Skip to content
The Believer's Library

Biblica® Open Kannada Contemporary Version 2022

Luke 7 OKCV

Show OKCV only
Verse × ×
1 After he had finished saying all this to the people, he entered Capernaum. ತಮ್ಮ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಯೇಸು ಕಪೆರ್ನೌಮಿಗೆ ಪ್ರವೇಶಿಸಿದರು.
2 A centurion's servant who was dear to him was sick and at the point of death. ಆಗ ಒಬ್ಬ ಶತಾಧಿಪತಿಗೆ, ಪ್ರಿಯನಾಗಿದ್ದ ಸೇವಕ, ಅಸ್ವಸ್ಥನಾಗಿ ಸಾಯುವುದರಲ್ಲಿದ್ದನು.
3 Hearing about Jesus, the centurion sent Jewish elders, asking him to come and heal his servant. ಅವನು ಯೇಸುವಿನ ವಿಷಯ ಕೇಳಿದಾಗ, ಬಂದು ತನ್ನ ಸೇವಕನನ್ನು ಗುಣಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಅವರ ಬಳಿಗೆ ಕಳುಹಿಸಿದನು.
4 Reaching Jesus, they pleaded urgently: he deserves to have you do this for him, ಅವರು ಯೇಸುವಿನ ಬಳಿಗೆ ಬಂದು ಅವರಿಗೆ, “ನೀವು ಇದನ್ನು ಮಾಡುವುದಕ್ಕೆ ಅವನು ಯೋಗ್ಯನು,
5 for he loves our nation, and he is the one who built us our synagogue. ಏಕೆಂದರೆ ಅವನು ನಮ್ಮ ಜನಾಂಗವನ್ನು ಪ್ರೀತಿಸುವುದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ,” ಎಂದು ಆಸಕ್ತಿಯಿಂದ ಬೇಡಿಕೊಂಡರು.
6 Jesus went with them. He was nearly at the house when the centurion sent friends to say, "Lord, don't trouble yourself—I'm not worthy for you to enter under my roof. ಯೇಸು ಅವರೊಂದಿಗೆ ಹೋದರು. ಅವರು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಯೇಸುವಿನ ಬಳಿಗೆ ಕಳುಹಿಸಿ, “ಕರ್ತದೇವರೇ, ನಿಮ್ಮನ್ನು ತೊಂದರೆ ಪಡಿಸಿಕೊಳ್ಳಬೇಡಿರಿ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ.
7 So I did not presume to come to you. But say the word, and let my servant be healed. ನಾನು ನಿಮ್ಮ ಬಳಿಗೆ ಬರುವುದಕ್ಕೆ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.
8 For I too am a man under authority, with soldiers under me. I tell one, 'Go,' and he goes; another, 'Come,' and he comes; my servant, 'Do this,' and he does it." ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು,’ ಎಂದರೆ ಅವನು ಹೋಗುತ್ತಾನೆ, ಮತ್ತೊಬ್ಬನಿಗೆ ‘ಬಾ,’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.
9 Hearing this, Jesus was amazed at the centurion, turned to the crowd following him, and said, "I tell you, I have not found such faith even in Israel." ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು.
10 And when those who had been sent returned to the house, they found the servant well. ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಸೇವಕ ಸ್ವಸ್ಥನಾಗಿರುವುದನ್ನು ಕಂಡರು.
11 Soon after, he went to a town called Nain, with his disciples and a big crowd. ಇದಾದ ಮೇಲೆ, ಯೇಸು ನಾಯಿನ್ ಎಂಬ ಪಟ್ಟಣಕ್ಕೆ ಹೋದರು. ಆಗ ಅವರ ಶಿಷ್ಯರೂ ಜನರ ದೊಡ್ಡ ಗುಂಪೂ ಅವರ ಸಂಗಡ ಹೋದರು.
12 As he neared the town gate, a dead man was being carried out—an only son to his mother, a widow—and a large crowd from the town was with her. ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
13 When the Lord saw her, he felt compassion for her and said, "Don't cry." ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.
14 He stepped up and touched the bier; the carriers stopped, and he said, "Young man, I tell you, get up." ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು.
15 And the dead man sat up and began to speak, and Jesus gave him to his mother. ಆಗ ಸತ್ತವನು ಎದ್ದು ಕುಳಿತುಕೊಂಡು ಮಾತನಾಡಲಾರಂಭಿಸಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದರು.
16 Fear gripped them all; they praised our Father: "A great prophet has risen among us!" "Our Father has visited his people!" ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.
17 And this report about him spread through the whole of Judea and all the surrounding country. ಯೇಸುವಿನ ವಿಷಯವಾದ ಈ ಸುದ್ದಿಯು ಯೂದಾಯದ ಎಲ್ಲಾ ಪ್ರಾಂತಕ್ಕೂ, ಸುತ್ತಲಿನ ಎಲ್ಲಾ ಪ್ರಾಂತಕ್ಕೂ ಹರಡಿತು.
18 John's disciples told him all these things. Then John called two of his disciples, ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು,
19 sent them to the Lord: "Are you the one who is to come, or should we look for another?" ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದ ಕ್ರಿಸ್ತನು ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ಕರ್ತದೇವರನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.
20 When the men reached him, they said, "John the Baptist sent us to you, asking, 'Are you the one who is to come, or should we expect someone else?'" ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವರು ನೀವೋ? ಇಲ್ಲವೆ ನಾವು ಬೇರೊಬ್ಬರಿಗಾಗಿ ಎದುರು ನೋಡಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕ ಯೋಹಾನನು ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ,” ಎಂದು ಹೇಳಿದರು.
21 In that hour he healed many of diseases, plagues, and evil spirits, and gave sight to many blind. ಅದೇ ಸಮಯದಲ್ಲಿ ರೋಗಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಯೇಸು ಗುಣಪಡಿಸುತ್ತಿದ್ದರು, ಕುರುಡರಾದ ಅನೇಕರಿಗೆ ದೃಷ್ಟಿ ನೀಡುತ್ತಿದ್ದರು.
22 He answered them, "Go tell John what you've seen and heard: the blind see, the lame walk, lepers become clean, the deaf hear, the dead rise, and the poor hear good news. ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.
23 And blessed is the one who is not offended by me." ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.
24 When John's messengers left, Jesus spoke to the crowds about John: "What did you go into the wilderness to see? A reed swaying in the wind? ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?
25 What then did you go out to see? A man dressed in soft clothes? Look—those dressed in splendor, living in luxury, are in kings' palaces. ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿಕೊಂಡು ಸುಖವಾಗಿ ಜೀವಿಸುವವರು ಅರಮನೆಗಳಲ್ಲಿ ಇರುತ್ತಾರೆ.
26 But what did you go out to see—a prophet? Yes, I tell you: more than a prophet. ಹಾಗಾದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.
27 This is the one Scripture speaks of: 'Look, I'm sending my messenger ahead of you to prepare your way before you.' ಯಾರ ವಿಷಯವಾಗಿ ಪವಿತ್ರ ವೇದದಲ್ಲಿ ಬರೆದಿತ್ತೋ ಅವನೇ ಇವನು: “ ‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ,’
28 I tell you: no one born of women is greater than John—yet the least in our Father's kingdom is greater than he." ನಾನು ನಿಮಗೆ ಹೇಳುವುದೇನೆಂದರೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ,” ಎಂದರು.
29 (When all the people, including the tax collectors, heard this, they declared our Father just, having been baptized with John's baptism, ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು.
30 but the Pharisees and lawyers rejected our Father's purpose for themselves, not baptized by him.). ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
31 "To what then should I compare the people of this generation, and what are they like? ಅನಂತರ ಯೇಸು ಜನರಿಗೆ, “ಈ ಕಾಲದ ಜನರನ್ನು, ನಾನು ಯಾವುದಕ್ಕೆ ಹೋಲಿಸಲಿ? ಅವರು ಯಾವುದಕ್ಕೆ ಹೋಲಿಕೆಯಾಗಿದ್ದಾರೆ?
32 They are like children sitting in the marketplace, calling to each other: 'We played the flute for you, and you didn't dance; we sang a dirge, and you didn't weep.' ಅವರು ಸಂತೆಯಲ್ಲಿ ಕುಳಿತುಕೊಂಡು ಒಬ್ಬರನ್ನೊಬ್ಬರು ಕರೆಯುತ್ತಾ: “ ‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ, ನಾವು ನಿಮಗಾಗಿ ಶೋಕಗೀತೆ ಹಾಡಿದೆವು, ನೀವು ಅಳಲಿಲ್ಲ,’ ಎಂದು ಹೇಳುವ ಮಕ್ಕಳಿಗೆ ಹೋಲಿಕೆಯಾಗಿದ್ದಾರೆ.
33 For John the Baptist came eating no bread, drinking no wine, and you say, 'He has a demon.' “ಸ್ನಾನಿಕ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು, ಅದಕ್ಕೆ ನೀವು, ‘ಅವನಿಗೆ ದೆವ್ವ ಹಿಡಿದಿದೆ,’ ಎನ್ನುತ್ತೀರಿ.
34 The Son of Man came eating and drinking, and you say, 'See, a glutton and a drunkard, a friend of tax collectors and sinners!' ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು, ಆದರೆ ನೀವು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎನ್ನುತ್ತೀರಿ.
35 Yet wisdom is justified by all her children." ಆದರೆ ಜ್ಞಾನವನ್ನು ಅನ್ವಯಿಸಿಕೊಳ್ಳುವಾಗಲೇ ಜ್ಞಾನದ ಗುಣಲಕ್ಷಣಗಳು ಸ್ಪಷ್ಟವಾಗಿರುವುದು,” ಎಂದರು.
36 A Pharisee invited him to eat with him; he went into the Pharisee's house and reclined at the table. ಆಗ ಫರಿಸಾಯರಲ್ಲಿ ಒಬ್ಬನು ಯೇಸು ತನ್ನೊಂದಿಗೆ ಊಟ ಮಾಡಬೇಕೆಂದು ಅಪೇಕ್ಷಿಸಿದನು, ಆಗ ಯೇಸು ಆ ಫರಿಸಾಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು.
37 A woman in the city, a sinner, learned he was reclining at table in the Pharisee's house and brought an alabaster bottle of perfume. ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತುಕೊಂಡಿದ್ದಾರೆಂದು ಒಬ್ಬ ಪಾಪಿ ಸ್ತ್ರೀಯು ತಿಳಿದು, ಸುಗಂಧ ತೈಲದ ಭರಣಿಯನ್ನು ತಂದು,
38 Standing behind him at his feet, weeping, she began wetting his feet with her tears, wiped them with her hair, kissed his feet, and anointed them with the perfume. ಅವರ ಪಾದಗಳ ಬಳಿಯಲ್ಲಿ ನಿಂತು, ಅಳುತ್ತಾ ಅವರ ಪಾದಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ, ತನ್ನ ತಲೆಕೂದಲಿನಿಂದ ಒರೆಸಿ, ಅವರ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
39 Seeing this, the Pharisee who'd invited him thought, "If he were a prophet, he'd know who's touching him and what kind of woman she is—a sinner." ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.
40 Jesus replied to him, "Simon, I have something to say to you." He said, "Say it, Teacher." ಆಗ ಯೇಸು ಅವನಿಗೆ, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ವಿಷಯವಿದೆ,” ಎಂದರು. ಸೀಮೋನನು ಯೇಸುವಿಗೆ, “ಗುರುವೇ, ಹೇಳಿ” ಎಂದನು.
41 "A certain moneylender had two debtors. One owed 500 denarii, and the other fifty. ಆಗ ಯೇಸು, “ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು, ಒಬ್ಬನು ಐದು ನೂರು ಬೆಳ್ಳಿ ನಾಣ್ಯಗಳನ್ನೂ, ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನೂ ಕೊಡಬೇಕಾಗಿತ್ತು.
42 Since neither could pay, he canceled both debts. So which of them will love him more?" ಆದರೆ ಅವರಿಬ್ಬರಿಗೂ ಸಾಲತೀರಿಸುವುದಕ್ಕೆ ಹಣ ಇರಲಿಲ್ಲ. ಅವನು ಅವರಿಬ್ಬರ ಸಾಲವನ್ನೂ ರದ್ದುಮಾಡಿಬಿಟ್ಟನು. ಆದ್ದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು?” ಎಂದು ಕೇಳಿದರು.
43 Simon answered, "I suppose the one he forgave the larger debt." Jesus said, "You judged rightly." ಅದಕ್ಕೆ ಸೀಮೋನನು ಉತ್ತರವಾಗಿ, “ಯಾರಿಗೆ ಅವನು ಹೆಚ್ಚಾಗಿ ರದ್ದು ಮಾಡಿದನೋ ಅವನೇ ಎಂದು ತೋರುತ್ತದೆ,” ಎಂದನು. ಆಗ ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪು ಮಾಡಿದೆ,” ಎಂದರು.
44 Turning to the woman, he told Simon, "Do you see this woman? I entered your house—you gave no water for my feet, but she wet my feet with her tears and wiped them with her hair. ತರುವಾಯ ಯೇಸು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನನಿಗೆ, “ಈ ಸ್ತ್ರೀಯನ್ನು ಕಂಡಿದ್ದೀಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ. ಇವಳಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತನ್ನ ತಲೆಕೂದಲಿನಿಂದ ಅವುಗಳನ್ನು ಒರೆಸಿದ್ದಾಳೆ.
45 You gave me no kiss, but she, from when I came in, hasn't stopped kissing my feet. ನೀನು ನನಗೆ ಮುದ್ದು ಕೊಡಲಿಲ್ಲ. ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವುದನ್ನು ಬಿಡಲಿಲ್ಲ.
46 You did not anoint my head with oil, but she has anointed my feet with perfume. ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ.
47 So I tell you, her many sins are forgiven, because she loved much. But whoever is forgiven little loves little." ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
48 And he said to her, "Your sins are forgiven." ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.
49 Then his fellow guests began asking each other, "Who is this, who even forgives sins?" ಯೇಸುವಿನ ಸಂಗಡ ಊಟಕ್ಕೆ ಕುಳಿತವರು, “ಪಾಪಗಳನ್ನು ಸಹ ಕ್ಷಮಿಸುವುದಕ್ಕೆ ಈತನು ಯಾರು?” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳಲಾರಂಭಿಸಿದರು.
50 And he said to the woman, "Your faith has saved you; go in peace." ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]