Skip to content
The Believer's Library

Biblica® Open Kannada Contemporary Version 2022

Leviticus 25 OKCV

Show OKCV only
Verse × ×
1 Our Father spoke to Moses on Mount Sinai, saying: ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2 "Speak to the Israelites and say to them: When you enter the land I am giving you, the land is to keep a sabbath rest to me. “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ, ದೇಶವು ಯೆಹೋವ ದೇವರಿಗಾಗಿ ಸಬ್ಬತ್ ದಿನವನ್ನು ಕೈಗೊಳ್ಳಬೇಕು.
3 For six years sow your field, six years prune your vineyard and gather its fruit. ಆರು ವರ್ಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು. ಆರು ವರ್ಷ ನೀವು ನಿಮ್ಮ ದ್ರಾಕ್ಷಿತೋಟವನ್ನು ಕತ್ತರಿಸಬೇಕು, ಅವುಗಳಿಂದ ಫಲವನ್ನು ಕೂಡಿಸಬೇಕು.
4 But the seventh year is a sabbath of full rest for the land, a sabbath to me—don't sow your field or prune your vineyard. ಆದರೆ ಏಳನೆಯ ವರ್ಷವು ನೆಲಕ್ಕೆ ವಿಶ್ರಾಂತಿಕಾಲವಾಗಿರುವುದು. ಅದು ಯೆಹೋವ ದೇವರಿಗೆ ಸಬ್ಬತ್ ಕಾಲವಾಗಿರುವುದು. ನೀವು ಆ ವರ್ಷದಲ್ಲಿ ನಿಮ್ಮ ಹೊಲವನ್ನು ಬಿತ್ತಬಾರದು. ಇಲ್ಲವೆ ದ್ರಾಕ್ಷಿತೋಟವನ್ನು ಕತ್ತರಿಸಬಾರದು.
5 Don't reap what grows on its own, or gather grapes from your unpruned vine; the land gets a year of complete rest. ತನ್ನಷ್ಟಕ್ಕೆ ತಾನೇ ಬೆಳೆದಿರುವ ಪೈರನ್ನು ನೀವು ಕೊಯ್ಯಬಾರದು. ಇಲ್ಲವೆ ಕತ್ತರಿಸದಿರುವ ದ್ರಾಕ್ಷಿಯ ಬಳ್ಳಿಯ ದ್ರಾಕ್ಷಿಹಣ್ಣುಗಳನ್ನು ಕೂಡಿಸಬಾರದು. ಏಕೆಂದರೆ ಅದು ದೇಶಕ್ಕೆ ವಿಶ್ರಾಂತಿಯ ವರ್ಷವಾಗಿರುವುದು.
6 The land's sabbath will feed you—yourself, your male and female servants, hired hand, and the foreigner living with you, ದೇಶದ ಆ ಸಬ್ಬತ್ ವರ್ಷದಲ್ಲಿ ತಾನಾಗಿಯೇ ಬೆಳೆದದ್ದು ನಿಮ್ಮ ಆಹಾರಕ್ಕಾಗಿ ಇರುವುದು. ಅದು ನಿಮಗೂ, ನಿಮ್ಮ ದಾಸದಾಸಿಯರಿಗೂ, ನಿಮ್ಮ ಕೂಲಿಯವರಿಗೂ, ನಿಮ್ಮೊಂದಿಗೆ ಪ್ರವಾಸಿಯಾಗಿರುವ ಪರಕೀಯರಿಗೂ,
7 and for your livestock and the wild animals in your land—all it yields is food. ನಿಮ್ಮ ದೇಶದಲ್ಲಿರುವ ಹುಟ್ಟುವಳಿಯೆಲ್ಲಾ ನಿಮ್ಮ ಪಶು ಮತ್ತು ಕಾಡುಮೃಗಗಳಿಗೆ ಆಹಾರವಾಗಬಹುದು.
8 "You are to count seven sabbaths of years, seven times seven years, making forty-nine years in all. “ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು.
9 Blow the ram's horn in blasts on the tenth day of the seventh month; on the Day of Atonement, sound it throughout all your land. ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
10 Make the fiftieth year holy: proclaim freedom in the land for all its residents. It is a jubilee for you—each returns to their property, each to their family. ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.
11 The fiftieth year is your jubilee: sow nothing, reap no self-grown grain, gather no untended vines. ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು.
12 For it is a jubilee; it is to be holy to you. Eat only what the field produces. ಏಕೆಂದರೆ ಅದು ಜೂಬಿಲಿ. ಅದು ನಿಮಗೆ ಪರಿಶುದ್ಧವಾಗಿರುವುದು. ಹೊಲದೊಳಗಿಂದ ಬೆಳೆದ ಹುಟ್ಟುವಳಿಯನ್ನು ನೀವು ತಿನ್ನಬೇಕು.
13 "In this Year of Jubilee each of you are to return to your own property. “ ‘ಜೂಬಿಲಿಯ ಈ ವರ್ಷದಲ್ಲಿ ಪ್ರತಿಯೊಬ್ಬನು ತನ್ನ ಆಸ್ತಿಗೆ ಹಿಂದಿರುಗಬೇಕು.
14 "If you sell or buy from your neighbor, do not cheat one another. “ ‘ನೆರೆಯವನಿಗೆ ಏನಾದರೂ ಮಾರಾಟ ಮಾಡಿದ್ದರೆ, ಇಲ್ಲವೆ ನೆರೆಯವನಿಂದ ಕೊಂಡುಕೊಂಡಿದ್ದರೆ, ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು.
15 Buy from your neighbor by the years since the jubilee; he sells to you by the years of harvests. ಜೂಬಿಲಿಯ ತರುವಾಯ ವರ್ಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರ್ಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.
16 Raise the price for more years, lower it for fewer, since he's selling you a number of harvests. ವರ್ಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನೂ ಹೆಚ್ಚಿಸಬೇಕು. ವರ್ಷಗಳು ಕಡಿಮೆಯಿರುವಂತೆಯೇ ಫಲದ ಬೆಲೆಯನ್ನು ಕಡಿಮೆ ಮಾಡಬೇಕು. ಫಲದ ವರ್ಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟಮಾಡಬೇಕು.
17 You shall not wrong one another, but you are to fear your Father, for I am your Father. ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
18 "Follow my statutes, keep my rules, and obey them, and you will live securely in the land. “ ‘ಹೀಗೆ ನೀವು ನನ್ನ ನಿಯಮಗಳನ್ನು ಪಾಲಿಸಬೇಕು, ನನ್ನ ನಿರ್ಣಯಗಳನ್ನು ಕೈಗೊಂಡು ನಡೆಯಬೇಕು. ಆಗ ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
19 The land will yield its fruit, and you will eat your fill and dwell in it securely. ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
20 If you ask, 'What will we eat in the seventh year, since we won't sow or gather our produce?' ನೀವು, “ನಾವು ಬಿತ್ತುವುದಿಲ್ಲ, ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವುದಿಲ್ಲ. ಏಳನೆಯ ವರ್ಷದಲ್ಲಿ ನಾವು ಏನು ತಿನ್ನೋಣ,” ಎನ್ನುವಿರಿ.
21 I will command my blessing on you in the sixth year, yielding crop for three years. ಆಗ ನಾನು, “ಆರನೆಯ ವರ್ಷದಲ್ಲಿ ಮೂರು ವರ್ಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಕೊಡುವೆನು.
22 You will plant in the eighth year but still eat old crop; until the ninth year's harvest comes in, you will eat the old. ನೀವು ಎಂಟನೆಯ ವರ್ಷದಲ್ಲಿ ಬಿತ್ತಿ, ಅದರ ಫಲವನ್ನು ಒಂಬತ್ತನೆಯ ವರ್ಷದವರೆಗೆ ತಿನ್ನುವಿರಿ. ಅದರ ಫಲ ಬರುವವರೆಗೆ ತಿನ್ನುವಿರಿ, ಅದರ ಫಲ ಬರುವವರೆಗೆ ನೀವು ಸಂಗ್ರಹಿಸಿದ ಹಳೆಯದನ್ನೇ ತಿನ್ನುವಿರಿ,” ಎಂದು ಹೇಳುತ್ತೇನೆ.
23 "The land must not be sold permanently, for it is mine; for you are only foreigners and temporary residents with me. “ ‘ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು. ಏಕೆಂದರೆ ಭೂಮಿಯು ನನ್ನದು. ನನ್ನೊಂದಿಗೆ ನೀವು ಪರಕೀಯರೂ, ಪ್ರವಾಸಿಗಳೂ ಆಗಿದ್ದೀರಿ.
24 Throughout the land you possess, you are to grant a right of redemption for the land. ನಿಮ್ಮ ಸ್ವಾಧೀನದಲ್ಲಿರುವ ನಿಮ್ಮ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.
25 "If your brother becomes poor and sells part of his land, his nearest redeemer must come redeem what his brother sold. “ ‘ನಿಮ್ಮ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸೊತ್ತಿನಲ್ಲಿ ಸ್ವಲ್ಪವನ್ನು ಮಾರಿದರೆ, ಅವನ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
26 If a man has no redeemer but prospers and finds enough to redeem it, ಬಿಡಿಸುವ ಬಂಧುವು ಇಲ್ಲದೆ ಹೋದರೆ, ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಂತಾದರೆ,
27 he calculates the years since the sale, returns the balance to the buyer, and returns to his property. ಅವನು ಅದನ್ನು ಮಾರಿದ ವರ್ಷಗಳನ್ನು ಲೆಕ್ಕಿಸಿ, ಅದನ್ನು ಮಾರಿದವನಿಗೆ ಮಿಕ್ಕ ಕ್ರಯವನ್ನು ಪೂರ್ತಿಮಾಡಿ, ತನ್ನ ಸ್ವಂತ ಹೊಲವನ್ನು ಸ್ವಾಧೀನಪಡಿಸಿಕೊಳ್ಳಬಹುದು.
28 But if he lacks means to repay him, what he sold stays with the buyer until Jubilee; it releases then, and he returns to his property. ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು.
29 "If someone sells a house in a walled city, redemption rights last a full year from the sale. For that whole year the seller keeps this right. “ ‘ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದಲ್ಲಿರುವ ನಿವಾಸದ ಮನೆಯನ್ನು ಮಾರಿದರೆ, ಅದನ್ನು ಮಾರಿದ ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು. ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡಿಸಬಹುದು.
30 If not redeemed within a full year, the house in the walled city belongs to its buyer permanently, generation after generation; it isn't released at the jubilee. ಆದರೆ ವರ್ಷವು ಪೂರ್ಣವಾಗುವುದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ, ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. ಜೂಬಿಲಿಯ ವರ್ಷದಲ್ಲಿ ಅದು ಬಿಡುಗಡೆಯಾಗಬಾರದು.
31 Houses in villages without walls count as open fields; they may be redeemed and go free at Jubilee. ಆದರೆ ಸುತ್ತಲೂ ಗೋಡೆಗಳಿಲ್ಲದೆ ಹಳ್ಳಿಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದು. ಜೂಬಿಲಿಯ ವರ್ಷದಲ್ಲಿ ಅವು ಬಿಡುಗಡೆ ಆಗಬೇಕು.
32 "The Levites may always redeem the houses in the Levite cities they possess. “ ‘ಲೇವಿಯರ ಪಟ್ಟಣಗಳ ವಿಷಯವಾಗಿಯೂ, ಅವರ ಸ್ವಾಧೀನವಾಗಿರುವ ಪಟ್ಟಣಗಳ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.
33 If a Levite doesn't redeem it, the house sold in his city is released at jubilee, for houses in Levite cities are their property among Israel. ಲೇವಿಯರಿಂದ ಏನಾದರೂ ಕೊಂಡುಕೊಂಡರೆ, ಕೊಂಡುಕೊಂಡ ಮನೆಯೂ, ಅವನ ಸ್ವಾಸ್ತ್ಯದ ಪಟ್ಟಣವೂ ಜೂಬಿಲಿಯ ವರ್ಷದಲ್ಲಿ ಬಿಡುಗಡೆಯಾಗಬೇಕು. ಏಕೆಂದರೆ ಲೇವಿಯರ ಪಟ್ಟಣಗಳ ಮನೆಗಳು ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸ್ವಾಧೀನವಾಗಿವೆ.
34 But the pasture fields around their cities cannot be sold; they are their permanent possession. ಆದರೆ ಅವರ ಪಟ್ಟಣಗಳ ಉಪನಗರಗಳ ಹೊಲವನ್ನು ಮಾರಬಾರದು. ಏಕೆಂದರೆ ಅದು ಅವರಿಗೆ ಶಾಶ್ವತವಾದ ಸೊತ್ತು.
35 "If your brother becomes poor and cannot support himself among you, help him like a foreigner or resident, so he may live among you. “ ‘ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣವಾಗಿ ಬಿದ್ದುಕೊಂಡರೆ, ಅವನು ಪರಕೀಯನಾಗಿದ್ದರೂ, ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡಬೇಕು.
36 Charge him no interest or profit, but fear your Father, so your brother may live alongside you. ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವರಿಗೆ ಭಯಪಡು.
37 You shall not lend him your money at interest or give him your food for profit. ನೀನು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ನಿನ್ನ ಆಹಾರವನ್ನು ಲಾಭಕ್ಕಾಗಿ ಸಾಲವಾಗಿ ಕೊಡಬೇಡ.
38 I am your Father, who brought you out of Egypt to give you Canaan and be your Father. ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ, ನಿನಗೆ ದೇವರಾಗಿರುವಂತೆಯೂ ನಿನ್ನನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಯೆಹೋವ ದೇವರು ನಾನೇ.
39 "If your brother beside you becomes poor and sells himself to you, don't make him work as a slave. “ ‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು.
40 He will be with you as a hired worker, as a resident, serving with you until Jubilee Year. ಆದರೆ ಕೂಲಿಯಾಳಂತೆಯೂ, ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದವರೆಗೆ ನಿನಗೆ ಸೇವೆಮಾಡಲಿ.
41 Then he and his children go free from you, returning to his clan and ancestral property. ತರುವಾಯ ಅವನು ನಿನ್ನ ಬಳಿಯಿಂದ ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೆ ಹಿಂದಿರುಗಬೇಕು. ತನ್ನ ಪಿತೃಗಳ ಸೊತ್ತಿಗೂ ಅವನು ಹಿಂದಿರುಗಬೇಕು.
42 For they are my servants, whom I brought from Egypt; they must not be sold as slaves are sold. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಕರತಂದ ಇಸ್ರಾಯೇಲರು ನನ್ನ ಸೇವಕರಾಗಿದ್ದಾರೆ, ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.
43 You shall not rule over him harshly, but you are to fear your Father. ನೀನು ಕಠಿಣವಾಗಿ ಅವನ ಮೇಲೆ ಅಧಿಕಾರ ಚಲಾಯಿಸಬಾರದು. ನಿನ್ನ ದೇವರಿಗೆ ಭಯಪಡಬೇಕು.
44 "As for your male and female slaves: you may buy them from the nations around you. “ ‘ನಿನ್ನ ಸುತ್ತಲೂ ಇರುವ ಇತರ ಜನರು ನಿನಗೆ ದಾಸ ದಾಸಿಯರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.
45 Also buy from the foreign residents among you, and from their families with you, born in your land; they become your property. ಇದಲ್ಲದೆ ನಿನ್ನ ಮಧ್ಯದೊಳಗಿರುವ ಪರಕೀಯ ಪ್ರವಾಸಿಗಳ ಮಕ್ಕಳಿಂದ ಮತ್ತು ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ದೇಶದೊಳಗೆ ಅವರು ಪಡೆದವರಿಂದ ನೀನು ಕೊಂಡುಕೊಳ್ಳಬಹುದು ಮತ್ತು ಅವರು ನಿನ್ನ ಸ್ವತ್ತಾಗಿರುವರು.
46 You may leave them to your children as inherited property, holding them for life. But over your fellow Israelites you must not rule harshly, one over another. ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವತ್ತಾಗುವ ಬಾಧ್ಯತೆಯಾಗಿ ತೆಗೆದುಕೊಳ್ಳಬೇಕು. ಅವರು ಶಾಶ್ವತವಾಗಿ ನಿಮ್ಮ ದಾಸರಾಗಿರುವರು. ಆದರೆ ಇಸ್ರಾಯೇಲರಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದಬ್ಬಾಳಿಕೆಯನ್ನು ನಡೆಸಬೇಡಿರಿ.
47 "If a foreigner or resident among you prospers and your brother becomes poor beside him, selling himself to the foreigner or to a branch of the foreigner's family, “ ‘ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿ ಇಲ್ಲವೆ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
48 he may be redeemed after he has sold himself. One of his brothers may redeem him. ಅವನ ಸಹೋದರರಲ್ಲಿ ಒಬ್ಬನು ಈಡುಕೊಟ್ಟು ಅವನನ್ನು ವಿಮೋಚಿಸಬಹುದು.
49 His uncle or cousin may redeem him, or a close relative from his clan may redeem him; or if he affords it, he redeems himself. ಅವನ ಚಿಕ್ಕಪ್ಪನಾಗಲಿ ಇಲ್ಲವೆ ಅವನ ಚಿಕ್ಕಪ್ಪನ ಮಗನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸಮೀಪವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
50 He and his buyer is to reckon from the year he sold himself to the Jubilee; the price follows the years, like a hired worker's wage. ಅವನು ತನ್ನನ್ನು ಮಾರಿಕೊಂಡ ವರುಷ ಮೊದಲುಗೊಂಡು ಮುಂದಿನ ಜೂಬಿಲಿ ಸಂವತ್ಸರದವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವುದು.
51 If many years remain, he refunds a proportionate amount of his purchase price as his redemption payment. ಜೂಬಿಲಿ ಸಂವತ್ಸರದವರೆಗೆ ಇನ್ನು ಬಹಳ ವರುಷಗಳಿದ್ದರೆ ಅವುಗಳ ಪ್ರಕಾರ ತನ್ನ ವಿಮೋಚನೆಯ ಕ್ರಯವನ್ನು ಕೊಡಬೇಕು.
52 If few years remain until Jubilee, he must calculate and refund his redemption price accordingly. ಜೂಬಿಲಿ ಸಂವತ್ಸರದವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರ್ಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನಿಗೆ ಸಲ್ಲಿಸಬೇಕು.
53 He is to be with him as one hired year by year, not ruled over harshly in your sight. ವರ್ಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಯಜಮಾನನು ಅವನನ್ನು ಕಠಿಣವಾಗಿ ನಡೆಸಿಕೊಳ್ಳುತ್ತಿರುವುದನ್ನು ನೀವು ನೋಡುತ್ತಾ ಸುಮ್ಮನಿರಬಾರದು.
54 If he isn't redeemed this way, he and his children go free together in the Jubilee Year. “ ‘ಈ ವರುಷಗಳಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ, ಜೂಬಿಲಿ ಸಂವತ್ಸರದಲ್ಲಿ ಅವನು ಮಕ್ಕಳೊಂದಿಗೆ ಬಿಡುಗಡೆಯಾಗಬೇಕು.
55 Israel's people are my servants, whom I brought out of Egypt. I am your Father." ಏಕೆಂದರೆ ಇಸ್ರಾಯೇಲರು ನನ್ನ ದಾಸರು ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿನ್ನ ದೇವರಾದ ಯೆಹೋವ ದೇವರು ನಾನೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]