Skip to content
The Believer's Library

Biblica® Open Kannada Contemporary Version 2022

Mark 10 OKCV

Show OKCV only
Verse × ×
1 He left there for the region of Judea and beyond the Jordan; crowds gathered to him again, and as usual he taught them once more. ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.
2 Some Pharisees came to test him, asking, "Is it lawful for a man to divorce his wife?" ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಪರೀಕ್ಷಿಸುವುದಕ್ಕಾಗಿ ಯೇಸುವಿಗೆ, “ಒಬ್ಬ ಪುರುಷನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.
3 He answered them, "What did Moses command you?" ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮಗೆ ಏನು ಅಪ್ಪಣೆಕೊಟ್ಟನು?” ಎಂದು ಕೇಳಿದರು.
4 They said, "Moses permitted a man to write a certificate of divorce and send her away." ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು.
5 Jesus told them, "He wrote you this command because your hearts were hard. ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.
6 But from the beginning of creation, our Father made them male and female. ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.’
7 'For this reason a man will leave his father and mother and be joined to his wife, ‘ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
8 and the two will become one flesh.' So they are no longer two, but one flesh. ಅವರಿಬ್ಬರೂ ಒಂದೇ ಶರೀರವಾಗಿರುವರು.’ ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
9 Therefore what our Father has joined together, let no one separate." ಆದಕಾರಣ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು,” ಎಂದರು.
10 Back in the house, the disciples asked him about this again. ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಯೇಸುವಿಗೆ ತಿರುಗಿ ಕೇಳಿದರು.
11 He said to them, "Whoever divorces his wife and marries another commits adultery against her, ಅದಕ್ಕೆ ಯೇಸು ಅವರಿಗೆ, “ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಯಾದರೆ, ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿದ್ದಾನೆ.
12 and if she divorces her husband and marries another, she commits adultery." ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ, ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ,” ಎಂದರು.
13 People were bringing children to him so that he might touch them, but the disciples rebuked them. ಕೆಲವರು ತಮ್ಮ ಚಿಕ್ಕಮಕ್ಕಳನ್ನು ಯೇಸು ಮುಟ್ಟಬೇಕೆಂದು ಅವರ ಬಳಿಗೆ ತಂದರು. ಆದರೆ ಶಿಷ್ಯರು ಜನರನ್ನು ಗದರಿಸಿದರು.
14 When Jesus saw this, he grew angry and said, "Let the children come to me; don't stop them, for the kingdom of our Father belongs to such as these. ಯೇಸು ಅದನ್ನು ಕಂಡಾಗ ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.
15 Truly I tell you, whoever doesn't receive our Father's kingdom like a child will never enter it." ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.
16 And he took them in his arms and blessed them, laying his hands on them. ಇದಲ್ಲದೆ ಯೇಸು ಆ ಮಕ್ಕಳನ್ನು ಎತ್ತಿಕೊಂಡು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದರು.
17 As he started down the road, a man ran up, knelt before him, and asked, "Good Teacher, what must I do to inherit eternal life?" ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು.
18 Jesus asked, "Why call me good? No one is good except our Father alone. ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬನೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.
19 You know the commandments: 'don't murder, commit adultery, steal, or give false testimony; don't defraud; honor your father and mother.'" ‘ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.
20 He said to him, "Teacher, all these I have kept since my youth." ಅವನು, “ಬೋಧಕರೇ, ನಾನು ಇವೆಲ್ಲವನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ,” ಎಂದು ಹೇಳಿದನು.
21 Jesus looked at him and loved him. "One thing you lack: go, sell everything you own, give to the poor—you'll have treasure in heaven—then come follow me." ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
22 At this word his face fell, and he went away grieving, for he had many possessions. ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.
23 Jesus looked around and told his disciples, "How hard it will be for the wealthy to enter the kingdom of our Father!" ಯೇಸು ಸುತ್ತಲೂ ನೋಡಿ ತಮ್ಮ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!” ಎಂದರು.
24 The disciples were amazed at his words. Jesus said to them again, "Children, how hard it is to enter the kingdom of our Father! ಶಿಷ್ಯರು ಯೇಸುವಿನ ಮಾತುಗಳಿಗೆ ಬೆರಗಾದರು. ಆದರೆ ಯೇಸು ತಿರುಗಿ ಅವರಿಗೆ, “ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ.
25 A camel goes through a needle's eye easier than a rich person enters our Father's kingdom." ಒಬ್ಬ ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.
26 They were even more astonished and said to one another, "Then who can be saved?" ಅದಕ್ಕೆ ಶಿಷ್ಯರು ಅತ್ಯಂತ ಆಶ್ಚರ್ಯಪಟ್ಟು ತಮ್ಮೊಳಗೆ, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದುಕೊಂಡರು.
27 Jesus looked at them and said, "With man, impossible; but not with our Father, for all things are possible with our Father." ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ,” ಎಂದರು.
28 Peter began to say to him, "Look, we have left everything and followed you." ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ,” ಎಂದು ಹೇಳಲಾರಂಭಿಸಿದನು.
29 Jesus said, "Truly I tell you, no one has left house or brothers or sisters or mother or father or children or fields for my sake and for the gospel, ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ,
30 "who won't receive a hundredfold now, in this time—houses, brothers, sisters, mothers, children, fields, with persecutions—and in the age to come, eternal life. ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು.
31 But many who are first will be last, and the last first." ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲಿನವರಾಗುವರು,” ಎಂದರು.
32 On the road up to Jerusalem, Jesus walked ahead of them. They were amazed, and those following were afraid. Taking the twelve aside again, he began telling them what was about to happen to him: ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು. ಯೇಸು ಅವರ ಮುಂದಾಗಿ ಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಯೇಸುವಿನ ಹಿಂದೆ ಬರುತ್ತಿದ್ದವರು ಭಯಪಟ್ಟರು. ಯೇಸು ತಮ್ಮ ಹನ್ನೆರಡು ಮಂದಿಯನ್ನು ತಿರುಗಿ ಕರೆದು ತನಗೆ ಸಂಭವಿಸುವ ಸಂಗತಿಗಳನ್ನು ಅವರಿಗೆ ಹೇಳಲಾರಂಭಿಸಿದರು:
33 "Look, we're going up to Jerusalem. The Son of Man will be handed over to the chief priests and scribes, who will condemn him to death and hand him over to the Gentiles. “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸಿ ನನ್ನನ್ನು ಯೆಹೂದ್ಯರಲ್ಲದವರಿಗೆ ಒಪ್ಪಿಸುವರು.
34 They will mock him, spit on him, flog him, and kill him; after three days he will rise." ಇವರು ನನ್ನನ್ನು ಹಾಸ್ಯಮಾಡಿ, ನನ್ನ ಮೇಲೆ ಉಗುಳಿ, ಕೊರಡೆಯಿಂದ ಹೊಡೆದು ನನ್ನನ್ನು ಕೊಂದುಹಾಕುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದರು.
35 James and John, Zebedee's sons, came to him and said, "Teacher, we want you to do for us whatever we ask." ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಬೋಧಕರೇ, ನಾವು ಕೇಳುವುದನ್ನು ನೀವು ನಮಗೋಸ್ಕರ ಮಾಡಬೇಕು,” ಎಂದರು.
36 He said to them, "What do you want me to do for you?" ಅದಕ್ಕೆ ಯೇಸು ಅವರಿಗೆ, “ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಿದರು.
37 They said to him, "Let us sit in your glory, one at your right, one at your left." ಅವರು ಯೇಸುವಿಗೆ, “ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು,” ಎಂದರು.
38 Jesus said to them, "You don't know what you're asking. Can you drink the cup I drink, or be baptized with the baptism I'm baptized with?" ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ನೀವೂ ಕುಡಿಯುವಿರೋ? ನಾನು ಪಡೆಯಲಿರುವ ದೀಕ್ಷಾಸ್ನಾನವನ್ನು ನೀವೂ ಪಡೆಯುವಿರೋ?” ಎಂದರು.
39 "We can," they said. Jesus said to them, "The cup I drink, you will drink; the baptism I'm baptized with, you will be baptized with, ಅದಕ್ಕೆ ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು. ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಿಂದ ನೀವು ಕುಡಿಯುವಿರಿ. ನಾನು ಹೊಂದುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.
40 but sitting at my right or left isn't mine to give - that's for those it's prepared for." ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದರು.
41 Hearing this, the ten grew indignant at James and John. ಆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು.
42 Jesus called them together and said, "You know that those regarded as rulers of the Gentiles dominate them, and their great ones wield power over them. ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು ಅವರಿಗೆ, “ಆಳುವವರು ಎಂದೆನಿಸಿಕೊಂಡವರು ಯೆಹೂದ್ಯರಲ್ಲದವರ ಮೇಲೆ ದೊರೆತನ ಮಾಡುತ್ತಾರೆ. ಅವರಲ್ಲಿ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
43 But it isn't so among you. Instead, whoever wants to be great among you must be your servant, ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.
44 and whoever wants to be first among you must be slave of all. ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ ಎಲ್ಲರಿಗೂ ದಾಸನಾಗಿರಲಿ.
45 For even the Son of Man came not to be served, but to serve, and to give his life as a ransom for many." ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.
46 They came to Jericho. As Jesus and his disciples were leaving with a large crowd, blind Bartimaeus son of Timaeus sat begging by the road. ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸು ತಮ್ಮ ಶಿಷ್ಯರೊಡನೆಯೂ ಅಸಂಖ್ಯಾತ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗ ಕುರುಡ ಬಾರ್ತಿಮಾಯನು ದಾರಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.
47 Hearing it was Jesus of Nazareth, he began to cry out, "Jesus, Son of David, have mercy on me!" ನಜರೇತಿನ ಯೇಸು ಬರುತ್ತಿದ್ದಾರೆ ಎಂದು ಅವನು ಕೇಳಿದಾಗ, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಕೂಗಿಕೊಳ್ಳಲಾರಂಭಿಸಿದನು.
48 Many scolded him to be silent, but he shouted even louder, "Son of David, have mercy on me!" ಸುಮ್ಮನಿರುವಂತೆ ಅನೇಕರು ಅವನಿಗೆ ಒತ್ತಾಯಪಡಿಸಿ ಹೇಳಿದರು. ಆದರೆ ಅವನು ಇನ್ನೂ ಗಟ್ಟಿಯಾಗಿ, “ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಇನ್ನಷ್ಟು ಕೂಗಿದನು.
49 Jesus stopped and said, "Call him." So they called the blind man: "Courage! Get up—he's calling you." ಯೇಸು ನಿಂತು, ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು, ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಅವನಿಗೆ ಹೇಳಿದರು.
50 Throwing off his cloak, he jumped up and came to Jesus. ಅವನು ತನ್ನ ಮೇಲಂಗಿಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.
51 Jesus told him, "What do you want me to do for you?" The blind man told him, "Rabboni, let me see again." ಯೇಸು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ?” ಎಂದು ಕೇಳಲು, ಆ ಕುರುಡನು ಯೇಸುವಿಗೆ, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡಬೇಕು,” ಎಂದನು.
52 Jesus told him, "Go; your faith has healed you." At once he regained his sight and followed Jesus on the road. ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]