Skip to content
The Believer's Library

Biblica® Open Kannada Contemporary Version 2022

Malachi 1 OKCV

Show OKCV only
Verse × ×
1 This is the word of our Father to Israel, delivered through Malachi. ಒಂದು ಪ್ರವಾದನೆ: ಇಸ್ರಾಯೇಲಿಗೆ ಮಲಾಕಿಯನ ಮುಖಾಂತರ ಬಂದ ಯೆಹೋವ ದೇವರ ವಾಕ್ಯ:
2 "I have loved you," says our Father. "But you ask, 'How have you loved us?' Wasn't Esau Jacob's brother?" declares our Father. "Yet I loved Jacob, “ನಾನು ನಿಮ್ಮನ್ನು ಪ್ರೀತಿ ಮಾಡಿದೆನು” ಎಂದು ಯೆಹೋವ ದೇವರು ಹೇಳುತ್ತಾರೆ. “ನೀವಾದರೋ, ‘ಯಾವುದರಲ್ಲಿ ನೀವು ನಮ್ಮನ್ನು ಪ್ರೀತಿ ಮಾಡಿದ್ದೀರಿ?’ ಎಂದು ಕೇಳುತ್ತೀರಿ. “ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದರೂ ನಾನು ಯಾಕೋಬನನ್ನು ಪ್ರೀತಿ ಮಾಡಿದೆನು. ಎಂದು ಯೆಹೋವ ದೇವರು ಅನ್ನುತ್ತಾರೆ.
3 but Esau I hated. I made his hill country wasteland, left his inheritance to desert jackals." ಏಸಾವನನ್ನು ದ್ವೇಷ ಮಾಡಿದೆನು. ಅವನ ಬೆಟ್ಟಗಳನ್ನು ಹಾಳು ಮಾಡಿ, ಅವನ ಸೊತ್ತನ್ನು ಅಡವಿಯ ನರಿಗಳಿಗೆ ಕೊಟ್ಟೆನು.”
4 Edom may say, "We are shattered, but we will rebuild the ruins." But the Father of heaven's armies says: "They may build, but I will tear down. They will be called the Wicked Land, the people our Father stays angry with forever." ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು.
5 Your own eyes will see it, and you'll say, 'Great is our Father—beyond Israel's borders!' ನಿಮ್ಮ ಕಣ್ಣುಗಳಿಂದ ನೋಡಿ, ‘ಇಸ್ರಾಯೇಲಿನ ಮೇರೆ ಆಚೆಗೂ ಯೆಹೋವ ದೇವರು ಮಹೋನ್ನತರು!’ ಎಂದು ನೀವು ಹೇಳುವಿರಿ.”
6 "A son honors his father, a servant his master. If I am a father, where is my honor? If a master, where is my respect? says the Father of heaven's armies to you priests who despise my name. But you ask, 'How have we despised your name?'" “ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”
7 "You put unclean food on my altar, then ask, 'How have we made you unclean?' By calling our Father's table despised. “ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ!
8 When you offer a blind animal, isn't that evil? Offer the lame and sick—isn't that evil? Present it to your governor—will he be pleased with you? Will he accept you?" says the Father of heaven's armies. ಇದಲ್ಲದೆ, ಕುರುಡಾದ ಪಶುಗಳನ್ನು ಬಲಿಗಾಗಿ ಅರ್ಪಿಸಿದರೆ, ಅದು ದೋಷವಲ್ಲವೋ? ಕುಂಟಾದ ಮತ್ತು ರೋಗವುಳ್ಳ ಪಶುಗಳನ್ನು ಅರ್ಪಿಸಿದರೆ, ಅದು ಕೆಟ್ಟದ್ದಲ್ಲವೋ? “ಅದನ್ನು ನಿನ್ನ ರಾಜ್ಯಪಾಲನಿಗೆ ಅರ್ಪಿಸು, ಅವನು ನಿನ್ನನ್ನು ಮೆಚ್ಚುವನೋ? ನಿಮ್ಮನ್ನು ಸ್ವೀಕಾರ ಮಾಡುವನೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
9 "Now plead with our Father to be gracious to us. With such offerings from your hands, will he accept any of you?" says the Father of heaven's armies. “ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ. ನಿಮ್ಮ ಕೈಗಳಿಂದ ಅಂಥ ಅರ್ಪಣೆಯನ್ನು ಅವರು ಸ್ವೀಕರಿಸುವರೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
10 "If only one of you would shut the doors, so you would not light useless fires on my altar! I take no pleasure in you," says the Father of heaven's armies, "and I will accept no offering from your hands. “ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.
11 From sunrise to sunset my name will be great among the nations. Everywhere incense and pure offerings will be brought to my name, because my name will be great among the nations," says the Father of heaven's armies. ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
12 "But you desecrate it, saying the Sovereign Father's table is unclean and its food may be despised." “ಆದರೆ ನೀವು ಯೆಹೋವ ದೇವರ ಮೇಜು ಅಶುದ್ಧ, ‘ಅದರ ಫಲವೂ, ಅದರ ಆಹಾರವೂ ಅಸಹ್ಯ,’ ಎಂದು ಹೇಳಿ ಅದನ್ನು ಅಪವಿತ್ರ ಮಾಡಿದ್ದೀರಿ.
13 "You say, 'What a burden!' and snort at it in contempt," says the Father of heaven's armies. "You bring stolen, lame, and diseased animals as offerings—should I accept them from you?" says our Father. ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.
14 "Cursed is the cheat who has a sound male in his flock and vows it, but sacrifices a defective animal to the Sovereign Father. For I am a great King," says the Father of heaven's armies, "and my name is to be feared among the nations." “ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]