Skip to content
The Believer's Library

Biblica® Open Kannada Contemporary Version 2022

Leviticus 3 OKCV

Show OKCV only
Verse × ×
1 "If someone's offering is a peace offering from the herd, male or female, he must present it without defect before me. “ ‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು.
2 He lays his hand on his offering's head and slaughters it at the tent of meeting's entrance, and Aaron's sons the priests splash the blood against all sides of the altar. ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
3 From the peace offering he must present to me a food offering made by fire: the fat covering the inner parts and all the fat on them, ಅವನು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,
4 both kidneys with the fat on them near the flanks, and the long lobe of the liver, which he removes with the kidneys. ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಯಲ್ಲಿಯ ಅವುಗಳ ಮೇಲಿರುವ ಕೊಬ್ಬನ್ನೂ, ಮೂತ್ರ ಜನಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಯೆಹೋವ ದೇವರಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
5 Aaron's sons will burn it on the altar atop the burnt offering on the wood over the fire—a food offering, a pleasing aroma to me. ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.
6 "If his peace offering to me is from the flock, male or female, he must present it without defect. “ ‘ಅವನ ಕಾಣಿಕೆಯು ಸಮಾಧಾನದ ಬಲಿಯಾಗಿ, ಅದು ಯೆಹೋವ ದೇವರಿಗೆ ತನ್ನ ಆಡುಕುರಿಗಳಿಂದಾದ ಕಾಣಿಕೆಯಾಗಿದ್ದರೆ, ಗಂಡಾಗಲಿ, ಹೆಣ್ಣಾಗಲಿ ಕಳಂಕರಹಿತವಾದದ್ದನ್ನು ಅವನು ಸಮರ್ಪಿಸಬೇಕು.
7 If he brings a lamb as his offering, he is to present it before me, ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವುದಾದರೆ, ಅದನ್ನು ಅವನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.
8 lay his hand on the head of his offering and slaughter it before the tent of meeting; Aaron's sons will splash its blood on all sides of the altar. ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
9 From the peace offering he must present a food offering to me by fire: its fat, the whole fat tail cut off close to the backbone, the fat covering the inner parts, and all the fat on them, ಸಮಾಧಾನದ ಬಲಿಗಾಗಿ ಅದರ ಇಡೀ ಹಿಂಭಾಗವನ್ನೂ, ಅದರ ಕೊಬ್ಬನ್ನೂ, ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,
10 both kidneys with the fat near the loins, and the liver's long lobe, which he removes with the kidneys. ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ, ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.
11 The priest will burn it on the altar as food, an offering made to me by fire. ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.
12 "If his offering is a goat, he is to present it before me, “ ‘ಸಮರ್ಪಣೆಯು ಮೇಕೆಯಾಗಿದ್ದರೆ, ಅದನ್ನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.
13 lay his hand on its head and slaughter it in front of the tent of meeting; Aaron's sons will splash its blood on all sides of the altar. ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ಆಗ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
14 From it he must present a food offering to me by fire: the fat covering the inner parts and all the fat on them, ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,
15 both kidneys with their fat near the loins, and the liver's long lobe, which he removes with the kidneys. ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.
16 The priest will burn them on the altar as food, an offering by fire, a pleasing aroma. All fat is mine. ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.
17 "This is a lasting rule for all generations, wherever you live: never eat any fat or any blood." “ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]