Skip to content
The Believer's Library

Biblica® Open Kannada Contemporary Version 2022

Matthew 1 OKCV

Show OKCV only
Verse × ×
1 This is the genealogy of Jesus Christ, the son of David, the son of Abraham: ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:
2 Abraham was the father of Isaac, Isaac the father of Jacob, and Jacob the father of Judah and his brothers. ಅಬ್ರಹಾಮನು ಇಸಾಕನ ತಂದೆ, ಇಸಾಕನು ಯಾಕೋಬನ ತಂದೆ, ಯಾಕೋಬನು ಯೂದ ಮತ್ತು ಅವನ ಅಣ್ಣ ತಮ್ಮಂದಿರ ತಂದೆ,
3 Judah was the father of Perez and Zerah by Tamar, Perez the father of Hezron, and Hezron the father of Ram. ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ, ಪೆರೆಸನು ಹೆಚ್ರೋನನ ತಂದೆ, ಹೆಚ್ರೋನನು ಅರಾಮನ ತಂದೆ,
4 Ram was the father of Amminadab, Amminadab the father of Nahshon, and Nahshon the father of Salmon. ಅರಾಮನು ಅಮ್ಮೀನಾದಾಬನ ತಂದೆ, ಅಮ್ಮೀನಾದಾಬನು ನಹಶೋನನ ತಂದೆ, ನಹಶೋನನು ಸಲ್ಮೋನನ ತಂದೆ,
5 Salmon was the father of Boaz by Rahab, Boaz the father of Obed by Ruth, and Obed the father of Jesse, ಸಲ್ಮೋನನು ಬೋವಜನ ತಂದೆ, ಬೋವಜನ ತಾಯಿ ರಾಹಾಬಳು, ಬೋವಜನು ಓಬೇದನ ತಂದೆ, ಓಬೇದನ ತಾಯಿ ರೂತಳು, ಓಬೇದನು ಇಷಯನ ತಂದೆ,
6 and Jesse the father of David the king. David was the father of Solomon by the wife of Uriah, ಇಷಯನು ರಾಜನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ, ಇವನ ತಾಯಿ ಊರೀಯನ ಹೆಂಡತಿಯಾಗಿದ್ದವಳು,
7 Solomon the father of Rehoboam, Rehoboam the father of Abijah, and Abijah the father of Asa. ಸೊಲೊಮೋನನು ರೆಹಬ್ಬಾಮನ ತಂದೆ, ರೆಹಬ್ಬಾಮನು ಅಬೀಯನ ತಂದೆ, ಅಬೀಯನು ಆಸನ ತಂದೆ,
8 Asa was the father of Jehoshaphat, Jehoshaphat the father of Joram, and Joram the father of Uzziah. ಆಸನು ಯೆಹೋಷಾಫಾಟನ ತಂದೆ, ಯೆಹೋಷಾಫಾಟನು ಯೆಹೋರಾಮನ ತಂದೆ, ಯೆಹೋರಾಮನು ಉಜ್ಜೀಯನ ತಂದೆ,
9 Uzziah was the father of Jotham, Jotham the father of Ahaz, and Ahaz the father of Hezekiah. ಉಜ್ಜೀಯನು ಯೋತಾಮನ ತಂದೆ, ಯೋತಾಮನು ಆಹಾಜನ ತಂದೆ, ಆಹಾಜನು ಹಿಜ್ಕೀಯನ ತಂದೆ,
10 Hezekiah was the father of Manasseh, Manasseh the father of Amon, and Amon the father of Josiah, ಹಿಜ್ಕೀಯನು ಮನಸ್ಸೆಯ ತಂದೆ, ಮನಸ್ಸೆಯು ಆಮೋನನ ತಂದೆ, ಆಮೋನನು ಯೋಷೀಯನ ತಂದೆ,
11 and Josiah the father of Jeconiah and his brothers, at the time of the exile to Babylon. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು, ಈ ಸಮಯದಲ್ಲಿಯೇ ಯೆಹೂದ್ಯರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.
12 After the exile to Babylon, Jeconiah was the father of Shealtiel, and Shealtiel the father of Zerubbabel. ಬಾಬಿಲೋನಿಗೆ ಸೆರೆಹೋದ ಮೇಲೆ: ಯೆಕೊನ್ಯನು ಶೆಯಲ್ತೀಯೇಲನನ್ನು ಪಡೆದನು, ಶೆಯಲ್ತೀಯೇಲನು ಜೆರುಬ್ಬಾಬೆಲನ ತಂದೆ,
13 Zerubbabel was the father of Abiud, Abiud the father of Eliakim, and Eliakim the father of Azor. ಜೆರುಬ್ಬಾಬೆಲನು ಅಬಿಹೂದನ ತಂದೆ, ಅಬಿಹೂದನು ಎಲಿಯಕೀಮನ ತಂದೆ, ಎಲಿಯಕೀಮನು ಅಜೋರನ ತಂದೆ,
14 Azor was the father of Zadok, Zadok the father of Achim, and Achim the father of Eliud. ಅಜೋರನು ಸದೋಕನ ತಂದೆ, ಸದೋಕನು ಅಖೀಮನ ತಂದೆ, ಅಖೀಮನು ಎಲಿಹೂದನ ತಂದೆ,
15 Eliud was the father of Eleazar, Eleazar the father of Matthan, and Matthan the father of Jacob, ಎಲಿಹೂದನು ಎಲಿಯಾಜರನ ತಂದೆ, ಎಲಿಯಾಜರನು ಮತ್ತಾನನ ತಂದೆ, ಮತ್ತಾನನು ಯಾಕೋಬನ ತಂದೆ,
16 and Jacob the father of Joseph, the husband of Mary—it was Mary from whom Jesus was born, who is called Christ. ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ.
17 So all the generations from Abraham to David: fourteen generations; from David to the exile to Babylon: fourteen generations; from the exile to Babylon to Christ: fourteen generations. ಈ ರೀತಿಯಲ್ಲಿ ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿಗೆ ಸೆರೆ ಹೋಗುವವರೆಗೆ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿಗೆ ಸೆರೆಹೋದ ದಿನದಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.
18 Jesus Christ's birth happened this way: his mother Mary was pledged to Joseph, but before they united, she was found pregnant through the Holy Spirit. ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.
19 Because Joseph, her husband, was righteous and didn't want to disgrace her publicly, he decided to divorce her quietly. ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.
20 While Joseph considered this, an angel of the Lord appeared to him in a dream: "Joseph, son of David, don't be afraid to take Mary as your wife—the child conceived in her is from the Holy Spirit. ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.
21 She will bear a son; name him Jesus, for he will save his people from their sins." ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.
22 All this took place to fulfill what our Father had spoken through the prophet: ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು:
23 "Look, the virgin will conceive and give birth to a son, and they will call him Immanuel" (which means, "our Father with us"). “ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.
24 Joseph woke and did as the angel of the Lord commanded him, taking Mary as his wife. ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.
25 He did not have relations with her until she gave birth to a son, and named him Jesus. ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]