1Jesus called the twelve together, gave them power and authority over all the demons and to heal diseases.OKCVಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,
2And he sent them out to proclaim the kingdom of our Father and to heal the sick.OKCVಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.
3He said to them, "Take nothing for the road: no staff, bag, bread, or money, and don't take two tunics each.OKCVಯೇಸು ಅವರಿಗೆ, “ನೀವು ಪ್ರಯಾಣಕ್ಕಾಗಿ ಕೋಲು, ಚೀಲ, ರೊಟ್ಟಿ ಅಥವಾ ಹಣವನ್ನು ತೆಗೆದುಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
4Whatever house you enter, stay there, and leave from there.OKCVನೀವು ಯಾವುದಾದರೂ ಮನೆಯನ್ನು ಪ್ರವೇಶಿಸಿದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.
5Wherever they won't welcome you, shake the dust off your feet as you leave that town, as a testimony against them."OKCVಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.
6So they set out and went from village to village, proclaiming the good news and healing everywhere.OKCVಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು.
7Herod the tetrarch heard all that was happening, and was puzzled, because some said John had been raised from the dead,OKCVಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.
8others that Elijah had appeared, and still others that one of the prophets of old had risen.OKCVಕೆಲವರು ಎಲೀಯನು ಪ್ರತ್ಯಕ್ಷನಾಗಿದ್ದಾನೆಂದೂ ಇನ್ನೂ ಕೆಲವರು ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ತಿರುಗಿ ಎದ್ದಿದ್ದಾನೆಂದೂ ಹೇಳುತ್ತಿದ್ದರು.
9Herod said, "I beheaded John—so who is this I hear such things about?" He kept seeking to see him.OKCVಆದರೆ ಹೆರೋದನು, “ನಾನು ಯೋಹಾನನನ್ನು ಶಿರಚ್ಛೇದನ ಮಾಡಿದೆ, ನಾನು ಯಾರನ್ನು ಕುರಿತು, ಈ ವಿಷಯಗಳನ್ನು ಕೇಳುತ್ತಿರುವೆ, ಈತನು ಯಾರು?” ಎಂದು ಹೇಳಿ ಅವನು ಯೇಸುವನ್ನು ಕಾಣಲು ಪ್ರಯತ್ನಿಸಿದನು.
10When the apostles returned, they told Jesus all they had done. He took them and withdrew privately to a town called Bethsaida.OKCVಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.
11But the crowds found out and followed him. He welcomed them, spoke to them of our Father's kingdom, and healed those who needed it.OKCVಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.
12As the day was ending, the Twelve came and said to him, "Send the crowd away to find lodging and food in the villages and countryside around us—we're in a remote place here."OKCVಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.
13He said, "You give them something to eat." They said, "We have only five loaves and two fish—unless we go and buy food for this whole crowd."OKCVಆದರೆ ಯೇಸು ಅವರಿಗೆ, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಅದಕ್ಕೆ ಅವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನುಗಳಿಗಿಂತ ಹೆಚ್ಚೇನು ಇಲ್ಲ. ನಾವು ಹೋಗಿ ಈ ಜನರಿಗೆ ಬೇಕಾಗುವಷ್ಟು ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದರು.
14For there were about 5,000 men. He told his disciples, "Seat them in groups of about fifty each."OKCVಅಲ್ಲಿ ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಮಂದಿ ಇದ್ದರು. ಆಗ ಯೇಸು ತಮ್ಮ ಶಿಷ್ಯರಿಗೆ, “ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂರಿಸಿರಿ,” ಎಂದರು.
15They did so, and had everyone sit down.OKCVಅವರು ಹಾಗೆಯೇ ಮಾಡಿ, ಎಲ್ಲರನ್ನೂ ಕುಳ್ಳಿರಿಸಿದರು.
16He took the five loaves and two fish, looked up to heaven, blessed and broke them, then kept giving them to the disciples to serve the crowd.OKCVತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು.
17All ate and were satisfied; the leftover pieces filled twelve baskets.OKCVಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.
18Once, while praying alone with his disciples nearby, Jesus asked them, "Who do the crowds say I am?"OKCVಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು.
19They answered, "John the Baptist. Others say Elijah. Still others, that an ancient prophet has risen."OKCVಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.
20"But who do you say that I am?" he asked. Peter answered, "The Christ of our Father."OKCVಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಆಗ ಪೇತ್ರನು, “ನೀವು ದೇವರು ಕಳುಹಿಸಿಕೊಟ್ಟ ಕ್ರಿಸ್ತನು,” ಎಂದು ಹೇಳಿದನು.
21Jesus strictly warned them, ordering them to tell no one this,OKCVಯೇಸು ಈ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಖಂಡಿತವಾಗಿ ಆಜ್ಞಾಪಿಸಿದರು.
22saying, "The Son of Man must suffer many things and be rejected by the elders, chief priests, and scribes, and be killed, and on the third day be raised."OKCVಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.
23Then he told them all, "Whoever wants to come after me must deny himself and take up his cross daily and follow me.OKCVಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
24For whoever intends to save his life will lose it, but whoever loses his life because of me will save it.OKCVಯಾರಾದರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು, ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
25For what use is it if someone gains the whole world, yet loses or forfeits himself?OKCVಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡು, ತನ್ನನ್ನು ತಾನೇ ಹಾಳು ಮಾಡಿಕೊಂಡರೆ, ಇಲ್ಲವೆ ನಷ್ಟಪಡಿಸಿಕೊಂಡರೆ, ಆ ವ್ಯಕ್ತಿಗೆ ಪ್ರಯೋಜನವೇನು?
26Whoever is ashamed of me and my words, the Son of Man will be ashamed of him when he comes in his own glory and the glory of the Father and the holy angels.OKCVಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.
27But I tell you truly, some standing here will not taste death before they see the kingdom of our Father."OKCV“ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವನ್ನು ಕಾಣುವತನಕ ಮರಣವನ್ನು ಹೊಂದುವುದೇ ಇಲ್ಲ,” ಎಂದರು.
28About eight days after these words, Jesus took Peter, John, and James up a mountain to pray.OKCVಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು.
29As he was praying, the appearance of his face changed, and his clothing became dazzling white.OKCVಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು.
30And there were two men talking with him—Moses and Elijah,OKCVಮೋಶೆ ಮತ್ತು ಎಲೀಯನು ಎಂಬ ಇಬ್ಬರು ಪುರುಷರು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.
31who appeared in glory, speaking of his departure, which he was about to fulfill in Jerusalem.OKCVಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
32Peter and his companions were weighed down with sleep; fully awake, they saw his glory and the two men standing with him.OKCVಆದರೆ ಪೇತ್ರನು ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು, ಅವರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರ ಕೂಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು.
33As they were leaving him, Peter said to Jesus, "Master, it's good we're here. Let's make three shelters—one for you, one for Moses, one for Elijah." He didn't know what he was saying.OKCVಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು,” ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
34As he spoke, a cloud came and covered them in shadow; entering it, they were afraid.OKCVಹೀಗೆ ಪೇತ್ರನು ಮಾತನಾಡುತ್ತಿದ್ದಾಗಲೇ, ಮೇಘವು ಬಂದು ಅವರನ್ನು ಕವಿದುಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇಶಿಸುತ್ತಿದ್ದಾಗ ಶಿಷ್ಯರು ಭಯಪಟ್ಟರು.
35A voice from the cloud said, "This is my Son, my Chosen One—listen to him!"OKCVಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.
36When the voice ended, Jesus was found alone. They stayed silent, telling no one in those days what they had seen.OKCVಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.
37The next day, when they came down from the mountain, a large crowd met him.OKCVಮರುದಿನ, ಅವರು ಬೆಟ್ಟದಿಂದ ಕೆಳಗಿಳಿದು ಬಂದಾಗ, ಬಹಳ ಜನರು ಯೇಸುವನ್ನು ಸಂಧಿಸಿದರು.
38A man from the crowd shouted, "Teacher, please look at my son, because he's my only child.OKCVಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, “ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು.
39A spirit seizes him, and suddenly he cries out; it convulses him until he foams, scarcely leaving him, battering him.OKCVದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.
40I begged your disciples to drive it out, but they could not."OKCVಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ,” ಎಂದನು.
41Jesus answered, "Distrustful, twisted generation, how long must I stay with you and endure you? Bring your son here."OKCVಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು.
42As the boy was coming, the demon threw him down and convulsed him. But Jesus rebuked the unclean spirit, healed the boy, and returned him to his father.OKCVಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.
43All were astonished at our Father's majesty. While everyone was amazed at everything Jesus did, he said to his disciples,OKCVಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,
44"Store these words in your ears: the Son of Man will soon be delivered into human hands."OKCV“ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.
45But they didn't understand this word—hidden from them so they couldn't grasp it—and they were afraid to ask him about it.OKCVಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.
46Now an argument arose among them as to which of them was the greatest.OKCVತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡವನು ಎಂಬ ತರ್ಕವು ಶಿಷ್ಯರೊಳಗೆ ಎದ್ದಿತು.
47But Jesus, knowing their hearts' thoughts, took a child and stood him beside himself,OKCVಯೇಸು, ಅವರ ಮನದ ಆಲೋಚನೆಯನ್ನು ತಿಳಿದವರಾಗಿ, ಒಂದು ಮಗುವನ್ನು ತಮ್ಮ ಬಳಿಯಲ್ಲಿ ನಿಲ್ಲಿಸಿ,
48and told them, "Whoever receives this child in my name receives me, and whoever receives me receives the one who sent me. For the least among you all—that one is great."OKCV“ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.
49John said, "Master, we saw someone driving out demons in your name and tried to stop him, because he doesn't follow with us."OKCVಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು.
50"Do not stop him," Jesus said to him, "for whoever is not against you is for you."OKCVಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ, ನಿಮಗೆ ವಿರೋಧವಾಗಿರದವನು ನಿಮ್ಮ ಪಕ್ಷದವನೇ,” ಎಂದು ಹೇಳಿದರು.
51When the days neared for him to be taken up to heaven, Jesus resolutely set his face to go to Jerusalem.OKCVಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು
52He sent messengers ahead of him. They went and entered a Samaritan village to prepare for him,OKCVತಮಗೆ ಮುಂದಾಗಿ ಶಿಷ್ಯರನ್ನು ದೂತರನ್ನಾಗಿ ಕಳುಹಿಸಿದರು. ಅವರು ಹೋಗಿ ಅವರಿಗಾಗಿ ಎಲ್ಲವನ್ನೂ ಸಿದ್ಧಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
53but the people there did not welcome him, because he was heading for Jerusalem.OKCVಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು.
54Seeing this, the disciples James and John said, "Lord, do you want us to call down fire from heaven to consume them?"OKCVಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನರು ಇದನ್ನು ಕಂಡು, “ಕರ್ತದೇವರೇ, ಎಲೀಯನು ಮಾಡಿದ ಪ್ರಕಾರ ಇವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿಮಗೆ ಒಪ್ಪಿಗೆ ಇದೆಯೋ?” ಎಂದು ಕೇಳಿದರು.
55But he turned and rebuked them.OKCVಆದರೆ ಯೇಸು ಅವರ ಕಡೆ ತಿರುಗಿ ಅವರನ್ನು ಗದರಿಸಿ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
56And they went on to another village.OKCVಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು.
57As they walked the road, someone said to him, "I'll follow you wherever you go."OKCVಅವರು ದಾರಿಯಲ್ಲಿ ಹೋಗುತ್ತಿರುವಾಗ, ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು” ಎಂದನು.
58Jesus said, "Foxes have dens, birds of the sky have nests, but the Son of Man has nowhere to lay his head."OKCVಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.
59To another he said, "Follow me." He replied, "Lord, first let me go bury my father."OKCVಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.
60But Jesus told him, "Let the dead bury their own dead, but you go proclaim the kingdom of our Father."OKCVಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.
61Another also said, "I'll follow you, Lord, but first let me say goodbye to those at my house."OKCVಇದಲ್ಲದೆ ಮತ್ತೊಬ್ಬನು ಸಹ, “ಕರ್ತದೇವರೇ, ನಾನು ನಿಮ್ಮನ್ನು ಹಿಂಬಾಲಿಸುವೆನು, ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರನ್ನು ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡಿ,” ಎಂದನು.
62Jesus replied, "No one who puts a hand to the plow and looks back is fit for our Father's kingdom."OKCVಆಗ ಯೇಸು ಅವನಿಗೆ, “ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ಯೋಗ್ಯನಲ್ಲ,” ಎಂದರು.