Skip to content
The Believer's Library

Biblica® Open Kannada Contemporary Version 2022

Luke 22 OKCV

Show OKCV only
Verse × ×
1 Now the Feast of Bread Without Yeast, called Passover, was approaching. ಪಸ್ಕವೆಂಬ, ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸಮೀಪವಾಗಿತ್ತು.
2 The chief priests and the scribes were looking for a way to kill him, because they feared the people. ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
3 Then Satan entered into Judas, the one called Iscariot, who was one of the twelve. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಎಂದು ಕರೆಯಲಾಗುವ ಯೂದನಲ್ಲಿ, ಸೈತಾನನು ಪ್ರವೇಶಿಸಿದನು.
4 He went and conferred with the chief priests and temple officers how he might betray him to them. ಅವನು ಮುಖ್ಯಯಾಜಕರ ಬಳಿಗೂ ದೇವಾಲಯದ ಕಾವಲಧಿಕಾರಿಗಳ ಬಳಿಗೂ ಹೋಗಿ ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಅವರ ಕೂಡ ಚರ್ಚಿಸಿದನು.
5 They were glad and agreed to give him money. ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವುದಕ್ಕೆ ವಾಗ್ದಾನ ಮಾಡಿದರು.
6 He agreed and began looking for an opportunity to betray him to them away from the crowd. ಅವನೂ ಸಮ್ಮತಿಸಿ, ಜನಸಮೂಹವು ಇಲ್ಲದಿರುವಾಗ ಯೇಸುವನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಕಾಯುತ್ತಿದ್ದನು.
7 Then the day of Unleavened Bread arrived, when the Passover lamb had to be sacrificed. ಆಗ ಪಸ್ಕದ ಕುರಿಯು ಬಲಿಕೊಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನ ಬಂದಿತು.
8 Jesus sent Peter and John, saying, "Go prepare the Passover for us to eat." ಯೇಸು ಪೇತ್ರ ಯೋಹಾನರನ್ನು ಕರೆದು, “ನೀವು ಹೋಗಿ ನಮಗೋಸ್ಕರ ಪಸ್ಕಭೋಜನವನ್ನು ಸಿದ್ಧಮಾಡಿರಿ,” ಎಂದರು.
9 They said to him, "Where do you want us to prepare it?" ಅವರು ಯೇಸುವಿಗೆ, “ನಾವು ಎಲ್ಲಿ ಸಿದ್ಧಮಾಡಬೇಕು?” ಎಂದರು.
10 He said, "Once you enter the city, a man carrying a jar of water will meet you. Follow him into the house he enters, ಆಗ ಯೇಸು ಅವರಿಗೆ, “ನೀವು ಪಟ್ಟಣವನ್ನು ಪ್ರವೇಶಿಸಿದಾಗ, ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡಿರುವ ಒಬ್ಬನು ನಿಮ್ಮನ್ನು ಸಂಧಿಸುವನು. ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
11 "and tell the owner of the house, 'The Teacher says to you: Where is the guest room where I may eat the Passover with my disciples?' ನೀವು ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ’ ಎಂದು ಹೇಳಿರಿ.
12 And he will show you a large upper room, furnished; prepare it there." ಅವನು ಕ್ರಮಪಡಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿಯೇ ಪಸ್ಕಭೋಜನ ಸಿದ್ಧಪಡಿಸಿರಿ,” ಎಂದರು.
13 They went and found it just as he had told them, and they prepared the Passover. ಅವರು ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡು, ಪಸ್ಕವನ್ನು ಸಿದ್ಧಮಾಡಿದರು.
14 When the hour came, he reclined at table, and the apostles with him. ನಿಶ್ಚಿತ ಸಮಯ ಬಂದಾಗ ಯೇಸು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕುಳಿತುಕೊಂಡರು.
15 He told them, "I have deeply longed to eat this Passover with you before I suffer. ಆಗ ಯೇಸು ಅವರಿಗೆ, “ನಾನು ಬಾಧೆಯನ್ನು ಅನುಭವಿಸುವುದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕಭೋಜನ ಮಾಡುವುದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.
16 For I tell you, I won't eat it until it's fulfilled in the kingdom of our Father." ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
17 Taking a cup and giving thanks, he said, "Take this and divide it among yourselves. ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು, ಸ್ತೋತ್ರಮಾಡಿ, “ಇದನ್ನು ತೆಗೆದುಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ.
18 For I tell you, from now on I will not drink the vine's fruit until our Father's kingdom comes." ದೇವರ ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ,” ಎಂದರು.
19 He took bread, gave thanks, broke it, and gave it to them, saying, "This is my body, given for you. Do this in memory of me." ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.
20 He did the same with the cup after supper: "This cup is the new covenant in my blood, poured out for you. ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.
21 But look—the hand of the one who betrays me is with me on the table. ಆದರೂ ಇಗೋ, ನನಗೆ ದ್ರೋಹಬಗೆಯುವವನ ಕೈ ನನ್ನ ಕೈಯೊಂದಿಗೆ ಮೇಜಿನ ಮೇಲೆ ಇದೆ.
22 The Son of Man goes as determined, but woe to that man through whom he is handed over!" ನೇಮಕವಾದ ಪ್ರಕಾರ ಮನುಷ್ಯಪುತ್ರನಾದ ನಾನು ಹೊರಟುಹೋಗುತ್ತೇನೆ; ಆದರೆ ನನಗೆ ದ್ರೋಹಬಗೆಯುವವನಿಗೋ ಎಷ್ಟೋ ಕಷ್ಟ!” ಎಂದು ಹೇಳಿದರು.
23 They began asking each other which of them would do this. ಆಗ ಇದನ್ನು ದ್ರೋಹಬಗೆಯುವವನು ಯಾವನು ಎಂದು ಶಿಷ್ಯರು ತಮ್ಮೊಳಗೆ ಪ್ರಶ್ನೆ ಮಾಡಲಾರಂಭಿಸಿದರು.
24 A dispute also arose among them about which of them was the greatest. ಇದಲ್ಲದೆ ತಮ್ಮೊಳಗೆ ಯಾರು ಅತಿ ದೊಡ್ಡವನೆಂಬುದಾಗಿ ಶಿಷ್ಯರಲ್ಲಿ ವಿವಾದವು ಪ್ರಾರಂಭವಾಯಿತು.
25 He said to them, "Kings of nations dominate them, and rulers over them are called benefactors. ಆಗ ಯೇಸು ಅವರಿಗೆ, “ಯೆಹೂದ್ಯರಲ್ಲದವರ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡೆಸುವವರು ಉಪಕಾರಿಗಳು ಎಂದು ಎಣಿಸಿಕೊಳ್ಳುತ್ತಾರೆ.
26 Not so with you: let the greatest among you become like the youngest, the leader like the one serving. ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿ ದೊಡ್ಡವನಾಗಿರುವವನು ಅತಿ ಚಿಕ್ಕವನಂತೆ ಇರಲಿ ಮತ್ತು ಆಳ್ವಿಕೆ ಮಾಡುವವನು ಸೇವೆ ಮಾಡುವವನಂತೆ ಇರಲಿ.
27 Who is greater—the guest at the table or the one serving? The guest, isn't it? Yet I am among you as one who serves. ಯಾರು ದೊಡ್ಡವನು? ಊಟಕ್ಕೆ ಕುಳಿತುಕೊಂಡಿರುವವನೋ ಅಥವಾ ಸೇವೆ ಮಾಡುವವನೋ? ಊಟಕ್ಕೆ ಕುಳಿತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
28 "You are those who have stayed with me in my trials, ನೀವೇ, ನನ್ನ ಕಷ್ಟಗಳಲ್ಲಿ ನನ್ನೊಂದಿಗೆ ನಿಂತವರು.
29 and I confer on you a kingdom, just as my Father conferred one on me, ನನ್ನ ತಂದೆ ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ, ನಾನೂ ನಿಮಗೆ ರಾಜ್ಯವನ್ನು ನೇಮಕ ಮಾಡುತ್ತೇನೆ.
30 so you'll eat and drink at my table in my kingdom, and sit on thrones judging the twelve tribes of Israel." ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
31 "Simon, Simon, listen—Satan has demanded to sift all of you like wheat, “ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.
32 but I prayed for you, that your faith not fail. Once you have turned back, strengthen your brothers." ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.
33 Peter said, "Lord, I'm ready to go with you to prison and death." ಆದರೆ ಅವನು ಯೇಸುವಿಗೆ, “ಕರ್ತದೇವರೇ, ನಾನು ನಿಮ್ಮ ಜೊತೆಯಲ್ಲಿ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.
34 Jesus said, "I tell you, Peter: the rooster won't crow today before you deny three times that you know me." ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು.
35 He asked, "When I sent you without money bag, knapsack, or sandals, did you lack anything?" "Nothing," they said. ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.
36 He said to them, "But now, let the one with a money bag take it, and a knapsack too. Let the one without a sword sell his cloak and buy one. ಆಗ ಯೇಸು ಅವರಿಗೆ, “ಆದರೆ ಈಗ ಹಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಅದರಂತೆಯೇ ಪ್ರಯಾಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಖಡ್ಗಯಿಲ್ಲದವನು ತನ್ನ ಬಟ್ಟೆಯನ್ನು ಮಾರಿ ಅದನ್ನು ಕೊಂಡುಕೊಳ್ಳಲಿ.
37 For I tell you this Scripture must be fulfilled in me: 'He was counted among sinners.' For what is written about me is coming true." ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.
38 They said, "Lord, look, here are two swords." He said to them, "It is enough." ಶಿಷ್ಯರು, “ಕರ್ತದೇವರೇ, ಇಗೋ ಇಲ್ಲಿ ಎರಡು ಖಡ್ಗಗಳಿವೆ,” ಎಂದರು. ಅದಕ್ಕೆ ಯೇಸು ಅವರಿಗೆ, “ಅಷ್ಟು ಸಾಕು,” ಎಂದರು.
39 And he went out, as usual, to the Mount of Olives, and the disciples followed him. ಯೇಸು ಹೊರಗೆ ಬಂದು ತಮ್ಮ ವಾಡಿಕೆಯಂತೆ ಓಲಿವ್ ಗುಡ್ಡಕ್ಕೆ ಹೋದರು. ಯೇಸುವಿನ ಶಿಷ್ಯರೂ ಅವರನ್ನು ಹಿಂಬಾಲಿಸಿದರು.
40 When he reached the place, he told them, "Pray you don't give in to temptation." ಯೇಸು ಆ ಸ್ಥಳದಲ್ಲಿದ್ದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ,” ಎಂದರು.
41 And he withdrew from them about a stone's throw, and knelt down and prayed, ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,
42 saying, "Father, if you are willing, take this cup from me. Yet not my will, but yours, be done." “ತಂದೆಯೇ, ನಿಮ್ಮ ಚಿತ್ತವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸಿ. ಆದರೂ ನನ್ನ ಚಿತ್ತವಲ್ಲ ನಿಮ್ಮ ಚಿತ್ತದಂತೆಯೇ ಆಗಲಿ,” ಎಂದು ಪ್ರಾರ್ಥಿಸಿದರು.
43 And an angel from heaven appeared to him, strengthening him. ಆಗ ಪರಲೋಕದಿಂದ ಒಬ್ಬ ದೇವದೂತನು ಯೇಸುವಿಗೆ ಕಾಣಿಸಿಕೊಂಡು, ಅವರನ್ನು ಬಲಪಡಿಸುತ್ತಾ ಇದ್ದನು.
44 In agony he prayed more intensely; his sweat became like great drops of blood falling down to the ground. ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.
45 When he rose from prayer, he came to the disciples and found them asleep from grief, ಯೇಸು ಪ್ರಾರ್ಥನೆಮಾಡಿ ಎದ್ದ ಮೇಲೆ ತಮ್ಮ ಶಿಷ್ಯರ ಕಡೆಗೆ ಬಂದು, ಅವರು ದುಃಖದಿಂದ ಬಳಲಿ ನಿದ್ರೆ ಮಾಡುತ್ತಿರುವುದನ್ನು ಕಂಡು ಅವರಿಗೆ,
46 he said to them, "Why are you sleeping? Get up and pray, so you don't yield to temptation." “ನೀವು ನಿದ್ರೆ ಮಾಡುವುದು ಏಕೆ? ಶೋಧನೆಗೆ ಒಳಗಾಗದಂತೆ ಎದ್ದು ಪ್ರಾರ್ಥಿಸಿರಿ,” ಎಂದರು.
47 While he was still speaking, a crowd came, led by the one called Judas, one of the twelve. He came up to Jesus to kiss him, ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದ ಯೂದನು ಅವರಿಗೆ ಮುಂದಾಳಾಗಿ ಬಂದು, ಮುದ್ದಿಡುವುದಕ್ಕಾಗಿ ಯೇಸುವನ್ನು ಸಮೀಪಿಸಿದನು.
48 but Jesus said to him, "Judas, would you betray the Son of Man with a kiss?" ಆಗ ಯೇಸು ಅವನಿಗೆ, “ಯೂದಾ, ಮುದ್ದಿನಿಂದ ಮನುಷ್ಯಪುತ್ರನಾದ ನನಗೆ ದ್ರೋಹಮಾಡುತ್ತೀಯೋ?” ಎಂದರು.
49 Seeing what was about to happen, those with him said, "Lord, should we strike with the sword?" ಯೇಸುವಿನ ಸುತ್ತಲಿದ್ದ ಶಿಷ್ಯರು ಮುಂದೆ ಸಂಭವಿಸುವುದನ್ನು ಅರಿತು ಯೇಸುವಿಗೆ, “ಕರ್ತದೇವರೇ, ನಾವು ಖಡ್ಗದಿಂದ ಹೊಡೆಯೋಣವೋ?” ಎಂದು ಕೇಳಿದರು.
50 And one of them struck the servant of the high priest and cut off his right ear. ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು.
51 But Jesus answered, "No more of this!" And he touched the ear and healed him. ಆದರೆ ಯೇಸು, “ಸಾಕು ಇಂಥದ್ದು ಬೇಡ!” ಎಂದು ಹೇಳಿ, ಅವನ ಕಿವಿಯನ್ನು ಮುಟ್ಟಿ ಸ್ವಸ್ಥಮಾಡಿದರು.
52 Then Jesus said to the chief priests, temple officers, and elders who had come out against him, "Have you come out with swords and clubs, as against a robber? ಆಗ ಯೇಸು ತಮ್ಮ ಬಳಿಗೆ ಬಂದಿದ್ದ ಮುಖ್ಯಯಾಜಕರಿಗೂ ದೇವಾಲಯದ ಕಾವಲಾಧಿಕಾರಿಗಳಿಗೂ ಹಿರಿಯರಿಗೂ, “ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬಂದ ಹಾಗೆ ಖಡ್ಗಗಳಿಂದಲೂ ದೊಣ್ಣೆಗಳಿಂದಲೂ ನೀವು ಹೊರಟು ಬಂದಿರುವಿರೋ?
53 Every day I was with you in the temple, and you didn't lay hands on me. But this is your hour, and the authority of darkness." ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.
54 Seizing him, they led him and brought him into the high priest's house; Peter followed at a distance. ಆಗ ಅವರು ಯೇಸುವನ್ನು ಬಂಧಿಸಿ, ಮಹಾಯಾಜಕನ ಭವನಕ್ಕೆ ಕರೆದುಕೊಂಡು ಬಂದರು. ಪೇತ್ರನೋ ದೂರದಿಂದ ಹಿಂಬಾಲಿಸಿದನು.
55 They lit a fire in the middle of the courtyard and sat together; Peter sat among them. ಅವರು ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ, ಅದರ ಸುತ್ತಲೂ ಒಟ್ಟಾಗಿ ಕುಳಿತುಕೊಂಡಾಗ ಪೇತ್ರನೂ ಅವರ ಸಂಗಡ ಸೇರಿ ಕುಳಿತುಕೊಂಡನು.
56 But a servant girl, seeing him sitting facing the light, stared at him and said, "This one too was with him." ಆದರೆ ಒಬ್ಬ ದಾಸಿಯು ಬೆಂಕಿಯ ಬಳಿಯಲ್ಲಿ ಕುಳಿತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ, “ಈ ಮನುಷ್ಯನು ಸಹ ಯೇಸುವಿನ ಸಂಗಡ ಇದ್ದವನು,” ಎಂದಳು.
57 But he denied it, saying, "Woman, I do not know him." ಆದರೆ ಪೇತ್ರನು ಅಲ್ಲಗಳೆದು, “ಅಮ್ಮಾ, ನಾನು ಯೇಸುವನ್ನು ಅರಿಯೆನು,” ಎಂದನು.
58 Shortly after, another saw him and said, "You too are one of them." But Peter said, "Man, I'm not." ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಪೇತ್ರನನ್ನು ಕಂಡು, “ನೀನು ಸಹ ಅವರಲ್ಲಿ ಒಬ್ಬನು,” ಎಂದನು. ಅದಕ್ಕೆ ಪೇತ್ರನು, “ಇಲ್ಲಪ್ಪ, ನಾನಲ್ಲ,” ಎಂದನು.
59 About an hour later, another insisted, "This man was certainly with him, for he's a Galilean too." ಹೆಚ್ಚು ಕಡಿಮೆ ಒಂದು ತಾಸು ಕಳೆದನಂತರ ಮತ್ತೊಬ್ಬನು, “ನಿಜವಾಗಿಯೂ ಇವನು ಸಹ ಯೇಸುವಿನೊಂದಿಗೆ ಇದ್ದವನು. ಏಕೆಂದರೆ ಇವನು ಗಲಿಲಾಯದವನೇ,” ಎಂದನು.
60 But Peter said, "Man, I don't know what you're saying." Immediately, while he was still speaking, the rooster crowed. ಆದರೆ ಪೇತ್ರನು, “ಅಯ್ಯಾ, ನೀನು ಏನು ಹೇಳುತ್ತೀಯೋ ನನಗೆ ಅರ್ಥವಾಗುತ್ತಾಯಿಲ್ಲ,” ಎಂದನು. ಹೀಗೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
61 The Lord turned and looked at Peter. Peter remembered what the Lord had told him: "Before the rooster crows today, you will deny me three times." ಆಗ ಕರ್ತದೇವರು ಹಿಂದಿರುಗಿ ಪೇತ್ರನ ಕಡೆಗೆ ದಿಟ್ಟಿಸಿ ನೋಡಿದರು. “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ,” ಎಂದು ಕರ್ತದೇವರು ತನಗೆ ಹೇಳಿದ್ದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು
62 And he went out and wept bitterly. ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.
63 Now the men who were holding Jesus mocked him as they beat him. ಯೇಸುವನ್ನು ಕಾಯುತ್ತಿದ್ದ ಜನರು, ಹಾಸ್ಯಮಾಡಿ ಅವರನ್ನು ಹೊಡೆದರು.
64 They blindfolded him and kept asking, "Prophesy! Who is it that struck you?" ಇದಲ್ಲದೆ ಅವರು ಯೇಸುವಿನ ಕಣ್ಣಿಗೆ ಬಟ್ಟೆ ಕಟ್ಟಿ, ಅವರ ಮುಖದ ಮೇಲೆ ಹೊಡೆದು ಯೇಸುವಿಗೆ, “ನಿನ್ನನ್ನು ಹೊಡೆದವರು ಯಾರು? ಪ್ರವಾದನೆ ಹೇಳು,” ಎಂದರು.
65 And they said many other things against him, insulting him. ಅವರು ಯೇಸುವಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳನ್ನಾಡಿದರು.
66 At daybreak, the people's council of elders convened—chief priests and scribes—and led him away to their council, saying, ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,
67 "If you are the Christ, tell us." He said to them, "If I tell you, you will not believe, “ನೀನು ಆ ಕ್ರಿಸ್ತನೋ? ನಮಗೆ ಹೇಳು,” ಎಂದರು. ಯೇಸು ಅವರಿಗೆ, “ನಾನು ನಿಮಗೆ ಹೇಳಿದರೂ ನೀವು ನಂಬುವುದಿಲ್ಲ.
68 "and if I ask you, you will not answer. ನಾನು ನಿಮ್ಮನ್ನು ಕೇಳಿದರೂ ನೀವು ಉತ್ತರ ಕೊಡುವುದಿಲ್ಲ.
69 "But from now on the Son of Man will sit at the right hand of the power of our Father." ಆದರೆ ಇಂದಿನಿಂದ ಮನುಷ್ಯಪುತ್ರನಾದ ನಾನು ಸರ್ವಶಕ್ತರಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡಿರುವೆನು,” ಎಂದರು.
70 They all said, "So you are the Son of God?" He said to them, "You say that I am." ಆಗ ಅವರೆಲ್ಲರೂ, “ಹಾಗಾದರೆ ನೀನು ದೇವರ ಪುತ್ರನೋ?” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಉತ್ತರಕೊಟ್ಟರು.
71 They said, "What more testimony do we need? For we heard it ourselves from his mouth." ಆಗ ಅವರು, “ನಮಗೆ ಇನ್ನೇನು ಸಾಕ್ಷಿ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವಲ್ಲಾ?” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]