Skip to content
The Believer's Library

Biblica® Open Kannada Contemporary Version 2022

Leviticus 12 OKCV

Show OKCV only
Verse × ×
1 Our Father spoke to Moses, saying: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಹೇಳಿದ್ದೇನೆಂದರೆ,
2 "Tell the Israelites: when a woman conceives and bears a son, she is unclean seven days—unclean as during her monthly period. “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
3 And on the eighth day the flesh of his foreskin will be circumcised. ಎಂಟನೆಯ ದಿನದಲ್ಲಿ ಮಗುವಿಗೆ ಸುನ್ನತಿ ಮಾಡಿಸಬೇಕು.
4 For thirty-three days she remains in the blood of her purification. She must not touch anything holy or enter the sanctuary until her days of purification are complete. ಅವಳು ಮೂವತ್ತಮೂರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು. ಅವಳ ಶುದ್ಧೀಕರಣದ ದಿನಗಳು ಪೂರೈಸುವ ತನಕ ಅವಳು ಪರಿಶುದ್ಧವಾದದ್ದನ್ನು ಮುಟ್ಟಬಾರದು, ಇಲ್ಲವೆ ಪರಿಶುದ್ಧ ಸ್ಥಳಕ್ಕೆ ಬರಬಾರದು.
5 If she bears a daughter, she is unclean two weeks, as during her period, then continues sixty-six days in the blood of her purification. ಅವಳು ಹೆಣ್ಣು ಮಗುವನ್ನು ಹೆತ್ತರೆ, ಅವಳು ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು.
6 "When her days of purification for a son or daughter are complete, she must bring the priest at the tent of meeting's entrance a year-old lamb as a burnt offering, and a young pigeon or turtledove as a sin offering. “ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.
7 He will offer it before our Father and atone for her; she'll be clean from her blood flow. This is the law for the woman who gives birth, to a son or daughter. ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. “ ‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ.
8 "If she can't afford a lamb, she may take two turtledoves or two young pigeons—one for a burnt offering, one for a sin offering. The priest will atone for her, and she will be clean." ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]