Skip to content
The Believer's Library

Biblica® Open Kannada Contemporary Version 2022

Mark 16 OKCV

Show OKCV only
Verse × ×
1 When the Sabbath ended, Mary Magdalene, Mary the mother of James, and Salome bought spices to go anoint him. ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು.
2 Very early on the first day of the week, just after sunrise, they went to the tomb. ವಾರದ ಮೊದಲನೆಯ ದಿನ ಮುಂಜಾನೆ ಸೂರ್ಯೋದಯವಾಗಲು ಅವರು ಸಮಾಧಿಯ ಬಳಿಗೆ ಬರುವಾಗ,
3 They asked each other, "Who will roll the stone away from the tomb's entrance for us?" “ಸಮಾಧಿಯ ದ್ವಾರದಿಂದ ಆ ಬಂಡೆಯನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
4 But looking up, they saw the stone—very large—already rolled away. ಏಕೆಂದರೆ ಆ ಬಂಡೆ ಬಹಳ ದೊಡ್ಡದಾಗಿತ್ತು. ಆದರೆ ಅವರು ಮತ್ತೆ ಕಂಡಾಗ ಆ ಬಂಡೆ ಉರುಳಿಸಲಾಗಿತ್ತು.
5 They entered the tomb and saw a young man dressed in a white robe, seated on the right. They were alarmed. ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.
6 "Don't be alarmed," he said. "You're looking for Jesus the Nazarene, who was crucified. He's risen—he isn't here. Look, the place they laid him. ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.
7 But go, tell his disciples and Peter, 'He goes ahead of you to Galilee. You will see him there, as he told you.'" ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು.
8 Trembling and amazed, the women fled the tomb, telling no one—they were afraid. ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ ಸಮಾಧಿಯ ಬಳಿಯಿಂದ ಓಡಿಹೋದರು. ಅವರು ಹೆದರಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
9 Rising early the first day of the week, Jesus appeared first to Mary Magdalene, from whom he had driven seven demons. ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.
10 She went and told those who had been with him, who were mourning and weeping. ಯೇಸುವಿನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಯೇಸುವಿನ ಬಗ್ಗೆ ಹೇಳಿದಳು.
11 Hearing Jesus was alive and seen by her, they did not believe it. ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ, ಶಿಷ್ಯರು ನಂಬಲಿಲ್ಲ.
12 Afterward Jesus appeared, in a different form, to two of them walking in the country. ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಯೇಸು ಅವರಿಗೆ ಬೇರೊಂದು ರೀತಿಯಲ್ಲಿ ಕಾಣಿಸಿಕೊಂಡರು.
13 They went back and reported it to the others, but they did not believe them either. ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಇವರನ್ನೂ ಅವರು ನಂಬಲಿಲ್ಲ.
14 Later Jesus appeared to the eleven as they reclined at a meal and rebuked their lack of faith and hardness of heart, because they hadn't believed those who saw him risen. ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.
15 He said to them, "Go into all the world and proclaim the good news to all creation. ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.
16 Whoever believes and is baptized will be saved, but whoever does not believe will be condemned. ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
17 And these signs will follow those who believe: in my name they'll drive out demons, speak in new tongues. ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.
18 They will pick up snakes with their hands; if they drink deadly poison, it won't harm them; they will lay hands on the sick, and they will recover." ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.
19 After speaking to them, the Lord Jesus was taken up into heaven and sat at the right hand of our Father. ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.
20 They went out and preached everywhere, the Lord working with them, confirming his word through accompanying signs. ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]