Skip to content
The Believer's Library

Biblica® Open Kannada Contemporary Version 2022

Mark 9 OKCV

Show OKCV only
Verse × ×
1 He said to them, "Truly I tell you: some standing here will not taste death before they see the kingdom of our Father come with power." ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
2 Six days later Jesus took Peter, James, and John, and led them up a high mountain alone, and he was transfigured before them. ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.
3 His clothes became radiant, dazzling white—whiter than anyone on earth could bleach them. ಯೇಸುವಿನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷ್ಟು ಉಜ್ವಲವಾಗಿ ಹೊಳೆಯುತ್ತಿತ್ತು.
4 And Elijah appeared to them along with Moses, and they were talking with Jesus. ಆಗ ಅಲ್ಲಿ ಎಲೀಯನು ಮತ್ತು ಮೋಶೆಯು ಯೇಸುವಿನೊಂದಿಗೆ ಮಾತನಾಡುತ್ತಿರುವುದನ್ನು ಅವರು ಕಂಡರು.
5 Peter said to Jesus, "Rabbi, it's good that we're here. Let's make three shelters—one for you, one for Moses, and one for Elijah." ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ನಾವು ಕಟ್ಟುವೆವು,” ಎಂದು ಹೇಳಿದನು.
6 He did not know what to say, for they were terrified. ತಾನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ. ಏಕೆಂದರೆ ಅವರು ಬಹಳವಾಗಿ ಹೆದರಿದ್ದರು.
7 A cloud appeared and overshadowed them, and a voice came from the cloud: "This is my beloved Son. Listen to him!" ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.
8 Suddenly, when they looked around, they no longer saw anyone with them except Jesus. ಕೂಡಲೇ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನೇ ಹೊರತು ಇನ್ನಾರನ್ನೂ ಕಾಣಲಿಲ್ಲ.
9 Coming down the mountain, he ordered them to tell no one what they'd seen until the Son of Man rose from the dead. ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.
10 So they kept the matter to themselves, questioning what rising from the dead could mean. “ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.
11 And they asked him, "Why do the scribes say that Elijah must come first?" ಇದಲ್ಲದೆ ಅವರು ಯೇಸುವಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.
12 He said, "Elijah does come first and restores everything. Then why is it written the Son of Man must suffer much and be treated with contempt? ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?
13 But I tell you, Elijah has come, and they did to him whatever they pleased, as it is written about him." ಆದರೆ, ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಜನರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
14 Coming to the other disciples, they saw a large crowd around the disciples, and scribes arguing with them. ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.
15 As soon as the whole crowd saw Jesus, they were astonished and ran to greet him. ಜನರೆಲ್ಲರೂ ಯೇಸುವನ್ನು ಕಂಡಕೂಡಲೇ, ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಯೇಸುವನ್ನು ವಂದಿಸಿದರು.
16 He asked them, "What are you arguing about with the scribes?" ಆಗ ಯೇಸು ಅವರಿಗೆ, “ಅವರೊಂದಿಗೆ ನೀವು ಏನು ತರ್ಕಮಾಡುತ್ತಿದ್ದಿರಿ?” ಎಂದು ಕೇಳಿದರು.
17 Someone in the crowd answered him, "Teacher, I brought my son to you; he has a spirit that won't let him speak. ಸಮೂಹದಲ್ಲಿದ್ದ ಒಬ್ಬನು, “ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು.
18 Whenever it seizes him, it throws him down. He foams at the mouth, grinds his teeth, and stiffens. I asked your disciples to drive it out, but they couldn't." ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.
19 He replied, "You unbelieving generation, how long must I stay with you? How long must I endure you? Bring him to me." ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.
20 They brought the boy to him. Seeing Jesus, the spirit instantly convulsed him; he fell to the ground, thrashing and foaming at the mouth. ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.
21 Jesus asked the boy's father, "How long has this been happening to him?" "From childhood," he said. ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.
22 "It has often thrown him into fire and water to destroy him. But if you can do anything, pity us and help us." ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.
23 Jesus said to him, "'If you can'? Everything is possible for the one who believes." ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.
24 Immediately the boy's father cried, "I believe; help my unbelief!" ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು.
25 Seeing a crowd running together, Jesus rebuked the unclean spirit: "Mute and deaf spirit, I command you—come out of him and never enter him again!" ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.
26 Crying out and convulsing him hard, it came out. He looked like a corpse, so many said, "He's dead." ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.
27 But Jesus took him by the hand and raised him up, and he stood. ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.
28 When Jesus had gone indoors, his disciples asked him privately, "Why couldn't we drive it out?" ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.
29 He told them, "This kind can come out only by prayer." ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,” ಎಂದರು.
30 They left there and passed through Galilee. Jesus did not want anyone to know where they were, ಅವರು ಅಲ್ಲಿಂದ ಹೊರಟು ಗಲಿಲಾಯದ ಮಾರ್ಗವಾಗಿ ಹಾದುಹೋದರು. ತಾವು ಎಲ್ಲಿದ್ದೇವೆ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ಯೇಸು ಅಪೇಕ್ಷಿಸಿದರು.
31 because he was teaching his disciples, telling them, "The Son of Man is being handed into human hands. They will kill him, and three days later he will rise." ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.
32 But they did not understand what he meant, and they were afraid to ask him. ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.
33 They came to Capernaum. In the house he asked them, "What were you arguing about on the way?" ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.
34 But they were silent, since they had argued along the way about who was greatest. ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು.
35 He sat down, called the Twelve, and told them, "Anyone who wants to be first must be last of all and servant of all." ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು.
36 He took a little child, stood him among them, took the child in his arms, and said to them: ಯೇಸು ಒಂದು ಮಗುವನ್ನು ತೆಗೆದುಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, ತಮ್ಮ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ,
37 "Whoever accepts one of these little children in my name accepts me; whoever accepts me accepts not me but the one who sent me." “ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.
38 John said to him, "Teacher, we saw someone driving out demons in your name and tried to stop him, since he doesn't follow us." ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು.
39 But Jesus said, "Don't stop him—no one who does a miracle in my name can soon speak evil of me. ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು.
40 For whoever is not against us is for us. ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವನಾಗಿದ್ದಾನೆ.
41 Truly I tell you, whoever gives you a cup of water to drink because you belong to Christ will never lose his reward. ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
42 Whoever trips up one of these little ones who believe in me—better for him to have a large millstone hung around his neck and be thrown into the sea. “ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.
43 If your hand trips you up, cut it off. Better to enter life maimed than with two hands to go into hell, into the unquenchable fire. ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು.
44 Not in this edition ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’
45 If your foot trips you up, cut it off. Better to enter life lame than be thrown into hell with two feet. ನಿಮ್ಮ ಕಾಲು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ನೀವು ಎರಡು ಕಾಲುಳ್ಳವರಾಗಿ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು.
46 Not in this edition ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’
47 If your eye trips you up, throw it out. Better to enter the kingdom of our Father with one eye than be thrown into hell with two, ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು.
48 where 'their worm never dies and the fire never goes out.' ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ, ಮತ್ತು ಬೆಂಕಿಯು ಆರುವುದಿಲ್ಲ.’
49 For everyone will be salted with fire. ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ.
50 Salt is good, but if it loses its saltiness, how can you season it again? Keep salt among yourselves, and be at peace with each other." “ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]