Skip to content
The Believer's Library

Biblica® Open Kannada Contemporary Version 2022

Mark 4 OKCV

Show OKCV only
Verse × ×
1 Jesus again taught by the sea. So large a crowd gathered around him that he got into a boat on the water and sat, while the whole crowd was on land by the sea. ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು.
2 He taught them many things in parables, and in his teaching he said to them: ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:
3 "Listen! A sower went out to sow. “ಕೇಳಿರಿ! ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು.
4 And as he sowed, some seed fell along the path, and the birds came and devoured it. ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು. ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
5 Other seed fell on rocky ground, lacking much soil, and sprang up at once since the soil had no depth. ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.
6 When the sun rose, the plants were scorched, and since they had no root, they withered. ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.
7 Other seed fell among thorns, and the thorns grew up and choked it, yielding no grain. ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.
8 Other seed fell into good soil, producing grain that sprouted, grew, and yielded thirty, sixty, one hundred times what was sown." ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.”
9 And he said, "Whoever has ears to hear, let him hear." ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು.
10 When he was alone, those around him, together with the Twelve, asked him about the parables. ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.
11 He said to them, "To you is given the secret of the kingdom of our Father, but to those outside, everything comes in parables, ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.
12 so that 'they may look but not perceive, and hear but not understand, and not turn and be forgiven.'" ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.
13 He said to them, "You don't understand this parable? Then how will you understand all the parables? ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?
14 The sower sows the word. ರೈತನು ‘ವಾಕ್ಯ’ ಎಂಬ ಬೀಜ ಬಿತ್ತುತ್ತಾನೆ.
15 These are the ones on the path where the word is sown: once they hear, Satan comes immediately and takes away the word sown in them. ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.
16 These are the ones sown on rocky ground, who hear the word and immediately receive it with joy. ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.
17 But they have no root in themselves, lasting only briefly; when trouble or persecution comes because of the word, they fall away at once. ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.
18 And others are the ones sown among thorns. These are those who hear the word, ಮತ್ತೆ ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯವನ್ನು ಕೇಳುತ್ತಾರೆ.
19 but worries of this age, the deceit of wealth, and desires for other things enter and choke the word, and it produces no fruit. ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.
20 And these are the ones sown on good soil: they hear the word, accept it, and produce fruit—thirty, sixty, one hundred times over." ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು.
21 He told them, "Does anyone bring in a lamp to put it under a basket or bed—not on a stand? ಯೇಸು ಅವರಿಗೆ, “ಯಾರಾದರೂ ದೀಪವನ್ನು ತಂದು ಬೋಗುಣಿಯೊಳಗೆ ಅಥವಾ ಮಂಚದ ಕೆಳಗೆ ಇಡುತ್ತಾರೋ? ಅದರ ಬದಲು ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
22 Nothing is hidden except to be revealed; nothing is secret except to surface. ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ.
23 If anyone has ears to hear, let him hear." ಕಿವಿಯುಳ್ಳವರು ಕೇಳಲಿ.”
24 He told them, "Watch what you hear. The measure you use will be measured to you—and more added. ಮತ್ತು ಯೇಸು ಅವರಿಗೆ, “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು; ಇನ್ನೂ ಹೆಚ್ಚಾಗಿ ಸೇರಿಸಿಕೊಡಲಾಗುವುದು.
25 For whoever has will be given more; whoever doesn't, even what he has will be taken from him." ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು.
26 He said, "This is what the kingdom of our Father is like: a man scatters seed on the ground. ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು.
27 Night and day, asleep or awake, the seed sprouts and grows, though he doesn't know how. ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ.
28 The soil yields grain on its own—first blade, then head, then full kernel in the head. ಭೂಮಿಯು ಮೊದಲು ಸಸಿಯನ್ನು ಆಮೇಲೆ ಹೊಡೆಯನ್ನು ಅನಂತರ ತೆನೆಯ ತುಂಬಾ ಕಾಳನ್ನು ತನ್ನಷ್ಟಕ್ಕೆ ತಾನೇ ಬೆಳೆಸುತ್ತದೆ.
29 But when the grain ripens, he immediately sends the sickle, since harvest has come." ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು.
30 He said, "What can we compare the kingdom of our Father to, or what parable can we use for it? ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?
31 It's like a mustard seed, the smallest of all seeds when sown on the ground. ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ.
32 Yet once sown, it grows up and becomes the largest of all garden plants, producing branches so big that birds of the air can nest in its shade." ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು.
33 With many such parables he spoke the word to them, as they were able to hear. ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು.
34 He spoke to them only in parables, but privately explained everything to his own disciples. ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.
35 That day, when evening came, he said to them, "Let us cross over to the other side." ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು.
36 They left the crowd and took him along, just as he was, in the boat, other boats accompanying him. ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.
37 A fierce windstorm came up. Waves broke over the boat, so that it was already being swamped. ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು.
38 But Jesus was asleep in the stern on the cushion. They woke him and said, "Teacher, don't you care that we're dying?" ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.
39 He got up, rebuked the wind, and told the sea, "Peace! Be still!" The wind stopped, and it grew totally calm. ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.
40 He said to them, "Why are you so afraid? Do you still have no faith?" ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.
41 They were terrified and asked one another, "Who then is this, that even the wind and the sea obey him?" ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]