Skip to content
The Believer's Library

Biblica® Open Kannada Contemporary Version 2022

Leviticus 18 OKCV

Show OKCV only
Verse × ×
1 Our Father spoke to Moses, saying: ಯೆಹೋವ ದೇವರು ಮೋಶೆಗೆ,
2 "Speak to the children of Israel and say to them: I am your Father. “ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು, ‘ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
3 You must not do as Egypt does, where you lived; you must not do as Canaan does, where I am bringing you; you must not follow their statutes. ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.
4 You must follow my judgments and keep my statutes, walking in them. I am your Father. ನೀವು ನನ್ನ ನಿರ್ಣಯಗಳನ್ನು ಕೈಗೊಂಡು ಕಟ್ಟಳೆಗಳ ಪ್ರಕಾರ ನಡೆಯಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
5 Keep my statutes and my judgments; whoever does them will live by them. I am your Father. ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.
6 "None of you may approach any close relative to have sexual relations. I am your Father. “ ‘ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯೊಡನೆ ಲೈಂಗಿಕ ಸಂಬಂಧ ಬೆಳೆಸಬಾರದು, ನಾನೇ ಯೆಹೋವ ದೇವರು.
7 "Do not have sex with your mother—that exposes your father's nakedness. She is your mother; do not have sex with her. “ ‘ನಿನ್ನ ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ, ನಿನ್ನ ತಂದೆಯನ್ನು ಅಗೌರವಿಸಬೇಡ. ಆಕೆ ನಿನ್ನ ತಾಯಿ: ಆಕೆಯೊಂದಿಗೆ ಇಂಥ ಸಂಬಂಧ ಬೇಡ.
8 "You must not have sexual relations with your father's wife; that would dishonor your father. “ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.
9 "Don't have sexual relations with your sister, your father's or mother's daughter, born at home or elsewhere. “ ‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.
10 "Do not have sex with your son's or daughter's daughter—that exposes your own nakedness. “ ‘ನಿನ್ನ ಮಗನ ಮಗಳ ಕೂಡ, ಇಲ್ಲವೆ ಮಗಳ ಮಗಳ ಕೂಡ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನಗೆ ಅಗೌರವವಾಗಿದೆ.
11 "Your father's wife's daughter, born to your father, is your sister; do not have sex with her. “ ‘ನಿನ್ನ ತಂದೆಯಿಂದ ಜನಿಸಿದ ನಿನ್ನ ತಂದೆಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ಸಹೋದರಿ.
12 "You must not have sexual relations with your father's sister; she is your father's close relative. “ ‘ನಿನ್ನ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಸಮೀಪ ಬಂಧು.
13 "You must not have sexual relations with your mother's sister, for she is your mother's close relative. “ ‘ನಿನ್ನ ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ.
14 "Do not dishonor your father's brother by having sex with his wife; she is your aunt. “ ‘ನಿನ್ನ ತಂದೆಯ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಬೇಡ. ನಿನ್ನ ತಂದೆಯ ಸಹೋದರನನ್ನು ಅಗೌರವಿಸಬೇಡ. ಆಕೆ ನಿನ್ನ ದೊಡ್ಡಮ್ಮ.
15 "Do not have sex with your daughter-in-law; she is your son's wife—do not have sex with her. “ ‘ನಿನ್ನ ಸೊಸೆಯೊಂದಿಗೆ ಲೈಂಗಿಕ ಸಂಪರ್ಕ ಬೇಡ. ಆಕೆ ನಿನ್ನ ಮಗನ ಹೆಂಡತಿ. ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
16 "You must not have sexual relations with your brother's wife; that would dishonor your brother. “ ‘ನೀನು ನಿನ್ನ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ಸಹೋದರನನ್ನು ಅಗೌರವಿಸುವುದು.
17 "Do not have sex with a woman and her daughter, or take her son's or her daughter's daughter, to have sex with them; they are close relatives—that is depraved. “ ‘ಸ್ತ್ರೀಯೊಂದಿಗೂ, ಆಕೆಯ ಮಗಳೊಂದಿಗೂ ಒಟ್ಟಿಗೆ ಲೈಂಗಿಕ ಸಂಪರ್ಕ ಬೇಡ. ಆಕೆಯ ಮಗನ ಮಗಳೊಂದಿಗಾದರೂ, ಮಗಳ ಮಗಳೊಂದಿಗಾದರೂ ಲೈಂಗಿಕ ಸಂಪರ್ಕ ಬೇಡ. ಅವರು ಆಕೆಯ ಹತ್ತಿರ ಸಂಬಂಧಿಗಳು. ಅದು ದುಷ್ಟತನ.
18 "Do not marry a woman as rival to her sister, sleeping with her while the sister is still living. “ ‘ನಿನ್ನ ಹೆಂಡತಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದುಕೊಳ್ಳಬೇಡ. ಒಬ್ಬಳು ಜೀವಂತವಾಗಿರುವಾಗ ಮತ್ತೊಬ್ಬಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.
19 "Do not approach a woman for sex during her monthly impurity. “ ‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯ ಸಂಪರ್ಕ ಮಾಡಬೇಡ.
20 "Do not have sex with your neighbor's wife, making yourself unclean by her. “ ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ.
21 "Do not give any of your children to be passed through the fire to Molech, desecrating your Father's name. I am your Father. “ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.
22 "You must not have sexual relations with a male as with a woman; it is detestable. “ ‘ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರುಷನೊಂದಿಗೆ ಮಲಗಬಾರದು. ಅದು ಅಸಹ್ಯವಾದದ್ದು.
23 "Do not have sex with any animal, making yourself unclean; a woman must not present herself to an animal to mate with it. That is a perversion. “ ‘ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಅಶುದ್ಧಮಾಡಿಕೊಳ್ಳಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು. ಅದು ಸ್ವಭಾವಕ್ಕೆ ವ್ಯತಿರಿಕ್ತವಾದದ್ದು.
24 "Do not make yourselves unclean by any of these, for by all of them the nations I'm driving out before you became unclean. “ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.
25 The land was made unclean, so I called it to account for its guilt, and it vomited out those living there. ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.
26 Keep my rules and laws. None of you—native or foreigner among you—may do any of these detestable things. ಆದ್ದರಿಂದ ನೀವು ನನ್ನ ನಿಯಮಗಳನ್ನು, ನನ್ನ ನಿರ್ಣಯಗಳನ್ನು ಕೈಗೊಳ್ಳಬೇಕು. ಸ್ವದೇಶದವರಲ್ಲಿ ಯಾವನಾಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನೂ ಮಾಡಬಾರದು.
27 For the people of the land before you did all these detestable things, and it was made unclean. ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲಾ ಅಸಹ್ಯವಾದವುಗಳನ್ನು ಮಾಡಿದ್ದರಿಂದ ದೇಶವೂ ಅಶುದ್ಧವಾಯಿತು.
28 Let the land not vomit you out for making it unclean, as it vomited out the nation before you. ನೀವೂ ಅದನ್ನು ಅಶುದ್ಧಮಾಡಿದರೆ, ಅದು ನಿಮಗಿಂತ ಮೊದಲಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವುದು.
29 "Anyone who does any of these detestable things will be cut off from among their people. “ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
30 So keep my charge: do none of the detestable customs practiced before you, and do not make yourselves unclean by them. I am your Father." ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]