Skip to content
The Believer's Library

Biblica® Open Kannada Contemporary Version 2022

Leviticus 2 OKCV

Show OKCV only
Verse × ×
1 "When anyone brings a grain offering to our Father, the offering must be fine flour. Pour oil on it, put frankincense on it, “ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
2 and bring it to Aaron's sons, the priests. The priest will take a handful of its fine flour and oil, with all its frankincense, and burn the memorial portion on the altar—a fire offering, a pleasing aroma to our Father. ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
3 The rest of the grain offering belongs to Aaron and his sons—most holy, from the fire offerings to our Father. ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.
4 "When you bring a grain offering baked in an oven: fine flour, either loaves without yeast mixed with oil, or wafers without yeast spread with oil. “ ‘ನೀನು ಒಲೆಯಲ್ಲಿ ಸುಟ್ಟ ಧಾನ್ಯ ಸಮರ್ಪಣೆಯನ್ನು ಕಾಣಿಕೆಯಾಗಿ ತರುವುದಾದರೆ, ಅದು ಹುಳಿಯಿಲ್ಲದ ಮತ್ತು ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
5 If your offering is a grain offering on a griddle, it must be fine flour mixed with oil, without yeast. ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
6 Break it into pieces and pour oil on it; it is a grain offering. ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ.
7 If your offering is grain cooked in a pan, make it with fine flour and oil. ನಿನ್ನ ಕಾಣಿಕೆಯು ತವೆಯಲ್ಲಿ ಬೇಯಿಸಿದ ಧಾನ್ಯವಾಗಿದ್ದರೆ, ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
8 Bring the grain offering made from these to our Father; present it to the priest, who brings it to the altar. ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು.
9 The priest takes the grain offering's memorial portion and burns it on the altar—a fire offering, a pleasing aroma to our Father. ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.
10 What remains of the grain offering belongs to Aaron and his sons—most holy, from the fire offerings to our Father. ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.
11 "No grain offering you bring to our Father may contain yeast, for you must not burn any yeast or honey as a fire offering to our Father. “ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.
12 You may bring them to our Father as a firstfruits offering, but do not offer them on the altar as a pleasing aroma. ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.
13 Salt every grain offering. Don't leave out your Father's covenant salt; add salt to all your offerings. ನಿನ್ನ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಉಪ್ಪಿನಲ್ಲಿ ಬೆರಕೆಯಾಗಿರಬೇಕು. ನಿನ್ನ ದೇವರ ಒಡಂಬಡಿಕೆಯ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು. ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
14 "If you bring a firstfruits grain offering to our Father, offer new grain roasted in fire, crushed kernels, as your firstfruits offering. “ ‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು.
15 Put oil on it and lay frankincense on it; it is a grain offering. ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ.
16 The priest burns the memorial portion—some of the crushed grain and oil—with all its frankincense, as a fire offering to our Father." ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]