Skip to content
The Believer's Library

Biblica® Open Kannada Contemporary Version 2022

Mark 13 OKCV

Show OKCV only
Verse × ×
1 Leaving the temple, one of his disciples said to him, "Teacher, look! What huge stones, what magnificent buildings!" ಯೇಸು ದೇವಾಲಯದೊಳಗಿಂದ ಹೊರಗೆ ಹೋಗುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ಬೋಧಕರೇ, ಇಲ್ಲಿ ಎಂಥಾ ಭಾರಿ ಕಲ್ಲುಗಳು ಮತ್ತು ಎಂಥಾ ಮಹಾ ಕಟ್ಟಡಗಳು ಇವೆ ನೋಡಿರಿ!” ಎಂದನು.
2 Jesus said to him, "Do you see these great buildings? Not one stone will remain here on another; all will be torn down." ಯೇಸು ಅವನಿಗೆ ಉತ್ತರವಾಗಿ, “ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು,” ಎಂದರು.
3 As he sat on the Mount of Olives facing the temple, Peter, James, John, and Andrew asked him privately, ಯೇಸು ಓಲಿವ್ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ ಇವರು ಪ್ರತ್ಯೇಕವಾಗಿ ಯೇಸುವಿಗೆ,
4 tell us, when will these things happen, and what sign shows all this is about to be fulfilled? “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವೂ ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು,” ಎಂದು ಕೇಳಿದರು.
5 Jesus began to tell them: "Watch out that no one deceives you. ಯೇಸು ಅವರಿಗೆ ಹೀಗೆಂದನು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
6 Many will come in my name, claiming, 'I am he,' and they will deceive many. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
7 When you hear of wars and rumors of wars, don't be troubled—these must happen, but the end isn't yet. ಇದಲ್ಲದೆ ಯುದ್ಧಗಳನ್ನೂ, ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.
8 Nation will rise against nation, kingdom against kingdom, earthquakes in various places, famines—these are the beginning of birth pains. ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ.
9 Watch yourselves. They'll hand you to councils and beat you in synagogues. Because of me you'll stand before governors and kings, as a testimony to them. “ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.
10 And the gospel must first be proclaimed to all nations. ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರುವುದು ಅಗತ್ಯವಾಗಿದೆ.
11 When they arrest and hand you over, don't worry beforehand what to say. Say whatever you're given in that hour—it's not you speaking, but the Holy Spirit. ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.
12 Brother will betray brother to death, father his child. Children will rise against parents and have them put to death. “ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
13 All will hate you for my name, but whoever endures to the end will be saved. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.
14 When you see the abomination of desolation standing where it should not be (reader, take note), those in Judea must flee to the mountains. “ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
15 Let no one on the housetop go down or enter the house to take anything out. ಮಾಳಿಗೆಯ ಮೇಲಿದ್ದವರು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ತಮ್ಮ ಮನೆಯೊಳಗೆ ಪ್ರವೇಶಿಸಿ ಅದರೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.
16 Let no one in the field go back to get their coat. ಹೊಲದಲ್ಲಿರುವವರು ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ.
17 How dreadful it will be in those days for pregnant women and nursing mothers! ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!
18 Pray that it will not happen in winter, ಈ ಸಂಕಟ ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
19 for those days will bring suffering unmatched since our Father created the world until now—and never to be matched again. ಆ ದಿವಸಗಳಲ್ಲಿ ಮಹಾ ಸಂಕಟವಿರುವುದು, ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ಸಮಯದವರೆಗೂ ಅಂಥ ಸಂಕಟವು ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.
20 Had the Sovereign not shortened those days, no one would survive; but the Sovereign shortened them for the elect he chose. “ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.
21 Then if anyone tells you, 'Look, here is the Christ!' or 'Look, there!' don't believe it. ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತನು ಇಲ್ಲಿದ್ದಾನೆ, ಅಗೋ, ಆತನು ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿರಿ.
22 False christs and false prophets will appear, performing signs and wonders to deceive the elect, if possible. ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
23 So be on your guard; I have told you everything ahead of time. ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ.
24 But in those days, after that suffering, the sun will darken, and the moon will not give its light; “ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “ ‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು.
25 the stars will fall from the sky, and the powers in the heavens will be shaken. ಆಕಾಶದಿಂದ ನಕ್ಷತ್ರಗಳು ಬೀಳುವವು ಮತ್ತು ಆಕಾಶದ ಶಕ್ತಿಗಳು ಕದಲುವವು.’
26 Then they will see the Son of Man coming in clouds with great power and glory. “ಆಗ ಮನುಷ್ಯಪುತ್ರನಾದ ನಾನು ಬಹು ಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ಕಾಣುವರು.
27 He will send his angels and gather his chosen from the four winds, from earth's ends to heaven's ends. ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.
28 Learn this from the fig tree: once its branch softens and leaves sprout, you know summer is near. “ಅಂಜೂರದ ಮರದ ಸಾಮ್ಯದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
29 So also, when you see these things happening, know it's near, at the door. ಅದೇ ಪ್ರಕಾರ ಇವೆಲ್ಲವೂ ಸಂಭವಿಸುವುದನ್ನು ನೀವು ಕಾಣುವಾಗ, ಮನುಷ್ಯಪುತ್ರನಾದ ನಾನು ಬಾಗಿಲ ಹತ್ತಿರದಲ್ಲಿಯೇ ಇದ್ದೇನೆ ಎಂದು ತಿಳಿದುಕೊಳ್ಳಿರಿ.
30 Truly I tell you, this generation will certainly not pass away until all these things have happened. ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
31 Heaven and earth will pass away, but my words will never pass away. ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
32 But no one knows that day or hour—not the angels in heaven, not the Son, only the Father. “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.
33 Be on guard! Stay alert! For you do not know when that time will come. ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. ಏಕೆಂದರೆ ಆ ಕಾಲವು ಬರುವುದು ಯಾವಾಗ ಎಂದು ನಿಮಗೆ ತಿಳಿಯದು.
34 Like a man on a journey: he leaves his house, gives his servants authority—each his own task—and orders the doorkeeper to stay alert. ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
35 So stay alert, since you don't know when the master of the house comes—evening, midnight, rooster's crow, or dawn. “ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
36 Otherwise, if he comes suddenly, he may find you sleeping. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವುದನ್ನು ಕಂಡಾನು.
37 What I say to you, I say to everyone: Keep watch!" ನಿಮಗೆ ಹೇಳುವುದನ್ನು ನಾನು ಎಲ್ಲರಿಗೂ ಹೇಳುತ್ತೇನೆ: ‘ಎಚ್ಚರವಾಗಿರಿ,’ ” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]