Skip to content
The Believer's Library

Biblica® Open Kannada Contemporary Version 2022

Leviticus 22 OKCV

Show OKCV only
Verse × ×
1 Then our Father said to Moses, ತರುವಾಯ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2 "Tell Aaron and his sons to be careful with the holy offerings Israel's people dedicate to me, so they don't desecrate my holy name. I am your Father. “ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡು, ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡದಂತೆ ಇಸ್ರಾಯೇಲರು ನನಗೆ ಸಲ್ಲಿಸುವ ಪರಿಶುದ್ಧವಾದವುಗಳನ್ನು ಗೌರವದಿಂದ ಅವರು ಪ್ರತ್ಯೇಕವಾಗಿರಿಸಬೇಕು. ನಾನೇ ಯೆಹೋವ ದೇವರು.
3 "Tell them: In every generation, any descendant of yours who is unclean and approaches the holy offerings Israel's people dedicate to me will be cut off from my presence. I am your Father. “ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು.
4 "No descendant of Aaron with a skin disease or discharge may eat the holy offerings until clean. Whoever touches something unclean from a corpse, or a man who has a semen emission, “ ‘ಆರೋನನ ಸಂತತಿಯವರಲ್ಲಿ ಯಾವನಾದರೂ ಚರ್ಮರೋಗ ಇಲ್ಲವೆ ಸ್ರಾವವುಳ್ಳವನಿದ್ದರೆ, ಅವನು ಶುದ್ಧನಾಗುವವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
5 or touches any swarming creature that makes him unclean, or a person who makes him unclean, whatever his uncleanness. ಇಲ್ಲವೆ ತನ್ನನ್ನು ಅಶುದ್ಧನಾಗುವಂತೆ ಹರಿದಾಡುವ ಯಾವುದನ್ನಾಗಲಿ ಇಲ್ಲವೆ ಅಶುದ್ಧ ಮನುಷ್ಯನನ್ನಾಗಲಿ ಮುಟ್ಟಿದವನು,
6 Whoever touches it is unclean until evening and must not eat the holy offerings unless he has washed his body in water. ಸಂಜೆಯವರೆಗೆ ಅಶುದ್ಧನಾಗಿರಬೇಕು. ಅವನು ನೀರಿನಲ್ಲಿ ಸ್ನಾನಮಾಡಿದ ಮೇಲೆ ಪರಿಶುದ್ಧವಾದವುಗಳನ್ನು ತಿನ್ನಬಹುದು.
7 At sunset he is clean; then he may eat the holy offerings, for it is his food. ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ.
8 He must not eat anything dead or torn by wild animals, for that makes him unclean. I am your Father. ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು.
9 Priests must keep my instructions, or bear guilt and die for treating them with contempt. I am your Father, who makes them holy. “ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.
10 "No outsider may eat the holy offering; no guest or hired worker of a priest may eat it. “ ‘ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಅತಿಥಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
11 But if a priest buys a slave with his own money, that slave may eat it; those born in the priest's house may eat his food. ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ, ಅವನು ಅದರಲ್ಲಿ ತಿನ್ನಬಹುದು. ಅವನ ಮನೆಯಲ್ಲಿ ಹುಟ್ಟಿದವನು ಅದನ್ನು ತಿನ್ನಬಹುದು.
12 If a priest's daughter marries a non-priest, she may not eat the holy contributions. ಯಾಜಕನ ಮಗಳು ಒಬ್ಬ ಯಾಜಕನಲ್ಲದವನನ್ನು ಮದುವೆಯಾದರೆ, ಅವಳು ಸಮರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
13 But if a priest's daughter is widowed or divorced, has no child, and returns to her father's house as in her youth, she may eat her father's food. No outsider may eat it. ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.
14 "Anyone who eats a holy offering by mistake must add a fifth of its value and give it to the priest. “ ‘ಇದಲ್ಲದೆ ಯಾವನಾದರೂ ತಿಳಿಯದೆ ಪರಿಶುದ್ಧವಾದದ್ದನ್ನು ತಿಂದರೆ, ಅವನು ಅದರ ಐದನೆಯ ಪಾಲನ್ನು ಕೂಡಿಸಿ, ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡಬೇಕು.
15 Priests must not desecrate the holy offerings Israel's people present to me, ಇಸ್ರಾಯೇಲರು ಯೆಹೋವ ದೇವರಿಗೆ ಅರ್ಪಿಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
16 and bring guilt requiring payment on them by their eating their holy offerings. For I am your Father, who makes them holy." ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”
17 Then our Father said to Moses, ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
18 "Tell Aaron, his sons, and all Israelites: When any of you—native-born or a foreigner living in Israel—brings a burnt offering to me, to fulfill a vow or as a voluntary gift. “ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದದ್ದು ಇದೇ, ‘ಇಸ್ರಾಯೇಲ್ ಮನೆತನದವರಲ್ಲಿಯಾಗಲಿ, ಇಸ್ರಾಯೇಲರಾದ ಪರಕೀಯರಲ್ಲಿಯಾಗಲಿ ಯಾರಾದರೂ ತಮ್ಮ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಯೆಹೋವ ದೇವರಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
19 Present a male without defect from cattle, sheep, or goats, so it's accepted for you. ನೀವು ನಿಮ್ಮ ಸ್ವಯಿಚ್ಛೆಯಿಂದ ಕಳಂಕರಹಿತವಾದ ಗಂಡು ಪಶು, ಕುರಿ ಅಥವಾ ಮೇಕೆಯನ್ನೇ ಅರ್ಪಿಸಬೇಕು.
20 Do not present anything with a defect, because it will not be accepted on your behalf. ಆದರೆ ದೋಷವಿರುವ ಯಾವುದನ್ನೂ ಸಮರ್ಪಿಸಬಾರದು. ಏಕೆಂದರೆ ಅದು ನಿಮಗೋಸ್ಕರ ಅಂಗೀಕಾರವಾಗುವುದಿಲ್ಲ.
21 When anyone brings a peace offering to me from herd or flock to fulfill an extraordinary vow or as a freewill offering, it must be flawless to be accepted—no defect in it. ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು.
22 Do not offer me anything blind, broken, maimed, wart-covered, scabbed, or oozing. Do not put any of these on the altar as a food offering to me. ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು.
23 You may present an ox or sheep that's deformed or stunted as a voluntary offering, but it won't be accepted for a vow. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ.
24 Don't offer me an animal with testicles bruised, crushed, torn, or cut. Don't do this in your own land. ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವುದನ್ನೂ ಯೆಹೋವ ದೇವರಿಗೆ ಸಮರ್ಪಿಸಬಾರದು. ನಿಮ್ಮ ದೇಶದೊಳಗಿರುವ ಅಂಥ ಯಾವ ಬಲಿಯನ್ನಾದರೂ ನೀವು ಸಮರ್ಪಿಸಬಾರದು.
25 You must not accept such animals from a foreigner to offer as your Father's food, since they are deformed and defective—they will not be accepted for you." ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ”
26 Then our Father said to Moses, ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
27 "When a calf, lamb, or goat is born, it stays with its mother seven days; from the eighth day on, it is acceptable as a food offering to me. “ಹೋರಿಯನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ, ಏಳು ದಿವಸಗಳವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸಿದರೆ ಅಂಗೀಕಾರವಾಗುವುದು.
28 Do not slaughter a cow or a sheep and its young on the same day. ಹಸುವನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
29 "When you sacrifice a thank offering to me, sacrifice it so you'll be accepted. “ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು, ಯೆಹೋವ ದೇವರಿಗೆ ಮಾಡುವ ಬಲಿದಾನವನ್ನು ಮೆಚ್ಚಿಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.
30 It must be eaten that same day; leave none of it until morning. I am your Father. ಅದೇ ದಿನದಲ್ಲಿ ಅದನ್ನು ತಿಂದುಬಿಡಬೇಕು. ಅದರಲ್ಲಿ ಯಾವುದನ್ನೂ ಮಾರನೆಯ ದಿನದವರೆಗೆ ಉಳಿಸಬಾರದು. ನಾನೇ ಯೆಹೋವ ದೇವರು.
31 "Keep my commands and follow them. I am your Father. “ಆದ್ದರಿಂದ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಮಾಡಬೇಕು. ನಾನೇ ಯೆಹೋವ ದೇವರು.
32 Do not desecrate my holy name; I must be honored as holy among the Israelites. I am your Father, who makes you holy, ನನ್ನ ಪರಿಶುದ್ಧವಾದ ಹೆಸರನ್ನು ಅಪರಿಶುದ್ಧಗೊಳಿಸಬಾರದು, ಏಕೆಂದರೆ ಇಸ್ರಾಯೇಲರ ಮಧ್ಯದಲ್ಲಿ ನಾನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವ ದೇವರು ನಾನೇ.
33 and who brought you out of Egypt to be your Father. I am your Father." ನಿಮಗೆ ದೇವರಾಗಿರಲು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದೆನು. ನಾನೇ ಯೆಹೋವ ದೇವರು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]