Skip to content
The Believer's Library

Biblica® Open Kannada Contemporary Version 2022

Leviticus 17 OKCV

Show OKCV only
Verse × ×
1 Our Father spoke to Moses, saying: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
2 "Speak to Aaron, his sons, and all Israel, and tell them: This is what I have commanded: “ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರೆಲ್ಲರಿಗೂ ಮಾತನಾಡಿ ಅವರಿಗೆ ಹೀಗೆ ಹೇಳು: ‘ಯೆಹೋವ ದೇವರು ನಿಮಗೆ ಇಂತೆಂದು ಆಜ್ಞಾಪಿಸುತ್ತಾರೆ.
3 Any Israelite who slaughters an ox, lamb, or goat inside the camp, or outside the camp, ಇಸ್ರಾಯೇಲಿನ ಮನೆತನದಲ್ಲಿ ಯಾವನು ಒಂದು ಎತ್ತನ್ನಾಗಲಿ ಇಲ್ಲವೆ ಒಂದು ಕುರಿಯನ್ನಾಗಲಿ ಇಲ್ಲವೆ ಒಂದು ಆಡನ್ನಾಗಲಿ ಪಾಳೆಯದೊಳಗೆ ಆಗಲಿ ಇಲ್ಲವೆ ಪಾಳೆಯದ ಹೊರಗೆ ಆಗಲಿ ವಧಿಸಿ,
4 and doesn't bring it to the tent of meeting's entrance to offer to me before my tabernacle—that man is guilty of bloodshed; he has shed blood and will be cut off from his people. ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.
5 So the Israelites will bring their sacrifices, now offered in the open field, to the priest at the tent of meeting's entrance, offering them as peace offerings to me. ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
6 At the tent of meeting's entrance, the priest is to splash the blood on my altar and burn fat, a pleasing aroma to me. ಯಾಜಕನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಬಲಿಪೀಠದ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಯೆಹೋವ ದೇವರಿಗೆ ಆಹ್ಲಾದಕರ ಸುಗಂಧ ವಾಸನೆಯಾಗಿ ಸುಡಬೇಕು.
7 They must no longer sacrifice to the goat demons they prostitute themselves with. This is a lasting law for all their generations. ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’
8 "Tell them: Any Israelite, or foreigner living among them, who offers a burnt offering or sacrifice, “ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರು ಇಲ್ಲವೆ ನಿಮ್ಮೊಳಗೆ ಪ್ರವಾಸಿಗರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸಿದರೆ,
9 and doesn't bring it to the meeting tent's entrance to offer to me—that man will be cut off from his people. ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.
10 "Any man of the house of Israel, or foreigner living among them, who eats any blood—I will set my face against that person and cut them off from their people. “ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
11 Blood is the flesh's life; I gave it to you on the altar to atone for your souls, for blood atones by the life. ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.
12 So I told Israel: None of you is to eat blood, nor any foreigner living among you. ಆದಕಾರಣ ನಾನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಿದೆನು, “ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ತಂಗಿರುವ ಪರಕೀಯರಲ್ಲಿಯಾಗಲಿ ಯಾರೂ ರಕ್ತವನ್ನು ಭುಜಿಸಬಾರದು.”
13 "Any Israelite or foreigner among them who hunts an edible animal or bird must pour out its blood and cover it with dust. “ ‘ಇದಲ್ಲದೆ ಇಸ್ರಾಯೇಲರು ಯಾವ ಮನುಷ್ಯನಾದರೂ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವುದಕ್ಕಾಗಿ ಬೇಟೆಯಾಡಿ, ಯಾವುದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ, ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿನಿಂದ ಮುಚ್ಚಬೇಕು.
14 Every creature's life is in its blood. So I told the Israelites: Eat no creature's blood, since its life is its blood—whoever eats it will be cut off. ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು.
15 "Anyone, native or foreigner, who eats a carcass or an animal torn by beasts must wash his clothes, bathe in water, stay unclean until evening, then be clean. “ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.
16 But if he does not wash them or bathe his body, he will bear his guilt." ಆದರೆ ಅವನು ಬಟ್ಟೆಗಳನ್ನು ಒಗೆದುಕೊಳ್ಳದೆ ಇದ್ದರೆ, ಇಲ್ಲವೆ ತಾನು ಸ್ನಾನ ಮಾಡದಿದ್ದರೆ, ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.’ ”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]