Skip to content
The Believer's Library

Biblica® Open Kannada Contemporary Version 2022

Leviticus 20 OKCV

Show OKCV only
Verse × ×
1 Our Father spoke to Moses: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2 "Tell the Israelites: Any Israelite, or foreigner living in Israel, who gives any of his children to Molech must surely be put to death—the people of the land are to stone him with stones. “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
3 I myself will set my face against that man and cut him off from among his people, for giving any of his children to Molech, making my sanctuary unclean and desecrating my holy name. ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
4 If the people of the land turn a blind eye when that man gives any of his offspring to Molech, and do not put him to death, ಆ ಮನುಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ, ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ, ಅವನನ್ನು ಕೊಲ್ಲದೆ ಹೋದರೆ,
5 I will set my face against that man and his family, and cut him off—with all who follow him in prostitution to Molech—from among their people. ಆಗ ನಾನು ಆ ಮನುಷ್ಯನಿಗೂ, ಅವನ ಕುಟುಂಬಕ್ಕೂ ವಿರೋಧವಾಗಿಯೂ, ವಿಮುಖವಾಗಿಯೂ ಇರುವೆನು. ಮೋಲೆಕನನ್ನು ಪೂಜೆ ಮಾಡಿದ್ದಕ್ಕಾಗಿ ಅವನನ್ನೂ, ದೇವದ್ರೋಹಿಗಳಾಗಿ ಅವನನ್ನು ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
6 "Whoever turns to mediums or spiritists, prostituting themselves after them, I will set my face against that person and cut them off from among their people. “ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
7 "Set yourselves apart, therefore, and be holy, for I am your Father. “ ‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
8 Keep my statutes and do them. I am your Father who makes you holy. ಇದಲ್ಲದೆ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಪಾಲಿಸಬೇಕು. ನಿಮ್ಮನ್ನು ಶುದ್ಧಪಡಿಸುವ ಯೆಹೋವ ದೇವರು ನಾನೇ.
9 "Whoever curses his father or his mother must be put to death; he has cursed his father or his mother—his blood is on him. “ ‘ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವರಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಯಾರು ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವರೋ, ಅವರ ಪಾಪವು ಸ್ವಯಂಕೃತವಾದುದು.
10 "If a man commits adultery with another man's wife—his neighbor's wife—both adulterer and adulterous woman must surely be put to death. “ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
11 "A man who sleeps with his father's wife has exposed his father's nakedness; both must be put to death; their blood is on them. “ ‘ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಗೆ ಮಾನಭಂಗ ಮಾಡಿದಂತೆ. ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.
12 "If a man sleeps with his daughter-in-law, both must be put to death; they have done a perversion; their blood is on them. “ ‘ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ, ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರು ವಿಕೃತವನ್ನು ಮಾಡಿದ್ದಾರೆ, ಅವರ ಪಾಪವು ಅವರ ಮೇಲೆ ಇರುವುದು.
13 "If a man lies with a male as with a woman, both have done a detestable thing; they must surely be put to death; their blood is on them. “ ‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.
14 "If a man takes a woman and her mother, that is evil; burn him and them with fire, so no evil remains among you. “ ‘ಒಬ್ಬ ಮನುಷ್ಯನು ಒಬ್ಬ ಸ್ತ್ರೀಯನ್ನೂ, ಅವಳ ತಾಯಿಯನ್ನೂ ಮದುವೆ ಮಾಡಿಕೊಂಡರೆ ಅದು ದುಷ್ಟತನವಾಗಿದೆ. ಆದ್ದರಿಂದ ನಿಮ್ಮಲ್ಲಿ ದುಷ್ಟತನವು ಇರದಂತೆ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು.
15 "If a man has sex with an animal, he must be put to death, and you must kill the animal. “ ‘ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು ಮತ್ತು ನೀವು ಆ ಪಶುವನ್ನು ವಧಿಸಬೇಕು.
16 "If a woman approaches any animal to mate with it, kill the woman and the animal; both must be put to death; their blood is on them. “ ‘ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವುದಕ್ಕಾಗಿ ಮಲಗಿಕೊಂಡರೆ, ನೀವು ಆ ಸ್ತ್ರೀಯನ್ನೂ, ಆ ಪಶುವನ್ನೂ ಕೊಲ್ಲಬೇಕು. ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು. ಅವರ ಪಾಪವು ಅವರ ಮೇಲೆ ಇರುವುದು.
17 "If a man marries his sister, his father's or mother's daughter, and they have sexual relations, it is a disgrace; they must be cut off before their people. He has exposed his sister; he bears his guilt. “ ‘ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯ ಬೆತ್ತಲೆತನವನ್ನು ನೋಡಿದರೆ, ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ. ಅವರನ್ನು ತಮ್ಮ ಜನರ ಮಧ್ಯದಿಂದ ತೆಗೆದುಹಾಕಬೇಕು. ಅವರ ರಕ್ತವು ಅವರ ಮೇಲೆ ಇರುವುದು. ಅವನು ತನ್ನ ಸಹೋದರಿಯನ್ನು ಸಂಗಮಿಸಿದ್ದರಿಂದ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳುವನು.
18 "If a man sleeps with a woman during her period, he exposes her flow, and she uncovers its source; both are cut off from their people. “ ‘ಒಬ್ಬ ಮನುಷ್ಯನು ಮುಟ್ಟಾದ ಸ್ತ್ರೀಯೊಂದಿಗೆ ಮಲಗಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಮಾಡಿದರೆ, ಅವನು ಆಕೆಯ ಮುಟ್ಟಿನ ಮೂಲವನ್ನು ಬಹಿರಂಗಪಡಿಸಿದ್ದಾನೆ. ಆಕೆ ಅದನ್ನು ಬಹಿರಂಗಪಡಿಸಿದ್ದಾಳೆ. ಅವರಿಬ್ಬರನ್ನೂ ಸ್ವಜನರಿಂದ ಬಹಿಷ್ಕರಿಸಬೇಕು.
19 "Do not have sex with your mother's or father's sister—that disrespects a close relative; they will bear their guilt. “ ‘ನೀನು ನಿನ್ನ ತಾಯಿಯ ಸಹೋದರಿ ಇಲ್ಲವೆ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡ. ಅದು ಸಮೀಪ ಬಂಧುವನ್ನು ಅಗೌರವಿಸಿದ ಹಾಗೆ ಅದಕ್ಕೆ ನೀವಿಬ್ಬರೂ ಜವಾಬ್ದಾರರು.
20 A man who sleeps with his uncle's wife disrespects his uncle; they will bear their sin and die childless. “ ‘ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ, ಅವನು ತನ್ನ ಚಿಕ್ಕಪ್ಪನನ್ನು ಅಗೌರವಿಸಿದಂತೆ. ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು. ಅವರು ಮಕ್ಕಳಿಲ್ಲದೆ ಸಾಯುವರು.
21 "If a man marries his brother's wife, it is impurity; he exposed his brother's nakedness; they will be childless. “ ‘ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ, ಅದು ಅಶುದ್ಧವಾದದ್ದು. ಏಕೆಂದರೆ ಅವನು ತನ್ನ ಸಹೋದರನನ್ನು ಅಗೌರವಿಸಿದ್ದಾನೆ. ಅವರು ಮಕ್ಕಳಿಲ್ಲದವರಾಗುವರು.
22 "Keep all my statutes and all my rules, and do them, so the land I'm bringing you to live in won't vomit you out. “ ‘ನೀವು ನನ್ನ ಎಲ್ಲಾ ನಿಯಮಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ಕೈಗೊಂಡು ಪಾಲಿಸಬೇಕು. ಹೀಗಿದ್ದರೆ ನೀವು ವಾಸಿಸುವುದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.
23 You must not adopt the customs of the nation I am driving out before you, because they did all these things, and I detested them. ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ.
24 I have told you: you will inherit their land; I myself will give it to you to possess, a land flowing with milk and honey. I am your Father, who set you apart from the peoples. ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
25 "So distinguish clean animals from unclean, and unclean birds from clean. Do not make yourselves detestable by any animal, bird, or thing crawling on the ground that I have set apart for you as unclean. “ ‘ಆದ್ದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ, ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಇಲ್ಲವೆ ಪಕ್ಷಿಗಳಿಂದಲೂ ಇಲ್ಲವೆ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮ ಪ್ರಾಣಗಳನ್ನು ಅಶುದ್ಧಮಾಡಿಕೊಳ್ಳಬಾರದು.
26 Be holy to me, for I, your Father, am holy, and I have set you apart from the peoples to be mine. ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.
27 "A man or woman who is a medium or spiritist must be put to death—stoned; their blood is on them." “ ‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’ ”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]