Skip to content
The Believer's Library

Biblica® Open Kannada Contemporary Version 2022

Leviticus 6 OKCV

Show OKCV only
Verse × ×
1 Our Father spoke to Moses: ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,
2 "If anyone sins, unfaithful to your Father, by deceiving his neighbor about a deposit, a pledge, or stolen goods, or by cheating him, “ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ,
3 or if he finds lost property and lies about it, swearing falsely—any such act by which a person sins. ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ.
4 When he sins and is guilty, he must return what he stole, or extorted, or the deposit entrusted to him, or the lost item he found, ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.
5 or whatever he swore falsely about, he must repay it in full, add a fifth to it, and give it to its owner on the day he admits his guilt. ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ, ಪಡೆದವುಗಳೆಲ್ಲವುಗಳನ್ನೂ ಕೂಡಿಸಿ, ಹಿಂದಕ್ಕೆ ಕೊಡಬೇಕು. ಪ್ರಾಯಶ್ಚಿತ್ತದ ಬಲಿ ಅರ್ಪಿಸುವ ದಿನದಲ್ಲಿ, ಅದರ ಯಜಮಾನನು ಯಾವನಾಗಿರುವನೋ, ಅವನಿಗೆ ಕೊಡಬೇಕು.
6 He must bring his guilt offering to your Father: a ram without defect from the flock, at your valuation, as a guilt offering, to the priest. ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.
7 The priest will atone for him before your Father, and he'll be forgiven for whatever he did that made him guilty." ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.
8 Then our Father spoke to Moses: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
9 "Command Aaron and his sons: This is the law for the burnt offering. It stays on the altar's hearth all night until morning, and the altar fire must keep burning on it. “ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.
10 The priest is to wear his linen garment, with linen undergarments against his skin, then remove the ashes left after the fire consumes the burnt offering on the altar, and place them beside the altar. ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು.
11 Then he removes his garments, puts on others, and carries the ashes outside the camp to a clean place. ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
12 The altar fire must keep burning; it must not go out. Every morning the priest adds wood on it, arranges the burnt offering on it, and burns the fat of the peace offerings on it. ಬಲಿಪೀಠದ ಮೇಲೆ ಬೆಂಕಿಯು ಅದರೊಳಗೆ ಸುಡುತ್ತಲೇ ಇರಬೇಕು. ಅದು ಆರಿಹೋಗಿರಬಾರದು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆಯನ್ನು ಹಾಕಬೇಕು. ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಬಲಿ ಅರ್ಪಣೆಗಳ ಕೊಬ್ಬನ್ನು ಸುಡಬೇಕು.
13 The fire must be kept burning on the altar continually; it must not go out. ಬಲಿಪೀಠದ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು, ಅದು ಎಂದಿಗೂ ಆರಬಾರದು.
14 "This is the law of the grain offering: Aaron's sons must bring it before your Father, in front of the altar. “ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
15 The priest takes a handful of the grain offering's fine flour and oil, with all its frankincense, and burns this memorial portion on the altar as a pleasing aroma to your Father. ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.
16 Aaron and his sons eat what remains; it must be eaten without yeast in a holy place, eaten in the courtyard of the tent of meeting. ಅದರಲ್ಲಿ ಉಳಿದದ್ದನ್ನು ಆರೋನನೂ, ಅವನ ಪುತ್ರರೂ ತಿನ್ನಬೇಕು. ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು. ಅದನ್ನು ಅವರು ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.
17 Do not bake it with yeast. I've given it as their share of my food offerings, like the sin and guilt offerings; it is most holy. ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.
18 Every male of Aaron's descendants may eat it—a lasting portion through your generations from your Father's food offerings. Whatever touches them becomes holy." ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’ ” ಎಂದರು.
19 Our Father said to Moses: ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,
20 "This is Aaron and his sons' offering to your Father on the day he is anointed: about two quarts of fine flour as a regular grain offering, half in the morning, half in the evening. “ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು.
21 Prepare it with oil on a griddle, bring it well-kneaded, present the grain offering in broken pieces—a pleasing aroma to your Father. ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು.
22 The anointed priest who succeeds him from among his sons must prepare it—a lasting decree before your Father: it must be burned completely. ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.
23 Every grain offering of a priest is to be burned completely; it must not be eaten." ಏಕೆಂದರೆ ಯಾಜಕನಿಗಾಗಿರುವ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಸಂಪೂರ್ಣವಾಗಿ ಸುಟ್ಟಿರಬೇಕು. ಅದನ್ನು ತಿನ್ನಬಾರದು,” ಎಂದರು.
24 Again our Father spoke to Moses: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
25 "Tell Aaron and his sons: this is the law of the sin offering: slaughter it before your Father, where the burnt offering is slaughtered; it is most holy. “ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
26 The priest who offers it for sin must eat it; it must be eaten in a holy place, in the tent of meeting's courtyard. ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
27 Whatever touches its flesh becomes holy. If its blood spatters a garment, wash the spattered spot in a holy place. ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
28 The clay pot it is boiled in must be broken; if boiled in a bronze pot, it must be scoured and rinsed with water. ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಅದನ್ನು ಒಂದು ಕಂಚಿನ ಪಾತ್ರೆಯಲ್ಲಿ ಬೇಯಿಸಿದ್ದಾದರೆ, ಅದನ್ನು ಬೆಳಗಿ, ನೀರಿನಿಂದ ತೊಳೆಯಬೇಕು.
29 Every male among the priests may eat it; it is most holy. ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.
30 No sin offering whose blood is brought into the tent of meeting to atone in the Holy Place may be eaten; it must be burned with fire." ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]