Skip to content
The Believer's Library

Biblica® Open Kannada Contemporary Version 2022

Leviticus 14 OKCV

Show OKCV only
Verse × ×
1 Our Father said to Moses: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ:
2 "This is the law for someone with a skin disease on the day of his cleansing: he must be brought to the priest. “ಚರ್ಮರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ. ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
3 The priest is to go outside the camp and examine him; if his skin disease has healed, ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು. ಚರ್ಮರೋಗದಿಂದ ರೋಗಿಯು ಗುಣವಾದನೆಂದು ಯಾಜಕನು ಪರೀಕ್ಷಿಸಿದರೆ,
4 the priest must order two live clean birds, cedar wood, scarlet yarn, and hyssop taken for the one being cleansed. ಆಗ ಶುದ್ಧಮಾಡಿಕೊಳ್ಳುವವನಿಗೋಸ್ಕರ ಜೀವವುಳ್ಳ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳುವಂತೆ ಯಾಜಕನು ಆಜ್ಞಾಪಿಸಬೇಕು.
5 The priest is to command that one bird be slaughtered over a clay pot of fresh water. ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.
6 He must take the live bird, the cedar wood, the scarlet yarn, and the hyssop, and dip them with the live bird in the blood of the bird slaughtered over the fresh water. ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ,
7 He sprinkles the blood seven times on the one being cleansed of the skin disease, pronounces him clean, then releases the live bird over the open field. ಚರ್ಮರೋಗದಿಂದ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ, ಅವನನ್ನು ಶುದ್ಧನೆಂದು ನುಡಿದು, ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟುಬಿಡಬೇಕು.
8 "The one being cleansed must wash his clothes, shave off all his hair, and bathe in water—then he is clean. Afterward he may enter the camp, but stay outside his tent seven days. “ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು.
9 On the seventh day he must shave off all his hair—head, beard, eyebrows—shaving off all his hair. Then he must wash his clothes and bathe his body in water, and he is clean. ಆದರೆ ಏಳನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ, ಗಡ್ಡವನ್ನೂ, ತನ್ನ ಕಣ್ಣುಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಬೋಳಿಸಿಕೊಳ್ಳಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
10 "On the eighth day he must take two male lambs without defect, a year-old ewe lamb without defect, three quarts fine flour mixed with oil for a grain offering, and a cup of oil. “ಎಂಟನೆಯ ದಿವಸದಲ್ಲಿ ಅವನು ಕಳಂಕರಹಿತವಾದ ಎರಡು ಕುರಿಮರಿಗಳನ್ನು ಮತ್ತು ಒಂದು ವರುಷದ ಕಳಂಕರಹಿತವಾದ ಹೆಣ್ಣು ಕುರಿಯನ್ನು, ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು, ಒಂದನೆಯ ಮೂರು ಭಾಗ ಎಣ್ಣೆಯನ್ನು ತೆಗೆದುಕೊಳ್ಳಬೇಕು.
11 The cleansing priest is to present the one being cleansed, with these offerings, before our Father at the tent of meeting's entrance. ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯೆಹೋವ ದೇವರ ಮುಂದೆ ನಿಲ್ಲಿಸಬೇಕು.
12 "The priest takes one male lamb and offers it as a guilt offering, with the oil, waving them as a wave offering before our Father. “ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಂಡು ಪ್ರಾಯಶ್ಚಿತ್ತ ಬಲಿಯಾಗಿ ಅರ್ಪಿಸಿ, ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
13 He must slaughter the lamb where the sin offering and burnt offering are slaughtered, in the holy place—since the guilt offering, like the sin offering, belongs to the priest; it is most holy. ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು.
14 The priest is to take some blood of the guilt offering and put it on the right earlobe of the one being cleansed, on his right thumb, and on his right big toe. ಯಾಜಕನು ಪ್ರಾಯಶ್ಚಿತ್ತ ಬಲಿಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಮತ್ತು ಯಾಜಕನು ಅದನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿನ ಮೇಲೆಯೂ, ಬಲಗಾಲಿನ ಹೆಬ್ಬೆಟ್ಟಿನ ಮೇಲೆಯೂ ಹಚ್ಚಬೇಕು.
15 The priest is to take some of the oil and pour it into his own left palm. ಯಾಜಕನು ಒಂದನೆಯ ಮೂರು ಭಾಗದಷ್ಟು ಎಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.
16 He must dip his right finger in the oil in his left palm and sprinkle some with his finger seven times before our Father. ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ, ತನ್ನ ಬೆರಳಿನಿಂದ ಆ ಎಣ್ಣೆಯನ್ನು ಏಳು ಸಾರಿ ಯೆಹೋವ ದೇವರ ಎದುರಿನಲ್ಲಿ ಚಿಮುಕಿಸಬೇಕು.
17 With the oil remaining on his palm, the priest puts some on the right earlobe of the one being made clean, on his right thumb, and his right big toe, over the blood of the guilt offering. ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆ ಮತ್ತು ಅವನ ಬಲಗೈಯ ಹೆಬ್ಬೆರಳಿನ ಮೇಲೆ, ಅವನ ಬಲಗಾಲಿನ ಹೆಬ್ಬೆಟ್ಟಿನ ಮೇಲೆ ಹಚ್ಚಬೇಕು. ಅದೇ ರೀತಿ ಪ್ರಾಯಶ್ಚಿತ್ತ ಬಲಿಯ ರಕ್ತದ ಮೇಲೆ ಹಚ್ಚಬೇಕು.
18 The priest is to put the oil left in his palm on the head of the one made clean, making atonement for him before our Father. ಯಾಜಕನ ಕೈಯಲ್ಲಿರುವ ಉಳಿದ ಆ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯಬೇಕು. ಯಾಜಕನು ಅವನಿಗಾಗಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
19 The priest is to offer the sin offering and atone for the one made clean from his impurity; afterward he slaughters the burnt offering. “ಯಾಜಕನು ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು. ತರುವಾಯ ಅವನು ದಹನಬಲಿಯ ಪ್ರಾಣಿಯನ್ನು ವಧಿಸಬೇಕು.
20 The priest will offer the burnt and grain offerings on the altar, atone for him, and he will be clean. ಯಾಜಕನು ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
21 "But if he is poor and lacks the means, he is to take one male lamb as a guilt offering, to be waved for atonement for him, with about two quarts of fine flour mixed with oil, for a grain offering, and about a cup of oil, “ಅವನು ಬಡವನಾಗಿದ್ದರೆ ಅಷ್ಟೊಂದು ತರುವುದಕ್ಕೆ ಆಗದಿದ್ದರೆ, ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಬಲಿ ಕೊಡಲು ನೈವೇದ್ಯ ಮಾಡುವುದಕ್ಕೆ ಒಂದು ಕುರಿಮರಿಯನ್ನೂ, ಎಣ್ಣೆ ಬೆರೆಸಿದ ಒಂದುವರೆ ಕಿಲೋಗ್ರಾಂ ನಯವಾದ ಹಿಟ್ಟನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ
22 and two turtledoves or two young pigeons—whichever he can afford, one as a sin offering, the other as a burnt offering. ಮತ್ತು ಅವನಿಂದಾಗುವಷ್ಟು ಎರಡು ಬೆಳವಕ್ಕಿಗಳನ್ನೂ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನೂ ತೆಗೆದುಕೊಳ್ಳಬೇಕು. ಅವುಗಳಲ್ಲಿ ಒಂದು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದು ದಹನಬಲಿಗಾಗಿಯೂ ಇರುವುದು.
23 "On the eighth day he must bring them for his cleansing to the priest, to the entrance of the tent of meeting, before our Father. “ಅವನು ತನ್ನ ಶುದ್ಧತೆಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಯೆಹೋವ ದೇವರ ಎದುರಿನಲ್ಲಿ ತರಬೇಕು.
24 The priest takes the guilt-offering lamb and the log of oil, waving them as a wave offering before our Father. ಯಾಜಕನು ಪ್ರಾಯಶ್ಚಿತ್ತದ ಸಮರ್ಪಣೆಯ ಆ ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
25 He must slaughter the guilt offering's lamb, take some of its blood, and put it on the right ear lobe, right thumb, and right big toe of the one being cleansed. ಅವನು ಪ್ರಾಯಶ್ಚಿತ್ತ ಬಲಿಗಾಗಿ ಆ ಕುರಿಮರಿಯನ್ನು ವಧಿಸಬೇಕು. ಆ ಪ್ರಾಯಶ್ಚಿತ್ತ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು, ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆಯೂ, ಅವನ ಬಲಗೈಯ ಹೆಬ್ಬೆರಳಿನ ಮೇಲೆಯೂ ಹಚ್ಚಬೇಕು.
26 The priest is to pour some of the oil into his own left palm, ಇದಲ್ಲದೆ ಯಾಜಕನು ತನ್ನ ಸ್ವಂತ ಎಡ ಅಂಗೈಯಲ್ಲಿ ಎಣ್ಣೆಯನ್ನು ಸುರಿಯಬೇಕು.
27 and with his right finger sprinkle some oil from his left palm seven times before our Father. ಯಾಜಕನು ತನ್ನ ಬಲಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳು ಸಾರಿ ಯೆಹೋವ ದೇವರ ಎದುರಿನಲ್ಲಿ ಚಿಮುಕಿಸಬೇಕು.
28 The priest puts oil from his palm on the right earlobe of the one being made clean, his right thumb, and right big toe, over the place of the guilt offering's blood. ಇದಲ್ಲದೆ ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆಯೂ, ಅವನ ಬಲಗೈಯ ಹೆಬ್ಬೆರಳಿನ ಮೇಲೆಯೂ, ಅವನ ಬಲಗಾಲಿನ ಹೆಬ್ಬೆಟ್ಟಿನ ಮೇಲೆಯೂ ಪ್ರಾಯಶ್ಚಿತ್ತ ಬಲಿಯ ರಕ್ತದ ಸ್ಥಳದ ಮೇಲೆಯೂ ಹಚ್ಚಬೇಕು.
29 The priest is to put the rest of the oil from his palm on the head of the one being cleansed, to atone for him before our Father. ಯಾಜಕನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು, ಯೆಹೋವ ದೇವರ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು.
30 Then he is to offer one of the turtledoves or young pigeons, whichever he can afford. ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ ಸಮರ್ಪಿಸಬೇಕು.
31 Whichever he can afford—one as a sin offering, the other as a burnt offering, with the grain offering. The priest will make atonement before our Father for the one made clean. ಅದರಂತೆಯೇ ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಧಾನ್ಯಸಮರ್ಪಣೆಯೊಂದಿಗೆ ಸಮರ್ಪಿಸಬೇಕು, ಶುದ್ಧಪಡಿಸಿಕೊಳ್ಳುವವನಿಗೋಸ್ಕರ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.”
32 "This is the law for one with a skin disease who cannot afford the offerings for his cleansing." ಚರ್ಮರೋಗವುಳ್ಳವನು ಶುದ್ಧತೆ ಮಾಡಿಸಿಕೊಳ್ಳಲು ಗತಿಯಿಲ್ಲದವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
33 Our Father said to Moses and Aaron: ಯೆಹೋವ ದೇವರು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ:
34 "When you enter the land of Canaan, which I give you as a possession, and I put a spreading mildew in a house in the land you possess, “ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ,
35 the owner must come tell the priest: 'Something like a disease has appeared in my house.' ಮನೆಯವನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಬೂಜಿನ ಗುರುತಿದ್ದಂತೆ ಕಾಣುತ್ತಿದೆ,’ ಎಂದು ಹೇಳಬೇಕು.
36 The priest must order the house emptied before he enters to examine the disease, so nothing in it is declared unclean; then he may enter to examine the house. ಆಗ ಯಾಜಕನು ಆ ಮನೆಯಲ್ಲಿ ಬೂಜನ್ನು ಪರೀಕ್ಷಿಸುವುದಕ್ಕೆ ಹೋಗುವ ಮೊದಲು, ಆ ಮನೆಯೊಳಗೆ ಇರುವವುಗಳು ಅಶುದ್ಧವಾಗದಂತೆ ಆ ಮನೆಯನ್ನು ಬರಿದುಮಾಡಬೇಕೆಂದು ಆಜ್ಞಾಪಿಸಬೇಕು. ತರುವಾಯ ಯಾಜಕನು ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು.
37 He examines the disease, and if it is in the house's walls—greenish or reddish depressions that appear deeper than the surface. ಅವನು ಆ ಬೂಜನ್ನು ಪರೀಕ್ಷಿಸಿದಾಗ, ಅದು ಮನೆಯ ಗೋಡೆಗಳಲ್ಲಿ ತಗ್ಗಾದ ಸಾಲುಗಳಲ್ಲಿ ಹಸಿರಾಗಿಯಾದರೂ, ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ,
38 The priest must leave the house through its doorway and shut it up seven days. ಯಾಜಕನು ಆ ಮನೆಯ ಹೊರಗೆ ಮನೆಯ ಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳವರೆಗೆ ಮುಚ್ಚಬೇಕು.
39 On the seventh day the priest returns to examine it. If the disease has spread on the house walls, ಏಳನೆಯ ದಿನದಲ್ಲಿ ಯಾಜಕನು ತಿರುಗಿಬಂದು ಪರೀಕ್ಷಿಸಿದಾಗ, ಆ ಬೂಜು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ,
40 he must order the diseased stones torn out and thrown outside the city, to an unclean place. ಬೂಜುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ,
41 He must scrape the house's inside all around, and dump the scraped-off plaster outside the city in an unclean place. ಆ ಮನೆಯ ಒಳಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯಬೇಕೆಂದೂ,
42 Other stones are to replace the old ones, and new plaster is to cover the house. ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು, ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವುಮಾಡಬೇಕು.
43 "If the infection returns in the house after the stones are torn out, the house scraped, and plastered, “ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆತ್ತಿ ಗಿಲಾವು ಮಾಡಿಸಿದ ಮೇಲೆ ಆ ಬೂಜು ತಿರುಗಿ ಕಾಣಬಂದರೆ,
44 the priest must enter and examine; if the disease has spread in the house, it is a destructive mildew in the house—it is unclean. ಯಾಜಕನು ಬಂದು ಪರೀಕ್ಷಿಸಬೇಕು. ಆಗ ಬೂಜು ಮನೆಯಲ್ಲಿ ಹರಡಿಕೊಂಡಿದ್ದರೆ, ಆ ಮನೆಯಲ್ಲಿ ಅದೊಂದು ನಾಶಕರವಾದ ಬೂಜು ಆಗಿರುವುದು, ಆ ಮನೆ ಅಶುದ್ಧವಾದದ್ದು.
45 He must tear down the house—stones, timbers, and all its plaster—and haul it outside the city to an unclean place. ಅವನು ಆ ಮನೆಯನ್ನು ಕೆಡವಿಹಾಕಿ, ಅದರ ಕಲ್ಲುಗಳನ್ನೂ, ಮರಗಳನ್ನೂ, ಆ ಮನೆಯ ಎಲ್ಲಾ ಧೂಳನ್ನೂ ತೆಗೆದು, ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
46 Anyone who enters the house while it is closed is unclean until evening. “ಆ ಮನೆಯು ಮುಚ್ಚಿರುವ ಕಾಲದಲ್ಲೆಲ್ಲಾ ಅದರೊಳಗೆ ಯಾವನಾದರೂ ಹೋದರೆ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರುವನು.
47 Whoever lies or eats in the house must wash his clothes. ಆ ಮನೆಯೊಳಗೆ ಮಲಗಿಕೊಳ್ಳುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅಲ್ಲದೆ ಆ ಮನೆಯೊಳಗೆ ತಿನ್ನುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
48 "If the priest comes, examines it, and the disease has not spread in the house after it was plastered, he is to declare it clean—the disease is healed. “ಆದರೆ ಯಾಜಕನು ಒಳಗೆ ಬಂದು ಅದನ್ನು ಪರೀಕ್ಷಿಸಿದಾಗ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ಬೂಜು ಹರಡಿಕೊಂಡಿರದಿದ್ದರೆ, ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸಬೇಕು. ಏಕೆಂದರೆ ಆ ಬೂಜು ಹೊರಟುಹೋಯಿತು.
49 To cleanse the house he is to take two birds, with cedar wood, scarlet yarn, and hyssop, ಆ ಮನೆಯನ್ನು ಶುದ್ಧಪಡಿಸುವುದಕ್ಕೋಸ್ಕರ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣ ದಾರವನ್ನೂ, ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
50 and he is to slaughter one of the birds into a clay pot over fresh water. ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು.
51 He must take the cedar wood, hyssop, scarlet yarn, and the live bird, dip them in the slaughtered bird's blood and the fresh water, and sprinkle the house seven times. ತರುವಾಯ ದೇವದಾರು ಕಟ್ಟಿಗೆಯನ್ನೂ, ಹಿಸ್ಸೋಪನ್ನೂ, ರಕ್ತವರ್ಣ ದಾರವನ್ನೂ, ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು, ಅವುಗಳನ್ನು ವಧಿಸಿದ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ, ಏಳು ಸಾರಿ ಆ ಮನೆಗೆ ಚಿಮುಕಿಸಬೇಕು.
52 Then he must purify the house with the bird's blood, fresh water, the live bird, cedar wood, hyssop, and scarlet yarn. ಅವನು ಪಕ್ಷಿಯ ರಕ್ತದಿಂದಲೂ, ಹರಿಯುವ ನೀರಿನಿಂದಲೂ, ಸಜೀವವುಳ್ಳ ಪಕ್ಷಿಯಿಂದಲೂ, ದೇವದಾರು ಕಟ್ಟಿಗೆಯಿಂದಲೂ, ಹಿಸ್ಸೋಪಿನಿಂದಲೂ, ರಕ್ತವರ್ಣ ದಾರದಿಂದಲೂ ಆ ಮನೆಯನ್ನು ಶುದ್ಧೀಕರಿಸಬೇಕು.
53 He is to release the live bird outside the city into the open field, make atonement for the house, and it will be clean." ಆದರೆ ಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲಗಳಲ್ಲಿ ಬಿಟ್ಟುಬಿಡಬೇಕು. ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅದು ಶುದ್ಧವಾಗುವುದು.”
54 This is the law for any skin disease, for an itch, ಎಲ್ಲಾ ವಿಧವಾದ ಚರ್ಮರೋಗಕ್ಕೂ, ಇಸಬಿಗೂ,
55 for mildew in a garment or a house, ಬಟ್ಟೆಯ ಮತ್ತು ಮನೆಯ ಬೂಜಿಗೂ,
56 and for a swelling, a scab, or a bright spot, ಬಾವು, ಚರ್ಮವ್ಯಾಧಿಗೂ, ಹೊಳೆಯುವ ಕಲೆಗೂ
57 to teach when something is unclean and when clean. This is the law of skin disease and mildew. ಅವುಗಳ ಶುದ್ಧಾಶುದ್ಧ ಬೇಧವನ್ನು ಬೋಧಿಸುವ ನಿಯಮಗಳು ಇವೇ. ಚರ್ಮರೋಗಗಳ ಹಾಗೂ ಬೂಜಿನ ವಿಷಯದಲ್ಲಿರುವ ನಿಯಮಗಳು ಇವೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]