Skip to content
The Believer's Library

Biblica® Open Kannada Contemporary Version 2022

Leviticus 27 OKCV

Show OKCV only
Verse × ×
1 Our Father spoke to Moses, saying: ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ,
2 "Speak to Israel: When anyone makes a special vow to me, dedicating a person by their equivalent value, “ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು.
3 if the valuation is for a male from twenty years old to sixty years old, the value is 1.2 pounds of silver, by the sanctuary standard. ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್ ಆಗಿರಬೇಕು.
4 If it is a female, the valuation is to be about twelve ounces. ಹೆಣ್ಣಾಗಿದ್ದರೆ, ನೀನು ನೇಮಿಸುವ ಕ್ರಯವು ಮೂವತ್ತು ಶೆಕೆಲ್ ಆಗಿರಬೇಕು.
5 For ages five to twenty, the valuation is about eight ounces for a male and about four ounces for a female. ಐದರಿಂದ ಇಪ್ಪತ್ತು ವಯಸ್ಸುಳ್ಳ ಪುರುಷನ ಕ್ರಯವು ಇಪ್ಪತ್ತು ಶೆಕೆಲ್, ಸ್ತ್ರೀ ಕ್ರಯವು ಹತ್ತು ಶೆಕೆಲ್ ಆಗಿರಬೇಕು.
6 If from one month to five years old, the valuation is about two ounces of silver for a male and about one.two ounces for a female. ಒಂದು ತಿಂಗಳಿಂದ ಐದು ವಯಸ್ಸುಳ್ಳ ಹುಡುಗನ ಕ್ರಯವು ಐದು ಶೆಕೆಲ್, ಹುಡುಗಿಯ ಕ್ರಯವು ಮೂರು ಶೆಕೆಲ್ ಆಗಿರಬೇಕು.
7 If sixty or older, the valuation is about six ounces for a male, four ounces for a female. ಅರವತ್ತು ವರುಷವೂ, ಅದಕ್ಕೂ ಹೆಚ್ಚಾದ ಪ್ರಾಯವುಳ್ಳ ಪುರುಷನಾಗಿದ್ದರೆ, ನೀನು ನೇಮಿಸುವ ಕ್ರಯವು ಹದಿನೈದು ಶೆಕೆಲ್, ಸ್ತ್ರೀಗೆ ಹತ್ತು ಶೆಕೆಲ್ ಆಗಿರಬೇಕು.
8 But if he is too poor for the valuation, he is to be presented before the priest, and the priest is to set his value; the priest is to value him according to what the one who vowed can afford. ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.
9 "If the vow is an animal that may be offered to me, every such one given to me is holy. “ ‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು.
10 He must not exchange or substitute it, good for bad or bad for good; if he does substitute one animal for another, both it and its substitute become holy. ಅದನ್ನು ಒಳ್ಳೆಯದಕ್ಕೆ ಕೆಟ್ಟದ್ದನ್ನಾಗಲಿ, ಕೆಟ್ಟದ್ದಕ್ಕೆ ಒಳ್ಳೆಯದನ್ನಾಗಲಿ ಬದಲು ಮಾಡಬಾರದು, ಮಾರ್ಪಡಿಸಲೂಬಾರದು. ಅವನು ಗೊತ್ತುಮಾಡಿದ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ, ಅದು ಮತ್ತು ಅದರ ಬದಲಾಗಿಟ್ಟ ಪಶು ಇವೆರಡೂ ಯೆಹೋವ ದೇವರಿಗೆ ಪರಿಶುದ್ಧವಾಗಿರಬೇಕು.
11 If it is any unclean animal that may not be offered to me, it is to be presented before the priest, ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.
12 the priest will set its value, good or bad; as the priest values it, so it will be. ಆಗ ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಅದಕ್ಕೆ ಕ್ರಯ ಕಟ್ಟಬೇಕು. ಯಾಜಕನು ನಿರ್ಧರಿಸಿದ ಕ್ರಯವೇ ಅಂತಿಮ ಕ್ರಯವಾಗಿರಬೇಕು.
13 But if he wishes to redeem it, he is to add a fifth to its valuation. ಹರಕೆ ಮಾಡುವವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿದ್ದರೆ, ನೀನು ನಿರ್ಧರಿಸಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
14 "When someone dedicates his house as holy to me, the priest is to set its value, good or bad; as the priest values it, so it stands. “ ‘ಒಬ್ಬನು ತನ್ನ ಮನೆಯನ್ನು ಯೆಹೋವ ದೇವರಿಗೆ ಪರಿಶುದ್ಧವಾಗಿರಲೆಂದು ಪ್ರತಿಷ್ಠೆಪಡಿಸಿದರೆ, ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಪರೀಕ್ಷಿಸಿ ಕ್ರಯವನ್ನು ಕಟ್ಟಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಸ್ಥಿರವಾಗಿರಬೇಕು.
15 If the one who dedicated his house redeems it, he adds a fifth of its value in silver, and it is his. ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು.
16 "If someone dedicates to me part of a field he owns, its value follows the seed for it—about 1.2 pounds of silver for six bushels of barley seed. “ ‘ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಯೆಹೋವ ದೇವರಿಗೆ ಪ್ರತಿಷ್ಠಿಸಿದರೆ, ಅದರ ಬೀಜದ ಪ್ರಕಾರ ಕ್ರಯ ಕಟ್ಟಬೇಕು. ಒಂದು ಓಮೆರ್ ಜವೆಗೋಧಿಯನ್ನು, ಬೀಜಕ್ಕೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಡಬೇಕಾಗುವುದು.
17 If he dedicates his field from the Year of Jubilee, it is to stand at the full valuation. ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
18 But if he dedicates his field after the Jubilee, the priest will figure the price by the years left until the next Jubilee, and lower the valuation to match. ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪ್ರತಿಷ್ಠೆ ಮಾಡಿದರೆ, ಜೂಬಿಲಿ ಸಂವತ್ಸರದವರೆಗೆ ಮಿಕ್ಕ ವರ್ಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ನಿರ್ಧರಿಸಿ, ಕಟ್ಟಿದ ಕ್ರಯದಿಂದ ಕಳೆಯಬೇಕು.
19 If the one dedicating the field wants to redeem it, he must add a fifth of its silver value, and it stays his. ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿದವನು ಅದನ್ನು ಅವನು ವಿಮೋಚಿಸಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಒಂದು ಪಾಲನ್ನು ಕೊಡಬೇಕು. ಆಗ ಅದು ಸ್ಥಿರವಾಗಿರುವುದು.
20 But if he does not redeem the field, or has sold it to another, it can no longer be redeemed. ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ, ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ, ಅದನ್ನು ಅನಂತರ ವಿಮೋಚಿಸಕೂಡದು.
21 When the field is released in the Jubilee, it becomes holy to me, like a devoted field; it belongs to the priest as his property. ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.
22 "If someone dedicates to me a bought field, not part of his ancestral possession, “ ‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
23 the priest is to calculate the valuation up to the Year of Jubilee, and he is to pay it that day as something holy to me. ಯಾಜಕನು ಅವನಿಗೆ ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದವರೆಗೂ ಎಣಿಸಬೇಕು. ಅವನು ಆ ದಿವಸದಲ್ಲಿ ಕಟ್ಟಿದ ಕ್ರಯವನ್ನು ಯೆಹೋವ ದೇವರಿಗೆ ಮೀಸಲಾದದ್ದು ಎಂದು ಭಾವಿಸಿ ಕೊಡಬೇಕು.
24 In the Year of Jubilee the field returns to the one it was bought from, to whom the land belongs. ಆ ಹೊಲವು ಯಾರಿಗೆ ಸ್ವಂತವಾಗಿದ್ದು, ಯಾರಿಂದ ಕೊಂಡುಕೊಳ್ಳಲಾಗಿದೆಯೋ ಅದು ಜೂಬಿಲಿ ವರ್ಷದಲ್ಲಿ ಅವರಿಗೇ ಹಿಂದಕ್ಕೆ ಕೊಡಬೇಕು.
25 Every valuation is to be by the sanctuary standard. ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಇಪ್ಪತ್ತು ಗೇರಾ ತೂಕದ ಶೆಕೆಲ್ ಮೇರೆಗೆ ನೀವು ಕ್ರಯವನ್ನು ನಿಗದಿಮಾಡಬೇಕು.
26 "No one may dedicate the firstborn of any animal; it already belongs to me—whether ox or sheep, it is mine. “ ‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.
27 If it is an unclean animal, he redeems it at the valuation plus a fifth; if not redeemed, it is sold at the valuation. ಆದರೆ ಅದು ಅಶುದ್ಧ ಪಶುಗಳಲ್ಲಿ ಹುಟ್ಟಿದ್ದಾಗಿದ್ದರೆ, ಹರಕೆ ಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ಕಟ್ಟಿದ ಕ್ರಯದ ಪ್ರಕಾರ ಮಾರಬೇಕು.
28 "But nothing a person devotes to me by ban—a human, animal, or field he owns—may be sold or redeemed. All so devoted is most holy to me. “ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.
29 "No person devoted under the ban may be redeemed; he must be put to death. “ ‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು.
30 "Every tithe of the land, whether of the seed of the ground or of the fruit of the trees, is mine; it is holy to me. “ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.
31 If anyone redeems part of his tenth, he adds a fifth to it. ಯಾವನಾದರೂ ತನ್ನ ಹತ್ತನೆಯ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ, ಅದಕ್ಕಿಂತ ಹೆಚ್ಚಾಗಿ ಅದರ ಐದನೆಯ ಒಂದು ಪಾಲನ್ನು ಕೊಡಬೇಕು.
32 Every tenth of the herd and flock—each animal passing under the shepherd's rod—is holy to me. ಇದಲ್ಲದೆ ದನಕುರಿಗಳಲ್ಲಿಯೂ, ಕುರುಬನು ಎಣಿಸುವ ಪಶುಗಳಲ್ಲಿಯೂ ಹತ್ತನೆಯ ಪಾಲು, ಹತ್ತರಲ್ಲಿ ಒಂದು ಯೆಹೋವ ದೇವರಿಗೆ ಪರಿಶುದ್ಧವಾಗಿರುವುದು.
33 He must not check whether it is good or bad, nor substitute for it; if he does, both it and its substitute become holy and cannot be redeemed." ಆ ಪಶು ಒಳ್ಳೆಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸಬಾರದು. ಅವನು ಅದನ್ನು ಬದಲಾಯಿಸಬಾರದು. ಯಾರಾದರೂ ಅದನ್ನು ಬದಲಾಯಿಸಿದ್ದಾದರೆ, ಆಗ ಎರಡೂ ಪಶುಗಳು ಯೆಹೋವ ದೇವರಿಗೆ ಸೇರುತ್ತದೆ, ಅದು ಪರಿಶುದ್ಧವಾಗಿರುತ್ತದೆ ಅದನ್ನು ವಿಮೋಚಿಸಬಾರದು.’ ”
34 These are the commandments our Father gave Moses for the people of Israel on Mount Sinai. ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]