Skip to content
The Believer's Library

Biblica® Open Kannada Contemporary Version 2022

Leviticus 4 OKCV

Show OKCV only
Verse × ×
1 Our Father spoke to Moses, saying: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2 "Tell the Israelites: If a person sins unintentionally against any of our Father's commands, doing what must not be done, and breaks one of them, “ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:
3 if the anointed priest sins, bringing guilt on the people, he must bring our Father a young bull without defect as a sin offering for the sin he committed. “ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.
4 He is to bring the bull to the tent of meeting's entrance before our Father, lay his hand on its head, and slaughter it before our Father. ಅವನು ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿಗೆ ತರಬೇಕು. ತನ್ನ ಕೈಯನ್ನು ಆ ಹೋರಿಯ ತಲೆಯ ಮೇಲಿಟ್ಟು, ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.
5 The anointed priest takes some of the bull's blood and brings it into the tent of meeting. ಆಗ ಅಭಿಷಿಕ್ತನಾದ ಯಾಜಕನು ಆ ಹೋರಿಯ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಳಿಗೆ ತರಬೇಕು.
6 He is to dip his finger in the blood, sprinkling it seven times before our Father in front of the sanctuary veil. ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
7 The priest is to put some of the blood on the horns of the altar of fragrant incense before our Father, which is in the tent of meeting, and pour all the rest of the bull's blood at the base of the burnt-offering altar at the entrance of the tent of meeting. ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.
8 He is to remove all the fat of the sin offering bull: the fat covering the entrails, and all the fat on the entrails. ಅವನು ಪಾಪ ಪರಿಹಾರದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,
9 The two kidneys, the fat on them near the loins, and the liver's lobe—he removes with the kidneys, ಎರಡು ಮೂತ್ರಪಿಂಡಗಳನ್ನು ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ, ಮೂತ್ರಪಿಂಡದೊಂದಿಗೂ ಕಾಳಿಜದ ಉತ್ತಮ ಭಾಗವನ್ನೂ ಅವನು ತೆಗೆಯಬೇಕು.
10 as removed from the ox of the peace offering; the priest is to burn them on the altar of burnt offering. ಸಮಾಧಾನದ ಬಲಿಯನ್ನು ಹೋರಿಯಿಂದ ತೆಗೆದಂತೆಯೇ ತೆಗೆಯಬೇಕು. ಯಾಜಕನು ದಹನಬಲಿಯ ಪೀಠದ ಮೇಲೆ ಅವುಗಳನ್ನು ಸುಡಬೇಕು.
11 But the bull's hide, all its flesh, head, legs, intestines, and dung. ಆ ಹೋರಿಯ ಚರ್ಮವನ್ನು, ಅದರ ಎಲ್ಲಾ ಮಾಂಸವನ್ನು, ಅದರ ತಲೆ, ಅದರ ಕಾಲುಗಳು, ಅದರ ಕರುಳುಗಳು, ಅದರ ಸಗಣಿಯೊಂದಿಗೆ
12 He must carry all the rest of the bull outside the camp to a clean place where ashes are dumped, and burn it on a wood fire; it must be burned where ashes are dumped. ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.
13 "If Israel's whole congregation sins unintentionally, and the matter is hidden from the assembly's eyes, and they do one of the things our Father commanded not to be done, and become guilty. “ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ
14 When the sin they committed becomes known, the assembly must offer a young bull as a sin offering and bring it before the tent of meeting. ಅವರು ಮಾಡಿದ ಪಾಪವು ಗೊತ್ತಾದಾಗ, ಆ ಪಾಪಕ್ಕಾಗಿ ಸಮಾಜವು ಒಂದು ಎಳೆಯ ಹೋರಿಯನ್ನು ದೇವದರ್ಶನದ ಗುಡಾರದ ಮುಂದೆ ಪಾಪ ಪರಿಹಾರದ ಬಲಿಯಾಗಿ ತರಬೇಕು.
15 The elders of the community lay hands on the bull's head before our Father; then it is slaughtered before our Father. ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.
16 Then the anointed priest is to bring some of the bull's blood into the tent of meeting. ಅಭಿಷಿಕ್ತನಾದ ಯಾಜಕನು ಆ ಹೋರಿಯ ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗೆ ತಂದು,
17 He is to dip his finger in the blood and sprinkle seven times before our Father, in front of the veil. ಅದರಲ್ಲಿ ಬೆರಳನ್ನು ಅದ್ದಿ ಅದನ್ನು ಯೆಹೋವ ದೇವರ ಮುಂದೆ ಅಂದರೆ ತೆರೆಯ ಮುಂದೆ ಏಳು ಸಾರಿ ಚಿಮುಕಿಸಬೇಕು.
18 He is to put some of the blood on the altar's horns before our Father in the tent of meeting, then pour all the rest of it at the base of the altar of burnt offering, at the tent of meeting's entrance. ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.
19 He is to remove all its fat and burn it on the altar. ಅವನು ಅದರ ಎಲ್ಲಾ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.
20 He is to do the same with this bull as with the sin offering's bull. So the priest will atone for them, and they'll be forgiven. ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.
21 He is to carry the bull outside the camp and burn it as he burned the first bull; it is the assembly's sin offering. ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು.
22 "When a leader sins, unintentionally doing anything our Father commanded not to do, and becomes guilty, “ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,
23 if he learns of the sin he committed, he must bring as his offering a male goat without defect. ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದುಬಂದರೆ, ಅವನು ಬಲಿಗಾಗಿ ಹೋತಗಳಲ್ಲಿ ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.
24 He is to lay his hand on the goat's head and slaughter it where the burnt offering is slaughtered before our Father—a sin offering. ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.
25 The priest will take some sin-offering blood with his finger, and put it on the burnt-offering altar's horns, then pour the rest at its base. ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.
26 He is to burn all its fat on the altar, like the fat of the peace offering. The priest will atone for his sin, and he will be forgiven. ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.
27 "If anyone of the common people sins unintentionally, doing any one of the things our Father commanded not to do, and incurs guilt, “ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,
28 when he becomes aware of his sin, he must bring a female goat without defect as his offering for the sin he committed. ಇಲ್ಲವೆ ಅವರು ಮಾಡಿದ ಪಾಪವು ಅವರಿಗೆ ತಿಳಿದುಬಂದರೆ, ಅವರು ಪಾಪ ಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
29 He is to lay his hand on the sin offering's head and slaughter it at the burnt offering's place. ಅವರು ತಮ್ಮ ಕೈಯನ್ನು ಪಾಪದ ಬಲಿಯ ಮೇಲಿಟ್ಟು, ಆ ಪಾಪ ಪರಿಹಾರದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
30 With his finger the priest puts some of its blood on the burnt-offering altar's horns, then pours all the rest at its base. ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.
31 He is to remove all its fat, as fat is removed from the peace offering; the priest is to burn it on the altar—a pleasing aroma to our Father—and make atonement for him, and he will be forgiven. ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.
32 "If he brings a lamb as his sin offering, he is to bring a female without defect. “ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು.
33 He is to lay his hand on the sin offering's head and slaughter it as a sin offering where the burnt offering is slaughtered. ಅವರು ಪಾಪ ಪರಿಹಾರದ ಬಲಿಯ ತಲೆಯ ಮೇಲೆ ತಮ್ಮ ಕೈಯನ್ನು ಇಟ್ಟು, ದೋಷಪರಿಹಾರ ಬಲಿಯಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
34 With his finger the priest is to take some of the blood from the sin offering and apply it to the horns of the altar where burnt offerings are made, then pour out all the remaining blood at the altar's base. ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು.
35 He must remove all its fat, as the lamb's fat is removed from the peace offering; the priest will burn it on the altar atop the fire offerings to our Father. So the priest will atone for him for the sin he committed, and he will be forgiven." ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]