Skip to content
The Believer's Library

Biblica® Open Kannada Contemporary Version 2022

Leviticus 19 OKCV

Show OKCV only
Verse × ×
1 Our Father spoke to Moses, saying: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
2 "Speak to the whole community of Israel: You are to be holy, for I, your Father, am holy. “ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.
3 "Each of you must respect your mother and father, and keep my Sabbaths. I am your Father. “ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
4 "Do not turn to idols or make for yourselves gods of cast metal. I am your Father. “ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
5 "When you sacrifice a peace offering to me, offer it so you will be accepted. “ ‘ನೀವು ನಿಮ್ಮ ಯೆಹೋವ ದೇವರಿಗೆ ಸಮಾಧಾನದ ಬಲಿಯನ್ನು ಸಮರ್ಪಿಸುವುದಾದರೆ, ನೀವು ಆತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿಯೇ ಅರ್ಪಿಸಬೇಕು.
6 Eat it the day you offer it, or the next; anything left to the third day, burn in fire. ಅದನ್ನು ನೀವು ಸಮರ್ಪಿಸಿದ ದಿನದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು. ಆದರೆ ಅದು ಮೂರನೆಯ ದಿನದವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
7 If any is eaten on the third day, it is foul and will not be accepted. ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ, ಅದು ಅಸಹ್ಯವಾದದ್ದು, ಅದು ಅಂಗೀಕೃತವಾಗುವುದಿಲ್ಲ.
8 Whoever eats it bears their guilt, for they desecrated what is holy to me; that person will be cut off from their people. ಆದ್ದರಿಂದ ಅದನ್ನು ತಿನ್ನುವ ಪ್ರತಿಯೊಬ್ಬರೂ ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಏಕೆಂದರೆ ಯೆಹೋವ ದೇವರಿಗೆ ಪವಿತ್ರವಾದದ್ದನ್ನು ಅವರು ಅಶುದ್ಧಮಾಡಿದ್ದಾನೆ. ಅಂಥವರನ್ನು ತಮ್ಮ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.
9 "When you harvest your land, do not reap to the field's edges or gather the gleanings of your harvest. “ ‘ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು. ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
10 Do not strip your vineyard bare or gather its fallen grapes. Leave them for the poor and the foreigner. I am your Father. ನಿಮ್ಮ ದ್ರಾಕ್ಷಿತೋಟದಲ್ಲಿ ಹಕ್ಕಲಾಯಬಾರದು. ಇಲ್ಲವೆ ಪ್ರತಿಯೊಂದು ದ್ರಾಕ್ಷಿಯನ್ನೂ ಕೂಡಿಸಬಾರದು. ನೀವು ಅವುಗಳನ್ನು ಬಡವರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
11 "Do not steal; do not deceive; do not lie to one another. “ ‘ಕದಿಯಬಾರದು. “ ‘ಸುಳ್ಳಾಡಬಾರದು. “ ‘ಒಬ್ಬರಿಗೊಬ್ಬರು ಮೋಸಮಾಡಬಾರದು.
12 "Don't swear falsely by my name, desecrating your Father's name. I am your Father. “ ‘ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣ ಮಾಡಬಾರದು. ನಿಮ್ಮ ದೇವರ ಹೆಸರನ್ನು ಅಗೌರವಿಸಬಾರದು. ನಾನೇ ಯೆಹೋವ ದೇವರು.
13 "You shall not oppress your neighbor or rob him. Do not hold a hired worker's wages overnight. “ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.
14 "Do not curse the deaf or place a stumbling block before the blind, but fear your Father. I am your Father. “ ‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.
15 "Do not pervert justice in your decisions. Do not favor the poor or defer to the great, but judge your neighbor fairly. “ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.
16 "Don't spread slander among your people, and don't stand idle while your neighbor's life is in danger. I am your Father. “ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.
17 "Do not hate your brother in your heart; correct your neighbor openly, so you don't bear sin because of him. “ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
18 Do not take revenge or hold a grudge against your own people, but love your neighbor as yourself. I am your Father. “ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.
19 "Keep my decrees. Don't breed your livestock with a different kind. Don't sow your field with two kinds of seed, or wear a garment of two kinds of material. “ ‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “ ‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “ ‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “ ‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
20 "If a man sleeps with a slave woman assigned to another man, and she has not been bought back or set free, an inquiry is required. They are not to be put to death, since she was not free. “ ‘ಒಬ್ಬ ಪುರುಷನಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸುವುದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ, ಇಲ್ಲವೆ ಅವಳಿಗೆ ಸ್ವಾತಂತ್ರ್ಯವನ್ನು ಕೊಡದಿರದಿದ್ದರೆ, ತಕ್ಕ ಶಿಕ್ಷೆಯಾಗಬೇಕು. ಅವಳು ಸ್ವತಂತ್ರಳಲ್ಲದ ಕಾರಣ ಅವಳಿಗೆ ಮರಣದಂಡನೆಯನ್ನು ವಿಧಿಸಬಾರದು.
21 He is to bring his guilt offering to me, at the entrance of the tent of meeting—a ram as the guilt offering. ಅವನು ಪ್ರಾಯಶ್ಚಿತ್ತ ಬಲಿಯ ಟಗರಾದ ತನ್ನ ಪ್ರಾಯಶ್ಚಿತ್ತ ಬಲಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿನಲ್ಲಿ ತರಬೇಕು.
22 The priest will make atonement for him with the ram of the guilt offering before me, for the sin he committed; and he will be forgiven the sin he committed. ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಬಲಿಯಾಗಿರುವ ಟಗರಿನಿಂದ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನು ಮಾಡಿದ ಪಾಪವನ್ನು ಅವನಿಗೆ ಕ್ಷಮಿಸಲಾಗುವುದು.
23 "When you enter the land and plant any food tree, treat its fruit as forbidden. For three years it is forbidden to you; do not eat it. “ ‘ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ, ಅದರ ಫಲವನ್ನು ಮೂರು ವರುಷಗಳವರೆಗೆ ಅಶುದ್ಧವೆಂದೆಣಿಸಿ ಅದನ್ನು ತಿನ್ನಬಾರದು.
24 In the fourth year all its fruit is to be holy, an offering of praise to me. ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಯೆಹೋವ ದೇವರ ಸ್ತೋತ್ರಕ್ಕಾಗಿ ಪರಿಶುದ್ಧವಾಗಿರುವುದು.
25 But the fifth year you may eat its fruit, so it yields more for you. I am your Father. ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
26 "Do not eat anything with the blood in it. Do not practice fortune-telling or interpret omens. “ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.
27 "Do not round off the hair at the sides of your head or damage the edges of your beard. “ ‘ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು. ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ಕೆಡಿಸಬಾರದು.
28 "Don't cut your body for the dead or tattoo yourselves. I am your Father. “ ‘ಸತ್ತವರಿಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು. ನಿಮ್ಮ ಮೇಲೆ ಯಾವ ಹಚ್ಚೆಗಳನ್ನೂ ಹಚ್ಚಿಸಿಕೊಳ್ಳಬಾರದು. ನಾನೇ ಯೆಹೋವ ದೇವರು.
29 "Do not desecrate your daughter by making her a prostitute, or the land will turn to prostitution and fill with depravity. “ ‘ನಿನ್ನ ಮಗಳು ವೇಶ್ಯೆಯಾಗುವಂತೆ ವ್ಯಭಿಚಾರಕ್ಕೆ ಬಿಡಬಾರದು. ಹಾಗೆ ಮಾಡಿದರೆ, ದೇಶವು ವೇಶ್ಯೆತನಕ್ಕೆ ಒಳಪಡುವುದು ಮತ್ತು ಕೆಟ್ಟತನದಿಂದ ತುಂಬಿಹೋಗುವುದು.
30 "You are to keep my Sabbaths and revere my sanctuary. I am your Father. “ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.
31 "Do not turn to mediums or necromancers; do not seek to be made unclean by them. I am your Father. “ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
32 "Stand up before the gray-haired and respect the old. Fear your Father. I am your Father. “ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.
33 "When a foreigner lives among you in your land, do not mistreat them. “ ‘ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ, ಅವನನ್ನು ಉಪದ್ರವ ಪಡಿಸಬೇಡಿರಿ.
34 The foreigner living among you must be to you as a native, and love them as yourself, for you were foreigners in Egypt. I am your Father. ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೇ ಸ್ವದೇಶದವನಂತಿರಲಿ. ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಏಕೆಂದರೆ ನೀವು ಸಹ ಈಜಿಪ್ಟ್ ದೇಶದಲ್ಲಿ ಪರಕೀಯರಾಗಿದ್ದಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
35 "You are to do no wrong in judgment, in measures of length, weight, or quantity. “ ‘ನಿಮ್ಮ ನಿರ್ಣಯದಲ್ಲಿಯೂ, ಅಳೆಯುವುದರಲ್ಲಿಯೂ, ತೂಕದಲ್ಲಿಯೂ, ಅಳತೆಯಲ್ಲಿಯೂ ನೀವು ಅನ್ಯಾಯ ಮಾಡಬೇಡಿರಿ.
36 Have honest scales, honest weights, an honest grain measure, an honest liquid measure. I am your Father, who brought you out of the land of Egypt. ತಕ್ಕಡಿ, ತೂಕದ ಕಲ್ಲುಗಳು, ಕಿಲೋಗ್ರಾಂ ಮತ್ತು ಲೀಟರ್ ನ್ಯಾಯಯುತವಾಗಿರಲಿ. ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ.
37 "Keep all my statutes and all my rules, and do them. I am your Father." “ ‘ಆದ್ದರಿಂದ ನನ್ನ ಎಲ್ಲಾ ಆಜ್ಞೆಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ನೀವು ಅನುಸರಿಸಿ ನಡೆಯಬೇಕು. ನಾನೇ ಯೆಹೋವ ದೇವರು,’ ” ಎಂದು ಹೇಳಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]