Skip to content
The Believer's Library

Biblica® Open Kannada Contemporary Version 2022

Mark 3 OKCV

Show OKCV only
Verse × ×
1 Once again Jesus entered the synagogue, and a man with a withered hand was there. ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದರು. ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು.
2 They watched closely to see if he'd heal the man on the Sabbath, to accuse Jesus. ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು.
3 Jesus said to the man with the withered hand, "Stand up and come forward." ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.
4 Then he asked them, "Is it lawful on the Sabbath to do good or to do harm, to save life or to kill?" But they stayed silent. ಆಗ ಯೇಸು ಅವರನ್ನು, “ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ನಿಯಮಕ್ಕೆ ಸಮ್ಮತವೋ ಅಥವಾ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ತೆಗೆಯುವುದೋ?” ಎಂದು ಕೇಳಿದರು. ಅದಕ್ಕೆ ಅವರು ಸುಮ್ಮನಿದ್ದರು.
5 He looked around at them in anger, grieved by their hardness of heart, and told the man, "Stretch out your hand." He stretched it out, and his hand was restored. ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.
6 Then the Pharisees went out and immediately began plotting with the Herodians how they might destroy him. ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು.
7 Jesus withdrew with his disciples to the sea; a large crowd from Galilee followed, and from Judea, ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.
8 from Jerusalem, Idumea, beyond the Jordan, and the region around Tyre and Sidon—hearing all he was doing, a great crowd came to him. ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು.
9 He told his disciples to keep a small boat ready, because of the crowd, so they wouldn't crush him. ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು.
10 For he had healed so many that all who had diseases were pressing forward to touch him. ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ನುಗ್ಗುತ್ತಿದ್ದರು.
11 Whenever the unclean spirits saw him, they fell before him, shouting, "You are the Son of God!" ದುರಾತ್ಮಗಳು ಯೇಸುವನ್ನು ಕಂಡಾಗಲೆಲ್ಲಾ ಅವರ ಮುಂದೆ ಬಿದ್ದು, “ನೀವು ದೇವರ ಪುತ್ರ,” ಎಂದು ಕಿರುಚಿದವು.
12 But he firmly warned them not to reveal him. ಆದರೆ ಯೇಸು, ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡಿದರು.
13 Jesus went up the mountain and called those he wanted; they came to him. ಯೇಸು ಬೆಟ್ಟವನ್ನೇರಿ ತಮಗೆ ಬೇಕಾದವರನ್ನು ಕರೆದರು. ಅವರು ಯೇಸುವಿನ ಬಳಿಗೆ ಬಂದರು.
14 He appointed twelve, named apostles, so they could be with him and he could send them out to preach, ಯೇಸು ಹನ್ನೆರಡು ಮಂದಿಯನ್ನು ತಮ್ಮ ಸಂಗಡ ಇರಲು ಮತ್ತು ಅವರನ್ನು ಉಪದೇಶಮಾಡಲು ನೇಮಿಸಿ, ಅವರಿಗೆ “ಅಪೊಸ್ತಲರು” ಎಂದು ಕರೆದರು.
15 and to have authority to drive out demons. ಅವರಿಗೆ ದೆವ್ವಗಳನ್ನು ಓಡಿಸುವ ಅಧಿಕಾರ ಕೊಟ್ಟರು.
16 These are the twelve he appointed: Simon, to whom he gave the name Peter; ಯೇಸು ನೇಮಿಸಿದ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಇಂತಿವೆ: ಸೀಮೋನನಿಗೆ ಯೇಸು “ಪೇತ್ರ” ಎಂಬ ಹೆಸರನ್ನು ಕೊಟ್ಟರು.
17 James son of Zebedee, and John his brother, whom he named Boanerges, meaning Sons of Thunder; ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನ ಇವರಿಗೆ ಯೇಸು “ಬೊವನೆರ್ಗೆಸ್” ಎಂದರೆ ಗುಡುಗಿನ ಪುತ್ರರು ಎಂಬ ಹೆಸರಿಟ್ಟರು.
18 Andrew, Philip, Bartholomew, Matthew, Thomas, James son of Alphaeus, Thaddaeus, Simon the Zealot, ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನನು.
19 and Judas Iscariot, who betrayed him. ಯೇಸುವಿಗೆ ದ್ರೋಹಮಾಡಿದ ಇಸ್ಕರಿಯೋತ ಯೂದ.
20 He went home; the crowd gathered again, so he and his disciples couldn't even eat. ಯೇಸು ಒಂದು ಮನೆಯೊಳಗೆ ಹೋದಾಗ, ಜನರು ತಿರುಗಿ ಗುಂಪಾಗಿ ನೆರೆದು ಬಂದದ್ದರಿಂದ ಯೇಸುವಿಗೂ ಅವರ ಶಿಷ್ಯರಿಗೂ ಊಟಮಾಡುವುದಕ್ಕೂ ಸಾಧ್ಯವಾಗಲಿಲ್ಲ.
21 When his family heard, they went out to restrain him, for they said, "He's out of his mind." ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.
22 The scribes who came down from Jerusalem said, "He has Beelzebul," and, "By the prince of demons he drives out demons." ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.
23 So Jesus called them to him and spoke in parables: "How can Satan drive out Satan? ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ?
24 If a kingdom is divided against itself, that kingdom cannot stand. ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.
25 And if a house is divided against itself, that house will not be able to stand. ಒಂದು ಕುಟುಂಬ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ಕುಟುಂಬವು ನಿಲ್ಲುವುದಿಲ್ಲ.
26 And if Satan opposes himself and is divided, he cannot stand; his end has come. ಸೈತಾನನು ತನಗೆ ವಿರೋಧವಾಗಿ ತಾನೇ ಎದ್ದು ವಿಭಾಗಿಸಿಕೊಂಡರೆ, ಅವನು ನಿಲ್ಲಲಾರದೆ ನಾಶವಾಗುವನು.
27 No one can enter a strong man's house and take his goods without first tying up the strong man—then he can plunder the house. ಒಬ್ಬನು ಬಲಿಷ್ಠನ ಮನೆಗೆ ನುಗ್ಗಿ ಮೊದಲು ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆ ಮಾಡಲಾಗುವುದಿಲ್ಲ. ಮೊದಲು ಅವನನ್ನು ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.
28 Truly I tell you, all sins and insults against God will be forgiven children of mankind, whatever they say, ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು.
29 but whoever blasphemes against the Holy Spirit never has forgiveness; they are guilty of an eternal sin," ಆದರೆ ಪವಿತ್ರಾತ್ಮರನ್ನು ದೂಷಿಸುವವನಿಗೆ ಎಂದಿಗೂ ಕ್ಷಮಾಪಣೆ ದೊರೆಯುವುದಿಲ್ಲ. ಅವನು ನಿತ್ಯ ಪಾಪದ ಅಪರಾಧಿಯಾಗಿದ್ದಾನೆ,” ಎಂದರು.
30 for they were saying, "He has an unclean spirit." “ಆತನಲ್ಲಿ ಅಶುದ್ಧಾತ್ಮವಿದೆ,” ಎಂದು ಅವರು ಹೇಳುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು.
31 His mother and brothers arrived and, standing outside, sent to him, calling him. ಆಗ ಯೇಸುವಿನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡು, ಯೇಸುವನ್ನು ಕರೆಯಲು ಹೇಳಿ ಕಳುಹಿಸಿದರು.
32 A crowd sat around him and said to him, "Look, your mother and your brothers are outside, asking for you." ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದ ಜನರು ಅವರಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮಗಾಗಿ ಹೊರಗೆ ಕಾದಿದ್ದಾರೆ,” ಎಂದು ಹೇಳಿದರು.
33 He answered them, "Who are my mother and my brothers?" ಅದಕ್ಕೆ ಯೇಸು, “ನನ್ನ ತಾಯಿ ಮತ್ತು ಸಹೋದರರು ಯಾರು?” ಎಂದು ಕೇಳಿದರು.
34 Looking around at those sitting in a circle around him, he said, "Here are my mother and my brothers! ಅನಂತರ ತಮ್ಮ ಸುತ್ತಲೂ ಕುಳಿತ್ತಿದ್ದವರನ್ನು ನೋಡಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು!
35 Whoever does the will of our Father is my brother and sister and mother." ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ,” ಎಂದು ಹೇಳಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]