Skip to content
The Believer's Library

Biblica® Open Kannada Contemporary Version 2022

Leviticus 9 OKCV

Show OKCV only
Verse × ×
1 On the eighth day Moses called Aaron and his sons and the elders of Israel. ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಮತ್ತು ಇಸ್ರಾಯೇಲಿನ ಹಿರಿಯರನ್ನೂ ಕರೆದನು.
2 He told Aaron, "Take a bull calf for yourself as a sin offering, a ram as a burnt offering, both without defect, and offer them before our Father. ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು.
3 Tell the Israelites: Take a male goat for a sin offering, and a yearling calf and lamb, without defect, for a burnt offering. ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ: ‘ಪಾಪ ಪರಿಹಾರದ ಬಲಿಗಾಗಿ ಹೋತವನ್ನೂ ದಹನಬಲಿಗಾಗಿ ಕಳಂಕರಹಿತ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿಯನ್ನೂ ತೆಗೆದುಕೊಳ್ಳಬೇಕು.
4 An ox and a ram for a peace offering, to sacrifice before our Father, plus a grain offering mixed with oil—for today our Father will appear to you." ಯೆಹೋವ ದೇವರ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಾಗಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆಹಾರದ ಬಲಿ ಎಣ್ಣೆಯೊಂದಿಗೆ ಬೆರೆತಿರಬೇಕು. ಏಕೆಂದರೆ ಈ ದಿನವೇ ಯೆಹೋವ ದೇವರು ನಿಮಗೆ ಕಾಣಿಸಿಕೊಳ್ಳುವರು,’ ” ಎಂದನು.
5 They brought what Moses commanded to the tent of meeting's entrance; the whole assembly drew near and stood before our Father. ಅವರು ಮೋಶೆಯು ಆಜ್ಞಾಪಿಸಿದವುಗಳನ್ನು ದೇವದರ್ಶನದ ಗುಡಾರದ ಮುಂದೆ ತಂದರು. ಸಮೂಹವೆಲ್ಲವೂ ಹತ್ತಿರ ಬಂದು ಯೆಹೋವ ದೇವರ ಮುಂದೆ ನಿಂತಿತು.
6 Moses said, "Do what our Father commanded, so the glory of our Father will appear to you." ಮೋಶೆ ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ ಸಂಗತಿಯು ಇದೇ. ಇದನ್ನು ನೀವು ಮಾಡಿರಿ. ಯೆಹೋವ ದೇವರ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವುದು,” ಎಂದನು.
7 Moses told Aaron, "Come to the altar. Offer your sin offering and burnt offering, atone for yourself and the people. Offer the people's offering and atone for them, as our Father commanded." ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು.
8 So Aaron approached the altar and slaughtered the sin-offering calf, which was for himself. ಆದ್ದರಿಂದ ಆರೋನನು ಬಲಿಪೀಠದ ಕಡೆಗೆ ಹೋಗಿ, ತನಗಾಗಿ ಪಾಪ ಪರಿಹಾರದ ಬಲಿಯಾದ ಕರುವನ್ನು ವಧಿಸಿದನು.
9 Aaron's sons brought him the blood; he dipped his finger in it, put it on the altar's horns, and poured the rest at its base. ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು.
10 But he burned the sin offering's fat, kidneys, and liver lobe on the altar, as our Father commanded Moses. ಅದರ ಪಾಪ ಪರಿಹಾರದ ಬಲಿಯ ಕೊಬ್ಬು, ಮೂತ್ರಪಿಂಡಗಳು ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬು, ಇವುಗಳನ್ನು ಅವನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ, ಬಲಿಪೀಠದ ಮೇಲೆ ಸುಟ್ಟನು.
11 He burned the flesh and the skin with fire outside the camp. ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
12 He killed the burnt offering. Aaron's sons handed him the blood, and he splashed it against the altar's sides. ಅವನು ದಹನಬಲಿಯನ್ನು ವಧಿಸಿದಾಗ, ಆರೋನನ ಪುತ್ರರು ಅವನಿಗೆ ರಕ್ತವನ್ನು ತಂದು ಕೊಟ್ಟರು. ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.
13 They handed him the burnt offering in pieces, with the head, and he burned them on the altar. ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದು ಕೊಡಲು, ಅವನು ಅವುಗಳನ್ನು ಬಲಿಪೀಠದ ಮೇಲೆ ಸುಟ್ಟನು.
14 He washed the intestines and legs, burning them on the altar with the burnt offering. ಅವನು ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು, ಅವುಗಳನ್ನು ದಹನಬಲಿಯ ಜೊತೆ ಮೇಲಿನ ಬಲಿಪೀಠದ ಮೇಲೆ ಸುಟ್ಟನು.
15 Then he brought the people's offering: took their sin-offering goat, slaughtered it, and offered it for sin, like the first. ಅದಾದ ಮೇಲೆ ಆರೋನನು ಜನರಿಗಾಗಿ ಅರ್ಪಿಸಿದ ಬಲಿಯನ್ನು ತಂದು, ಹೋತವನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಪರಿಹಾರದ ಬಲಿಯಾಗಿರುವುದನ್ನು ವಧಿಸಿ, ಮೊದಲನೆಯದರ ಹಾಗೆ ಅದನ್ನು ಸಮರ್ಪಿಸಿದನು.
16 He presented the burnt offering and offered it as prescribed. ಅವನು ದಹನಬಲಿಯನ್ನು ತಂದು, ಅದನ್ನು ವಿಧಿಬದ್ಧವಾಗಿ ಸಮರ್ಪಿಸಿದನು.
17 He brought the grain offering, took a handful, and burned it on the altar, besides the morning burnt offering. ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು.
18 He slaughtered the ox and the ram, the people's peace offering sacrifice, and Aaron's sons brought him the blood, which he threw against the altar's sides. ಅವನು ಜನರಿಗಾಗಿದ್ದ ಹೋರಿ ಮತ್ತು ಟಗರನ್ನು ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಅವನ ಬಳಿಗೆ ತರಲು, ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.
19 But the fat of the ox and ram: the fat tail, fat covering, kidneys, and long liver lobe, ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಹಿಂಭಾಗದ ಕೊಬ್ಬನ್ನೂ ಮತ್ತು ಕರುಳುಗಳ ಸುತ್ತಲಿನ ಕೊಬ್ಬನ್ನೂ ಮೂತ್ರಪಿಂಡಗಳ ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬನ್ನೂ
20 they placed the fat portions on the breasts, and he burned the fat portions on the altar. ಕೊಬ್ಬನ್ನು ಎದೆಯ ಭಾಗಗಳ ಮೇಲೆ ಇಡಲು, ಆರೋನನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಟ್ಟನು.
21 But Aaron waved the breasts and the right thigh as a wave offering before our Father, as Moses had commanded. ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.
22 Aaron raised his hands toward the people and blessed them, then came down from making the sin, burnt, and peace offerings. ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಮತ್ತು ಸಮಾಧಾನದ ಬಲಿಯನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
23 Moses and Aaron entered the tent of meeting, came out, and blessed the people; the glory of our Father appeared to all the people. ಮೋಶೆಯೂ ಆರೋನನೂ ದೇವದರ್ಶನದ ಗುಡಾರದ ಒಳಗೆ ಹೋಗಿ, ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವ ದೇವರ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.
24 Fire came from our Father's presence and consumed the burnt offering and fat on the altar. All the people saw it, shouted for joy, and fell facedown. ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]