Skip to content
The Believer's Library

Biblica® Open Kannada Contemporary Version 2022

Luke 4 OKCV

Show OKCV only
Verse × ×
1 Jesus, full of the Holy Spirit, returned from the Jordan, led by the Spirit in the wilderness. ಯೇಸು ಪವಿತ್ರಾತ್ಮಭರಿತರಾಗಿ, ಯೊರ್ದನ್ ನದಿ ತೀರದಿಂದ ಹಿಂದಿರುಗಿ ಬಂದು, ದೇವರಾತ್ಮರಿಂದ ಅರಣ್ಯದೊಳಕ್ಕೆ ಮಾರ್ಗದರ್ಶನ ಹೊಂದಿ,
2 Forty days, tempted by the devil, eating nothing in those days; when they ended, he was hungry. ನಲವತ್ತು ದಿನಗಳು ಸೈತಾನನಿಂದ ಶೋಧನೆಯನ್ನು ಎದುರಿಸಿದರು. ಆ ದಿನಗಳಲ್ಲಿ ಯೇಸು ಏನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಯೇಸುವಿಗೆ ಹಸಿವಾಯಿತು.
3 The devil told him, "If you're the Son of God, tell this stone to become bread." ಸೈತಾನನು ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗುವಂತೆ ಹೇಳು,” ಎಂದನು.
4 And Jesus answered him, "It is written, 'Man shall not live by bread alone.'" ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, “ ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
5 Then the devil led him up and showed him all the kingdoms of the world in an instant. ಸೈತಾನನು ಯೇಸುವನ್ನು ಎತ್ತರವಾದ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಅವರಿಗೆ ತೋರಿಸಿದನು.
6 He said to him, "I will give you all this authority and their glory, for it has been entrusted to me, and I give it to whomever I want. ಅನಂತರ ಸೈತಾನನು ಯೇಸುವಿಗೆ, “ಈ ಎಲ್ಲಾ ರಾಜ್ಯಗಳ ಅಧಿಕಾರವನ್ನೂ ಇವುಗಳ ಮಹಿಮೆಯನ್ನೂ ನಾನು ನಿನಗೆ ಕೊಡುವೆನು. ಇವೆಲ್ಲಾ ನನಗೆ ಕೊಟ್ಟಿರುವುದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡುವೆನು.
7 If you, then, will worship me, it will all be yours." ಆದ್ದರಿಂದ ನೀನು ನನ್ನನ್ನು ಆರಾಧಿಸಿದರೆ, ಎಲ್ಲವೂ ನಿನ್ನದಾಗುವವು,” ಎಂದು ಹೇಳಿದನು.
8 And Jesus answered him, "It is written, 'You will worship your Father, and serve only him.'" ಯೇಸು ಅವನಿಗೆ ಉತ್ತರವಾಗಿ, “ ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
9 Then he led him to Jerusalem, stood him on the temple's highest point, and said, "If you're the Son of God, throw yourself down from here, ಸೈತಾನನು ಯೇಸುವನ್ನು ಯೆರೂಸಲೇಮಿಗೆ ಕರೆತಂದು ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು,
10 for it is written, 'He will command his angels concerning you, to guard you,' ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವಂತೆ: “ ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತಮ್ಮ ದೂತರಿಗೆ ಆಜ್ಞಾಪಿಸುವರು
11 and 'On their hands they will bear you up, so that you won't strike your foot against a stone.'" ಮತ್ತು ನಿನ್ನ ಪಾದಗಳು ಕಲ್ಲಿಗೆ ತಗಲದಂತೆ, ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.
12 And Jesus answered him, "It is said, 'You shall not put your Father to the test.'" ಅದಕ್ಕೆ ಯೇಸು ಅವನಿಗೆ, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು,’ ಎಂದೂ ಹೇಳಿದೆ,” ಎಂದು ಉತ್ತರಕೊಟ್ಟರು.
13 And when the devil had ended every temptation, he departed from him until an opportune time. ಸೈತಾನನು ಯೇಸುವನ್ನು ನಾನಾರೀತಿಯಲ್ಲಿ ಶೋಧಿಸಿದ ಮೇಲೆ, ತಕ್ಕಕಾಲ ಬರುವ ತನಕ ಅವರನ್ನು ಬಿಟ್ಟು ಹೊರಟುಹೋದನು.
14 Jesus returned to Galilee in the Holy Spirit's power, and news of him spread through the whole region. ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು.
15 And he taught in their synagogues, and everyone glorified him. ಯೇಸು ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸಿದ್ದರಿಂದ, ಎಲ್ಲರೂ ಅವರನ್ನು ಹೊಗಳಿದರು.
16 He came to Nazareth, where he was raised, and as usual entered the synagogue on the Sabbath, then stood to read. ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.
17 He was handed the scroll of the prophet Isaiah, unrolled it, and found where it was written: ಯೇಸುವಿನ ಕೈಗೆ ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಕೊಟ್ಟರು. ಯೇಸು ಅದನ್ನು ಬಿಚ್ಚಿ, ಅದರಲ್ಲಿ ಬರೆದಿರುವ ಈ ವಾಕ್ಯಗಳನ್ನು ಕಂಡು ಓದಿದರು:
18 "The Spirit of our Father is upon me, because he has anointed me to proclaim good news to the poor. He has sent me to proclaim freedom for the captives and recovery of sight to the blind, to set free those who are oppressed, “ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,
19 to proclaim the year of our Father's favor." ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ.”
20 He rolled up the scroll, gave it back to the attendant, and sat down. Every eye in the synagogue was fixed on him. ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.
21 And he began to say to them, "Today this Scripture has been fulfilled in your hearing." ಯೇಸು ಅವರಿಗೆ, “ನೀವು ಕೇಳುತ್ತಿದ್ದಂತೆಯೇ ಈ ಪವಿತ್ರ ವೇದದ ವಾಕ್ಯವು ಇಂದು ನೆರವೇರಿತು,” ಎಂದು ಹೇಳಲಾರಂಭಿಸಿದರು.
22 All spoke well of him, amazed at the gracious words from his mouth, and said, "Isn't this Joseph's son?" ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
23 He said to them, "Surely you'll quote this proverb to me: 'Doctor, heal yourself.' Do here in your hometown, too, what we heard happened in Capernaum." ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ!’ ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಹೇಳಿ, ‘ಕಪೆರ್ನೌಮಿನಲ್ಲಿ ಎಂತೆಂಥ ಕಾರ್ಯಗಳು ನಡೆಯಿತೆಂದು ನಾವು ಕೇಳಿದೆವು. ಅದನ್ನು ಇಲ್ಲಿ ನಿನ್ನ ಸ್ವಂತ ಊರಿನಲ್ಲಿಯೂ ಮಾಡು’ ಎಂದು ನನಗೆ ಹೇಳುವಿರಿ,” ಎಂದರು.
24 And he said, "Truly, I say to you, no prophet is acceptable in his hometown. ಯೇಸು ಮುಂದುವರಿಸಿ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಯಾವ ಪ್ರವಾದಿಯೂ ಸ್ವಂತ ಊರಿನಲ್ಲಿ ಸ್ವೀಕಾರವಾಗುವುದಿಲ್ಲ.
25 But truly I tell you, many widows lived in Israel in Elijah's days, when the sky was shut three years and six months and a great famine struck the whole land, ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.
26 and Elijah was sent to none of them but only to a widow in Zarephath of Sidon. ಅವರಲ್ಲಿ ಯಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಕಳುಹಿಸಿದರು.
27 Many had leprosy in Israel in the days of the prophet Elisha, yet none was made clean except Naaman the Syrian." ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು.
28 When they heard these things, everyone in the synagogue was furious. ಆಗ ಸಭಾಮಂದಿರದಲ್ಲಿ ಇದ್ದವರೆಲ್ಲರೂ ಇವುಗಳನ್ನು ಕೇಳಿ ಬಹು ಕೋಪಗೊಂಡರು.
29 They got up, drove him out of town, and took him to the edge of the hill their town was built on, to throw him off the cliff. ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು.
30 But he walked through the crowd and went away. ಆದರೆ ಯೇಸು ಅವರ ಮಧ್ಯದಿಂದ ಹಾದು ಹೊರಟು ಹೋದರು.
31 He went down to Capernaum, a town in Galilee, and taught them on the Sabbath, ಯೇಸು ಗಲಿಲಾಯದ ಕಪೆರ್ನೌಮಿಗೆ ಬಂದು, ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದರು.
32 and they were astonished at his teaching, for his word possessed authority. ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಅವರ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
33 In the synagogue was a man with the spirit of an unclean demon; he cried out in a loud voice, ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕಿರುಚುತ್ತಾ,
34 Ha! What do you want with us, Jesus of Nazareth? Have you come to destroy us? I know who you are—God's Holy One. “ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.
35 Jesus rebuked him: "Be silent and come out of him!" The demon threw him down before them all, came out, and did him no harm. ಆಗ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದರು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ, ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
36 All were amazed and asked each other, "What word is this? With authority and power he orders unclean spirits, and they leave!" ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
37 And reports about him went out into every place in the surrounding region. ಯೇಸುವಿನ ಸುದ್ದಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
38 And he arose and left the synagogue and entered Simon's house. Now Simon's mother-in-law was ill with a high fever, and they asked him to help her. ಯೇಸು ಸಭಾಮಂದಿರದಿಂದ ಎದ್ದು ಸೀಮೋನನ ಮನೆಗೆ ಹೋದರು. ಅಲ್ಲಿ ಸೀಮೋನನ ಅತ್ತೆಗೆ ಕಠಿಣ ಜ್ವರವಿದ್ದುದರಿಂದ ಅಲ್ಲಿದ್ದವರು ಆಕೆಗೆ ಸಹಾಯ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡರು.
39 He stood over her and rebuked the fever; it left her, and she rose at once and began serving them. ಆಗ ಯೇಸು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೇ ಆಕೆಯು ಎದ್ದು ಅವರನ್ನು ಉಪಚರಿಸಿದಳು.
40 As the sun set, all who had someone sick with various diseases brought them to him; laying his hands on each one, he healed them. ಸಂಜೆಯಾದ ನಂತರ, ನಾನಾ ವಿಧವಾದ ರೋಗಗಳಿಂದ ಅಸ್ವಸ್ಥರಾದವರೆಲ್ಲರನ್ನು ಜನರು ಯೇಸುವಿನ ಬಳಿಗೆ ಕರೆತಂದರು, ಅವರಲ್ಲಿ ಪ್ರತಿಯೊಬ್ಬನ ಮೇಲೆ ಯೇಸು ತಮ್ಮ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದರು.
41 Demons also came out of many, shouting, "You are the Son of God!" He silenced them, forbidding them to speak, since they knew he was the Christ. ಅನೇಕರೊಳಗಿಂದ, ದೆವ್ವಗಳು ಸಹ ಹೊರಗೆ ಬಂದು, “ನೀವು ದೇವರ ಪುತ್ರ” ಎಂದು ಅರಚಿದವು. ಯೇಸು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದರು. ಏಕೆಂದರೆ ಅವರೇ ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
42 At daybreak he went out to a remote place. Crowds looked for him, came to him, and tried to keep him from leaving them. ಬೆಳಗಾದ ಮೇಲೆ, ಯೇಸು ಏಕಾಂತ ಸ್ಥಳಕ್ಕೆ ಹೊರಟು ಹೋದರು. ಜನರು ಅವರನ್ನು ಹುಡುಕಿಕೊಂಡು ಅವರ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗಬಾರದೆಂದು ಅವರನ್ನು ತಡೆದರು.
43 But he told them, "I must announce the good news of our Father's kingdom to the other towns too—this is why I was sent." ಆದರೆ ಯೇಸು ಅವರಿಗೆ, “ಬೇರೆ ಪಟ್ಟಣಗಳಿಗೂ ದೇವರ ರಾಜ್ಯದ ಸುವಾರ್ತೆಯನ್ನು ನಾನು ಸಾರಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಇದಕ್ಕಾಗಿಯೇ,” ಎಂದರು.
44 And he was preaching in the synagogues of Judea. ಅನಂತರ ಯೇಸು ಯೂದಾಯದ ಸಭಾಮಂದಿರಗಳಲ್ಲಿ ಸುವಾರ್ತೆ ಸಾರುತ್ತಾ ಇದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]