Skip to content
The Believer's Library

Biblica® Open Kannada Contemporary Version 2022

Leviticus 23 OKCV

Show OKCV only
Verse × ×
1 Our Father spoke to Moses, saying: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2 "Speak to the Israelites and tell them: My appointed feasts, which you are to proclaim as holy gatherings—these are my appointed feasts. “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು.
3 "Six days work may be done; the seventh is a sabbath of complete rest, a holy gathering—do no work at all. It is my sabbath, wherever you live. “ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.
4 "These are my appointed feasts, the holy gatherings that you are to proclaim at their appointed times. “ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.
5 In the first month, on the fourteenth day of the month at twilight, is my Passover. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು.
6 On the fifteenth day of that month is my Feast of Unleavened Bread; eat unleavened bread seven days. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
7 On the first day hold a holy gathering; do no ordinary work. ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.
8 Present a food offering to me for seven days. The seventh day is a holy gathering—do no ordinary work." ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ”
9 Our Father spoke to Moses, saying: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
10 "Speak to the Israelites and say to them: When you enter the land I am giving you and reap its harvest, bring the priest a sheaf of the first of your harvest. “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
11 He will wave the sheaf before me for your acceptance; the priest will wave it the day after the Sabbath. ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಅರ್ಪಿಸಬೇಕು. ಸಬ್ಬತ್ ದಿನವಾದ ಮಾರನೆಯ ದಿನ ಯಾಜಕನು ಅದನ್ನು ಅರ್ಪಿಸಬೇಕು.
12 The day you wave the sheaf, offer me a flawless year-old male lamb as a burnt offering, ನೀವು ಸಿವುಡನ್ನು ಅರ್ಪಿಸುವ ದಿನದಲ್ಲಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂತೆ ಒಂದು ವರ್ಷದ ಮತ್ತು ಕಳಂಕರಹಿತವಾದ ಕುರಿಮರಿಯನ್ನು ಅರ್ಪಿಸಬೇಕು.
13 with its grain offering—about four quarts of fine flour mixed with oil, a food offering to me, a pleasing aroma—and its drink offering, about a quart of wine. ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು.
14 Eat no bread, roasted grain, or fresh grain until this day, until you bring your Father's offering. This is a lasting statute for all generations, wherever you live. ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು.
15 "Count off seven full weeks from the day after the Sabbath, the day you brought the wave-offering sheaf. “ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು.
16 Count fifty days, until the day after the seventh Sabbath, then bring me a new grain offering. ಏಳನೆಯ ಸಬ್ಬತ್ ದಿನದ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಯೆಹೋವ ದೇವರಿಗೆ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸಬೇಕು.
17 From your homes, bring two loaves of fine flour, about four quarts, baked with yeast, as a wave offering of firstfruits to me. ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು.
18 With the bread, present seven flawless year-old lambs, one young bull, and two rams. They are a burnt offering to me, with their grain and drink offerings—a food offering, a pleasing aroma to me. ಇದಲ್ಲದೆ ನೀವು ರೊಟ್ಟಿಯೊಂದಿಗೆ ಕಳಂಕರಹಿತವಾದ ಒಂದು ವರ್ಷದ ಏಳು ಕುರಿಮರಿಗಳನ್ನೂ ಒಂದು ಎಳೆಯ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಅವು ಯೆಹೋವ ದೇವರಿಗೆ ದಹನಬಲಿಗಳಾಗುವುವು. ಅವುಗಳೊಂದಿಗೆ ಆಹಾರ ಬಲಿಯು ಮತ್ತು ಪಾನಾರ್ಪಣೆಗಳು, ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
19 Offer one male goat as a sin offering, and two year-old male lambs as a sacrifice of peace offerings. ತರುವಾಯ ಹೋತವನ್ನು ಪಾಪ ಪರಿಹಾರದ ಬಲಿಯಾಗಿಯೂ ಮತ್ತು ಸಮಾಧಾನ ಬಲಿಯಾಗಿ ಒಂದು ವರ್ಷದ ಎರಡು ಕುರಿಮರಿಗಳನ್ನು ಬಲಿಯಾಗಿ ಅರ್ಪಿಸಬೇಕು.
20 The priest will wave them, with the bread of firstfruits and two lambs, as a wave offering before me. They are holy to me, for the priest. ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.
21 Proclaim this same day, hold a holy gathering, and do no ordinary work. This is a lasting statute wherever you live, generation after generation. ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.
22 "Don't reap your field's edges bare or gather the gleanings when you harvest your land. Leave them for the poor and the foreigner. I am your Father." “ ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”
23 Our Father spoke to Moses, saying: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
24 "Tell the Israelites: on the first day of the seventh month, keep a day of complete rest, a memorial of trumpet blasts, a holy gathering. “ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.
25 Do no regular work; present me a food offering." ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ದಹನಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು,’ ” ಎಂದು ಹೇಳಿದರು.
26 Our Father spoke to Moses, saying: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
27 "The tenth day of this seventh month is the Day of Atonement—hold a holy gathering, deny yourselves, and bring me a food offering. “ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.
28 Do no work on that very day—it's the Day of Atonement, to atone for you before me, your Father. ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು.
29 Anyone who does not deny himself on that very day must be cut off from his people. ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.
30 Anyone doing any work on that very day, I will destroy that person from among his people. ಅದೇ ದಿವಸದಲ್ಲಿ ಯಾರಾದರೂ ಕೆಲಸವನ್ನು ಮಾಡಿದರೆ, ಅವರನ್ನು ನಾನು ಅವರ ಜನರ ಮಧ್ಯದಿಂದ ನಾಶಮಾಡುವೆನು.
31 Do no work at all—a lasting statute, generation to generation, wherever you live. ನೀವು ಯಾವ ತರಹದ ಕೆಲಸವನ್ನೂ ಮಾಡಬಾರದು. ಇದು ನಿಮ್ಮ ಸಂತತಿಗೆ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
32 This is a sabbath of complete rest for you; deprive yourselves. From evening on the ninth of the month until the next evening, keep your sabbath." ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ.
33 Our Father spoke to Moses, saying: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
34 "Tell the Israelites: On this seventh month's fifteenth day, my Feast of Tabernacles begins, lasting seven days. “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು.
35 The first day: a holy gathering. Do no ordinary work. ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವುದು. ನೀವು ಅದರಲ್ಲಿ ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.
36 Seven days, present food offerings to me. On the eighth day hold a holy gathering and present a food offering to me—a solemn assembly. Do no ordinary work. ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.
37 "These are my appointed times, which you are to proclaim as holy gatherings, presenting food offerings to me—burnt offering and grain offering, sacrifice and drink offerings—each on its own day, “ ‘ನೀವು ಪರಿಶುದ್ಧ ಸಭೆಯಾಗಿ ಯೆಹೋವ ದೇವರ ನೇಮಕವಾದ ಹಬ್ಬಗಳು ಇವೇ. ಇವುಗಳ ಒಂದೊಂದು ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ, ಯಜ್ಞವನ್ನೂ, ಪಾನದ್ರವ್ಯ ಬಲಿಗಳನ್ನೂ ಅರ್ಪಿಸಬೇಕು.
38 besides my Sabbaths, besides your gifts, all your vow offerings, and all your voluntary offerings you give me. ಯೆಹೋವ ದೇವರ ವಿಶ್ರಾಂತಿಯ ದಿನಗಳ ಹೊರತಾಗಿಯೂ, ನೀವು ಯೆಹೋವ ದೇವರಿಗೆ ಸಮರ್ಪಿಸುವ ನಿಮ್ಮ ದಾನಗಳ ಹೊರತಾಗಿಯೂ, ನಿಮ್ಮ ಎಲ್ಲಾ ಹರಕೆಗಳ ಹೊರತಾಗಿಯೂ, ನಿಮ್ಮ ಎಲ್ಲಾ ಸ್ವಯಿಚ್ಛೆಯ ಕಾಣಿಕೆಗಳ ಹೊರತಾಗಿಯೂ ಸಲ್ಲಿಸಬೇಕಾದ ಅರ್ಪಣೆಗಳಿರುತ್ತವೆ.
39 "So on the fifteenth day of the seventh month, once you've gathered the land's produce, celebrate my feast seven days: the first day a complete rest, the eighth day a complete rest. “ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು.
40 On the first day, take fruit of majestic trees, palm fronds, leafy branches, and willows of the brook, and rejoice before me, your Father, seven days. ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.
41 Celebrate it as my feast seven days each year, a lasting statute for your generations; celebrate it in the seventh month. ವರ್ಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಯೆಹೋವ ದೇವರಿಗಾಗಿ ಕೈಗೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
42 Live in booths seven days; every native Israelite is to live in booths, ಏಳು ದಿವಸಗಳವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು. ಸ್ವದೇಶೀಯರಾದ ಇಸ್ರಾಯೇಲರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸಬೇಕು.
43 so your descendants may know I made the Israelites live in booths when I brought them out of Egypt. I am your Father." ಏಕೆಂದರೆ ನಾನು ಇಸ್ರಾಯೇಲರನ್ನು ಈಜಿಪ್ಟ್ ದೇಶದೊಳಗಿನಿಂದ ಹೊರಗೆ ಬರಮಾಡಿದಾಗ, ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”
44 So Moses announced to the Israelites the appointed feasts of our Father. ಹೀಗೆ ಮೋಶೆಯು ಇಸ್ರಾಯೇಲರಿಗೆ ಯೆಹೋವ ದೇವರ ಹಬ್ಬಗಳನ್ನು ನೇಮಕಮಾಡಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]