Skip to content
The Believer's Library

Biblica® Open Kannada Contemporary Version 2022

Mark 6 OKCV

Show OKCV only
Verse × ×
1 He went out from there and came to his hometown, and his disciples followed him. ಯೇಸು ಅಲ್ಲಿಂದ ಹೊರಟು ಶಿಷ್ಯರೊಡನೆ ತಮ್ಮ ಸ್ವಂತ ಊರಿಗೆ ಬಂದರು.
2 On the Sabbath he began teaching in the synagogue. Many who heard were amazed: "Where did this man get this? What wisdom is this, given to him? How do such miracles happen through his hands? ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು?
3 Isn't this the carpenter, Mary's son, brother of James, Joses, Judas, and Simon? Aren't his sisters here with us?" They were offended by him. ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.
4 Jesus said to them, "A prophet lacks honor only in his hometown, among his relatives, and in his own household." ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ, ತನ್ನ ಸಂಬಂಧಿಕರ ನಡುವೆ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.
5 He could do no miracle there, except laying hands on a few sick and healing them. ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ.
6 He was amazed at their lack of faith. Then he went around the villages teaching. ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು. ಆಮೇಲೆ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದರು.
7 He called the twelve and began sending them out two by two, giving them authority over unclean spirits. ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಕರೆದು, ಅವರಿಗೆ ಅಶುದ್ಧಾತ್ಮಗಳನ್ನು ಹೊರಗಟ್ಟುವ ಅಧಿಕಾರವನ್ನು ಕೊಟ್ಟು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.
8 He ordered them to take only a staff for the road—no bread, no bag, no money in their belts, ಯೇಸು ಅವರಿಗೆ, “ಪ್ರಯಾಣಕ್ಕಾಗಿ ಕೇವಲ ಕೋಲು ಒಂದನ್ನು ಬಿಟ್ಟು, ರೊಟ್ಟಿ, ಚೀಲ ಅಥವಾ ಜೇಬಿನಲ್ಲಿ ಹಣವನ್ನು ತೆಗೆದುಕೊಳ್ಳಬೇಡಿರಿ.
9 but to wear sandals and not put on two tunics. ಪಾದರಕ್ಷೆಗಳನ್ನು ಮೆಟ್ಟಿಕೊಳ್ಳಿರಿ. ಆದರೆ ಹೆಚ್ಚು ಅಂಗಿಗಳನ್ನು ತೆಗೆದುಕೊಳ್ಳಬೇಡಿರಿ,” ಎಂದು ಆಜ್ಞಾಪಿಸಿದರು.
10 And he said to them, "Wherever you enter a house, stay there until you leave that place. ಇದಲ್ಲದೆ ಯೇಸು ಅವರಿಗೆ, “ನೀವು ಯಾವುದಾದರೊಂದು ಮನೆಗೆ ಹೋದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.
11 Whatever place refuses to welcome or hear you, leaving there, shake the dust off your feet as testimony against them." ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಅಥವಾ ನಿಮ್ಮ ಮಾತುಗಳನ್ನು ಕೇಳದಿದ್ದರೆ, ನೀವು ಹೊರಡುತ್ತಿರುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.
12 So they went out and proclaimed that people should repent. ಶಿಷ್ಯರು ಹೊರಟುಹೋಗಿ ಜನರಿಗೆ ದೇವರ ಕಡೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳಿದರು.
13 And they drove out many demons and anointed many sick people with oil and healed them. ಅವರು ಅನೇಕರಿಂದ ದೆವ್ವಗಳನ್ನೋಡಿಸಿ, ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಗುಣಪಡಿಸಿದರು.
14 King Herod heard of it, for Jesus's name had become known. Some were saying, "John the Baptist has been raised from the dead; that is why these miraculous powers are at work in him." ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.
15 But others said, "He's Elijah." Others said, "He's a prophet, like one of the prophets of old." ಇನ್ನು ಕೆಲವರು, “ಈತನು ಎಲೀಯನು,” ಎಂದರು. ಮತ್ತೆ ಕೆಲವರು, “ಈತನು ಹಿಂದಿನ ಕಾಲದ ಪ್ರವಾದಿಗಳಂತೆ ಒಬ್ಬ ಪ್ರವಾದಿಯಾಗಿರಬೇಕು,” ಎಂದರು.
16 But when Herod heard of it, he said, "John, whom I beheaded, has been raised." ಆದರೆ ಹೆರೋದನು ಇದನ್ನು ಕೇಳಿ, “ನಾನು ಶಿರಚ್ಛೇದನ ಮಾಡಿದ ಯೋಹಾನನೇ, ತಿರುಗಿ ಜೀವಂತವಾಗಿ ಬಂದಿದ್ದಾನೆ,” ಎಂದು ಹೇಳಿದನು.
17 Herod had sent and seized John, binding him in prison because of Herodias, his brother Philip's wife, whom he had married. ಏಕೆಂದರೆ, ಯೋಹಾನನನ್ನು ಬಂಧಿಸಿ ಸೆರೆಮನೆಗೆ ಹಾಕಬೇಕೆಂದು ಹೆರೋದನು ತಾನೇ ಕಳುಹಿಸಿದ್ದನು. ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆ ಮಾಡಿಕೊಂಡದ್ದರಿಂದ ಅವನು ಹೀಗೆ ಮಾಡಿದ್ದನು.
18 For John kept telling Herod, "It is not lawful for you to have your brother's wife." ಏಕೆಂದರೆ ಯೋಹಾನನು ಹೆರೋದನಿಗೆ, “ನೀನು ನಿನ್ನ ಸಹೋದರನ ಹೆಂಡತಿಯನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಹೇಳುತ್ತಿದ್ದನು.
19 And Herodias held a grudge against him and wanted to kill him, but she could not, ಇದರಿಂದ ಹೆರೋದ್ಯಳು ಯೋಹಾನನ ಮೇಲೆ ಹಗೆಯಿಟ್ಟುಕೊಂಡು, ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.
20 Herod feared John, knowing him righteous and holy, and protected him. Hearing John left Herod deeply puzzled, yet he gladly listened to him. ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.
21 Then a fitting day came: Herod's birthday, when he gave a banquet for his nobles, military commanders, and Galilee's leading men. ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು.
22 When Herodias's daughter entered and danced, she delighted Herod and his dinner guests. The king told the girl, "Ask me for anything you want, and I'll give it to you." ಹೆರೋದ್ಯಳ ಮಗಳು ಒಳಗೆ ಬಂದು ನೃತ್ಯ ಮಾಡಿ, ಹೆರೋದನನ್ನೂ ಊಟಕ್ಕೆ ಬಂದ ಅವನ ಅತಿಥಿಗಳನ್ನೂ ಸಂತೋಷಪಡಿಸಿದಳು. ರಾಜನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳು, ನಾನು ಕೊಡುತ್ತೇನೆ,” ಎಂದು ಹೇಳಿ,
23 He swore to her, "Whatever you ask me, I'll give you—up to half my kingdom." “ನೀನೇನು ಕೇಳಿದರೂ ಕೊಡುತ್ತೇನೆ, ನನ್ನ ರಾಜ್ಯದಲ್ಲಿ ಅರ್ಧದಷ್ಟು ಕೇಳಿಕೊಂಡರೂ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.
24 She went out and said to her mother, "What should I ask?" She said, "The head of John the Baptist." ಆಕೆ ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನನ್ನು ಕೇಳಲಿ?” ಎಂದು ಕೇಳಲು, ಆಕೆಯು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳು,” ಎಂದು ಉತ್ತರಕೊಟ್ಟಳು.
25 She went in immediately, with urgency, to the king and asked, "I want you to give me this instant the head of John the Baptist on a platter." ಕೂಡಲೇ ಆ ಹುಡುಗಿ ಅವಸರವಾಗಿ ರಾಜನ ಮುಂದೆ ಬಂದು, “ನನಗೆ ಈಗಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿ ಕೊಡಬೇಕು,” ಎಂದು ಕೇಳಿಕೊಂಡಳು.
26 Deeply grieved, the king still wouldn't refuse her, because of his oaths and his guests. ಇದರಿಂದ ಅರಸನಿಗೆ ಬಹಳ ದುಃಖವಾದರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಆಕೆಯ ಕೋರಿಕೆಯನ್ನು ನಿರಾಕರಿಸಲಿಲ್ಲ.
27 The king at once sent an executioner, ordering John's head brought. He went and beheaded him in the prison, ಕೂಡಲೇ ಅರಸನು ಯೋಹಾನನ ತಲೆಯನ್ನು ತರಬೇಕೆಂದು ಒಬ್ಬ ಕಾವಲುಗಾರನಿಗೆ ಅಪ್ಪಣೆಕೊಟ್ಟು ಕಳುಹಿಸಿದನು. ಅವನು ಹೋಗಿ ಸೆರೆಮನೆಯಲ್ಲಿದ್ದ ಯೋಹಾನನ ಶಿರಚ್ಛೇದನ ಮಾಡಿದನು.
28 and brought his head on a platter, gave it to the girl, and the girl gave it to her mother. ಅವನ ತಲೆಯನ್ನು ತಟ್ಟೆಯಲ್ಲಿಟ್ಟುಕೊಂಡು ಬಂದು ಅದನ್ನು ಆ ಹುಡುಗಿಗೆ ಕೊಟ್ಟನು. ಆಕೆಯು ಅದನ್ನು ತನ್ನ ತಾಯಿಗೆ ಕೊಟ್ಟಳು.
29 When John's disciples heard, they came, took his body, and laid it in a tomb. ಇದನ್ನು ಕೇಳಿ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಯಲ್ಲಿ ಇಟ್ಟರು.
30 The apostles gathered to Jesus and told him all that they had done and taught. ಅಪೊಸ್ತಲರು ಹಿಂದಿರುಗಿ ಯೇಸುವಿನ ಬಳಿಗೆ ಬಂದು ತಾವು ಮಾಡಿದ್ದನ್ನೂ ಬೋಧಿಸಿದ ಎಲ್ಲವನ್ನೂ ಕುರಿತು ಅವರಿಗೆ ವರದಿಮಾಡಿದರು.
31 He told them, "Come away by yourselves to a quiet place and rest a while." For many were coming and going, and they had no time to eat. ಬಹಳ ಜನರು ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. ಯೇಸು ಅವರಿಗೆ, “ನೀವು ಏಕಾಂತವಾದ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ,” ಎಂದು ಹೇಳಿದರು.
32 And they went away in the boat to a desolate place by themselves. ಆಗ ಅವರು ದೋಣಿಯಲ್ಲಿ ಏಕಾಂತ ಸ್ಥಳಕ್ಕೆ ಹೋದರು.
33 Many saw them leave and recognized them; they ran on foot from every town and got there ahead of them. ಆದರೆ ಅವರು ಹೋಗುವುದನ್ನು ಕಂಡ ಅನೇಕರು ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ಓಡಿ ಅವರಿಗಿಂತ ಮುಂಚೆ ಅಲ್ಲಿ ಸೇರಿದ್ದರು.
34 Stepping ashore, he saw a large crowd and felt compassion for them, for they were like sheep without a shepherd, and began teaching them many things. ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.
35 When it was already late, his disciples came to him and said, "This is an isolated place, and it's already late. ಅಷ್ಟರೊಳಗೆ ಸಂಜೆಯಾಯಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಲೇ ಹೊತ್ತು ಮೀರಿದೆ,
36 Send them away to go into the surrounding countryside and villages and buy themselves something to eat." ಈ ಜನರು ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ತಿನ್ನುವುದಕ್ಕಾಗಿ ಏನಾದರೂ ಕೊಂಡುಕೊಳ್ಳುವಂತೆ ಇವರನ್ನು ಕಳುಹಿಸಿಬಿಡು,” ಎಂದು ಹೇಳಿದರು.
37 He replied, "You give them something to eat." They said, "Should we go buy 200 denarii of bread and give them it to eat?" ಆದರೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಶಿಷ್ಯರು, “ನಾವು ಹೋಗಿ ಅವರಿಗೆ ಊಟಕ್ಕಾಗಿ ಆರು ತಿಂಗಳ ಸಂಬಳದಷ್ಟು ಖರ್ಚುಮಾಡಿ, ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದು ಕೇಳಿದರು.
38 He asked them, "How many loaves do you have? Go and see." They found out and said, "Five, and two fish." ಯೇಸು ಅವರಿಗೆ, “ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ,” ಎಂದು ಕೇಳಿದರು. ಅವರು ವಿಚಾರಿಸಿ, “ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ಉತ್ತರಕೊಟ್ಟರು.
39 Then he commanded them all to sit down in groups on the green grass. ಆಮೇಲೆ ಯೇಸು ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳುವಂತೆ ಜನರಿಗೆ ಆಜ್ಞಾಪಿಸಿದರು.
40 So they sat down in groups, by hundreds and by fifties. ಅವರು ನೂರರಂತೆ, ಐವತ್ತರಂತೆ ಸಾಲಾಗಿ ಕುಳಿತರು.
41 Taking the five loaves and two fish, he looked up to heaven, gave thanks and broke the loaves, gave them to the disciples to set before the people, and divided the two fish among them all. ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅದರಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚಿಸಿದರು.
42 And they all ate and were satisfied. ಅವರೆಲ್ಲರೂ ತಿಂದು ತೃಪ್ತರಾದರು.
43 And they took up twelve baskets full of broken pieces and of the fish. ಶಿಷ್ಯರು ಉಳಿದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.
44 And those who ate the loaves were 5,000 men. ಊಟಮಾಡಿದವರಲ್ಲಿ ಐದು ಸಾವಿರ ಮಂದಿ ಗಂಡಸರಿದ್ದರು.
45 At once he made his disciples board the boat and go ahead to the other side, toward Bethsaida, while dismissing the crowd. ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.
46 And after he had taken leave of them, he went up on the mountain to pray. ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.
47 When evening came, the boat was out on the sea, and he was alone on the land. ಸಂಜೆಯಾದಾಗ, ದೋಣಿಯು ಸರೋವರದ ಮಧ್ಯದಲ್ಲಿತ್ತು. ಯೇಸು ದಡದಲ್ಲಿ ಒಬ್ಬರೇ ಇದ್ದರು.
48 He saw them straining at the oars, for the wind was against them. Around three in the morning he came to them, walking on the sea. He meant to pass by them, ಎದುರುಗಾಳಿ ಬಲವಾಗಿ ಬೀಸುತ್ತಿದ್ದುದರಿಂದ ಶಿಷ್ಯರು ದೋಣಿಯನ್ನು ನಿಯಂತ್ರಿಸಲು ದಣಿದು ಹೋದದ್ದನ್ನು ಯೇಸು ಕಂಡು, ಮುಂಜಾನೆ ಸುಮಾರು ಮೂರು ಗಂಟೆಯಲ್ಲಿ ಅವರ ಬಳಿಗೆ ಸರೋವರದ ಮೇಲೆ ನಡೆಯುತ್ತಾ ಬಂದರು. ಯೇಸು ಅವರನ್ನು ದಾಟಿ ಹೋಗುವುದರಲ್ಲಿದ್ದರು.
49 but seeing him walk on the sea, they thought it was a ghost and cried out, ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು.
50 for all saw him and were terrified; but immediately he spoke to them, saying, "Take heart; it is I. Do not be afraid." ಅವರೆಲ್ಲರೂ ಯೇಸುವನ್ನು ಕಂಡು ದಿಗಿಲುಗೊಂಡಿದ್ದರು. ಕೂಡಲೇ ಯೇಸು ಅವರಿಗೆ, “ಧೈರ್ಯವಾಗಿರಿ, ನಾನೇ! ಭಯಪಡಬೇಡಿರಿ,” ಎಂದರು.
51 He got into the boat with them, and the wind stopped; they were completely amazed among themselves, ಆಮೇಲೆ ಯೇಸು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಗಾಳಿ ನಿಂತುಹೋಯಿತು. ಅವರು ಬಹು ಆಶ್ಚರ್ಯಗೊಂಡರು.
52 for they did not understand about the loaves, but their hearts were hardened. ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿಲ್ಲವಾದ್ದರಿಂದ ಆಶ್ಚರ್ಯಚಕಿತರಾದರು. ಏಕೆಂದರೆ ಅವರ ಹೃದಯ ಕಠಿಣವಾಗಿತ್ತು.
53 When they had crossed over, they came to land at Gennesaret and moored to the shore. ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು.
54 And when they got out of the boat, the people immediately recognized him. ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದರು.
55 They ran through that whole region and began carrying the sick on mats to wherever they heard he was. ಅವರು ಆ ಪ್ರದೇಶದಲ್ಲೆಲ್ಲಾ ಓಡಾಡಿ, ಕಾಯಿಲೆಯಾಗಿದ್ದವರನ್ನು ಚಾಪೆಗಳ ಮೇಲೆ ಹಾಕಿಕೊಂಡು ಯೇಸು ಎಲ್ಲಿದ್ದಾರೆಂದು ಕೇಳಿದರೋ ಅಲ್ಲಿಗೆ ಬರಲಾರಂಭಿಸಿದರು.
56 Wherever he went—villages, towns, countryside—they laid the sick in the marketplaces, begging to touch just the edge of his cloak. All who touched it were healed. ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]