Skip to content
The Believer's Library

Biblica® Open Kannada Contemporary Version 2022

Leviticus 7 OKCV

Show OKCV only
Verse × ×
1 "This is the law of the guilt offering. It is most holy. “ ‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.
2 Where they slaughter the burnt offering, they must slaughter the guilt offering; splatter its blood on all sides of the altar. ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಪ್ರಾಯಶ್ಚಿತ್ತದ ಬಲಿಯನ್ನು ವಧಿಸಬೇಕು. ಅದರ ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.
3 All its fat is offered: the fat tail and fat covering the inner organs, ಅದರ ಎಲ್ಲಾ ಕೊಬ್ಬನ್ನೂ, ಅಂದರೆ ಬಾಲದ ಕೊಬ್ಬನ್ನೂ ಕರುಳಿನ ಸುತ್ತಲಿರುವ ಕೊಬ್ಬನ್ನು,
4 the two kidneys and their fat at the loins, and the liver's long lobe, removed with the kidneys. ಬದಿಯಲ್ಲಿರುವ ಎರಡು ಮೂತ್ರ ಜನಕಾಂಗಗಳನ್ನೂ, ಅವುಗಳ ಮೇಲಿರುವ ಕೊಬ್ಬನ್ನೂ, ಪಕ್ಕೆಯ ಬದಿಯಲ್ಲಿಯ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದುಕೊಂಡು ಅರ್ಪಿಸಬೇಕು.
5 The priest burns them on the altar as a food offering to our Father; a guilt offering. ಆಗ ಯಾಜಕನು ಅವುಗಳನ್ನು ಬೆಂಕಿಯಿಂದ ಯೆಹೋವ ದೇವರಿಗೆ ಸಮರ್ಪಿಸುವ ಬಲಿಪೀಠದ ಮೇಲೆ ಸುಡಬೇಕು. ಇದು ಪ್ರಾಯಶ್ಚಿತ್ತದ ಬಲಿಯಾಗಿದೆ.
6 Any male priest may eat it, eaten only in a holy place; it is most holy. ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.
7 "The sin offering and guilt offering share one law: it belongs to the priest who makes atonement with it. “ ‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
8 The priest who offers anyone's burnt offering keeps its hide for himself. ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
9 Any grain offering baked in an oven, and all made in a pan or on a griddle, belongs to the priest who offers it. ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು.
10 Every grain offering, mixed with oil or dry, belongs equally to all Aaron's sons. ಎಣ್ಣೆಯಿಂದ ಮಿಶ್ರಿತವಾದ ಮತ್ತು ಒಣಗಿದ್ದ ಪ್ರತಿಯೊಂದು ಧಾನ್ಯ ಸಮರ್ಪಣೆಯನ್ನೂ ಆರೋನನ ಪುತ್ರರು ಸರಿ ಸಮಾನವಾಗಿ ತೆಗೆದುಕೊಳ್ಳಬೇಕು.
11 "This is the law of the sacrifice of peace offerings that anyone may bring to our Father. “ ‘ಅವನು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಸಮಾಧಾನದ ಬಲಿಗಳ ನಿಯಮವು ಇದೇ.
12 If he presents it as a thank offering, with it he must offer unleavened cakes mixed with oil, unleavened wafers coated with oil, and cakes of fine flour well kneaded and mixed with oil. “ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.
13 He must bring loaves of leavened bread with his thanksgiving sacrifice of peace offerings. ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
14 From it he must give one of each as a contribution to our Father; it belongs to the priest who spatters the blood of the peace offerings. ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಕಾಣಿಕೆಯನ್ನಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದ್ದಾಗಬೇಕು.
15 The meat of his thanksgiving peace offerings must be eaten the day it's offered; none of it may remain until morning. ಉಪಕಾರ ಸ್ತುತಿಗಾಗಿ ಅವನು ಸಮಾಧಾನ ಬಲಿಯ ಮಾಂಸವನ್ನು ಅರ್ಪಿಸಲಾದ ದಿನವೇ ತಿನ್ನಬೇಕು. ಅವನು ಅದರಲ್ಲಿ ಬೆಳಗಿನವರೆಗೆ ಯಾವುದನ್ನೂ ಉಳಿಸಬಾರದು.
16 "If his offering is a vow or voluntary sacrifice, it must be eaten the day he offers it; what remains may be eaten the next day. “ ‘ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಯಿಚ್ಛೆಯಾದ ಸಮರ್ಪಣೆಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ಅದನ್ನು ತಿನ್ನಬೇಕು. ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬಹುದು.
17 But any sacrifice flesh remaining on the third day must be burned in fire. ಆದರೆ ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿಯಿಂದ ಸುಡಬೇಕು.
18 If any of his peace offering's meat is eaten on the third day, it won't be accepted, it won't count for the offerer—it's tainted, and whoever eats it bears his guilt. ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
19 "Flesh that touches anything unclean must not be eaten—burn that flesh in fire. But other flesh: anyone clean may eat it. “ ‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು.
20 Anyone who eats meat of our Father's peace offering while unclean will be cut off from his people. ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.
21 Whoever touches anything unclean—human impurity, an unclean animal, or any unclean, detestable thing—then eats meat from our Father's peace offering, that person will be cut off from his people." ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’ ” ಎಂದರು.
22 Our Father spoke to Moses: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
23 "Tell the people of Israel: Do not eat any fat from ox, sheep, or goat. “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ನೀವು ಎತ್ತು ಇಲ್ಲವೆ ಕುರಿ ಇಲ್ಲವೆ ಮೇಕೆಗಳ ಕೊಬ್ಬನ್ನು ತಿನ್ನಬಾರದು.
24 Fat from a carcass or animal mauled by a predator may serve any purpose, but never eat it. ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ, ಕಾಡುಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವುದಕ್ಕಾದರೂ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
25 Anyone who eats fat from an animal offered to me by fire will be cut off from his people. ಏಕೆಂದರೆ ಮನುಷ್ಯರು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಬಲಿ, ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.
26 You must not eat any blood at all, from bird or animal, wherever you live. ಇದಲ್ಲದೆ ನೀವು ಯಾವ ತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾಗಿರಲಿ, ಪ್ರಾಣಿಯದಾಗಿರಲಿ ನಿಮ್ಮ ಯಾವ ನಿವಾಸಗಳಲ್ಲಿಯೂ ತಿನ್ನಬಾರದು.
27 Anyone who eats any blood will be cut off from his people." ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ, ಅಂಥವನನ್ನು ತನ್ನ ಜನರಿಂದ ತೆಗೆದುಹಾಕಬೇಕು.’ ”
28 Our Father spoke to Moses: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
29 "Speak to the Israelites: Whoever presents his peace offering to me must bring his offering to me from that sacrifice. “ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಯೆಹೋವ ದೇವರಿಗೆ ಸಮಾಧಾನ ಬಲಿಯನ್ನು ಅರ್ಪಿಸುವವನು, ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಯೆಹೋವ ದೇವರಿಗೆ ತರಬೇಕು.
30 With his hands he must bring my food offerings; the fat with the breast he must bring, to wave the breast as a wave offering before me. ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
31 The priest burns the fat on the altar; the breast belongs to Aaron and his sons. ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು.
32 You are to give the right thigh to the priest as a contribution from your peace offerings. ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.
33 Whichever son of Aaron offers the peace offering's blood and fat gets the right thigh as his portion. ಸಮಾಧಾನದ ಬಲಿಗಳ ರಕ್ತವನ್ನೂ, ಕೊಬ್ಬನ್ನೂ ಸಮರ್ಪಿಸುವ ಆರೋನನ ಪುತ್ರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
34 For I have taken the breast of the wave offering and thigh of the contribution from Israel's peace offerings, and given them to Aaron the priest and his sons as a permanent share from Israel." ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”
35 This is Aaron and his sons' portion from our Father's food offerings, from the day they were presented to serve our Father as priests. ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ.
36 Our Father commanded this be given them from the Israelites, the day he anointed them—a permanent share for all their generations. ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ.
37 This is the law for burnt offerings, grain offerings, sin offerings, guilt offerings, ordination offerings, and peace offerings, ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ.
38 which our Father commanded Moses on Mount Sinai, the day he commanded the people of Israel to bring their offerings to our Father in the Wilderness of Sinai. ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]