಮಾನವನಿಗೆ ಒಳ್ಳೆಯದು.
28 Let him sit alone in silence when it is laid on him; ಅವನು ಒಂಟಿಯಾಗಿ ಕುಳಿತು ಮೌನವಾಗಿರಲಿ. ಏಕೆಂದರೆ ಯೆಹೋವ ದೇವರೇ ಅದನ್ನು ಅವನ ಮೇಲೆ ಹೊರಿಸಿದ್ದಾರೆ.
29 let him put his mouth in the dust—there may yet be hope; ಒಂದು ವೇಳೆ ನಿರೀಕ್ಷೆ ಇರಬಹುದೇನೋ ಎಂದು ಅವನು ತನ್ನ ಮುಖವನ್ನು ಧೂಳಿನಲ್ಲಿ ಇಟ್ಟುಕೊಳ್ಳಲಿ.
30 let him give his cheek to the one who strikes, and be filled with insults. ಅವನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡಲಿ. ಅವನು ನಿಂದೆಯಿಂದಲೇ ತುಂಬಿರಲಿ.
31 For the Sovereign Father will not abandon forever. ಏಕೆಂದರೆ ಕರ್ತದೇವರು ಜನರನ್ನು ಎಂದೆಂದಿಗೂ ತಳ್ಳಿಬಿಡುವುದಿಲ್ಲ.
32 Though he causes grief, he will have compassion according to the abundance of his covenant love; ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.
33 for he does not willingly afflict or grieve people. ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ, ದುಃಖವನ್ನೂ ಕೊಡುವುದಿಲ್ಲ.
34 To crush underfoot all the prisoners of the earth, ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವುದನ್ನೂ,
35 to deny a man justice in the sight of the Most High, ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ನಿರಾಕರಿಸುವುದನ್ನೂ,
36 to deprive a man of justice in his case—the Sovereign Father does not approve. ಮನುಷ್ಯನನ್ನು ಅವನ ಜಗಳದಲ್ಲಿ ಅನ್ಯಾಯವಾಗಿ ತೀರಿಸುವುದು ಕರ್ತದೇವರು ಮೆಚ್ಚುವುದಿಲ್ಲ.
37 Who has spoken and it came to pass, unless the Sovereign Father has commanded it? ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
38 Is it not from the mouth of the Most High that both calamity and good come? ಮಹೋನ್ನತರ ಬಾಯಿಂದ ಕೇಡೂ, ಒಳ್ಳೆಯ ಸಂಗತಿಗಳೂ ಹೊರಡುವುದಿಲ್ಲವೇ?
39 Why should a living man complain about the punishment for his sins? ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗೊಣಗುಟ್ಟುವುದೇಕೆ?
40 Let us examine and test our ways, and return to our Father! ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ, ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ.
41 Let us lift up our hearts and our hands to our Father in heaven: ನಮ್ಮ ಹೃದಯಗಳನ್ನು ನಮ್ಮ ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
42 "We have sinned and rebelled, and you have not forgiven. ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ, ನೀವು ಮನ್ನಿಸಲಿಲ್ಲ.
43 You have wrapped yourself in anger and pursued us, killing without pity; ಕೋಪದಲ್ಲಿ ನಮ್ಮನ್ನು ಮುಚ್ಚಿ ಹಿಂಸಿಸಿದ್ದೀರಿ. ಕನಿಕರಿಸದೆ ಕೊಂದು ಹಾಕಿರುವಿರಿ.
44 you have wrapped yourself with a cloud so that no prayer can pass through. ನಮ್ಮ ಪ್ರಾರ್ಥನೆಯು ನಿನ್ನ ಸನ್ನಿಧಿಗೆ ಸೇರದಂತೆ ನಿನ್ನನ್ನು ಮೇಘದಿಂದ ಮುಚ್ಚಿಕೊಂಡಿದ್ದೀರಿ.
45 You have made us scum and refuse among the peoples. ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ, ಕಸವನ್ನಾಗಿಯೂ ಮಾಡಿದ್ದೀಯೆ.
46 All our enemies open their mouths against us; ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.
47 panic and pitfall have come upon us, devastation and destruction." ಭಯವನ್ನೂ, ನಾಶವನ್ನೂ ನಾವು ಅನುಭವಿಸಿದ್ದೇವೆ.
48 My eyes flow with streams of water over the destruction of my people. ನನ್ನ ಜನರ ನಾಶದ ನಿಮಿತ್ತವಾಗಿ, ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದು ಹೋಗುತ್ತದೆ.
49 My eyes will flow without ceasing, without respite, ಯೆಹೋವ ದೇವರು ಕಟಾಕ್ಷಿಸಿ, ಪರಲೋಕದಿಂದ ನೋಡುವ ತನಕ ನೇತ್ರವು ನಿರಂತರ ಕಣ್ಣೀರು ಸುರಿಸುತ್ತದೆ.
50 until our Father looks down and sees from heaven. ವಿಶ್ರಮಿಸಿಕೊಳ್ಳುವುದೂ ಇಲ್ಲ.
51 My eyes bring grief to my soul at the fate of all the daughters of my city. ನನ್ನ ನಗರದ ಪುತ್ರಿಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣುಗಳು ನನ್ನ ಹೃದಯವನ್ನು ಪೀಡಿಸಿದೆ.
52 I have been hunted like a bird by those who were my enemies without cause; ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
53 they flung me alive into a pit and cast stones on me; ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ, ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
54 water closed over my head; I said, "I am lost." ನನ್ನ ತಲೆಯ ಮೇಲೆ ನೀರು ಹರಿಯಿತು. ಆಗ ನಾನು ನಾಶವಾದೆನು ಅಂದುಕೊಂಡೆನು.
55 I called on your name, my Father, from the depths of the pit; ಯೆಹೋವ ದೇವರೇ, ನಾನು ಆಳವಾದ ಕಾರಾಗೃಹದಿಂದ ನಿಮ್ಮ ಹೆಸರನ್ನು ಎತ್ತಿ ಬೇಡಿಕೊಂಡೆನು.
56 you heard my plea: "Do not turn a deaf ear to my cry for help!" ನೀನು ನನ್ನ ಸ್ವರವನ್ನು ಕೇಳಿದ್ದೀ. “ನನ್ನ ಶ್ವಾಸಕ್ಕೂ, ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಬೇಡಿರಿ.”
57 You came near on the day I called on you; you said, "Do not fear!" ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು, “ಭಯಪಡಬೇಡ,” ಎಂದು ಹೇಳಿದಿರಿ.
58 You have taken up my cause, Sovereign Father; you have redeemed my life. ಕರ್ತದೇವರೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡೆಸಿ, ನನ್ನ ಜೀವವನ್ನು ವಿಮೋಚಿಸಿದ್ದೀರಿ.
59 You have seen the wrong done to me, my Father; judge my cause. ಯೆಹೋವ ದೇವರೇ, ನೀವು ನನ್ನ ಅನ್ಯಾಯವನ್ನು ನೋಡಿದ್ದೀರಿ, ನೀವು ನನ್ನ ನ್ಯಾಯವನ್ನು ತೀರಿಸಿರಿ.
60 You have seen all their vengeance, all their plots against me. ನನಗೆ ವಿರುದ್ಧವಾಗಿ ಅವರ ಎಲ್ಲಾ ಪ್ರತೀಕಾರವನ್ನೂ ನೋಡಿದ್ದೀರಲ್ಲಾ.
61 You have heard their taunts, my Father, all their plots against me, ಯೆಹೋವ ದೇವರೇ, ಅವರ ಎಲ್ಲಾ ಕಲ್ಪನೆಗಳನ್ನೂ ಮತ್ತು ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ,
62 the lips and thoughts of my assailants against me all day long. ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿರಿ.
63 Watch their every move; I am the object of their mocking song. ಅವರನ್ನು ನೋಡು! ಕುಳಿತು ಅಥವಾ ನಿಂತಾಗ, ಅವರು ತಮ್ಮ ಹಾಡುಗಳಲ್ಲಿ ನನ್ನನ್ನು ಅಣಕಿಸುತ್ತಾರೆ.
64 You will repay them, my Father, according to the work of their hands. ಯೆಹೋವ ದೇವರೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡಿ.
65 You will give them hardness of heart; your curse will be on them. ಅವರಿಗೆ ದುಃಖಕರವಾದ ಹೃದಯವನ್ನೂ, ನಿಮ್ಮ ಶಾಪವನ್ನೂ ಕೊಡಿ.
66 You will pursue them in anger and destroy them from under the heavens of our Father. ಯೆಹೋವ ದೇವರೇ, ಆಕಾಶದ ಕೆಳಗಿನಿಂದ ಕೋಪದಿಂದ ಅವರನ್ನು ಹಿಂಸಿಸಿ ಹಾಳುಮಾಡಿರಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]