Skip to content
The Believer's Library

Biblica® Open Kannada Contemporary Version 2022

Leviticus 11 OKCV

Show OKCV only
Verse × ×
1 Our Father spoke to Moses and Aaron, saying to them, ಯೆಹೋವ ದೇವರು ಮೋಶೆ ಆರೋನರಿಗೆ ಹೀಗೆ ಹೇಳಿದರು,
2 "Speak to the Israelites: These are the living creatures you may eat among all the animals on the earth. “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು: ‘ಭೂಮಿಯ ಮೇಲೆ ಇರುವ ಎಲ್ಲಾ ನೀವು ತಿನ್ನತಕ್ಕ ಪ್ರಾಣಿಗಳು ಯಾವವಂದರೆ:
3 Among the animals, you may eat any that has a divided hoof, fully split, and chews the cud. ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು.
4 "But these you must not eat among those that chew the cud or have a divided hoof: the camel—it chews the cud but has no divided hoof; it is unclean for you. “ ‘ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವುದಾದರೂ ಅದಕ್ಕೆ ಸೀಳುಗೊರಸು ಇಲ್ಲ. ಅದು ನಿಮಗೆ ಅಶುದ್ಧ.
5 The rock badger chews the cud but has no divided hoof; it is unclean for you. ಬೆಟ್ಟದ ಕುಣಿ ಮೊಲವು ಮೇವನ್ನು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.
6 The hare, because it chews the cud but has no divided hoof—it is unclean for you. ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.
7 And the pig, though it has a divided, fully split hoof, does not chew the cud—unclean for you. ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು.
8 Do not eat their flesh, and do not touch their carcasses—they are unclean for you. ಅವುಗಳ ಮಾಂಸವನ್ನು ನೀವು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. ಅವು ನಿಮಗೆ ಅಶುದ್ಧವಾಗಿವೆ.
9 "You may eat these of all in the waters: whatever has fins and scales in the waters, seas, and rivers—those you may eat. “ ‘ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ಸಮುದ್ರದಲ್ಲಿ ಮತ್ತು ನದಿಯಲ್ಲಿ ಇರುವ ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು.
10 But any without fins and scales in the seas and rivers, among all that swarm in the waters and all the living creatures in the waters—they are detestable to you. ಸಮುದ್ರಗಳಲ್ಲಿಯೂ, ನದಿಗಳಲ್ಲಿಯೂ ನೀರೊಳಗೆ ಚಲಿಸುವ ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜುರೆಕ್ಕೆ ಮತ್ತು ಪೊರೆಯಿಲ್ಲದವುಗಳು ನಿಮಗೆ ನಿಷಿದ್ಧವಾಗಿವೆ.
11 They remain detestable to you; do not eat their flesh, and treat their carcasses as detestable. ಅವು ನಿಮಗೆ ಅಶುದ್ಧವಾಗಿಯೇ ಇರುವವು. ನೀವು ಅವುಗಳ ಮಾಂಸವನ್ನು ತಿನ್ನಬಾರದು ಮತ್ತು ಅವುಗಳ ಶವಗಳು ನಿಮಗೆ ಹೇಯವಾಗಿರಬೇಕು.
12 Whatever has no fins or scales in the waters—that is detestable to you. ನೀರಲ್ಲಿ ಯಾವುದಕ್ಕೆ ಈಜುರೆಕ್ಕೆ ಮತ್ತು ಪೊರೆಗಳಿಲ್ಲವೋ ಅವು ನಿಮಗೆ ಹೇಯವಾಗಿರಬೇಕು.
13 "Detest these birds; do not eat them—they are detestable: the eagle, the vulture, the black vulture, “ ‘ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವಾಗಿವೆ. ಇವುಗಳು ನಿಮಗೆ ಅಸಹ್ಯಕರವಾದ ಮತ್ತು ತಿನ್ನಲು ನಿಷೇಧಿಸಲಾದ ಪಕ್ಷಿಗಳು ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ರಣಹದ್ದು, ಕಪ್ಪು ರಣಹದ್ದು.
14 the kite, and the falcon according to its kind, ಕ್ರೌಂಚ, ಅದರ ಜಾತಿಯ ಹದ್ದು,
15 every raven according to its kind, ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,
16 the ostrich, the nighthawk, the seagull, and the hawk according to its kind, ಉಷ್ಟ್ರಪಕ್ಷಿ, ಚೀರು ಗೂಬೆ, ಕಡಲ ಹಕ್ಕಿ ಮತ್ತು ಅದರ ಪ್ರತಿಯೊಂದು ಜಾತಿಯ ಗಿಡುಗ.
17 the little owl, the cormorant, the great owl, ಸಣ್ಣ ಗೂಬೆ, ನೀರುಕಾಗೆ, ದೊಡ್ಡ ಗೂಬೆ,
18 the white owl, the desert owl, the carrion vulture, ಬಿಳಿಗೂಬೆ, ಮರಳುಗಾಡು ಗೂಬೆ, ರಣಹದ್ದು,
19 the stork, the heron according to its kind, the hoopoe, and the bat. ನೀರು ಕೋಳಿ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.
20 "Every winged swarming creature that walks on four legs is detestable to you. “ ‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು.
21 Yet these you may eat among all winged swarming creatures that walk on four legs: those with jointed legs above their feet for leaping on the ground. ಆದರೂ ಹಾರಾಡುವ, ಹರಿದಾಡುವ ನಾಲ್ಕು ಕಾಲುಗಳ ಮೇಲೆ ಹೋಗುವ, ತಮ್ಮ ಪಾದಗಳ ಮೇಲೆ ಕಾಲುಗಳಿದ್ದು, ಭೂಮಿಯ ಮೇಲೆ ದುಮುಕುವವುಗಳನ್ನೂ ನೀವು ತಿನ್ನಬಹುದು.
22 You may eat these: the locust, the bald locust, the cricket, and the grasshopper, each according to its kind. ಮಿಡತೆಗಳನ್ನು ಜುಟ್ಟೆ ಮಿಡತೆಗಳನ್ನು ಅವುಗಳ ಜಾತಿಗನುಸಾರವಾಗಿ ತಿನ್ನಬಹುದು.
23 But every other winged swarming creature that has four feet is detestable to you. ಆದರೆ ನಾಲ್ಕು ಪಾದವಿರುವ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳು ನಿಮಗೆ ಹೇಯವಾಗಿರಬೇಕು.
24 "These things will make you unclean; whoever touches their carcasses will be unclean until the evening, “ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.
25 whoever carries any of their carcasses must wash his clothes and be unclean until evening. ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.
26 "Every animal with a divided hoof not fully split, or that does not chew the cud, is unclean for you; whoever touches them is unclean. “ ‘ಯಾವ ಪ್ರಾಣಿಯ ಗೊರಸು ಸ್ವಲ್ಪ ಸೀಳಿದ್ದರೂ, ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳ ಶವವನ್ನು ಮುಟ್ಟುವವರು ಅಶುದ್ಧರಾಗಿರುವರು.
27 Whatever walks on its paws, among all four-legged animals, is unclean for you; whoever touches their carcasses is unclean until evening, ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವುದೆಲ್ಲವೂ ನಿಮಗೆ ಅಶುದ್ಧವಾಗಿರುವುವು. ಯಾರಾದರೂ ಅವುಗಳ ಶವವನ್ನು ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.
28 whoever carries their carcasses must wash his clothes and be unclean until evening; they are unclean to you. ಅವುಗಳ ಶವವನ್ನು ಹೊರುವವರು ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೂ ಅಶುದ್ಧರಾಗಿರುವರು. ಈ ಪ್ರಾಣಿಗಳು ನಿಮಗೆ ಅಶುದ್ಧವಾದವುಗಳು.
29 "These are unclean for you among the swarming things that swarm on the earth: the mole rat, the mouse, the great lizard by its kind, “ ‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ,
30 the gecko, the monitor lizard, the wall lizard, the skink, and the chameleon. ಅರೆ ಪಳಗಿಸಿದ ಪ್ರಾಣಿ, ಹಾವುರಾಣಿ, ಊಸುರುವಳ್ಳಿ, ಹಲ್ಲಿ, ಬಸವನ ಹುಳು ಮತ್ತು ಚಿಟ್ಟಿಲಿ.
31 These are unclean for you among all that swarm; whoever touches them dead is unclean until evening. ನೆಲದ ಮೇಲೆ ಹರಿದಾಡುವ ಇವು ನಿಮಗೆ ಅಶುದ್ಧ. ಸತ್ತಿರುವಾಗ ಅವುಗಳನ್ನು ಯಾರಾದರೂ ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.
32 Anything one of their dead bodies falls on becomes unclean—any wooden vessel, cloth, leather, or sackcloth, any working tool. It must be put in water and stays unclean until evening; then it is clean. ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.
33 Any clay pot one of them falls into—whatever is in it is unclean; break it. ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.
34 Any food touched by such water becomes unclean; any drink in such a vessel becomes unclean. ಅದರಲ್ಲಿರುವ ಆಹಾರ ಪದಾರ್ಥವೆಲ್ಲಾ ನೀರಿನಿಂದ ನೆನೆದಿದ್ದರೆ ಅದು ಅಶುದ್ಧವಾಗಿರುವುದು. ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವುದು.
35 Anything one of their carcasses falls on becomes unclean; an oven or stove must be smashed. They are unclean, and unclean to you. ಅವುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಅದು ಅಶುದ್ಧವಾಗಿರುವುದು. ಅದು ಹರಿವಾಣವಾಗಿದ್ದರೂ, ಮಣ್ಣುಗಳ ಒಲೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಏಕೆಂದರೆ ಅವು ಅಶುದ್ಧವಾಗಿವೆ. ಅವು ನಿಮಗೆ ಅಶುದ್ಧವೇ.
36 Yet a spring or cistern holding water stays clean, but whoever touches their carcasses is unclean. ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ, ಹಳ್ಳವಾಗಲಿ ಶುದ್ಧವಾಗಿರುವುದು. ಅವುಗಳೊಳಗಿಂದ ಹೆಣಗಳನ್ನು ಎತ್ತಿದವರು ಅಶುದ್ಧರಾಗುವರು.
37 If any of their carcasses falls on seed to be planted, it stays clean. ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೂ ಶುದ್ಧವಾಗಿರುವುದು.
38 But if water has been put on the seed and part of their carcass falls on it, it is unclean for you. ಆದರೆ ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣವು ಬಿದ್ದರೆ, ಅದು ನಿಮಗೆ ಅಶುದ್ಧವಾಗಿರುವುದು.
39 "If any animal you may eat dies, whoever touches its carcass is unclean until evening. “ ‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.
40 Whoever eats its carcass must wash their clothes and be unclean until evening; whoever carries its carcass must wash their clothes and be unclean until evening. ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
41 "Every swarming creature that swarms on the earth is detestable; do not eat it. “ ‘ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಹೇಯವಾಗಿದೆ. ಅದನ್ನು ತಿನ್ನಬಾರದು.
42 Whatever moves on its belly, walks on four legs, or has many feet—among all the swarming things that swarm on the earth—do not eat them; they are detestable. ಹೊಟ್ಟೆಯಿಂದ ಹರಿದಾಡುವ ಯಾವುದನ್ನೂ, ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವುದನ್ನೂ, ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವುದನ್ನು ನೀವು ತಿನ್ನಬಾರದು. ಏಕೆಂದರೆ ಅವು ಹೇಯವಾಗಿವೆ.
43 Do not make yourselves detestable with any swarming creature that swarms, and do not make yourselves unclean by them, becoming unclean through them. ಯಾವುದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು, ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಅವುಗಳಿಂದ ಮಲಿನರಾಗಬಾರದು.
44 For I am your Father: dedicate yourselves, be holy, since I am holy. Do not make yourselves unclean with any swarming creature crawling on the ground. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.
45 I am your Father who brought you out of Egypt to be your God; be holy, for I am holy." ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.
46 This is the law of the animals, the birds, every living creature moving in the waters, and every creature swarming on the earth, “ ‘ಪ್ರಾಣಿಗಳು, ಪಕ್ಷಿಗಳು, ನೀರಿನಲ್ಲಿರುವ ಮತ್ತು ನೆಲದ ಮೇಲೆ ತೆವಳುವ ಪ್ರತಿಯೊಂದು ಜೀವಿಗಳಿಗೆ ಕುರಿತಾದ ನಿಯಮವು ಇದೇ.
47 to distinguish between the unclean and the clean, between animals that may be eaten and those that may not. ಅಶುದ್ಧ ಮತ್ತು ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನಲರ್ಹವಾದ ಮೃಗ ಮತ್ತು ತಿನ್ನಬಾರದ ಮೃಗಗಳ ನಡುವಿನ ವ್ಯತ್ಯಾಸವನ್ನು ಹೀಗೆ ತಿಳಿದುಕೊಳ್ಳುವಿರಿ.’ ”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]