Skip to content
The Believer's Library

Biblica® Open Kannada Contemporary Version 2022

Leviticus 1 OKCV

Show OKCV only
Verse × ×
1 Our Father called to Moses and spoke to him from the tent of meeting, saying: ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ,
2 "Speak to the Israelites and say to them: When any of you brings me an offering, bring your offering of livestock from the herd or the flock. ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “ ‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.
3 "If his offering is a burnt offering from the herd, he is to offer a male without defect, offering it at the entrance of the tent of meeting, to be accepted before me. “ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.
4 He is to lay his hand on the burnt offering's head, and it will be accepted for him, to atone for him. ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.
5 He is to kill the young bull before me, and Aaron's sons the priests are to bring the blood and splash it around the altar at the entrance of the tent of meeting. ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
6 Then he is to skin the burnt offering and cut it into its pieces. ಅವನು ಆ ದಹನಬಲಿಯ ಚರ್ಮವನ್ನು ಸುಲಿದು, ಅದರ ದೇಹವನ್ನು ಕಡಿದು, ತುಂಡುತುಂಡಾಗಿ ಮಾಡಬೇಕು.
7 Aaron's sons the priests will lay a fire on the altar and arrange wood on it. ಯಾಜಕನಾದ ಆರೋನನ ಪುತ್ರರು ಬಲಿಪೀಠದ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
8 Aaron's sons, the priests, arrange the pieces, head, and fat on the wood over the fire on the altar. ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
9 He is to wash its inner organs and legs with water; the priest burns it all on the altar—a burnt offering, a food offering, a pleasing aroma to me. ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
10 "If his burnt offering is from the flock—sheep or goats—he must bring a male without defect. “ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.
11 He is to slaughter it on the altar's north side before me; Aaron's sons the priests are to splash its blood around the altar. ಅವನು ಅದನ್ನು ಬಲಿಪೀಠದ ಉತ್ತರದ ಕಡೆಯಲ್ಲಿ ಯೆಹೋವ ದೇವರ ಮುಂದೆ ವಧಿಸಬೇಕು. ಇದಲ್ಲದೆ ಯಾಜಕರಾದ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
12 He is to cut it into pieces—head and fat—and the priest is to arrange them on the wood, on the fire, on the altar. ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ, ಯಾಜಕನು ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
13 He must wash the inner organs and legs with water; the priest offers it all, burns it on the altar—a burnt offering, a food offering, a pleasing aroma to me. ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
14 "If his burnt offering to me is a bird, he must bring turtledoves or young pigeons as his offering. “ ‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.
15 The priest brings it to the altar, wrings off its head, burns it there; its blood drains against the altar's side. ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.
16 He removes its crop with its contents, throwing it beside the altar eastward, at the ash heap. ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು.
17 He is to tear it open by the wings, not fully apart; the priest will burn it on the altar's wood over the fire—a burnt offering, a food offering, a pleasing aroma to me." ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]