Skip to content
The Believer's Library

Biblica® Open Kannada Contemporary Version 2022

Mark 7 OKCV

Show OKCV only
Verse × ×
1 The Pharisees and some of the scribes who had come from Jerusalem gathered around Jesus, ಯೆರೂಸಲೇಮಿನಿಂದ ಫರಿಸಾಯರು ಮತ್ತು ಕೆಲವು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದರು.
2 and they saw that some of his disciples were eating bread with unclean hands—that is, unwashed. ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಅಂದರೆ ಆಚಾರ ಪದ್ಧತಿಯಂತೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.
3 (For the Pharisees and all the Jews don't eat unless they wash their hands ceremonially, keeping the elders' tradition. ಫರಿಸಾಯರು ಮತ್ತು ಎಲ್ಲಾ ಯೆಹೂದ್ಯರು ಆಚಾರ ಪದ್ಧತಿಯಂತೆ ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆಯದೆ ಊಟಮಾಡುವುದಿಲ್ಲ. ಹೀಗೆ ಅವರ ಪೂರ್ವಿಕರಿಂದ ಬಂದ ಸಂಪ್ರದಾಯವನ್ನು ಪಾಲಿಸುತ್ತಿದ್ದರು.
4 When they come from the market, they don't eat without washing. They also hold to many other traditions they've received—washing cups, pitchers, and copper vessels.). ಪೇಟೆಗೆ ಹೋಗಿ ಬಂದರೆ ಅವರು ಸ್ನಾನ ಮಾಡದೆ ಊಟಮಾಡುತ್ತಿರಲಿಲ್ಲ. ಮಾತ್ರವಲ್ಲದೆ ಲೋಟ, ಚೆಂಬು ಮತ್ತು ತಪ್ಪಲೆಗಳನ್ನು ಬೆಳಗಿ ತೊಳೆಯುವುದು ಮುಂತಾದ ಅನೇಕ ಶುದ್ಧಾಚಾರಗಳನ್ನು ಅವರು ಪಾಲಿಸುತ್ತಿದ್ದರು.
5 Then the Pharisees and scribes asked him, "Why don't your disciples follow the elders' tradition, but eat bread with unclean hands?" ಆದ್ದರಿಂದ ಫರಿಸಾಯರು ಮತ್ತು ನಿಯಮ ಬೋಧಕರು, “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯದ ಪ್ರಕಾರ ಏಕೆ ನಡೆಯುವುದಿಲ್ಲ? ಅವರು ಮೈಲಿಗೆಯಾದ ಕೈಗಳಿಂದ ಊಟಮಾಡುತ್ತಾರಲ್ಲಾ?” ಎಂದು ಯೇಸುವನ್ನು ಕೇಳಿದರು.
6 He replied, "Isaiah prophesied truly about you hypocrites, as written: 'These people honor me with their lips, but their heart is far from me.' ಅದಕ್ಕೆ ಯೇಸು, “ಕಪಟಿಗಳೇ, ಯೆಶಾಯನು ನಿಮ್ಮ ವಿಷಯವಾಗಿ ಸರಿಯಾಗಿ ಪ್ರವಾದಿಸಿದ್ದಾನೆ,” ಅವನು ಬರೆದಿರುವಂತೆ: “ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ. ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
7 'They worship me in vain, teaching as doctrines the commandments of men.' ಮನುಷ್ಯರ ಆಜ್ಞೆಗಳನ್ನೇ ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುತ್ತಾರೆ.’
8 You abandon the commandment of our Father and hold to the tradition of men." ನೀವು ದೇವರ ಆಜ್ಞೆಯನ್ನು ತೊರೆದು, ಮನುಷ್ಯರ ಸಂಪ್ರದಾಯಗಳನ್ನು ಹಿಡಿದುಕೊಂಡಿದ್ದೀರಿ,” ಎಂದರು.
9 He said to them, "You do a fine job setting aside our Father's commandment to keep your own tradition!" ಯೇಸು ಇನ್ನೂ ಅವರಿಗೆ, “ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ.
10 For Moses said, 'Honor your father and your mother,' and 'Whoever curses father or mother must be executed.' ‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಮತ್ತು ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ಮೋಶೆ ಹೇಳಿದ್ದಾನೆ.
11 "But you say: if anyone tells his father or mother, 'Whatever you'd have gained from me is Corban' (a gift devoted to our Father), ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕಾಣಿಕೆಯಾಗಿ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,
12 then you no longer let him do anything for his father or mother. ನೀವು ಅವನನ್ನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನು ಮಾಡುವುದಕ್ಕೂ ಅನುಮತಿಸುವುದಿಲ್ಲ.
13 So you cancel the word of our Father with your handed-down tradition. You do many things like this." ಹೀಗೆ ನೀವು ಮಾಡುತ್ತಾ ಬಂದಿರುವ ಸಂಪ್ರದಾಯಗಳ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ,” ಎಂದು ಹೇಳಿದರು.
14 He called the crowd again and said to them, "Listen to me, all of you, and understand: ಯೇಸು ಜನಸಮೂಹವನ್ನು ಪುನಃ ತಮ್ಮ ಬಳಿಗೆ ಕರೆದು, “ಎಲ್ಲರೂ ನನ್ನ ಮಾತುಗಳನ್ನು ಕೇಳಿರಿ, ಅರ್ಥಮಾಡಿಕೊಳ್ಳಿರಿ.
15 Nothing outside a person entering him can make him unclean; rather, what comes out of a person is what makes him unclean." ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಅಶುದ್ಧ ಮಾಡುವುದಿಲ್ಲ. ಆದರೆ ಮನುಷ್ಯನೊಳಗಿಂದ ಹೊರಗೆ ಬರುವಂಥದ್ದು ಅವನನ್ನು ಅಶುದ್ಧ ಮಾಡುತ್ತದೆ.
16 Not in this edition ಯಾವನಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ,” ಎಂದು ಹೇಳಿದರು.
17 When he had left the crowd and entered the house, his disciples asked him about the parable. ಆಮೇಲೆ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಪ್ರವೇಶಿಸಿದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, ಆ ಸಾಮ್ಯದ ವಿಷಯವಾಗಿ ಪ್ರಶ್ನಿಸಿದರು.
18 He said to them, "Are you also this dull? Don't you understand nothing entering a person from outside can make him unclean, ಯೇಸು ಅವರಿಗೆ, “ನೀವೂ ಇಷ್ಟು ಬುದ್ಧಿಹೀನರೋ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದ್ದು ಅವನನ್ನು ಅಶುದ್ಧ ಮಾಡುವುದಿಲ್ಲವೆಂಬುದು ನಿಮಗೆ ತಿಳಿಯದೋ?
19 since it doesn't enter his heart but his stomach, and then goes out into the sewer?" (Saying this, he declared all foods clean.). ಏಕೆಂದರೆ ಅದು ಅವನ ಹೃದಯದೊಳಗೆ ಹೋಗದೆ ಹೊಟ್ಟೆಯನ್ನು ಸೇರಿ ಬಳಿಕ ವಿಸರ್ಜಿತವಾಗುತ್ತದೆ. ಹೀಗೆ ಹೇಳುವುದರ ಮೂಲಕ ಎಲ್ಲಾ ಆಹಾರ ಪದಾರ್ಥಗಳು ಶುದ್ಧವಾಗಿವೆ,” ಎಂದು ಯೇಸು ಸೂಚಿಸಿದರು.
20 He said, "What comes out of a person—that makes him unclean. ಯೇಸು ಮುಂದುವರಿದು, “ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ.
21 For from within, out of the human heart, come evil thoughts—sexual sin, theft, murder, ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ,
22 adultery, greed, malice, deceit, sensuality, envy, slander, pride, and foolishness. ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.
23 All these evils come from inside and make a person unclean." ಈ ಎಲ್ಲಾ ಕೇಡುಗಳು ಮನುಷ್ಯನ ಒಳಗಿಂದ ಹೊರಟು ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.
24 Jesus left there for the region of Tyre. He entered a house, wanting no one to know, but couldn't stay hidden. ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶಕ್ಕೆ ಹೋದರು. ಯೇಸು ಒಂದು ಮನೆಯೊಳಗೆ ಹೋದಾಗ, ಅದು ಯಾರಿಗೂ ತಿಳಿಯಬಾರದೆಂದು ಬಯಸಿದರು. ಆದರೂ ಅವರು ಗುಟ್ಟಾಗಿರಲು ಸಾಧ್ಯವಾಗಲಿಲ್ಲ.
25 Instead, a woman whose little daughter had an unclean spirit heard about him at once, came, and fell at his feet. ಹೀಗೆ ಯೇಸುವಿನ ವಿಷಯ ತಿಳಿದ ಕೂಡಲೇ, ಅಶುದ್ಧಾತ್ಮಪೀಡಿತಳಾಗಿದ್ದ ಒಬ್ಬ ಚಿಕ್ಕ ಹುಡುಗಿಯ ತಾಯಿ ಬಂದು ಅವರ ಪಾದಕ್ಕೆ ಬಿದ್ದಳು.
26 The woman was Greek, Syrophoenician by birth. She kept asking him to drive the demon out of her daughter. ಆಕೆ, ಸಿರಿಯದ ಫೊಯಿನಿಕೆಯಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಓಡಿಸಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.
27 He told her, "Let the children eat first, for it's not right to take their bread and toss it to the dogs." ಯೇಸು ಆಕೆಗೆ, “ಮೊದಲು ಮಕ್ಕಳು ತಮಗೆ ಬೇಕಾದದ್ದನ್ನು ತಿಂದು ತೃಪ್ತಿಗೊಳ್ಳಲಿ, ಏಕೆಂದರೆ ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದರು.
28 But she replied to him, "Sir, even the dogs under the table eat the children's crumbs." ಅದಕ್ಕೆ ಆಕೆಯು ಯೇಸುವಿಗೆ, “ಹೌದು ಸ್ವಾಮೀ, ಆದರೆ ಮೇಜಿನ ಕೆಳಗಿರುವ ನಾಯಿಮರಿಗಳು ಮಕ್ಕಳ ಕೈಯಿಂದ ಕೆಳಗೆ ಬೀಳುವ ರೊಟ್ಟಿತುಂಡುಗಳನ್ನು ತಿನ್ನುತ್ತವಲ್ಲಾ?” ಎಂದು ಉತ್ತರಕೊಟ್ಟಳು.
29 He said to her, "Because of this answer, go—the demon has left your daughter." ಆಗ ಯೇಸು ಆಕೆಗೆ, “ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ಮನೆಗೆ ಹಿಂದಿರುಗು, ದೆವ್ವವು ನಿನ್ನ ಮಗಳನ್ನು ಬಿಟ್ಟುಹೋಗಿದೆ,” ಎಂದರು.
30 And she went home and found the child lying on the bed, and the demon gone. ಆಕೆ ಮನೆಗೆ ಹೋದಾಗ, ದೆವ್ವ ಅವಳ ಮಗಳನ್ನು ಬಿಟ್ಟುಹೋಗಿತ್ತು ಮತ್ತು ಮಗಳು ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡಳು.
31 Then Jesus left the territory of Tyre, went through Sidon to the Sea of Galilee, into the region of the Decapolis. ಆಮೇಲೆ ಯೇಸು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶದಿಂದ ಹೊರಟು ಸೀದೋನಿನ ಮಾರ್ಗವಾಗಿ ಗಲಿಲಾಯ ಸರೋವರ ತೀರವನ್ನು ಹಾದು ದೆಕಪೊಲಿ ಪ್ರದೇಶಕ್ಕೆ ಬಂದರು.
32 They brought him a deaf man who could hardly speak, begging him to lay his hand on him. ಅಲ್ಲಿ ಕೆಲವರು ಮಾತನಾಡಲಾಗದ ಒಬ್ಬ ಕಿವುಡನನ್ನು ಕರೆದುಕೊಂಡು ಬಂದು ಅವನ ಮೇಲೆ ಕೈಯಿಡಬೇಕೆಂದು ಯೇಸುವನ್ನು ಬೇಡಿಕೊಂಡರು.
33 Jesus took him aside privately, away from the crowd, put his fingers in the man's ears, spit, and touched his tongue. ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ತಮ್ಮ ಬೆರಳುಗಳನ್ನು ಅವನ ಕಿವಿಯೊಳಗಿಟ್ಟು ಅನಂತರ ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದರು.
34 Then, looking up to heaven, he sighed deeply and said to him, "Ephphatha!" (that is, "Be opened!"). ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ “ಎಪ್ಫಥಾ!” ಎಂದರು. “ತೆರೆಯಲಿ!” ಎಂಬುದು ಅದರ ಅರಮೀಯ ಅರ್ಥ.
35 And immediately his ears were opened, his tongue was released, and he began to speak plainly. ಕೂಡಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು. ಅವನು ಸ್ಪಷ್ಟವಾಗಿ ಮಾತನಾಡಲಾರಂಭಿಸಿದನು.
36 Jesus ordered them to tell no one; but the more he ordered, the more they proclaimed it. ಯಾವ ಮನುಷ್ಯನಿಗೂ ಇದನ್ನು ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟೂ ಹೆಚ್ಚಾಗಿ ಪ್ರಚಾರಮಾಡಿದರು.
37 They were completely amazed: "He has done everything well—he makes the deaf hear and the mute speak." ಜನರು ಅತ್ಯಂತ ಆಶ್ಚರ್ಯಪಟ್ಟು, “ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ,” ಎಂದುಕೊಳ್ಳುತ್ತಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]