Skip to content
The Believer's Library

Biblica® Open Kannada Contemporary Version 2022

Mark 5 OKCV

Show OKCV only
Verse × ×
1 They came to the other side of the sea, to the region of the Gerasenes. ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು.
2 As Jesus left the boat, a man with an unclean spirit met him at once, from the tombs. ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.
3 He lived among the tombs, and no one could bind him anymore, not even with a chain. ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ.
4 For he'd often been bound with shackles and chains, but tore the chains apart and shattered the shackles—no one had strength to subdue him. ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ.
5 Night and day, among the tombs and on the mountains, he cried out constantly, cutting himself with stones. ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.
6 And when he saw Jesus from a distance, he ran and fell down before him. ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ,
7 Shouting loudly, he said, "What do you want with me, Jesus, Son of the Most High God? I beg you by God, don't torment me!" ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.
8 For Jesus had been saying to him, "Come out of the man, you unclean spirit!" ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.
9 Jesus asked, "What is your name?" "Legion," he said, "we are many." ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.
10 He kept begging him not to send them out of the region. ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
11 Now a great herd of pigs was feeding there on the hillside. ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು.
12 And they begged him, "Send us to the pigs; let us enter them." “ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.
13 He gave permission. The unclean spirits came out and entered the pigs; the herd—about 2,000—rushed down the cliff into the sea and drowned in the sea. ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.
14 The herders fled and told it in town and country; people came to see what happened. ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.
15 They came to Jesus and saw the man who had been possessed by the demons, the one who'd had the legion, sitting there, dressed and thinking clearly—and they were afraid. ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು.
16 Eyewitnesses told them what had happened to the demon-possessed man, and about the pigs. ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು.
17 And they began to beg Jesus to leave their region. ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.
18 As he was getting into the boat, the once-possessed man begged to be with him. ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು.
19 But Jesus refused, telling him instead, "Go home to your own people and tell them how much our Father has done for you, and how he has had mercy on you." ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು.
20 He went and began proclaiming in the Decapolis all Jesus had done for him, and everyone was amazed. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
21 When Jesus crossed again by boat to the other side, a large crowd gathered around him by the sea. ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು.
22 One of the synagogue leaders, named Jairus, came, saw Jesus, and fell at his feet, ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು,
23 and begged him urgently, "My little daughter is dying. Come, lay your hands on her, so she may be healed and live." “ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.
24 So Jesus went with him. And a great crowd followed him and pressed around him. ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.
25 And there was a woman with a discharge of blood that had gone on for twelve years. ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು.
26 She had suffered much under many doctors, spent all she owned, gained nothing, and only grew worse. ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.
27 Hearing about Jesus, she came up behind him in the crowd and touched his cloak. ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
28 For she kept saying, "If I just touch his garments, I will be made well." ಏಕೆಂದರೆ, “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದುಕೊಂಡಿದ್ದಳು.
29 Her flow of blood dried up instantly, and she felt in her body that she was healed of her suffering. ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.
30 At once Jesus, aware that power had left him, turned around in the crowd and asked, "Who touched my clothes?" ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು.
31 His disciples said to him, "You see the crowd crushing you, yet you ask, 'Who touched me?'" ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು.
32 And he looked around to see who had done it. ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು.
33 But the woman, afraid and trembling, knowing what had happened to her, came, fell before him, and told him the whole truth. ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು.
34 He told her, "Daughter, your faith made you well. Go in peace, healed of your suffering." ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.
35 While he was still speaking, people came from the synagogue leader's house, saying, "Your daughter has died. Why bother the Teacher any longer?" ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು.
36 But Jesus overheard what they said and told the synagogue leader, "Don't fear, only believe." ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು.
37 And he allowed no one to follow him except Peter, James, and John the brother of James. ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.
38 They came to the synagogue leader's house and Jesus saw chaos—people weeping, wailing loudly. ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು.
39 Entering, he said to them, "Why this commotion and crying? The child isn't dead, just asleep." ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು.
40 They laughed at him. But he sent them all out, took the child's father and mother and his companions, and entered where the child was. ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು.
41 He took her hand and said to her, "Talitha koum," which means, "Little girl, I say to you, get up!" ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.
42 At once the girl got up and walked—for she was twelve—and they were instantly overwhelmed with great amazement. ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು.
43 He strictly ordered them to tell no one of this, and said to give her something to eat. ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]