Skip to content
The Believer's Library

Biblica® Open Kannada Contemporary Version 2022

Mark 1 OKCV

Show OKCV only
Verse × ×
1 The beginning of the gospel of Jesus Christ, the Son of our Father. ದೇವಪುತ್ರರಾದ ಯೇಸುಕ್ರಿಸ್ತರ ಸುವಾರ್ತೆಯ ಆರಂಭ.
2 As written in Isaiah the prophet: "Look, I send my messenger ahead of you, who will prepare your way. ಪ್ರವಾದಿ ಯೆಶಾಯನ ಗ್ರಂಥದಲ್ಲಿ: “ಇಗೋ, ನಿನ್ನ ಮುಂದೆ ನಾನು ನನ್ನ ದೂತನನ್ನು ಕಳುಹಿಸುತ್ತೇನೆ, ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
3 A voice calling out in the wilderness: 'Prepare the way of the Lord, make his paths straight.'" “ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವವನ ಸ್ವರವದೆ.”
4 John appeared, baptizing in the wilderness and proclaiming a baptism of repentance for the forgiveness of sins. ಎಂದು ಬರೆದಿಟ್ಟ ಪ್ರಕಾರ, ಸ್ನಾನಿಕನಾದ ಯೋಹಾನನು ಅರಣ್ಯದಲ್ಲಿ ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು, ಸಾರುತ್ತಾ ಬಂದನು.
5 All Judea and everyone in Jerusalem went out to him, and he baptized them in the Jordan River as they confessed their sins. ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
6 John was dressed in camel's hair, with a leather belt around his waist, eating locusts and wild honey. ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿ, ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
7 He announced: "After me comes one stronger than I; I'm not worthy to stoop and untie his sandal strap. ಅವನು, “ನನಗಿಂತ ಶಕ್ತರೊಬ್ಬರು ನನ್ನ ನಂತರ ಬರುತ್ತಾರೆ, ಅವರ ಪಾದರಕ್ಷೆಗಳ ಪಟ್ಟಿಗಳನ್ನು ದಾಸನಂತೆ ಬಾಗಿ ಬಿಚ್ಚುವುದಕ್ಕೂ ನಾನು ಅರ್ಹನಲ್ಲ.
8 I have baptized you with water, but he will baptize you with the Holy Spirit." ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು.
9 In those days Jesus came from Nazareth of Galilee and was baptized by John in the Jordan. ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.
10 Immediately, as he came up out of the water, he saw the heavens split open and the Holy Spirit come down on him like a dove. ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.
11 And a voice came from heaven: "You are my beloved Son; in you I delight." ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.
12 And immediately the Holy Spirit drove him out into the wilderness. ಕೂಡಲೇ ಪವಿತ್ರಾತ್ಮ ದೇವರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.
13 He was in the wilderness forty days, tempted by Satan, with the wild animals, and the angels served him. ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.
14 Now after John was arrested, Jesus came into Galilee, proclaiming the gospel of our Father, ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:
15 and saying, "The time is fulfilled, and our Father's kingdom is near; repent and believe the good news." “ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.
16 Passing the Sea of Galilee, he saw Simon and his brother Andrew casting a net in the sea, for they were fishermen. ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಸೀಮೋನನು ಮತ್ತು ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.
17 And Jesus said to them, "Follow me, and I will make you become fishers of people." ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.
18 And immediately they left their nets and followed him. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
19 Going a little farther, he saw James son of Zebedee and John his brother in their boat, mending the nets. ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಕಂಡರು. ಅವರು ತಮ್ಮ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
20 At once he called them; leaving their father Zebedee in the boat with the hired hands, they followed him. ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
21 They went to Capernaum. At once, on the Sabbath, he entered the synagogue and began teaching. ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್ ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.
22 They were amazed at his teaching, for he taught them with authority, not like the scribes. ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.
23 And immediately there was in their synagogue a man with an unclean spirit, and he cried out. ಆ ಸಮಯದಲ್ಲಿ ಸಭಾಮಂದಿರದೊಳಗೆ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
24 Why meddle with us, Jesus of Nazareth? Have you come to destroy us? I know who you are—God's Holy One! ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.
25 But Jesus rebuked him, saying, "Be silent, and come out of him!" ಆಗ ಯೇಸು, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದು ಗದರಿಸಿದರು.
26 And the unclean spirit, convulsing him and crying out with a loud voice, came out of him. ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು.
27 All were amazed, and they questioned each other: "What is this? A new teaching with authority - he commands even the unclean spirits, and they obey him!" ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
28 And at once his fame spread everywhere throughout all the surrounding region of Galilee. ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು.
29 Immediately he left the synagogue and went to Simon and Andrew's house, with James and John. ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು.
30 Now Simon's mother-in-law lay sick with a fever, and immediately they told him about her. ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು.
31 He came, took her hand, raised her up. The fever left her, and she served them. ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.
32 That evening, when the sun set, they brought him all who were sick and those oppressed by demons. ಆ ಸಂಜೆ ಸೂರ್ಯಾಸ್ತವಾದ ಮೇಲೆ ಜನರು ಅಸ್ವಸ್ಥರಾದವರನ್ನು ಮತ್ತು ದೆವ್ವಪೀಡಿತರನ್ನು ಯೇಸುವಿನ ಬಳಿಗೆ ಕರೆತಂದರು.
33 And the whole city was gathered together at the door. ಇಡೀ ಊರಿನವರು ಕೂಡಿ ಆ ಮನೆಯ ಬಾಗಿಲಿನ ಬಳಿ ಬಂದರು.
34 He healed many sick with various diseases and drove out many demons, not letting the demons speak, since they knew him. ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.
35 Long before dawn, while still dark, he got up, went out to a deserted place, and prayed there. ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು.
36 And Simon and those who were with him searched for him, ಆಗ ಸೀಮೋನನು ಮತ್ತು ಅವನ ಸಂಗಡಿಗರು ಯೇಸುವನ್ನು ಹುಡುಕಿಕೊಂಡು ಹೋದರು.
37 and they found him and said to him, "Everyone is looking for you." ಯೇಸುವನ್ನು ಕಂಡ ಮೇಲೆ, “ಎಲ್ಲರೂ ನಿಮ್ಮನ್ನು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದರು.
38 He said, "Let us go elsewhere, to the neighboring towns, so I can preach there too, for that is why I came." ಯೇಸು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ. ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು. ನಾನು ಬಂದಿರುವುದು ಇದಕ್ಕಾಗಿಯೇ,” ಎಂದು ಹೇಳಿದರು.
39 And he went throughout all Galilee, preaching in their synagogues and casting out demons. ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.
40 A man with leprosy came, knelt, and begged him, "If you're willing, you can make me clean." ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.
41 Moved with deep compassion, he stretched out his hand, touched him, and said to him, "I am willing; be clean." ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.
42 And immediately the leprosy left him, and he was made clean. ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು.
43 Sternly warning him, he sent him away at once, ಯೇಸು ಅವನಿಗೆ, “ನೋಡು, ಇದನ್ನು ಯಾರಿಗೂ ಹೇಳಬೇಡ. ಆದರೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿ, ಮೋಶೆಯು ಆಜ್ಞಾಪಿಸಿದ್ದನ್ನು ಶುದ್ಧತ್ವಕ್ಕಾಗಿ ಸಮರ್ಪಿಸು ಇದು ಅವರಿಗೆ ಸಾಕ್ಷಿಯಾಗಿರಲಿ,” ಎಂದು ಅವನಿಗೆ ಕಟ್ಟುನಿಟ್ಟಾಗಿ ಎಚ್ಚರಿಸಿ, ಕೂಡಲೇ ಅವನನ್ನು ಕಳುಹಿಸಿಬಿಟ್ಟರು.
44 and told him, "Make sure you tell no one—but go, show yourself to the priest, and offer what Moses commanded for your cleansing, as proof to the people." Not in this edition
45 But he went out, proclaiming it freely and spreading the news, so Jesus could no longer enter a town openly, but stayed in lonely places. Yet people came to him from everywhere. ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]