Skip to content
The Believer's Library

Biblica® Open Kannada Contemporary Version 2022

Luke 5 OKCV

Show OKCV only
Verse × ×
1 Once, as the crowd pressed around him to hear our Father's word, Jesus stood by Lake Gennesaret. ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.
2 He saw two boats standing by the lake; the fishermen had left them and were washing their nets. ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
3 Getting into one of the boats, Simon's, he asked him to move out a little from shore, then sat down and taught the crowds from the boat. ಅವುಗಳಲ್ಲಿ ಸೀಮೋನನ ದೋಣಿಯನ್ನು, ಯೇಸು ಹತ್ತಿ ಅದನ್ನು ದಡದಿಂದ ಸ್ವಲ್ಪ ದೂರ ನೂಕಬೇಕೆಂದು ಅವನನ್ನು ಕೇಳಿಕೊಂಡರು. ಆಮೇಲೆ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರಿಗೆ ಬೋಧಿಸಿದರು.
4 When he stopped speaking, he told Simon, "Push out into deep water and lower your nets for a catch." ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ,” ಎಂದರು.
5 Simon answered, "Master, we worked all night and caught nothing. But at your word, I'll let down the nets." ಅದಕ್ಕೆ ಉತ್ತರವಾಗಿ ಸೀಮೋನನು ಯೇಸುವಿಗೆ, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ. ಆದರೂ ನಿಮ್ಮ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ,” ಎಂದು ಹೇಳಿದನು.
6 Doing this, they caught so many fish their nets began tearing. ಅವರು ಅದರಂತೆ ಬಲೆ ಹಾಕಿದಾಗ, ಮೀನಿನ ದೊಡ್ಡ ರಾಶಿಯನ್ನು ಹಿಡಿದರು ಅವರ ಬಲೆಯು ಹರಿಯುವಂತಾಯಿತು.
7 They signaled to partners in the other boat to come help; they came and filled both boats so that they began to sink. ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.
8 Seeing this, Simon Peter fell at Jesus' knees and said, "Leave me, Lord, for I'm a sinful man!" ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.
9 For amazement gripped him and all with him at the catch of fish they had caught, ಯಾಕಂದರೆ, ಅವರು ಹಿಡಿದ ಮೀನುಗಳ ರಾಶಿಯನ್ನು ಕಂಡು ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
10 and so were James and John, Zebedee's sons and Simon's partners. Jesus told Simon, "Don't be afraid; from now on you'll catch people." ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ,” ಎಂದರು.
11 So they pulled their boats up on shore, left everything, and followed him. ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.
12 While Jesus was in one of the towns, a man covered with a serious skin disease appeared. Seeing Jesus, he fell facedown and begged, "Lord, if you're willing, you can make me clean." ಯೇಸು ಒಂದು ಪಟ್ಟಣದಲ್ಲಿದ್ದಾಗ, ಮೈಯೆಲ್ಲಾ ಕುಷ್ಠರೋಗವಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡಬಿದ್ದು ಅವರಿಗೆ, “ಸ್ವಾಮಿ, ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.
13 Jesus reached out his hand, touched him: "I am willing. Be clean." At once the skin disease left him. ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.
14 Jesus ordered him to tell no one, "but go, show yourself to the priest and offer what Moses commanded for your cleansing, as proof to the people." ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.
15 But word about him spread even more; large crowds gathered to hear him and be healed of their sicknesses. ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.
16 But Jesus often withdrew to deserted places and prayed. ಆದರೆ ಯೇಸು ತಮ್ಮನ್ನು ಪ್ರತ್ಯೇಕಿಸಿಕೊಂಡು ಎಂದಿನಂತೆ ಏಕಾಂತ ಸ್ಥಳಕ್ಕೆ ಹೋಗಿ ಪ್ರಾರ್ಥಿಸುತ್ತಿದ್ದರು.
17 One day as he taught, Pharisees and teachers of the law sat, having come from every village of Galilee, and from Judea and Jerusalem. And our Father's power was there for him to heal the sick. ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.
18 Just then, men came carrying a paralyzed man on a mat, trying to bring him in and lay him before Jesus. ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು.
19 Finding no way through the crowd to bring him in, they went up on the roof and lowered him on his mat through the tiles, into the middle, right before Jesus. ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ, ಮನೆಯ ಮೇಲೆ ಹೋಗಿ ಹೆಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ಯೇಸುವಿನ ಮುಂದೆ ಇಳಿಸಿದರು.
20 When Jesus saw their faith, he said, "Friend, your sins are forgiven you." ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದು ಹೇಳಿದರು.
21 The scribes and Pharisees began debating, "Who is this man insulting God? Who but God alone can forgive sins?" ಆಗ ಫರಿಸಾಯರೂ ನಿಯಮ ಬೋಧಕರೂ, “ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.
22 Knowing what they were thinking, Jesus answered them, "Why are you reasoning in your hearts? ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?
23 Which is easier: to say, 'Your sins are forgiven you,' or to say, 'Get up and walk'? ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?
24 But so you'll know the Son of Man has authority on earth to forgive sins"—he told the paralyzed man—"I tell you, get up, pick up your mat, and go home." ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
25 At once he stood before them, picked up his mat, went home glorifying our Father. ಕೂಡಲೇ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊರಟುಹೋದನು.
26 Amazement seized them all; they glorified our Father, filled with awe, saying, "We saw remarkable things today." ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.
27 After this, Jesus went out and saw a tax collector named Levi sitting at the tax booth. "Follow me," he said. ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.
28 So Levi got up, left everything behind, and followed him. ಲೇವಿ ಎಲ್ಲವನ್ನು ಬಿಟ್ಟು ಎದ್ದು ಯೇಸುವನ್ನು ಹಿಂಬಾಲಿಸಿದನು.
29 Then Levi hosted a great banquet for Jesus at his house, and a large crowd of tax collectors and others reclined with them. ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಯೇಸುವಿಗೆ ದೊಡ್ಡ ಔತಣವನ್ನು ಮಾಡಿಸಲು, ಬಹಳ ಜನ ಸುಂಕದವರು ಮತ್ತು ಇತರರು ಯೇಸುವಿನೊಂದಿಗೆ ಊಟಮಾಡುತ್ತಿದ್ದರು.
30 But the Pharisees and their scribes grumbled to his disciples, "Why do you eat and drink with tax collectors and sinners?" ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.
31 Jesus answered them, "It is not the healthy who need a doctor, but the sick. ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
32 I have not come to call the righteous, but sinners to repentance." ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.
33 They said to him, "John's disciples fast often and pray, likewise the Pharisees' disciples, but yours eat and drink." ಕೆಲವರು ಯೇಸುವಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ, ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ, ಆದರೆ ನಿಮ್ಮ ಶಿಷ್ಯರು ಏಕೆ ತಿಂದು ಕುಡಿಯುತ್ತಾರೆ?” ಎಂದು ಕೇಳಿದರು.
34 Jesus said, "Can you make the bridegroom's friends fast while he is with them? ಅದಕ್ಕೆ ಯೇಸು, “ಮದುಮಗನು ಮದುವೆ ಅತಿಥಿಗಳ ಸಂಗಡವಿರುವಾಗ ಅವರನ್ನು ಉಪವಾಸವಿರಿಸಲಾದೀತೆ?
35 But days will come when the bridegroom is taken from them, and then, in those days, they will fast." ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು.
36 He told them a parable too: "No one tears a patch from a new garment and sews it on an old one. Otherwise, he tears the new, and the new patch won't match the old. ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.
37 No one puts new wine into old wineskins; otherwise the new wine will burst the skins, spill out, and the skins will be ruined. ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಒಡೆದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ.
38 No, new wine must be poured into new wineskins. ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.
39 And no one after drinking old wine wants the new, for he says, 'The old is good.'" ಯಾರೂ ಹಳೆಯ ದ್ರಾಕ್ಷಾರಸವನ್ನು ಕುಡಿದ ಮೇಲೆ ಹೊಸದನ್ನು ಅಪೇಕ್ಷಿಸುವುದಿಲ್ಲ, ಏಕೆಂದರೆ ಅವರು, ‘ಹಳೆಯದೇ ಉತ್ತಮವಾದದ್ದು,’ ಎನ್ನುವರು,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]