Skip to content
The Believer's Library

Biblica® Open Kannada Contemporary Version 2022

Luke 1 OKCV

Show OKCV only
Verse × ×
1 Since many have undertaken to compile an ordered account of what has been accomplished among us. ಸನ್ಮಾನ್ಯ ಥೆಯೊಫಿಲರೇ, ನಮ್ಮ ಮಧ್ಯದಲ್ಲಿ ನಡೆದಿರುವ ಘಟನೆಗಳ ವರದಿಯನ್ನು ಬರೆದಿಡಲು ಅನೇಕರು ಪ್ರಯತ್ನಿಸಿದ್ದಾರೆ.
2 Just as eyewitnesses from the beginning and servants of the word handed these accounts to us, ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ.
3 I too, having traced everything accurately from the start, decided to write it in order for you, most excellent Theophilus, ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.
4 so that you may know the certainty of the things you have been taught. ಹೀಗೆ ನಿಮಗೆ ಬೋಧಿಸಿರುವ ವಿಷಯಗಳು ಖಚಿತವೆಂದು ನಿಮಗೆ ತಿಳಿದುಬರುವುದು.
5 In the days of Herod, king of Judea, a priest named Zechariah was in Abijah's priestly division. His wife Elizabeth descended from Aaron. ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು.
6 They were both righteous before our Father, walking blamelessly in all his commandments and ordinances. ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.
7 But they had no child, because Elizabeth was barren, and both were very old. ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು.
8 Now while he was serving as priest before our Father when his division was on duty, ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ,
9 by priestly custom, lot chose him to enter his sanctuary and burn incense. ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.
10 And the whole crowd of the people were praying outside at the hour of incense. ಧೂಪಾರ್ಪಣೆಯ ಸಮಯದಲ್ಲಿ ಸೇರಿದ ಜನರೆಲ್ಲರೂ ಹೊರಗೆ ಪ್ರಾರ್ಥಿಸುತ್ತಿದ್ದರು.
11 Then an angel of our Father appeared to him, standing at the right of the altar of incense. ಆಗ ಧೂಪವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ, ಕರ್ತದೇವರ ದೂತನು ಅವನಿಗೆ ಕಾಣಿಸಿಕೊಂಡನು.
12 Zechariah was shaken when he saw him, and fear came over him. ಜಕರೀಯನು ದೂತನನ್ನು ಕಂಡು, ಚಕಿತಗೊಂಡು ಭಯಭ್ರಾಂತನಾದನು.
13 The angel said to him, "Don't be afraid, Zechariah—your prayer has been heard. Your wife Elizabeth will bear you a son; name him John. ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು.
14 You will have joy and gladness; many will rejoice at his birth. ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು,
15 He will be great before our Father, must never drink wine or other alcoholic drinks, and he will be filled with the Holy Spirit even from his mother's womb. ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.
16 And he will turn many of the children of Israel back to their Father. ಅವನು ಇಸ್ರಾಯೇಲರಲ್ಲಿ ಅನೇಕರನ್ನು ಅವರ ಕರ್ತದೇವರ ಕಡೆಗೆ ತಿರುಗಿಸುವನು.
17 He will go before our Father in Elijah's spirit and power, turning fathers' hearts to their children, and the disobedient to the wisdom of the righteous, to prepare a people ready for our Father." ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.
18 Zechariah said to the angel, "How will I know this? I'm old, and my wife is well along in years." ಜಕರೀಯನು ಆ ದೇವದೂತನಿಗೆ, “ಇದನ್ನು ನಾನು ಯಾವುದರಿಂದ ತಿಳಿದುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯ ಮೀರಿದವಳು,” ಎಂದನು.
19 The angel answered him, "I am Gabriel, who stands in our Father's presence, sent to speak to you and bring you this good news. ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.
20 And now you will be silent, unable to speak, until the day these things happen, because you did not believe my words, which will come true in their time." ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು.
21 Meanwhile the people waited for Zechariah, wondering why he stayed so long in the sanctuary. ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
22 When he came out, he could not speak to them, and they knew he had seen a vision in the sanctuary. He kept motioning to them and stayed mute. ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.
23 And when his days of service were ended, he went home. ತನ್ನ ಸೇವೆಯ ದಿನಗಳು ಮುಗಿದ ನಂತರ, ಜಕರೀಯನು ತನ್ನ ಮನೆಗೆ ಹೊರಟುಹೋದನು.
24 After these days his wife Elizabeth became pregnant, and for five months she kept herself hidden, saying, ಕೆಲವು ದಿನಗಳಾದ ಮೇಲೆ, ಅವನ ಹೆಂಡತಿ ಎಲಿಸಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು.
25 "This is what our Father did for me, in the days he looked on me, to remove my disgrace among people." ಅವಳು, “ಜನರಲ್ಲಿ ನನಗಿದ್ದ ಅವಮಾನವನ್ನು ತೆಗೆದುಹಾಕುವುದಕ್ಕಾಗಿ ಕರ್ತದೇವರು ನನ್ನ ಮೇಲೆ ದಯೆತೋರಿಸಿ ಈ ದಿನಗಳಲ್ಲಿ ನನಗೆ ಹೀಗೆ ಮಾಡಿದ್ದಾರೆ,” ಎಂದು ಹೇಳಿದಳು.
26 In month six our Father sent the angel Gabriel to a Galilee town called Nazareth, ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ಗಲಿಲಾಯ ಪ್ರಾಂತದ ನಜರೇತೆಂಬ ಊರಿಗೆ, ದೇವರು ಗಬ್ರಿಯೇಲನೆಂಬ ದೇವದೂತನನ್ನು,
27 to a virgin engaged to a man named Joseph, of the house of David; the virgin's name was Mary. ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು.
28 And he came to her and said, "Greetings, favored one! Our Father is with you." ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು.
29 But she was greatly troubled by his words, and wondered what kind of greeting this might be. ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು.
30 The angel said to her, "Don't be afraid, Mary, for you have found favor with our Father. ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ.
31 You will conceive in your womb and bear a son, and you will call his name Jesus. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು.
32 He will be great and called Son of the Most High, and our Father will give him the throne of his father David, ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.
33 and he will reign over Jacob's house forever; his kingdom will never end." ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು.
34 And Mary said to the angel, "How will this be, since I am a virgin?" ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು.
35 The angel answered her, "The Holy Spirit will come over you, and the Most High's power will shadow you; so the holy child born will be called the Son of our Father. ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.
36 Look, your relative Elizabeth has also conceived a son in her old age—this is the sixth month for her called barren. ನಿನ್ನ ಬಂಧು ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಒಬ್ಬ ಮಗನನ್ನು ಹೆರಲಿದ್ದಾಳೆ. ಬಂಜೆಯಾಗಿದ್ದ ಆಕೆಗೆ ಇದು ಆರನೆಯ ತಿಂಗಳು.
37 For nothing will be impossible with our Father." ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.
38 Mary said, "I am the servant of our Father; let it happen to me as you said." Then the angel left her. ಮರಿಯಳು, “ಇಗೋ ನಾನು ಕರ್ತದೇವರ ದಾಸಿ, ನಿನ್ನ ತಕ್ಕ ಮಾತಿನಂತೆ ನನಗಾಗಲಿ,” ಎಂದಳು. ಆಗ ದೇವದೂತನು ಆಕೆಯ ಬಳಿಯಿಂದ ಹೊರಟುಹೋದನು.
39 In those days Mary got up and hurried to the hill country, to a town in Judah, ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು.
40 and she entered the house of Zechariah and greeted Elizabeth. ಅಲ್ಲಿ ಜಕರೀಯನ ಮನೆಯನ್ನು ಪ್ರವೇಶಿಸಿ, ಎಲಿಸಬೇತಳನ್ನು ವಂದಿಸಿದಳು.
41 When Elizabeth heard Mary's greeting, her baby leaped in her womb, and she was filled with the Holy Spirit. ಮರಿಯಳ ವಂದನೆಯನ್ನು ಕೇಳಿದಾಗ, ಎಲಿಸಬೇತಳ ಗರ್ಭದಲ್ಲಿದ್ದ ಕೂಸು ನಲಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮ ಭರಿತಳಾಗಿ
42 She cried out with a loud voice, "Blessed are you among women, blessed is the fruit of your womb! ಮಹಾಧ್ವನಿಯಿಂದ: “ಸ್ತ್ರೀಯರಲ್ಲಿ ನೀನು ಧನ್ಯಳೇ, ನಿನ್ನಲ್ಲಿ ಹುಟ್ಟುವ ಶಿಶುವೂ ಆಶೀರ್ವಾದ ಹೊಂದಿದ್ದು!
43 And why is this granted to me, that the mother of my Lord should come to me? ನನ್ನ ಕರ್ತದೇವರ ತಾಯಿಯು, ನನ್ನ ಬಳಿಗೆ ಬರುವಷ್ಟು ನಾನು ದಯೆ ಹೊಂದಿದ್ದು ಏಕೆ?
44 For the moment I heard your greeting, the baby in my womb leaped for joy. ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿಗಳಲ್ಲಿ ಬಿದ್ದ ಕೂಡಲೇ, ಶಿಶುವು ನನ್ನ ಗರ್ಭದಲ್ಲಿ ಉಲ್ಲಾಸದಿಂದ ನಲಿದಾಡಿತು.
45 Blessed is she who believed that there would be a fulfillment of what our Father spoke to her." ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು.
46 And Mary said, "My soul magnifies our Father, ಆಗ ಮರಿಯಳು ಹೀಗೆ ಹೇಳಿದ್ದು: “ನನ್ನ ಪ್ರಾಣವು ಕರ್ತದೇವರನ್ನು ಸ್ತುತಿಸುತ್ತದೆ,
47 and my spirit rejoices in our Father, my Savior, ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ.
48 for he has looked on the humble estate of his servant. For from now on all generations will call me blessed; ದೇವರು ತಮ್ಮ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ. ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು,
49 for the Mighty One has done great things for me, and holy is his name. ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ, ಅವರ ಹೆಸರು ಪವಿತ್ರವಾದದ್ದು.
50 And his mercy is for those who fear him from generation to generation. ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.
51 He has shown strength with his arm; he has scattered the proud in the thoughts of their hearts; ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ; ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ.
52 he has brought down the mighty from their thrones and lifted up the humble; ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ, ದೀನರನ್ನು ಮೇಲಕ್ಕೆ ಎತ್ತಿದ್ದಾರೆ.
53 he has filled the hungry with good things, and the rich he has sent away empty. ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ, ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾರೆ.
54 He has helped his servant Israel, in remembrance of his mercy, ನಮ್ಮ ಪಿತೃಗಳಾದ ಅಬ್ರಹಾಮನಿಗೂ ಅವನ ಸಂತತಿಗೂ ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.”
55 just as he spoke to our fathers, to Abraham and to his offspring forever." Not in this edition
56 And Mary remained with her about three months and then returned to her home. ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಜೊತೆಯಲ್ಲಿದ್ದು, ಅನಂತರ ತನ್ನ ಮನೆಗೆ ಹಿಂತಿರುಗಿ ಹೋದಳು.
57 Now the time came for Elizabeth to give birth, and she bore a son. ಎಲಿಸಬೇತಳಿಗೆ ಹೆರಿಗೆಯ ಕಾಲ ಬಂದಾಗ, ಆಕೆಯು ಒಬ್ಬ ಮಗನನ್ನು ಹೆತ್ತಳು.
58 Her neighbors and relatives heard our Father had shown her great mercy, and rejoiced with her. ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು.
59 On the eighth day they came to circumcise the child, and were going to call him Zechariah after his father, ಅವರು ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸುವುದಕ್ಕಾಗಿ ಬಂದು, ಅವನ ತಂದೆಯ ಹೆಸರಿನಂತೆ ಮಗನನ್ನು ಜಕರೀಯನೆಂದು ನಾಮಕರಣ ಮಾಡಲಿದ್ದರು.
60 but his mother answered, "No; he will be called John." ಆದರೆ ಅದಕ್ಕೆ ಶಿಶುವಿನ ತಾಯಿಯು ಉತ್ತರವಾಗಿ, “ಹಾಗಲ್ಲ! ಅವನಿಗೆ ‘ಯೋಹಾನ’ ಎಂದು ಹೆಸರಿಡಬೇಕು,” ಎಂದಳು.
61 And they said to her, "None of your relatives is called by this name." ಬಂದಿದ್ದವರು ಆಕೆಗೆ, “ನಿನ್ನ ಬಂಧುಬಳಗದವರಲ್ಲಿ ಆ ಹೆಸರಿನವರು ಒಬ್ಬರೂ ಇಲ್ಲವಲ್ಲಾ,” ಎಂದರು.
62 And they made signs to his father, asking what Zechariah wanted the child to be called. ಶಿಶುವನ್ನು ಯಾವ ಹೆಸರಿನಿಂದ ಕರೆಯಬೇಕೆಂದು, ಅವನ ತಂದೆಗೆ ಅವರು ಸನ್ನೆಮಾಡಿದರು.
63 He asked for a tablet and wrote, "His name is John." And everyone was amazed. ಆಗ ಜಕರೀಯನು ಒಂದು ಬರೆಯುವ ಹಲಗೆಯನ್ನು ಕೇಳಿ, “ಶಿಶುವಿನ ಹೆಸರು ಯೋಹಾನ,” ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
64 And immediately his mouth was opened and his tongue loosed, and he spoke, blessing our Father. ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು.
65 Fear fell on all their neighbors, and all these things were talked about throughout Judea's hill country. ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು.
66 And all who heard kept these things in their hearts, saying, "What then will this child become?" For our Father's hand was with him. ಕೇಳಿದವರೆಲ್ಲರೂ ವಿಸ್ಮಯಗೊಂಡು, “ಈ ಮಗುವು ಎಂಥವನಾಗುವನೋ?” ಎಂದು ತಮ್ಮ ಮನಸ್ಸಿನಲ್ಲಿ ಪ್ರಶ್ನಿಸಿಕೊಂಡರು. ಕರ್ತದೇವರ ಹಸ್ತವು ಈ ಮಗುವಿನ ಮೇಲೆ ಇತ್ತು.
67 And his father Zechariah was filled with the Holy Spirit and prophesied, saying, ಆಗ ಮಗುವಿನ ತಂದೆ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:
68 "Blessed be our Father of Israel, for he has visited and redeemed his people, “ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.
69 and has raised up a mighty Savior for us in the house of his servant David, ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ.
70 as he spoke through the mouth of his holy prophets long ago, Not in this edition
71 that we should be saved from our enemies and from the hand of all who hate us; ಇದನ್ನು, ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ದ್ವೇಷಮಾಡುವವರ ಕೈಯಿಂದಲೂ ರಕ್ಷಣೆ ಹೊಂದುವಂತೆಯೂ
72 to show the mercy promised to our fathers and to remember his holy covenant, ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ
73 the oath that he swore to our father Abraham, to grant us, Not in this edition
74 that we, being delivered from the hand of our enemies, might serve him without fear, ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ
75 in holiness and righteousness before him all our days. ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ದೇವರ ಮುಂದೆ ಪವಿತ್ರತೆಯಿಂದಲೂ ನೀತಿಯಿಂದಲೂ ಅವರನ್ನೇ ಸೇವಿಸುವವರಾಗುವಂತೆಯೂ ಈ ಪ್ರಕಾರ ಮಾಡಿದ್ದಾರೆ.
76 And you, child, will be called the prophet of the Most High; for you will go before the Lord to prepare his ways, “ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.
77 to give his people the knowledge of salvation through the forgiveness of their sins, ನೀನು ಜನರ ಪಾಪಕ್ಷಮಾಪಣೆಯ ಮೂಲಕ ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ,
78 because of the tender mercy of our Father, by which the sunrise from on high will visit us, ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ
79 to give light to those who sit in darkness and in the shadow of death, to guide our feet into the way of peace." ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”
80 The child grew, became strong in spirit, and lived in the wilderness until the day he appeared publicly to Israel. ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]