Skip to content
The Believer's Library

Biblica® Open Kannada Contemporary Version 2022

Leviticus 24 OKCV

Show OKCV only
Verse × ×
1 Our Father spoke to Moses: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2 "Command the Israelites to bring you pure, crushed olive oil for the light, to keep a lamp burning continually. “ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.
3 Outside the testimony's curtain in the tent of meeting, Aaron is to tend it before me from evening to morning, continually—a lasting law for your generations. ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು.
4 On the pure lampstand he must tend the lamps before me continually. ದೀಪಗಳು ಚೊಕ್ಕ ಬಂಗಾರದ ದೀಪಸ್ತಂಭದ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
5 "Take fine flour and bake twelve loaves, each about four and a half pounds of flour. “ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು.
6 Arrange them in two rows, six to a row, on the pure table before me. ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು.
7 Put pure frankincense on each row as the bread's memorial portion, a food offering to me. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
8 Every Sabbath he must arrange it before me continually, from the Israelites, a lasting covenant. ಪ್ರತಿಯೊಂದು ಸಬ್ಬತ್ ದಿನದಲ್ಲಿಯೂ ಯೆಹೋವ ದೇವರ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮಪಡಿಸಬೇಕು. ಇದು ಇಸ್ರಾಯೇಲರ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
9 It belongs to Aaron and his sons, who must eat it in a holy place; it is a most holy portion for him from my food offerings, their permanent share." ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.”
10 The son of an Israelite woman, whose father was Egyptian, went out among the Israelites; the Israelite woman's son fought with an Israelite man in the camp. ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ, ಈಜಿಪ್ಟಿನವನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲರ ಪಾಳ್ಯಕ್ಕೆ ಬಂದನು. ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಜಗಳವಾಡಿದರು.
11 The son of the Israelite woman blasphemed the Name with a curse, and they brought him to Moses. His mother was Shelomith, daughter of Dibri, of the tribe of Dan. ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.
12 They put him in custody until our Father made his will clear to them. ಯೆಹೋವ ದೇವರ ಮನಸ್ಸನ್ನು ತಿಳಿಯುವಂತೆ ಅವನನ್ನು ಕಾವಲಲ್ಲಿ ಬಿಟ್ಟರು.
13 Then our Father spoke to Moses: ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
14 "Bring the one who cursed outside the camp. Let all who heard lay their hands on his head, then let the whole congregation stone him. “ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
15 Tell the Israelites: Whoever curses our Father will bear their sin. ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ಶಪಿಸುವವನು, ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
16 Whoever blasphemes my name must die—the whole community must stone him. Foreigner and native-born alike: whoever blasphemes the Name must die. ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.
17 "Whoever kills any person must be put to death. “ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
18 Whoever kills an animal must make restitution for it, life for life. ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು.
19 If anyone injures their neighbor, the same must be done to them: ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು.
20 Fracture for fracture, eye for eye, tooth for tooth: as one injures another, so it is done to him. ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವರು ಒಬ್ಬರಿಗೆ ಊನ ಮಾಡಿದ ಹಾಗೆಯೇ ಅವರಿಗೂ ಮಾಡಬೇಕು.
21 Whoever kills an animal repays for it; whoever kills a person is put to death. ಪಶುವನ್ನು ಕೊಲ್ಲುವವರು ಅದಕ್ಕೆ ಬದಲುಕೊಡಬೇಕು. ಮನುಷ್ಯರನ್ನು ಕೊಲ್ಲುವವರನ್ನು ಮರಣಕ್ಕೆ ಒಳಪಡಿಸಬೇಕು.
22 The same law applies to the foreigner and to the native-born alike, for I am your Father." ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”
23 Moses told the Israelites; they took the one who had cursed outside the camp and stoned him with stones. The Israelites did as our Father commanded Moses. ಶಪಿಸಿದವನನ್ನು ಪಾಳೆಯದ ಹೊರಗೆ ತಂದು, ಅವನನ್ನು ಕಲ್ಲುಗಳಿಂದ ಹೊಡೆಯುವಂತೆ ಮೋಶೆಯು ಇಸ್ರಾಯೇಲರೊಂದಿಗೆ ಮಾತನಾಡಿದನು. ಆಗ ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]