Skip to content
The Believer's Library

Biblica® Open Kannada Contemporary Version 2022

Leviticus 5 OKCV

Show OKCV only
Verse × ×
1 "If anyone sins by hearing a public call to testify, and is a witness, having seen or known, yet stays silent, he bears his guilt. “ ‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
2 "Or if someone unknowingly touches any unclean thing, or a carcass—unclean wild animal, unclean livestock, or unclean swarming creature—he becomes unclean and guilty. “ ‘ಇಲ್ಲವೆ, ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಇವುಗಳ ಹೆಣವಾಗಲಿ, ಅಶುದ್ಧವಾದ ಹರಿದಾಡುವ ಕ್ರಿಮಿಗಳ ಹೆಣಗಳಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆ ಇದ್ದರೂ ಅವನು ಅಶುದ್ಧವಾಗಿದ್ದು ಅಪರಾಧಿಯಾಗಿರುವನು.
3 "Or if he touches human impurity—any impurity that makes one unclean—unknowingly, then learns of it, he is guilty. ಇಲ್ಲವೆ, ಅವನು ಮನುಷ್ಯನ ಅಶುದ್ಧತ್ವವನ್ನು ತಗಲಿದರೆ, ಮನುಷ್ಯನನ್ನು ಅಶುದ್ಧಪಡಿಸುವ ಯಾವುದೇ ಅಶುದ್ಧತ್ವವಾಗಿದ್ದರೂ ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಅವನು ಅಪರಾಧಿಯಾಗಿರುವನು.
4 "Or if anyone rashly swears an oath to do evil or good—whatever people rashly swear—and it's hidden from him, when he realizes it, he's guilty in any of these. ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.
5 When anyone is guilty in any of these matters, he must confess the sin he has committed. ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ,
6 He must bring our Father a penalty offering for the sin he committed—a female from the flock, a lamb or goat—as a sin offering; the priest will atone for his sin. ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.
7 "If he can't afford a lamb, he must bring our Father two turtledoves or two young pigeons as penalty for his sin—one as a sin offering, the other as a burnt offering. “ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.
8 He brings them to the priest, who presents the sin offering first, wringing its head at the neck without separating it. ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು.
9 He sprinkles some blood from the sin offering on the altar's side; the rest drains at its base. It is a sin offering. ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.
10 The second bird he offers as a burnt offering, per the rule. The priest atones for his sin, and he is forgiven. ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.
11 "But if he cannot afford two doves or two young pigeons, he must bring two quarts of fine flour as his sin offering—no oil or incense on it, for it is a sin offering. “ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.
12 He must bring it to the priest, who takes a handful as its memorial portion and burns it on the altar atop our Father's fire offerings. It is a sin offering. ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.
13 The priest will atone for him for any of these sins he committed, and he'll be forgiven; the rest belongs to the priest, like the grain offering." ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”
14 Then our Father said to Moses, ಯೆಹೋವ ದೇವರು ಮೋಶೆಗೆ,
15 "If anyone is unfaithful and sins unintentionally against any of our Father's holy things, he must bring our Father a ram without defect from the flock as his guilt offering, valued in silver by weight by the sanctuary standard—a guilt offering. “ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.
16 He must repay for the holy thing he sinned against, adding a fifth, and give it to the priest. The priest will atone for him with the guilt-offering ram, and he'll be forgiven. ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು.
17 "If anyone sins, doing what our Father commanded not to be done, even unknowingly, he is guilty and bears his wrongdoing. “ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.
18 He must bring the priest a flawless ram from the flock, at the assessed value, as a guilt offering; the priest will atone for his unwitting sin, and he'll be forgiven. ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.
19 It is a guilt offering; he was certainly guilty before our Father." ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]