Skip to content
The Believer's Library

Biblica® Open Kannada Contemporary Version 2022

Malachi 3 OKCV

Show OKCV only
Verse × ×
1 Look, I am sending my messenger, and he will prepare the way before me. Then suddenly the Lord whom you are seeking will come to his temple—the messenger of the covenant in whom you delight. Look, he is coming, says the Father of heaven's armies. “ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
2 "But who can endure the day he comes? Who can stand when he appears? He is like a refiner's fire, like a launderer's soap. ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.
3 He will sit refining and purifying silver; he will purify Levi's sons and refine them like gold and silver, and they will bring offerings to our Father in righteousness. ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.
4 Then Judah and Jerusalem's offering will please our Father, as in days past, as in former years." ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.
5 I will come near to judge you, a swift witness against sorcerers, adulterers, those who swear falsely, who cheat the worker of his wages, oppress the widow and orphan, push aside the foreigner, and do not fear me, says the Father of heaven's armies. “ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
6 For I, your Father, do not change; therefore you, children of Jacob, have not been destroyed. “ನಾನು ಯೆಹೋವ ದೇವರು. ನಾನು ಬದಲಾಗುವುದಿಲ್ಲ. ಆದ್ದರಿಂದ ನೀವು ಯಾಕೋಬಿನ ವಂಶಜರೇ, ನಾಶವಾಗುವುದಿಲ್ಲ.
7 Since your ancestors' days you have turned from my statutes and not kept them. Return to me, and I will return to you, says the Father of heaven's armies. But you ask, 'How are we to return?' ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಅನುಸರಿಸಲಿಲ್ಲ. ನನ್ನ ಬಳಿಗೆ ತಿರುಗಿಕೊಳ್ಳಿರಿ. ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ಯಾವುದರಲ್ಲಿ ತಿರುಗಿಕೊಳ್ಳೋಣ?’ ಎಂದು ಹೇಳುತ್ತೀರಿ.
8 Will a person rob their Father? Yet you rob me. But you ask, 'How have we robbed you?' In the tenth and the offerings. “ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!
9 You are cursed with a curse, for you are robbing me—the whole nation of you. ಇದರಿಂದ ಶಾಪವು ನಿಮಗಾಯಿತು, ಏಕೆಂದರೆ ನೀವು, ಈ ಸಮಸ್ತ ಜನಾಂಗವೇ ನನ್ನಲ್ಲಿ ಕಳ್ಳತನ ಮಾಡುತ್ತಿದ್ದಿರಿ.
10 Bring the full tenth into the storehouse, so there's food in my house. Test me in this, says the Father of heaven's armies, and see if I won't open heaven's windows for you and pour out blessing for you until there's no more need. ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
11 I will rebuke the devourer for you, so it will not destroy your ground's fruit, and your vine in the field will not fail to bear, says the Father of heaven's armies. “ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
12 Then all nations will call you blessed, for you will be a land of delight, says the Father of heaven's armies. “ಆಗ ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು. ಏಕೆಂದರೆ ನೀವು ರಮ್ಯವಾದ ದೇಶವಾಗುವಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
13 Your words were harsh against me, says our Father. But you ask, 'What have we said against you?' “ನೀವು ನನಗೆ ವಿರೋಧವಾಗಿ ಅಹಂಕಾರದಿಂದ ಮಾತುಗಳನ್ನಾಡಿದಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೂ ನೀವು, ‘ನಿನಗೆ ವಿರೋಧವಾಗಿ ನಾವು ಏನು ಮಾತಾಡಿದ್ದೇವೆ?’ ಎನ್ನುತ್ತೀರಿ.”
14 You said, 'Serving God is useless. What have we gained by keeping his charge and walking as mourners before the Father of heaven's armies?' “ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,
15 Now we call the arrogant blessed. Those who do evil prosper; they even test God and escape. ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”
16 Then those who feared our Father spoke to one another, and he listened and heard. A scroll of remembrance was written before him for those who fear him and treasure his name. ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.
17 They will be mine, says the Father of heaven's armies, on the day I act, my treasured possession. I will spare them as a father spares his son who serves him. “ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
18 Once more you will see the difference between the righteous and the wicked, between one who serves our Father and one who does not serve him. ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]