Skip to content
The Believer's Library

Biblica® Open Kannada Contemporary Version 2022

Luke 17 OKCV

Show OKCV only
Verse × ×
1 He told his disciples, "Offenses are sure to come, but woe to the one they come through! ಯೇಸು ತಮ್ಮ ಶಿಷ್ಯರಿಗೆ: “ಜನರಿಗೆ ಪಾಪದ ಶೋಧನೆಗಳು ಬಂದೇ ಬರುತ್ತವೆ, ಆದರೆ ಅವು ಯಾರಿಂದ ಬರುತ್ತವೋ ಅವರಿಗೆ ಕಷ್ಟ.
2 Better for him to have a millstone hung around his neck and be thrown into the sea than to cause one of these little ones to stumble. ಅಂಥವರು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ನಡೆಸುವುದಕ್ಕಿಂತ ಅವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದೊಳಗೆ ಬಿಸಾಡುವುದು ಉತ್ತಮವಾಗಿರುವುದು.
3 "Watch yourselves. If your brother sins, rebuke him, and if he repents, forgive him. ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಿಂದಿರಿ. “ನಿನ್ನ ಸಹೋದರನು ಅಥವಾ ಸಹೋದರಿ ನಿನಗೆ ವಿರೋಧವಾಗಿ ಪಾಪಮಾಡಿದರೆ, ಅವರನ್ನು ಗದರಿಸು; ಅವರು ಪಶ್ಚಾತ್ತಾಪಪಟ್ಟರೆ, ಅವರನ್ನು ಕ್ಷಮಿಸು.
4 If he sins against you seven times a day, and seven times returns saying, 'I repent,' forgive him." ಅವರು ಒಂದು ದಿನದಲ್ಲಿ ಏಳು ಸಾರಿ ಪಾಪಮಾಡಿ, ಏಳು ಸಾರಿಯೂ ನಿನ್ನ ಬಳಿಗೆ ಬಂದು, ‘ನಾನು ಪಶ್ಚಾತ್ತಾಪಪಡುತ್ತೇನೆ,’ ಎಂದು ಹೇಳಿದರೆ ನೀನು ಅವರನ್ನು ಕ್ಷಮಿಸಬೇಕು,” ಎಂದರು.
5 The apostles said to the Lord, "Increase our faith!" ಆಗ ಅಪೊಸ್ತಲರು ಕರ್ತದೇವರಿಗೆ, “ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದರು.
6 The Lord said, "If you had faith like a mustard seed, you could tell this mulberry tree, 'Be uprooted and planted in the sea,' and it would obey you. ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.
7 Which of you with a servant plowing or tending sheep tells him, coming in from the field, 'Come at once, recline at the table'? “ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಕೆಲಸದವನಿರಲಾಗಿ, ಅವನು ಹೊಲದ ಕೆಲಸ ಅಥವಾ ಕುರಿ ಮೇಯಿಸಿ ಮನೆಗೆ ಬಂದ ಕೂಡಲೇ ಯಜಮಾನನು ಕೆಲಸದವನಿಗೆ, ‘ಬಾ ಊಟಕ್ಕೆ ಕುಳಿತುಕೋ,’ ಎಂದು ಹೇಳುವುದುಂಟೇ?
8 Won't he instead say, 'Get my supper ready, dress to serve me while I eat and drink, then you may eat and drink'? ಹಾಗೆ ಹೇಳದೆ, ‘ನೀನು ಊಟ ತಯಾರುಮಾಡಿ, ನೀನೂ ಸಿದ್ಧವಾಗಿ, ನಾನು ತಿಂದು ಕುಡಿಯುವ ತನಕ ನನ್ನ ಸೇವೆಮಾಡು; ಆಮೇಲೆ ನೀನು ಊಟಮಾಡು,’ ಎಂದು ಅವನಿಗೆ ಹೇಳುವಿರಲ್ಲವೇ?
9 "Does he thank the servant because he did what he was commanded? ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಕೆಲಸದವನು ಮಾಡಿದ್ದಕ್ಕೆ ಯಜಮಾನನು ಅವನಿಗೆ ಕೃತಜ್ಞತೆ ಸಲ್ಲಿಸುವನೋ?
10 So you too, having done all you were commanded, say: 'We are unworthy servants; we've only done our duty.'" ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’ ” ಎಂದು ಹೇಳಿದರು.
11 On the way to Jerusalem he was passing along between Samaria and Galilee. ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ, ಸಮಾರ್ಯ ಮತ್ತು ಗಲಿಲಾಯ ಪ್ರಾಂತಗಳ ಮಧ್ಯದಲ್ಲಿದ್ದ ಹಳ್ಳಿಯ ಮಾರ್ಗವಾಗಿ ಪ್ರಯಾಣಮಾಡಿದರು.
12 As he entered a village, ten men who had leprosy met him. They stood at a distance, ಯೇಸು ಒಂದು ಹಳ್ಳಿಯನ್ನು ಪ್ರವೇಶಿಸಿದಾಗ, ಹತ್ತು ಮಂದಿ ಕುಷ್ಠರೋಗಿಗಳು ಯೇಸುವಿನ ಕಡೆಗೆ ಬಂದು ದೂರದಲ್ಲಿ ನಿಂತುಕೊಂಡು,
13 and called out loudly, "Jesus, Master, have mercy on us!" “ಯೇಸುವೇ, ಗುರುವೇ, ನಮ್ಮನ್ನು ಕರುಣಿಸು!” ಎಂದು ತಮ್ಮ ಧ್ವನಿಯೆತ್ತಿ ಕೂಗಿದರು.
14 Seeing them, he said, "Go, show yourselves to the priests." As they went, they were made clean. ಯೇಸು ಅವರನ್ನು ನೋಡಿ, “ಹೋಗಿ, ಯಾಜಕರಿಗೆ ನಿಮ್ಮನ್ನು ತೋರಿಸಿಕೊಳ್ಳಿರಿ,” ಎಂದರು. ಅವರು ಹೋಗುತ್ತಿರುವಾಗಲೇ ಸ್ವಸ್ಥರಾದರು.
15 One of them, seeing he was healed, turned back, praising our Father loudly, ಅವರಲ್ಲಿ ಒಬ್ಬನು, ತಾನು ಸ್ವಸ್ಥವಾದದ್ದನ್ನು ಕಂಡು, ಮಹಾಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಹಿಂದಿರುಗಿ ಬಂದು,
16 and he fell on his face at Jesus' feet, giving him thanks. Now he was a Samaritan. ಯೇಸುವಿನ ಪಾದಕ್ಕೆ ಅಡ್ಡಬಿದ್ದು, ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದನು. ಅವನೋ ಸಮಾರ್ಯದವನಾಗಿದ್ದನು.
17 Jesus said, "Weren't ten made clean? Where are the nine? ಯೇಸು ಅವನಿಗೆ, “ಆ ಎಲ್ಲಾ ಹತ್ತು ಮಂದಿ ಸ್ವಸ್ಥರಾದರಲ್ಲವೆ? ಉಳಿದ ಒಂಬತ್ತು ಮಂದಿ ಎಲ್ಲಿ?
18 Was no one found to return and give glory to our Father except this foreigner?" ದೇವರನ್ನು ಮಹಿಮೆಪಡಿಸುವುದಕ್ಕೆ ಈ ವಿದೇಶಿಯೇ ಹೊರತು ಯಾರೂ ಹಿಂದಿರುಗಲಿಲ್ಲವೇ?”
19 And he said to him, "Rise and go; your faith has made you well." ಎಂದು ಹೇಳಿ ಅವನಿಗೆ, “ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.
20 Asked by the Pharisees when the kingdom of our Father would come, he answered them, "The kingdom of our Father does not come with observation, ಒಂದು ದಿನ, ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಯೇಸುವನ್ನು ಕೇಳಲು, ಅವರಿಗೆ ಉತ್ತರವಾಗಿ ಯೇಸು, “ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವುದಿಲ್ಲ,
21 nor will they say, 'Look, here!' or 'There!' For the kingdom of our Father is among you." ‘ಇಗೋ ಇಲ್ಲಿದೆ,’ ಇಲ್ಲವೆ ‘ಅಗೋ ಅಲ್ಲಿದೆ,’ ಎಂದು ಹೇಳುವುದಕ್ಕಾಗುವುದಿಲ್ಲ ಏಕೆಂದರೆ ದೇವರ ರಾಜ್ಯವು ನಿಮ್ಮ ನಡುವೆ ಇದೆ,” ಎಂದರು.
22 He told the disciples, "Days are coming when you will long to see one of the days of the Son of Man, and you won't see it. ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿ ಒಂದನ್ನು ಕಾಣಬೇಕೆಂದು ನೀವು ಬಯಸುವ ಕಾಲ ಬರುತ್ತದೆ, ಆದರೂ ನೀವು ಅದನ್ನು ಕಾಣುವುದಿಲ್ಲ.
23 They will say to you, 'Look, there!' or 'Look, here!' Don't go, don't chase after them. ಜನರು ನಿಮಗೆ, ‘ಇಲ್ಲಿ ಇದ್ದಾನೆ!’ ಇಲ್ಲವೆ, ‘ಅಲ್ಲಿ ಇದ್ದಾನೆ’ ಎಂದು ಹೇಳಿದರೆ ಅವರ ಹಿಂದೆ ಓಡಬೇಡಿರಿ.
24 For as lightning flashes and lights the sky from one edge to the other, so the Son of Man will be in his day. ಏಕೆಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಪುತ್ರನಾದ ನಾನು ಬರುವ ದಿನದಲ್ಲಿ ಕಾಣಿಸಿಕೊಳ್ಳುವೆನು.
25 But first he must suffer many things and be rejected by this generation. ಆದರೆ ನಾನು ಮೊದಲು ಅನೇಕ ಕಷ್ಟಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕಾರ ಹೊಂದುವುದು ಅಗತ್ಯವಾಗಿದೆ.
26 As Noah's days were, so will the Son of Man's days be. “ನೋಹನ ದಿವಸಗಳು ಇದ್ದಂತೆಯೇ, ಅದೇ ರೀತಿಯಲ್ಲಿ ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿಯೂ ಇರುವುದು.
27 They ate, drank, married, and were given in marriage, until the day Noah entered the ark, and the flood came and destroyed them all. ನೋಹನು ನಾವೆಯಲ್ಲಿ ಸೇರಿದ ದಿನದವರೆಗೂ ಅವರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ನಾವೆಯ ಹೊರಗಡೆ ಇದ್ದವರೆಲ್ಲರನ್ನು ನಾಶಮಾಡಿತು.
28 It was the same in Lot's days: eating, drinking, buying, selling, planting, building, “ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಜನರೆಲ್ಲರೂ ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
29 but the day Lot left Sodom, fire and sulfur rained from heaven and destroyed them all, ಆದರೆ ಲೋಟನು ಸೊದೋಮಿನಿಂದ ತೆರಳಿದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಮಾಡಿತು.
30 so will it be on the day when the Son of Man is revealed. “ಮನುಷ್ಯಪುತ್ರನಾದ ನನ್ನ ಪ್ರತ್ಯಕ್ಷತೆಯ ದಿನದಲ್ಲಿಯೂ ಹಾಗೆ ಇರುವುದು.
31 On that day, whoever is on the roof with goods inside must not go down for them; likewise, whoever is in the field must not turn back. ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು, ಮನೆಯಲ್ಲಿದ್ದ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬರಬಾರದು. ಹಾಗೆಯೇ, ಹೊಲದಲ್ಲಿದ್ದವನು ಹಿಂದಿರುಗಿ ಬರಬಾರದು.
32 Remember Lot's wife. ಲೋಟನ ಹೆಂಡತಿಯನ್ನು ಜ್ಞಾಪಕಮಾಡಿಕೊಳ್ಳಿರಿ!
33 Whoever seeks to preserve his life will lose it, but whoever loses his life will keep it. ಯಾರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ಪ್ರಯತ್ನಿಸುವರೋ ಅವರು ಅದನ್ನು ಕಳೆದುಕೊಳ್ಳುವರು ಮತ್ತು ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಕಾಪಾಡಿಕೊಳ್ಳುವರು.
34 I tell you, that night two will be in one bed: one will be taken, and the other left. ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.
35 There will be two women grinding together; one will be taken and the other left." ಇಬ್ಬರು ಹೆಂಗಸರು ಜೊತೆಯಾಗಿ ಕಾಳುಬೀಸುತ್ತಿರುವರು; ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬಳನ್ನು ಬಿಡಲಾಗುವುದು.
36 Not in this edition ಇಬ್ಬರು ಹೊಲದಲ್ಲಿರುವರು. ಒಬ್ಬರನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬರನ್ನು ಬಿಡಲಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
37 They asked, "Where, Lord?" He said, "Wherever a corpse lies, the vultures will gather there." ಅವರು ಯೇಸುವಿಗೆ, “ಕರ್ತದೇವರೇ, ಇದು ಎಲ್ಲಿ ನಡೆಯುವುದು?” ಎಂದು ಕೇಳಲು ಯೇಸು ಅವರಿಗೆ, “ಹೆಣ ಎಲ್ಲಿದೆಯೋ, ಅಲ್ಲಿ ಹದ್ದುಗಳು ಬಂದು ಸೇರುತ್ತವೆ,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]