Skip to content
The Believer's Library

Biblica® Open Kannada Contemporary Version 2022

Mark 14 OKCV

Show OKCV only
Verse × ×
1 Two days before Passover and Unleavened Bread, the chief priests and scribes were looking for a way to seize Jesus by trickery and kill him. ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.
2 For they said, "Not during the feast, or the people might riot." ಆದರೆ ಅವರು, “ಜನರು ದಂಗೆ ಎದ್ದಾರು, ಹಬ್ಬದಲ್ಲಿ ಬೇಡ,” ಎಂದು ಮಾತನಾಡಿಕೊಂಡರು.
3 While he was in Bethany, in Simon the leper's house, reclining at the table, a woman came with an alabaster flask of pure nard perfume, very costly. She broke the flask and poured it on his head. ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅದನ್ನು ಒಡೆದು, ಯೇಸುವಿನ ತಲೆಯ ಮೇಲೆ ಸುರಿಸಿದಳು.
4 There were some who said to themselves indignantly, "Why was this perfume wasted like that? ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥ ಮಾಡಿದ್ದೇಕೆ?
5 For this perfume could have sold for over 300 denarii and given to the poor." And they scolded her. ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಆಕೆಯನ್ನು ನಿಂದಿಸಿದರು.
6 But Jesus said, "Leave her alone. Why trouble her? She has done a beautiful thing for me. ಆದರೆ ಯೇಸು, “ಈಕೆಯನ್ನು ಬಿಟ್ಟುಬಿಡಿರಿ, ಈಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.
7 For the poor are always with you, and you can do good for them whenever you want; but you won't always have me. ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸಿದ್ದರೆ, ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
8 She has done what she could; she has anointed my body beforehand for burial. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.
9 Truly, I tell you, wherever the gospel is preached worldwide, what she did will be told in memory of her." ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.
10 Then Judas Iscariot, one of the twelve, went to the chief priests to betray Jesus to them. ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
11 Hearing this, they were glad and promised him money. So he looked for a chance to betray Jesus. ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು.
12 On the first day of Unleavened Bread, when they sacrificed the Passover lamb, his disciples asked him, "Where do you want us to go and prepare for you to eat the Passover?" ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.
13 He sent two of his disciples, "Go into the city; a man carrying a jar of water will meet you. Follow him, ಆಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, “ನೀವು ಪಟ್ಟಣದೊಳಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
14 and wherever he enters, tell the house's owner, 'The Teacher says: Where is my guest room, where I may eat the Passover with my disciples?' ಅವನು ಯಾವ ಮನೆಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, ‘ನಾನು ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ,’ ಎಂದು ಹೇಳಿರಿ.
15 And he will show you a large upper room furnished and ready; there prepare for us." ಅವನು ಸಜ್ಜುಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಸಿದ್ಧಮಾಡಿರಿ,” ಎಂದರು.
16 The disciples left, went to the city, found things as he had told them, and prepared the Passover. ಅವರ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಯೇಸು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ಧಮಾಡಿದರು.
17 And when it was evening, Jesus came with the twelve. ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದರು.
18 While they reclined and ate, Jesus said, "Truly, I tell you, one of you will betray me, one eating with me." ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
19 They began to grieve and ask him, one by one, "Is it I?" ಆಗ ಅವರು ದುಃಖಿಸಲಾರಂಭಿಸಿ ಒಬ್ಬೊಬ್ಬರಾಗಿ ಯೇಸುವಿಗೆ, “ಅವನು ನಾನಲ್ಲವಲ್ಲಾ?” ಎಂದು ಕೇಳಿದರು.
20 He said to them, "One of the twelve, dipping bread with me into the dish. ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ಎಂದರೆ, ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದುವವನೇ.
21 The Son of Man goes as the Scriptures said about him, but how terrible for that man who betrays him—better if he had never been born." ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು.
22 As they ate, he took bread, blessed it, broke it, gave it to them, and said, "Take; this is my body." ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ಇದು ನನ್ನ ದೇಹ,” ಎಂದರು.
23 He took a cup, gave thanks, gave it to them, and they all drank from it. ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು.
24 He said to them, "This is my blood of the covenant, poured out for many. ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.
25 Truly I tell you, I will not drink wine again until that day when I drink it new in the kingdom of our Father." ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು.
26 And when they had sung a hymn, they went out to the Mount of Olives. ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.
27 Jesus said to them, "You will all stumble, for it's written: 'I will strike the shepherd, and the sheep will be scattered.' ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವುವು.’
28 But after I am raised up, I will go ahead of you to Galilee." ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು.
29 Peter said to him, "Even though they all fall away, I will not." ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದು ಹೇಳಿದನು.
30 Jesus said to him, "Truly I tell you, today, this night, before the rooster crows twice, you will deny me three times." ಆದರೆ ಯೇಸು ಅವನಿಗೆ, “ಈ ದಿವಸ, ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ,” ಎಂದರು.
31 But he insisted, "Even if I must die with you, I will never deny you." They all said the same. ಅದಕ್ಕೆ ಪೇತ್ರನು, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
32 They arrived at a place called Gethsemane, and he told his disciples, "Sit here while I pray." ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಅಲ್ಲಿ ಯೇಸು ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೆ ನೀವು ಇಲ್ಲಿ ಕುಳಿತುಕೊಂಡಿರಿ,” ಎಂದರು.
33 He took Peter, James, and John, and began to feel deep distress and anguish. ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ,
34 He said to them, "My soul is crushed with grief, to death. Stay here and stay alert." “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರಿ,” ಎಂದರು.
35 Going a little farther, he fell to the ground and prayed that, if possible, the hour would pass from him. ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,
36 He said, "Abba, Father, all things are possible for you. Take this cup from me—but let it be your will, not mine." “ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.
37 He returned, found them asleep, and said to Peter, "Simon, are you asleep? Couldn't you stay awake one hour? ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ?
38 Watch and pray, so you don't fall into temptation. The spirit is willing, but the flesh is weak." ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.
39 And again he went away and prayed, saying the same words. ಯೇಸು ತಿರುಗಿ ಹೊರಟುಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು.
40 Again he found them sleeping, eyes heavy, not knowing how to answer him. ಯೇಸು ಹಿಂತಿರುಗಿದಾಗ, ಅವರು ತಿರುಗಿ ನಿದ್ರೆ ಮಾಡುವುದನ್ನು ಕಂಡರು. ಅವರ ಕಣ್ಣುಗಳು ಭಾರವಾಗಿದ್ದವು. ಯೇಸುವಿಗೆ ಏನು ಉತ್ತರಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.
41 He came a third time and said, "Still sleeping and resting? Enough—the hour has come. Look, the Son of Man is handed over into the hands of sinners. ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ.
42 Rise, let us be going; see, my betrayer is here." ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.
43 While he was still speaking, Judas—one of the twelve—arrived, and with him a crowd with swords and clubs from the chief priests, scribes, and elders. ಯೇಸು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ, ನಿಯಮ ಬೋಧಕರ ಮತ್ತು ಹಿರಿಯರ ಕಡೆಯಿಂದ ಬಂದಿದ್ದ ಜನರ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.
44 His betrayer had given them a signal: "The one I kiss is him—seize him and take him away securely." ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು, ಆತನನ್ನು ಹಿಡಿದು, ಭದ್ರವಾಗಿ ತೆಗೆದುಕೊಂಡು ಹೋಗಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.
45 He came up to Jesus at once, said, "Rabbi!" and kissed him. ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.
46 And they laid hands on him and seized him. ಅವರು ಯೇಸುವಿನ ಮೇಲೆ ಕೈಹಾಕಿ ಅವರನ್ನು ಬಂಧಿಸಿದರು.
47 One of the bystanders drew his sword, struck the high priest's servant, and cut off his ear. ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
48 Jesus said to them, "Have you come out with swords and clubs to seize me, like a robber? ಯೇಸು ಅವರಿಗೆ, “ಖಡ್ಗಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬರುವಂತೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ?
49 Every day I was with you in the temple teaching, and you didn't arrest me. But let the Scriptures be fulfilled." ನಾನು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಾ ನಿಮ್ಮ ಸಂಗಡ ಇದ್ದೆನು. ಆಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಪವಿತ್ರ ವೇದಗಳಲ್ಲಿ ಬರೆದಿದ್ದು ನೆರವೇರಲೇಬೇಕು,” ಎಂದರು.
50 And they all left him and fled. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.
51 And a young man followed him, wearing nothing but a linen cloth. And they seized the young man, ಅಲ್ಲಿ ಮೈಮೇಲೆ ದುಪ್ಪಟಿಯನ್ನು ಸುತ್ತಿಕೊಂಡ ಯುವಕನೊಬ್ಬನು ಯೇಸುವನ್ನು ಹಿಂಬಾಲಿಸುತ್ತಿದ್ದನು. ಜನರ ಗುಂಪು ಅವನನ್ನು ಹಿಡಿಯಲು,
52 but he left the linen cloth and ran away naked. ಅವನು ಆ ದುಪ್ಪಟಿಯನ್ನು ಬಿಟ್ಟು, ಬರೀ ಮೈಯಲ್ಲಿ ಓಡಿಹೋದನು.
53 They led Jesus to the high priest, and all the chief priests and elders and scribes gathered. ಅವರು ಯೇಸುವನ್ನು ಮಹಾಯಾಜಕನ ಬಳಿಗೆ ತೆಗೆದುಕೊಂಡು ಹೋದರು. ಯೇಸುವಿನ ಸಂಗಡ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರೂ ಅವನ ಬಳಿಗೆ ಸಭೆ ಕೂಡಿಬಂದರು.
54 Peter had followed at a distance, all the way into the high priest's courtyard, and sat with the guards, warming himself by the fire. ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು.
55 The chief priests and the whole council sought testimony against Jesus to put him to death, but found none. ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಅವರ ವಿರೋಧವಾಗಿ ಸಾಕ್ಷಿಯನ್ನು ಹುಡುಕಿದರು. ಆದರೆ ಒಂದು ಸಾಕ್ಷಿಯೂ ಸಿಗಲಿಲ್ಲ.
56 For many gave false testimony against him, but their testimony did not agree. ಅನೇಕರು ಯೇಸುವಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದಕ್ಕೊಂದು ಒಪ್ಪಲಿಲ್ಲ.
57 And some stood up and gave false testimony against him, saying, ತರುವಾಯ ಕೆಲವರು ಎದ್ದು ಯೇಸುವಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ,
58 "We heard him say, 'I will destroy this temple made by hands, and in three days build another not made by hands.'" “ ‘ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು,’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ,” ಎಂದರು.
59 Yet even about this their testimony did not agree. ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.
60 The high priest stood up in the midst and asked Jesus, "You have no answer? What are these men testifying against you?" ಆಗ ಮಹಾಯಾಜಕನು ಎದ್ದು ಮುಂದೆ ನಿಂತು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು?” ಎಂದು ಕೇಳಿದನು.
61 He stayed silent, answered nothing. Again the high priest asked him, "Are you the Christ, the Son of the Blessed?" ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದರು. ತಿರುಗಿ ಮಹಾಯಾಜಕನು, “ನೀನು ಭಾಗ್ಯವಂತನ ದೇವರ ಪುತ್ರನಾಗಿರುವ ಕ್ರಿಸ್ತನೋ?” ಎಂದು ಯೇಸುವನ್ನು ಕೇಳಿದನು.
62 Jesus said, "I AM, and you will see the Son of Man seated at the right hand of the Mighty One and coming with heaven's clouds." ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.
63 And the high priest tore his clothes and said, "What further witnesses do we need? ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನು ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ?
64 You have heard his blasphemy. What is your decision?" And they all condemned him as deserving death. ನೀವು ದೇವದೂಷಣೆಯನ್ನು ಕೇಳಿದ್ದೀರಲ್ಲಾ ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, “ಈತನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಪುಕೊಟ್ಟರು.
65 Some began spitting on him, covering his face, and punching him, saying to him, "Prophesy!" Then the guards slapped him. ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.
66 While Peter was below in the courtyard, one of the high priest's servant girls came, ಪೇತ್ರನು ಅಂಗಳದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.
67 seeing Peter warming himself, she looked at him and said, "You too were with the Nazarene, Jesus." ಪೇತ್ರನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.
68 But he denied it: "I don't know or understand what you mean." Then he went out to the entrance, and a rooster crowed. ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ ಅರ್ಥವಾಗುತ್ತಲೂ ಇಲ್ಲ,” ಎಂದು ಹೇಳಿ ಹೊರಗೆ ಮುಖ್ಯ ದ್ವಾರದೊಳಗೆ ಹೋದನು. ಆಗ ಹುಂಜವು ಕೂಗಿತು.
69 The servant girl saw him and again told the bystanders, "This man is one of them." ಆ ದಾಸಿಯು ಅವನನ್ನು ತಿರುಗಿ ಕಂಡು ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು,” ಎಂದು ಹೇಳಲಾರಂಭಿಸಿದಳು.
70 But he denied it again. A little later the bystanders again told Peter, "You truly are one of them, for you're a Galilean." ಆಗ ಪೇತ್ರನು ಅದನ್ನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರುಗಿ ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು, ನೀನು ಗಲಿಲಾಯದವನೇ,” ಎಂದರು.
71 He began to call down curses on himself and swear, "I don't know this man you're talking about." ಅವನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿ, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ,” ಎಂದನು.
72 At once a rooster crowed a second time. Peter remembered Jesus' words: "Before the rooster crows twice, you will deny me three times." He broke down and wept. ಕೂಡಲೇ ಎರಡನೆಯ ಸಾರಿ ಹುಂಜ ಕೂಗಿತು. ಹೀಗೆ, “ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ವ್ಯಥೆಪಟ್ಟು ಅತ್ತನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]