Skip to content
The Believer's Library

Biblica® Open Kannada Contemporary Version 2022

Matthew 10 OKCV

Show OKCV only
Verse × ×
1 Jesus called his twelve disciples and gave them authority over unclean spirits, to drive them out and heal every disease and every sickness. ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.
2 The twelve apostles' names: first, Simon called Peter, and Andrew his brother; James son of Zebedee, and John his brother; ಆ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿದ್ದವು: ಮೊದಲನೆಯವನು, ಪೇತ್ರ ಎಂದು ಎನಿಸಿಕೊಂಡ ಸೀಮೋನ, ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನ;
3 Philip and Bartholomew; Thomas and Matthew the tax collector; James son of Alphaeus and Thaddaeus; ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;
4 Simon the Zealot and Judas Iscariot, who also betrayed him. ಕಾನಾನ್ಯನಾದ ಸೀಮೋನ ಮತ್ತು ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.
5 Jesus sent these twelve, instructing them: "Do not go to Gentile regions or enter a Samaritan town. ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ.
6 Go rather to the lost sheep of the house of Israel. ಆದರೆ ತಪ್ಪಿಹೋದ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.
7 As you go, proclaim this message: 'The kingdom of our Father has come near.' ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.
8 Heal the sick, raise the dead, cleanse those with leprosy, drive out demons. Freely you received; freely give. ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.
9 Do not take any gold or silver or copper in your belts. “ನಿಮ್ಮ ನಡುಕಟ್ಟುಗಳಲ್ಲಿ ಬಂಗಾರ, ಬೆಳ್ಳಿ ಮತ್ತು ತಾಮ್ರದ ನಾಣ್ಯಗಳನ್ನು ಇಟ್ಟುಕೊಳ್ಳಬೇಡಿರಿ.
10 No travel bag, no second shirt, no sandals, no staff—the worker deserves his food. ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು.
11 Whatever town or village you enter, find out who is worthy there, and stay there until you leave. ನೀವು ಯಾವುದಾದರೂ ಒಂದು ಪಟ್ಟಣವನ್ನು, ಇಲ್ಲವೆ ಹಳ್ಳಿಯನ್ನು ಪ್ರವೇಶಿಸುವಾಗ, ಅದರಲ್ಲಿ ಯೋಗ್ಯ ವ್ಯಕ್ತಿ ಯಾರೆಂದು ವಿಚಾರಿಸಿರಿ, ಅಲ್ಲಿಂದ ಹೊರಡುವವರೆಗೆ ಅಲ್ಲಿಯೇ ತಂಗಿರಿ.
12 As you enter the home, greet it. ನೀವು ಒಂದು ಮನೆಯೊಳಗೆ ಪ್ರವೇಶಿಸಿದಾಗ, ಆ ಮನೆಯವರನ್ನು ಹರಸಿರಿ.
13 If the home is worthy, let your peace rest on it; if not, let it return to you. ಆ ಮನೆಯು ಅಯೋಗ್ಯವಾಗಿದ್ದರೆ, ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
14 If anyone won't welcome you or hear your words, shake the dust off your feet as you leave that house or town. ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
15 Truly I tell you: Sodom and Gomorrah will fare better on judgment day than that town. ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
16 Look, I send you out as sheep among wolves; so be as shrewd as serpents, as innocent as doves. “ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
17 Beware of people; they will hand you over to councils and whip you in their synagogues. ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.
18 For my sake you'll be brought before governors and kings, as testimony to them and the Gentiles. ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.
19 But when they hand you over, don't worry about what to say or how—for what to say will be given you at that time, ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು,
20 for it will not be you speaking, but the Spirit of your Father speaking through you. ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು.
21 Brother will betray brother to death, father his child; children will rise against their parents and have them killed. “ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
22 Everyone will hate you because of my name, but whoever holds out to the end will be saved. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.
23 When persecuted in one town, flee to the next. I tell you truly: you won't finish Israel's towns before the Son of Man comes. ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
24 The student is not above the teacher, nor the servant above his master. “ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ತನ್ನ ಯಜಮಾನನಿಗಿಂತ ಶ್ರೇಷ್ಠನಲ್ಲ.
25 It's enough for the student to become like the teacher, and the servant like the master. If they call the head of the house Beelzebul, how much more his household! ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!
26 So do not be afraid of them. There is nothing concealed that will not be disclosed, or hidden that will not be made known. “ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.
27 What I tell you in the dark, say in daylight; what's whispered in your ear, proclaim from rooftops. ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ.
28 Don't fear those who kill the body but not the soul; instead fear the One able to destroy both soul and body in hell. ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.
29 Aren't two sparrows sold for a penny? Yet not one falls to the ground without your Father. ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ.
30 And even the very hairs of your head are all numbered. ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.
31 So do not be afraid; you are worth more than many sparrows. ಆದ್ದರಿಂದ ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.
32 Therefore, whoever acknowledges me before others, I will also acknowledge before my Father in heaven. “ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
33 But whoever denies me before others, I'll deny before my Father in heaven. ಯಾವನಾದರೂ ಜನರ ಮುಂದೆ ನನ್ನನ್ನು ನಿರಾಕರಿಸಿದರೆ, ನಾನು ಸಹ ಅವನನ್ನು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನಿರಾಕರಿಸುವೆನು.
34 Do not think I came to bring peace on earth; I came not to bring peace but a sword. “ನಾನು ಭೂಮಿಯ ಮೇಲೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿರಿ. ಸಮಾಧಾನವನ್ನಲ್ಲ, ಖಡ್ಗವನ್ನು ತರಲು ಬಂದೆನು.
35 For I came to pit a man against his father, a daughter against her mother, a daughter-in-law against her mother-in-law, ಹೇಗೆಂದರೆ, “ ‘ಮಗನಿಗೂ ಅವನ ತಂದೆಗೂ, ಮಗಳಿಗೂ ಆಕೆಯ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವುದಕ್ಕೆ ನಾನು ಬಂದೆನು.
36 a man's enemies will be the members of his own household. ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.’
37 Whoever loves father or mother above me is unworthy of me; whoever loves son or daughter above me is unworthy of me. “ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.
38 Whoever does not take up his cross and follow me is not worthy of me. ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.
39 Whoever finds his life loses it, and whoever loses his life for my sake finds it. ತನ್ನ ಪ್ರಾಣವನ್ನು ಕಂಡುಕೊಳ್ಳುವವನು ಅದನ್ನು ಕಳೆದುಕೊಳ್ಳುವನು. ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.
40 Whoever welcomes you welcomes me, and whoever welcomes me welcomes the One who sent me. “ನಿಮ್ಮನ್ನು ಸ್ವಾಗತಿಸುವವರು ನನ್ನನ್ನು ಸ್ವಾಗತಿಸುತ್ತಾರೆ. ನನ್ನನ್ನು ಸ್ವಾಗತಿಸಿದವರು, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವಾಗತಿಸುತ್ತಾರೆ.
41 Whoever welcomes a prophet as a prophet gets a prophet's reward, and whoever welcomes a righteous person as a righteous person gets a righteous person's reward. ಪ್ರವಾದಿಯೆಂದು ಪ್ರವಾದಿಯನ್ನು ಸ್ವಾಗತಿಸುವವರು ಪ್ರವಾದಿಯ ಪ್ರತಿಫಲವನ್ನು ಪಡೆಯುವರು; ನೀತಿವಂತನೆಂದು ನೀತಿವಂತನನ್ನು ಸ್ವಾಗತಿಸುವವರು ನೀತಿವಂತನ ಪ್ರತಿಫಲವನ್ನು ಪಡೆಯುವರು.
42 And whoever gives just a cup of cold water to one of these little ones because he is my disciple, truly I tell you, will never lose his reward." ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]