Skip to content
The Believer's Library

Biblica® Open Kannada Contemporary Version 2022

Leviticus 8 OKCV

Show OKCV only
Verse × ×
1 Our Father spoke to Moses: ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
2 "Take Aaron and his sons with him, the garments, the anointing oil, the bull of the sin offering, the two rams, and the basket of yeast-free bread, “ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ.
3 and assemble the whole congregation at the entrance of the tent of meeting." ಎಲ್ಲಾ ಸಭೆಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು,” ಎಂದರು.
4 Moses did as our Father commanded him; the assembly gathered at the entrance of the tent of meeting. ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆಯೇ ಮಾಡಿದನು. ಸಭೆಯು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು.
5 And Moses said to the congregation, "This is what our Father has commanded to be done." ಮೋಶೆಯು ಸಭೆಗೆ, “ಯೆಹೋವ ದೇವರು ಮಾಡುವುದಕ್ಕೆ ಆಜ್ಞಾಪಿಸಿರುವುದು ಇದೇ.”
6 Then Moses brought Aaron and his sons forward and washed them with water. ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಬಂದು, ಸ್ನಾನಮಾಡಿಸಿ,
7 He put the tunic on Aaron, tied the sash around him, dressed him in the robe, put the ephod on him, tied the ephod's skillfully woven band around him, and fastened it to him. ಆರೋನನಿಗೆ ನಿಲುವಂಗಿಯನ್ನು ಹೊದಿಸಿ, ನಡುಕಟ್ಟಿನಿಂದ ಅವನ ನಡುವನ್ನು ಕಟ್ಟಿ, ಅವನಿಗೆ ಮೇಲಂಗಿಯನ್ನು ತೊಡಿಸಿ, ಅವನ ಮೇಲೆ ಏಫೋದನ್ನು ಹಾಕಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ, ಅದರಿಂದ ಅವನನ್ನು ಬಿಗಿದನು.
8 He placed the breastpiece on him, and in the breastpiece he put the Urim and the Thummim. ಅವನ ಮೇಲೆ ಎದೆಪದಕವನ್ನು ಹಾಕಿ, ಆ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್ ಇವುಗಳನ್ನೂ ಸಹ ಹಾಕಿದನು.
9 He set the turban on Aaron's head, and on its front he set the gold plate, the holy crown, as our Father commanded Moses. ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು, ಆ ಮುಂಡಾಸದ ಮೇಲೆ ಅಂದರೆ ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ, ಪವಿತ್ರವಾದ ಕಿರೀಟವನ್ನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಟ್ಟನು.
10 Then Moses took the anointing oil and anointed the tabernacle and everything in it, and consecrated them. ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರೊಳಗಿರುವುದೆಲ್ಲವನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.
11 He sprinkled some of it on the altar seven times, anointing the altar, all its utensils, and the basin with its stand, to dedicate them. ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.
12 He poured some anointing oil on Aaron's head and anointed him to dedicate him. ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು.
13 Then Moses brought Aaron's sons forward, dressed them in tunics, tied on sashes, and put caps on their heads, as our Father had commanded Moses. ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ, ಅವರ ನಡುಗಳನ್ನು ನಡುಕಟ್ಟುಗಳಿಂದ ಕಟ್ಟಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಹಾಕಿದನು.
14 He brought the bull of the sin offering, and Aaron and his sons laid their hands on its head. ಪಾಪ ಪರಿಹಾರದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಪುತ್ರರೂ ಪಾಪ ಪರಿಹಾರದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
15 Moses slaughtered it, took the blood, and with his finger applied it to the altar's horns all around, purifying the altar. He poured the rest of the blood at the altar's base and dedicated the altar, making atonement for it. ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.
16 He took all the fat on the inner organs, the liver's lobe, and the two kidneys with their fat, and burned it on the altar. ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಬಲಿಪೀಠದ ಮೇಲೆ ಸುಟ್ಟನು.
17 But the bull—hide, flesh, and waste—he burned outside the camp, as our Father commanded Moses. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಹೋರಿಯ ಮಾಂಸವನ್ನೂ, ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
18 He brought the ram for the burnt offering; Aaron and his sons laid their hands on its head. ದಹನಬಲಿಗಾಗಿ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
19 Moses slaughtered it and threw the blood against the sides of the altar. ಅವನು ಅದನ್ನು ವಧಿಸಿದನು. ತರುವಾಯ ಮೋಶೆಯು ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.
20 He cut the ram into pieces and burned the head, the pieces, and the fat. ಅವನು ಆ ಟಗರನ್ನು ತುಂಡುತುಂಡಾಗಿ ಮಾಡಿದನು. ಮೋಶೆಯು ತಲೆಯನ್ನು, ಆ ತುಂಡುಗಳನ್ನು, ಆ ಕೊಬ್ಬನ್ನು ಸುಟ್ಟನು.
21 He washed the inner organs and legs in water, then burned the whole ram on the altar—a burnt offering, a pleasing aroma, a food offering to our Father, as our Father commanded Moses. ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು.
22 He brought the second ram, the ram of ordination, and Aaron and his sons laid their hands on its head. ಅವನು ಪ್ರತಿಷ್ಠೆಯ ಟಗರಾದ ಇನ್ನೊಂದು ಟಗರನ್ನು ತಂದನು. ಆಗ ಆರೋನನೂ, ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
23 Moses slaughtered it, took some of its blood, and put it on Aaron's right earlobe, right thumb, and right big toe. ಮೋಶೆಯು ಅದನ್ನು ವಧಿಸಿ, ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
24 Moses brought Aaron's sons near and put blood on their right earlobes, thumbs, and big toes, then splashed the rest against the altar's sides. ಮೋಶೆಯು ಆರೋನನ ಪುತ್ರರನ್ನು ಕರೆತಂದು ಅವರ ಬಲಗಿವಿಯ ತುದಿಯ ಮೇಲೆಯೂ, ಅವರವರ ಬಲಗೈಯ ಹೆಬ್ಬೆರಳಿಗೂ, ಅವರವರ ಬಲಗಾಲಿನ ಹೆಬ್ಬೆಟ್ಟಿಗೂ ಆ ರಕ್ತವನ್ನು ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.
25 He took the fat, the fat tail, all the fat on the intestines, the liver's long lobe, the two kidneys with their fat, and the right thigh. ಅವನು ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಂಡನು.
26 From the basket of unleavened bread before our Father, he took one cake, one oiled cake, and one wafer, and put them on the fat and the right thigh. ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ ತೆಗೆದುಕೊಂಡು, ಅವುಗಳನ್ನು ಕೊಬ್ಬಿನ ಮೇಲೆಯೂ, ಬಲಭುಜದ ಮೇಲೆಯೂ ಇಟ್ಟನು.
27 He put all these in Aaron's and his sons' hands, and waved them as a wave offering before our Father. ಅದೆಲ್ಲವನ್ನೂ ಆರೋನನ ಕೈಗಳಿಗೆ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಯೆಹೋವ ದೇವರ ಮುಂದೆ ಸಮರ್ಪಣೆಗಾಗಿ ಅವುಗಳನ್ನು ನೈವೇದ್ಯ ಮಾಡಿಸಿದನು.
28 Moses took them from their hands and burned them on the altar with the burnt offering—an ordination offering, a pleasing aroma, a food offering to our Father. ಆಮೇಲೆ ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಅವುಗಳನ್ನು ಸುಟ್ಟನು. ಅವು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಸುಗಂಧಕರ ಪ್ರತಿಷ್ಠೆಯ ಬಲಿಯಾಗಿದ್ದವು.
29 Moses took the breast and waved it as a wave offering before our Father—Moses's portion from the ram of ordination, as our Father commanded him. ಮೋಶೆಯು ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಿದನು. ಏಕೆಂದರೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಷ್ಠಿತ ಟಗರು ಮೋಶೆಯ ಪಾಲಾಗಿತ್ತು.
30 Moses took some anointing oil and some blood from the altar and sprinkled it on Aaron and his garments, on his sons and their garments. So he consecrated Aaron and his garments, and his sons and their garments with him. ಮೋಶೆಯು ಅಭಿಷೇಕ ತೈಲವನ್ನೂ, ಬಲಿಪೀಠದ ಮೇಲಿರುವ ರಕ್ತವನ್ನೂ ತೆಗೆದುಕೊಂಡು, ಆರೋನನ ಮೇಲೆಯೂ, ಅವನ ಉಡುಪುಗಳ ಮೇಲೆಯೂ ಅವನೊಂದಿಗೆ ಅವನ ಪುತ್ರರ ಮೇಲೆಯೂ, ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು. ಆರೋನನನ್ನೂ, ಅವನ ಉಡುಪುಗಳನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಅವನ ಪುತ್ರರ ಉಡುಪುಗಳನ್ನೂ ಪವಿತ್ರ ಮಾಡಿದನು.
31 Moses told Aaron and his sons, "Boil the meat at the tent of meeting's entrance, eat it there with the bread from the ordination-offering basket, as I commanded: Aaron and his sons will eat it. ಮೋಶೆಯು ಆರೋನನಿಗೂ, ಅವನ ಪುತ್ರರಿಗೂ, “ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ. ಅದನ್ನು ಪ್ರತಿಷ್ಠಿತ ಬುಟ್ಟಿಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು. ನಾನು ಆಜ್ಞಾಪಿಸಿ ಹೇಳಿದಂತೆ, ‘ಆರೋನನು ಮತ್ತು ಅವನ ಪುತ್ರರು ಅದನ್ನು ತಿನ್ನಬೇಕು.’
32 Whatever is left of the meat and the bread, burn it with fire. ಮಾಂಸದಲ್ಲಿಯೂ, ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಡಬೇಕು.
33 Do not leave the Tent of Meeting's entrance for seven days, until your ordination days end, for it takes seven days to ordain you. ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಗೊಳ್ಳುವುದಕ್ಕೆ ಏಳು ದಿವಸ ಹಿಡಿಯುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು.
34 What has been done today, our Father has commanded to be done to make atonement for you. ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ.
35 Stay at the tent of meeting's entrance day and night, seven days, doing what our Father requires, so you do not die—this is what I was commanded." ಆದ್ದರಿಂದ ಏಳು ದಿನಗಳವರೆಗೆ ನೀವು ಸಾಯದಂತೆ ಹಗಲೂ ರಾತ್ರಿ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಆಜ್ಞೆಯನ್ನು ಕೈಗೊಳ್ಳಬೇಕು. ಏಕೆಂದರೆ ಹಾಗೆಯೇ ನನಗೆ ಅಪ್ಪಣೆಯಾಗಿದೆ,” ಎಂದನು.
36 So Aaron and his sons did everything our Father had commanded through Moses. ಹೀಗೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ, ಆರೋನನೂ, ಅವನ ಪುತ್ರರೂ ಮಾಡಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]