Skip to content
The Believer's Library

Biblica® Open Kannada Contemporary Version 2022

Malachi 2 OKCV

Show OKCV only
Verse × ×
1 Now, priests, this command is for you. “ಈಗ ಯಾಜಕರೇ, ಈ ಎಚ್ಚರಿಕೆ ನಿಮಗಾಗಿ ಇದೆ.
2 If you won't listen, or take it to heart to honor my name, says the Father of heaven's armies, I will send the curse on you and curse your blessings. I have already cursed them, because you don't take it to heart. ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,” ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, “ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.
3 I will rebuke your offspring and smear manure on your faces—the manure of your feasts—and you will be carried off with it. “ಇಗೋ, ನಾನು ನಿಮ್ಮ ಸಂತತಿಯನ್ನು ಗದರಿಸುವೆನು. ನಿಮ್ಮ ಮುಖಗಳ ಮೇಲೆ, ನಿಮ್ಮ ಹಬ್ಬ ಬಲಿಗಳ ಸಗಣಿ ಬಳಿಯುವೆನು. ಅದರೊಂದಿಗೆ ನೀವು ಒಯ್ಯಲಾಗುವಿರಿ.
4 Then you will know I sent this command to you, so my covenant with Levi stands, says the Father of heaven's armies. ನಾನು ಲೇವಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಮುಂದುವರಿಯುತ್ತದೆ. ಈ ಎಚ್ಚರಿಕೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳಿದುಕೊಳ್ಳಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
5 "My covenant with him was life and peace; I gave them to him to be held with reverence, and he revered me and trembled before my name. “ನಮ್ಮ ಒಡಂಬಡಿಕೆಯು ಜೀವದ ಹಾಗೂ ಶಾಂತಿಯ ಒಡಂಬಡಿಕೆಯಾಗಿತ್ತು. ಅವುಗಳನ್ನು ನಾನೇ ಅವನಿಗೆ ಕೊಟ್ಟೆನು. ಅವನು ನನಗೆ ಭಯಪಟ್ಟು, ನನ್ನ ಹೆಸರನ್ನು ಘನಪಡಿಸಿದನು.
6 True instruction was in his mouth, no wrong on his lips. He walked with me in peace and integrity, and turned many from sin. ಸತ್ಯ ಬೋಧನೆಯು ಅವನ ಬಾಯಲ್ಲಿ ಇತ್ತು. ಸುಳ್ಳು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ, ನ್ಯಾಯದಿಂದಲೂ ನನ್ನ ಸಂಗಡ ನಡೆದುಕೊಂಡು, ಅನೇಕರನ್ನು ಪಾಪದ ಕಡೆಯಿಂದ ತಿರುಗಿಸಿದನು.
7 A priest's lips guard knowledge, and people seek instruction from his mouth, for he is the messenger of the Father of heaven's armies. “ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.
8 But you turned from the way and made many stumble by your instruction; you corrupted the covenant of Levi, says the Father of heaven's armies. ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
9 So I made you despised and low before all the people, because you haven't kept my ways but shown favoritism in your instruction." “ಆದ್ದರಿಂದ ನೀವು ನನ್ನ ಮಾರ್ಗಗಳನ್ನು ಕೈಗೊಳ್ಳದೆ, ನನ್ನ ನಿಯಮವನ್ನು ಬೋಧಿಸುವಾಗ ಮುಖದಾಕ್ಷಿಣ್ಯ ಮಾಡಿದ ಪ್ರಕಾರವೇ, ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆಯಾದವರನ್ನಾಗಿಯೂ, ನೀಚರನ್ನಾಗಿಯೂ ಮಾಡುವೆನು.”
10 Don't we all have one Father? Didn't one Father create us? Why betray each other, desecrating our fathers' covenant? ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ?
11 Judah is unfaithful; a detestable thing is done in Israel and Jerusalem. Judah has desecrated our Father's holy place, which he loves, and married the daughter of a foreign god. ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.
12 May our Father cut off from Jacob's tents the man who does this—anyone at all—even one bringing an offering to the Father of heaven's armies. ಇದನ್ನು ಮಾಡುವ ಮನುಷ್ಯನನ್ನು ಅವನು ಯಾರೇ ಆಗಲಿ, ಅವನು ಯೆಹೋವ ದೇವರಿಗೆ ಕಾಣಿಕೆ ಅರ್ಪಿಸಲು ತಂದರೂ ಸಹ, ಯಾಕೋಬನ ಗುಡಾರಗಳೊಳಗಿಂದ ಸೇನಾಧೀಶ್ವರ ಯೆಹೋವ ದೇವರು ತೆಗೆದು ಹಾಕಲಿ.
13 And a second thing you do: you cover our Father's altar with tears, weeping and groaning, because he no longer regards the offering or accepts it gladly from your hand. ನೀವು ಇನ್ನೊಂದನ್ನು ಮಾಡಿದ್ದೀರಿ. ಯೆಹೋವ ದೇವರ ಬಲಿಪೀಠಗಳನ್ನು ಕಣ್ಣೀರಿನಿಂದ ತುಂಬಿಸಿದ್ದೀರಿ. ಆದ್ದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷಿಸದೆ, ಅದನ್ನು ನಿಮ್ಮ ಕೈಯಿಂದ ಮೆಚ್ಚಿಕೆಯಾಗಿ ಅಂಗೀಕರಿಸುವುದಿಲ್ಲವಾದ್ದರಿಂದ ನೀವು ಅಳುತ್ತೀರಿ, ಗೋಳಾಡುತ್ತೀರಿ.
14 You ask, "Why?" Because our Father witnessed between you and the wife of your youth, whom you betrayed—though your companion, your wife by covenant. ಆದರೂ ಯೆಹೋವ ದೇವರು ನಿನಗೂ, ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿದ್ದರು. ಆದರೂ ನಿನ್ನ ಜೊತೆಯವಳೂ, ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದವಳಿಗೆ ನೀನು ಅಪನಂಬಿಗಸ್ತನಾಗಿದ್ದೀ.
15 Didn't the Father make you one with your wife? Body and spirit, you are his. And what does he want? Godly children from your union. So guard your spirit; let no one betray the wife of his youth. ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.
16 "For I hate divorce," says our Father, the Father of Israel, "and whoever covers his garment with violence," says the Father of heaven's armies. So guard your spirit; do not be unfaithful. “ವಿವಾಹ ವಿಚ್ಛೇದನವನ್ನು ನಾನು ಹಗೆಮಾಡುತ್ತೇನೆ,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾನೆ. “ತನ್ನ ಹೆಂಡತಿಗೆ ನಂಬಿಕೆದ್ರೋಹ ಬಗೆದು, ದೌರ್ಜನ್ಯ ತೋರುವವನನ್ನು ನಾನು ಹಗೆಮಾಡುತ್ತೇನೆ,” ಎಂದು ಸರ್ವಶಕ್ತರಾದ ದೇವರು ಹೇಳುತ್ತಾರೆ. ಆದ್ದರಿಂದ ನೀವು ವಂಚನೆಯುಳ್ಳವರಾಗಿ ನಡೆಯದ ಹಾಗೆ ನಿಮ್ಮ ಆತ್ಮದಲ್ಲಿ ಎಚ್ಚರಿಕೆಯಾಗಿರಿ.
17 You have worn out our Father with your words. Yet you ask, "How have we worn him out?" By saying, "All who do evil are good in his sight, and he delights in them"—or, "Where is the Father of justice?" “ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]